KOLAR NEWS PAPER

ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-2023

151

ಕೋಲಾರ ಜಿಲ್ಲಾ ಮಟ್ಟದ ಸಾವಯವ ಸಿರಿಧಾನ್ಯ ಮೇಳ ಹಾಗೂ ಫಲ ಪುಷ್ಪ ಪ್ರದರ್ಶನಕ್ಕೆ ತೋಟಗಾರಿಕಾ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಚಾಲನೆ ನೀಡಿದರು.

ಶುಕ್ರವಾರ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕೃಷಿಕ ಸಮಾಜ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-೨೦೨೩ ಸಚಿವ ಮುನಿರತ್ನ ಉದ್ಘಾಟಿಸಿದರು.

ಮೇಳದಲ್ಲಿ ಹೂ ಮತ್ತು ತರಕಾರಿಗಳಿಂದ ಅಲಂಕರಿಸಲಾದ ಕಲಾಕೃತಿಗಳು, ದೇವರಾಧನೆ ಕುರಿತ ಮರಳಿನ ಕಲಾಕೃತಿ, ಹಳ್ಳಿ ಸೊಗಡಿನ ಮಾದರಿ ಮನೆಗಳು, ವಿದೇಶಿ ಹಣ್ಣು ಮತ್ತು ತರಕಾರಿಗಳ ಪ್ರದರ್ಶನ, ಜೇನು ಸಾಕಾಣಿಕೆ ಪ್ರಾತ್ಯಕ್ಷಿಕೆ, ಪುಷ್ಪ ರಂಗೋಲಿ, ಪುಷ್ಪಾಲಂಕೃತ ಗಣೇಶ, ಜಿರಾಫೆ 

ಹಾಗೂ ಸಂಗೀತ ವಾದ್ಯಗಳು, ಸಿರಿಧಾನ್ಯಗಳ ಮಳಿಗೆಗಳು, ಔಷಧಿಗಳ ಸಸ್ಯಗಳು, ಸುಗಂಧ ದ್ರವ್ಯ ಸಸಿಗಳು ಇನ್ನೂ ಮುಂತಾದ ಆಕರ್ಷಣೆಗಳನ್ನು ಏರ್ಪಡಿಸಲಾಗಿತ್ತು.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಜ್ಯೋತಿಷಿಗಳು ಹೇಳಿದ ಸಮಯದಲ್ಲೇ ಮಂಡ್ಯಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿದ ಜೆಡಿಯಸ್!

    ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಶಾಸಕರ ಸಮ್ಮುಖದಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ. ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ. ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ…

  • ಸುದ್ದಿ

    ಯಡಿಯೂರಪ್ಪನವರ ಕಡೆಯಿಂದ ರಾಜ್ಯದ ವಾಹನ ಸವಾರರಿಗೆ ಸಿಹಿಸುದ್ದಿ.! ಏನದು ಗೊತ್ತೇ..??

    ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ…

  • ಸುದ್ದಿ

    ಅಂಬರೀಶ್ ಸಮಾಧಿಗೆ ನಮಸ್ಕರಿಸಿ ಮಂಡ್ಯದತ್ತ ತೆರಳಿದ ಸುಮಲತಾ….!

    ದಿವಂಗತ ಅಂಬರೀಶ್ ಅವರ ಜಯಂತಿಯಾದ ಇಂದು ಪತ್ನಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅವರು ಇಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಂಡ್ಯ ಸಂಸದರಾಗಿ ಆಯ್ಕೆ ಆಗಿರುವ ಸುಮಲತಾ ಅವರು ಇಂದು ಬೆಳಿಗ್ಗೆಯೇ ಕಂಠೀರವ ಸ್ಟುಡಿಯೋಕ್ಕೆ ತೆರಳಿ ಅಂಬರೀಶ್ ಸ್ಮಾರಕಕ್ಕೆ ಮಗ ಅಭಿಶೇಕ್ ಅವರೊಂದಿಗೆ ಸೇರಿ ಪೂಜೆ ಸಲ್ಲಿಸಿದರು. ನೆರೆದಿದ್ದ ಅಭಿಮಾನಿಗಳೊಂದಿಗೂ ಸುಮಲತಾ ಅವರು ಕೆಲ ಕಾಲ ಮಾತನಾಡಿದರು. ಅಭಿಶೇಕ್, ರಾಕ್‌ಲೈನ್ ವೆಂಕಟೇಶ್ ಇನ್ನೂ ಹಲವು ಅಭಿಮಾನಿಗಳು, ಚಿತ್ರರಂಗದ ಪ್ರಮುಖರು…

  • ಸುದ್ದಿ

    65 ವರ್ಷದ ವೃದ್ಧೆಯೊಬ್ಬರು ಕಳೆದ 19 ವರ್ಷಗಳಿಂದ ಸಾರ್ವಜನಿಕ ಶೌಚಾಲಯದಲ್ಲೇ ಜೀವನವನ್ನು ನಡೆಸುತ್ತಿದ್ದಾರೆ,..ಇದಕ್ಕೆ ಕಾರಣವೇನೆಂದು ತಿಳಿಯಿರಿ..?

    ಚೆನ್ನೈನ  65 ವರ್ಷದ ವೃದ್ಧೆಯೊಬ್ಬರು ಕಳೆದ 19 ವರ್ಷಗಳಿಂದ ಸಾರ್ವಜನಿಕ ಶೌಚಾಲಯದಲ್ಲೇ ಜೀವನ ನಡೆಸುತ್ತಿರುವ ಮನಕಲಕುವ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ವಾಸಿಸಲು ಮನೆ ಇಲ್ಲದ ಕಾರಣದಿಂದಾಗಿ ಕರುಪ್ಪಾಯಿ ಅವರು ಶೌಚಾಲಯದ ಕೋಣೆಯಲ್ಲೇ ವಾಸವಾಗಿದ್ದಾರೆ. ವೃದ್ಧೆ ಕರುಪ್ಪಾಯಿ ಸಾರ್ವಜನಿಕ ಶೌಚಾಲಯ ಸ್ವಚ್ಛಗೊಳಿಸಿ ಅದರಿಂದ ಬರುವ ಹಣದಿಂದಲೇ ಜೀವನ ನಡೆಸುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ವೃದ್ಧೆ, ಹಿರಿಯ ನಾಗರಿಕ ಪಿಂಚಣಿಗಾಗಿ ನಾನು ಅನೇಕ ಬಾರಿ ಅರ್ಜಿ ಸಲ್ಲಿಸಿದ್ದೇನೆ. ಅದು ಆಗದಿದ್ದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಯನ್ನು ಭೇಟಿಯಾಗಿದ್ದೇನೆ….