ಸುದ್ದಿ

ಬರದಿಂದ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ಮೊರೆ ಹೋದ ರೈತರು…..!

30

ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್‌ಗಳು ಮೊರೆ ಹೋಗಿದ್ದಾರೆ.

ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು.

ಬೆಳೆ ಮೊಳಕೆಯೊಡೆದು ಈಗ ನೆಲ ಬಿಟ್ಟು ಮೇಲೆದಿದ್ದೆ. ಆದರೆ ಈ ಸಂದರ್ಭದಲ್ಲಿ ಬೇಕಾಗಿರುವ ಮಳೆ ಈಗ ಕೈಕೊಟ್ಟಿದ್ದು ರಣ ಬಿಸಿಲು ಆವರಿಸಿದೆ. ಇದರಿಂದ ರೈತನ ಪರಿಸ್ಥಿತಿ ಚಿಂತಾಜನಕವಾಗಿದೆ. ಹೇಗಾದರೂ ಮಾಡಿ ನೆಲದಿಂದ ಮೇಲೆದ್ದಿರುವ ಹೆಸರು ಮತ್ತು ಬಿಟಿ ಹತ್ತಿ ಉಳಿಸಿಕೊಳ್ಳಬೇಕು ಎಂದು ಸಾಲ ಮಾಡಿ ಬಾಡಿಗೆ ಟ್ಯಾಂಕರ್ ಪಡೆದು ನೀರು ಹಾಕುತ್ತಿದ್ದಾರೆ.

ಟ್ಯಾಂಕ್‍ವೊಂದಕ್ಕೆ ದಿನಕ್ಕೆ 500 ರೂಪಾಯಿ ಬಾಡಿಗೆ ಕೊಡಬೇಕಾಗಿದೆ. ಒಂದು ಟ್ಯಾಂಕರ್ ನೀರಿಗೆ 150ರಿಂದ 200 ರೂಪಾಯಿ ಕೊಟ್ಟು ಎಲ್ಲೆಲ್ಲಿಂದಲೂ ನೀರು ತುಂಬಿಸಿಕೊಂಡು ಬರುತ್ತಿದ್ದಾರೆ. ಒಣ ಹವೆ ರಭಸವಾಗಿ ಬೀಸುತ್ತಿದ್ದರಿಂದ ತೇವಾಂಶದ ಕೊರತೆಯಿಂದ ಹೊಲದಲ್ಲಿದ್ದ ಬಿ.ಟಿ. ಹತ್ತಿ, ಹೆಸರು, ಒಣಗಿ ಹೋಗುವ ಆತಂಕ ಇರುವುದರಿಂದ ಟ್ಯಾಂಕರ್‌ಗಳು ಮೊರೆ ಹೋಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಾಲ್​ ರಿಸೀವ್​ ಮಾಡಿ, ಮಾಡದೇ ಇರಿ ರಿಂಗ್ ಆಗುವುದು ಮಾತ್ರ 30 ಸೆಕೆಂಡ್ ಅಷ್ಟೇ,,.!

    ಮೊಬೈಲ್​ ಫೋನ್​ ಬಳಕೆದಾರರು ತಮ್ಮ ಮೊಬೈಲ್​ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್​ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್​ಲೈನ್​ ಫೋನ್​ಗಳು 60 ಸೆಕೆಂಡ್​ ರಿಂಗಣಿಸಲಿವೆ! ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್​ ಫೋನ್​ಗಳ ರಿಂಗಣವನ್ನು30 ಸೆಕೆಂಡ್​ಗಳಿಗೆ ಮತ್ತು ಲ್ಯಾಂಡ್​ಲೈನ್​ ಫೋನ್​ಗಳ ರಿಂಗಣವನ್ನು 60 ಸೆಕೆಂಡ್​ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್​) ಆದೇಶ ಹೊರಡಿಸಿದೆ. ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್​ಫೋನ್​ ಮತ್ತು ಲ್ಯಾಂಡ್​ಲೈನ್​ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು…

  • ಸಿನಿಮಾ, ಸುದ್ದಿ

    ರೈತರ ಸಾಲ ಮನ್ನಾ ವಿಚಾರದಲ್ಲಿ ಕುಮಾರಸ್ವಾಮಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟ ದರ್ಶನ್…

    ರೈತರ ಸಾಲಮನ್ನಾ ಮಾಡುವ ಬದಲು ಅವರು ಬೆಳೆದ ಬೆಲೆಗೆ ಸೂಕ್ತ ಬೆಲೆ ನೀಡಲಿ ಸಾಕು, ಸಾಲವನ್ನು ರೈತರೇ ತೀರಿಸುತ್ತಾರೆ’ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಇಂದು ನಗರದ ಬಿಐಟಿ ಕಾಲೇಜಿನಲ್ಲಿ ನಡೆದ ಜೈ ಜವಾನ್ ಜೈ ಕಿಸಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದರ್ಶನ್, ಸರ್ಕಾರ ರೈತರ ಸಾಲ ಮನ್ನಾ ಮಾಡುವುದು ಬೇಡ. ರೈತರು ಬೆಳೆದ ಉತ್ಪನ್ನಗಳಿಗೆ ನ್ಯಾಯವಾದ ಬೆಲೆ ಕೊಟ್ರೆ ಸಾಕು. ರೈತರೇ ಸಾಲ…

  • ಸೌಂದರ್ಯ

    ತಲೆಹೊಟ್ಟಿನ ತಲೆನೋವಿಗೆ ಇಲ್ಲಿದೆ ಮನೆಮದ್ದು….

    ತಲೆಹೊಟ್ಟು ಎಲ್ಲ ರೀತಿಯ ವಯೋಮಾನದವರನ್ನು ಕಾಡುವ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವೆಲ್ಲ ಎಣ್ಣೆ ಹಾಗೂ ಶ್ಯಾಂಪೂ ಗಳನ್ನು ಪ್ರಯೋಗ ಮಾಡಿದ್ರೂ ತಲೆಹೊಟ್ಟು ಹೋಗ್ತಾಯಿಲ್ಲ ಎನ್ನುವವರಿದ್ದಾರೆ

  • govt, nation, ಉಪಯುಕ್ತ ಮಾಹಿತಿ, ಸರ್ಕಾರದ ಯೋಜನೆಗಳು, ಸರ್ಕಾರಿ ಯೋಜನೆಗಳು

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ ಎಂದರೇನು? ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 6,000 ರೂಪಾಯಿಗಳನ್ನು ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸುತ್ತದೆ ನೋಂದಣಿಗೆ ಯಾವ ದಾಖಲೆ ಬೇಕು? ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಲಾಭ ಪಡೆಯುವ ರೈತನಿಗೆ ಆಧಾರ್ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಿದೆ. ನೀವು ಆಧಾರ್ ಕಾರ್ಡ್ ನೀಡದಿದ್ದರೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಜೊತೆಗೆ ಕಂತು ಪಡೆಯಲು, ನೀವು ಬ್ಯಾಂಕ್ ಖಾತೆ…

  • Health

    ನೆನೆಸಿಟ್ಟ ಒಣದ್ರಾಕ್ಷಿ ದಿನಾ ಒಂದೆರಡು ತಿಂದ್ರೆ, ಏನೆಲ್ಲಾ ಲಾಭವಿದೆ ಗೊತ್ತಾ?

    ಸಾಮಾನ್ಯವಾಗಿ ಸಿಹಿತಿಂಡಿಗಳ ರುಚಿಯನ್ನು ಹೆಚ್ಚಿಸಲು ಗೋಡಂಬಿಯ ಜೊತೆಗೆ ದ್ರಾಕ್ಷಿಯನ್ನು ಸೇರಿಸುತ್ತಾರೆ. ಹಲವು ಅಡುಗೆಗಳಿಗೆ ಈ ದ್ರಾಕ್ಷಿ ಗೋಡಂಬಿಗಳನ್ನು ಬಳಸುತ್ತಾರೆ. ಆದರೆ ಒಣದ್ರಾಕ್ಷಿಯ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೂ ಹಲವು ಲಾಭಗಳಿವೆ ಏನೆಂದು ತಿಳಿಯೋಣ ಬನ್ನಿ. ಹೃದಯದ ತೊಂದರೆಗಳಿಂದ ರಕ್ಷಿಸುತ್ತದೆ : ಒಣದ್ರಾಕ್ಷಿಯಲ್ಲಿ ಉತ್ತಮ ಪ್ರಮಾಣದ ಕರಗುವ ನಾರು ಇದ್ದು ಇದರೊಂದಿಗೆ ಹಲವು ಇತರ ಪೋಷಕಾಂಶಗಳೂ ಇವೆ. ಈ ಪೋಷಕಾಂಶಗಳು ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುವುದನ್ನು ತಡೆದು ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ನೆರವಾಗುತ್ತದೆ. ತನ್ಮೂಲಕ ಹೃದಯ ಸಂಬಂಧಿ…

  • ಮನರಂಜನೆ

    ಅನುಶ್ರೀಗೆ ಮರೆಯಲಾರದ ಗಿಫ್ಟ್ ಕೊಟ್ಟ ಹನುಮಂತಪ್ಪ..ಸಾರಿ ಕೇಳಿದ ಅನುಶ್ರೀ!

    ಕುರಿಗಾಯಿ ಹನುಮಂತ ಅವರು ಜೀ ಕನ್ನಡ ವಾಹಿನಿಯ ‘ಸರಿಗಮಪ’ ಕಾರ್ಯಕ್ರಮದಲ್ಲಿ ಹಾಡುವ ಮೂಲಕ ವೀಕ್ಷಕರ ಮನಗೆದ್ದಿದ್ದಾರೆ. ತಮ್ಮದೇ ಶೈಲಿಯಲ್ಲಿ ಹಾಡುವ ಮೂಲಕ ಹನುಮಂತ ಅವರು ಮನೆ ಮಾತಾಗಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಾಡುವ ಅವಕಾಶ ಕೊಡುವುದಾಗಿ ನಿರ್ದೇಶಕ ಯೋಗರಾಜ ಭಟ್ ಈಗಾಗಲೇ ಭರವಸೆ ನೀಡಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದ ನಿರೂಪಕಿ ಅನುಶ್ರೀ ಲಂಬಾಣಿ ಉಡುಗೆ ತಂದುಕೊಡುವಂತೆ ಕೇಳಿಕೊಂಡಿದ್ದರಂತೆ. ಹನುಮಂತ ಅವರ ತಾಯಿ ಲಂಬಾಣಿ ಉಡುಗೆ ತಂದುಕೊಟ್ಟಿದ್ದು, ಅದನ್ನು ಧರಿಸಿ ಸಂತಸ ಹಂಚಿಕೊಂಡ ಅನುಶ್ರೀ ಕ್ಷಮೆ ಕೂಡ ಕೇಳಿದ್ದಾರೆ. ‘ತಮ್ಮ ಹನುಮಂತ…