ಸುದ್ದಿ

ರೆಫ್ರಿಜರೇಟರ್ ಸ್ಫೋಟಗೊಂಡು ಮೂವರ ದುರ್ಮರಣ…..!

1449

ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್‍ನಲ್ಲಿ ನಡೆದಿದೆ.

ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ.

ಗುರುವಾರ ಬೆಳಗ್ಗೆ ಪಕ್ಕದ ಮನೆಯವರು ಮನೆಯತ್ತ ನೋಡಿದ್ದಾರೆ. ತುಂಬಾ ಹೊತ್ತಾದರೂ ಯಾರೂ ಮನೆಯಿಂದ ಹೊರಗೆ ಬಾರದ್ದನ್ನು ಮನಗಂಡು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ಸಿಬ್ಬಂದಿ ಧಾವಿಸಿದ್ದು, ಬಾಗಿಲನ್ನು ಮುರಿದು ಒಳಗೆ ತೆರಳಿದ್ದಾರೆ.

ಬಾಗಿಲು ತೆರೆದು ಒಳಗೆ ಹೋಗುತ್ತಿದ್ದಂತೆ ಚೂರು ಚೂರಾದ ವಸ್ತುಗಳು ಹಾಗೂ ಗೋಡೆ ಕಪ್ಪಾಗಿರುವುದನ್ನು ಕಂಡಿದ್ದಾರೆ. ಪ್ರಸನ್ನ, ಪತ್ನಿ ಅರ್ಚನಾ(32) ಹಾಗೂ ತಾಯಿ ರೇವತಿ(59) ಅವರ ದೇಹ ಮನೆಯ ವಿವಿಧ ಸ್ಥಳಗಳಲ್ಲಿ ಕಂಡಿವೆ. ಮನೆಯೊಳಗಿನ ರೆಫ್ರಿಜರೇಟರ್ ಸ್ಫೋಟಗೊಂಡಿದ್ದು, ರೆಫ್ರಿಜರೇಟರ್‍ನಿಂದ ಸ್ಫೋಟಗೊಂಡ ವಿಷಕಾರಿ ಅನಿಲದಿಂದ ಸಾವನ್ನಪ್ಪಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪ್ರಕರಣದ ಕುರಿತು ತನಿಖೆ ಪ್ರಗತಿಯಲ್ಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ

    4 ಬಾಲ್‍ಗಳಿಗೆ ಬರೋಬ್ಬರಿ 92 ರನ್ ನೀಡಿದ್ದ ಬೌಲರ್‍ಗೆ 10 ವರ್ಷ ನಿಷೇಧ..!ಇದು ಹೇಗಾಯ್ತು ಗೊತ್ತಾ..?

    ಅಂದು ನಡೆದ ಮ್ಯಾಚ್‍ನ ಕ್ಯಾಪ್ಟನ್, ತಂಡದ ನಾಯಕ ಮತ್ತು ಮ್ಯಾನೇಜರ್ ಅವರನ್ನು 5 ವರ್ಷಗಳ ಕಾಲ ಢಾಕಾ ಡಿವಿಜನ್ ಲೀಗ್ ನಿಂದ ನಿಷೇಧಿಸಲಾಗಿದೆ.

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • corona

    ಕೋವಿಡ್-19 ಮಾರ್ಗಸೂಚಿ ಪಾಲನೆಗೆ ಸೂಚನೆ

    ಜಿಲ್ಲೆಯಲ್ಲಿ ಕೋವಿಡ್-19 ಪರಿಸ್ಥಿತಿಯು ನಿಯಂತ್ರಣದಲ್ಲಿದೆ. ಆದಾಗ್ಯೂ, ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ಮುಂಬರುವ ಕ್ರಿಸ್‌ಮಸ್ ಮತ್ತು ಹೊಸ ವರ್ಷಾಚರಣೆಯ ಸಂದರ್ಭಗಳಲ್ಲಿ ಎಚ್ಚರ ವಹಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ, ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು, ಜಿಲ್ಲೆಯ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಈ ಅಂಶಗಳ ಹಿನ್ನೆಲೆಯಲ್ಲಿ, ಪೂರ್ವಭಾವಿಯಾಗಿ ಸಾರ್ವಜನಿಕರು ಈ ಕ್ರಮಗಳನ್ನು ಪಾಲಿಸುವುದು ಅವಶ್ಯವಾಗಿದೆ. ಮುಚ್ಚಿದ ಸಂರಕ್ಷಣೆಗಳಾದ  (closed spaces) ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್‌ಗಳು, ಶಾಪಿಂಗ್ ಮಾಲ್, ಕಛೇರಿಗಳು…

  • ವೀಡಿಯೊ ಗ್ಯಾಲರಿ

    ಅಯ್ಯಪ್ಪನ ಪ್ರತಿಮೆಯೊಂದಿಗೆ ಆನೆ ಮೇಲೆ ಹೋಗುತ್ತಿದ್ದ ಅರ್ಚಕರನ್ನು ಕಾಡಿನೊಳಗೆ ಬಿಸಾಡಿ ಓಡಿ ಹೋದ ಆನೆ.!ಮುಂದೆ ನೋಡಿ ಶೇರ್ ಮಾಡಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈ ಘಟನೆ ಶಬರಿಮಲೈನಲ್ಲಿ ನಡೆದಿದ್ದು, ಶಬರಿಮಲೆ ದೇವಸ್ಥಾನದ ಪ್ರಧಾನ ಅರ್ಚಕರು ಅಯ್ಯಪ್ಪನ ಮೂರ್ತಿಯೊಂದಿಗೆ ಆನೆ ಮೇಲೆ ಕುಳಿತು ಹೋಗುತ್ತಿದ್ದರು.ಆನೆಯ ಸುತ್ತಲೂ ಅಯ್ಯಪ್ಪನ ಭಕ್ತಾದಿಗಳು ಹೋಗುತ್ತಿದ್ದರು. ಆದರೆ ಇದ್ದಕ್ಕಿದ್ದಂತೆ ಪಲ್ಲಕ್ಕಿಯನ್ನು ಹೊತ್ತಿದ್ದ ಆನೆ ಭಕ್ತರ ಮಧ್ಯ ಜೋರಾಗಿ ಓಡುತ್ತಾ, ಕಾಡಿನೊಳಗೆ ಪ್ರತಿಮೆಯೊಂದಿಗೆ ಕುಳಿತಿದ್ದ ಪ್ರಧಾನ ಅರ್ಚಕರನ್ನು ಬಿಸಾಡಿ, ಕಾಡಿನೊಳಗೆ ಓಡಿ ಹೋಯಿತು. ಅರ್ಚಕರನ್ನು ಬಿಸಾಡಿ ಕಾಡಿನೊಳಗೆ ಓಡಿ ಹೋದ ಆನೆಯ ವಿಡಿಯೋ ನೋಡಿ…ಶೇರ್ ಮಾಡಿ…  

  • ಸುದ್ದಿ

    ಮದುವೆಯಾದ ಒಂದೇ ದಿನಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ರೈಲಿನಿಂದ ತಳ್ಳಿ ತಾನೂ ಹಾರಿದ…ಕಾರಣ ?

    ಮದುವೆಯಾಗಿ ಒಂದೇ ದಿನಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ವೇಗವಾಗಿ ಚಲಿಸುತ್ತಿದ್ದ ರೈಲಿನಿಂದ ತಳ್ಳಿ ತಾನೂ ಹಾರಿದ ಘಟನೆ ಅಸ್ಸಾಂನ ಟೆನ್ಸುಕಿಯದ ರೈಲಿನಲ್ಲಿ ನಡೆದಿದೆ.ಈ ಘಟನೆ ಮಂಗಳವಾರ ನಡೆದಿದ್ದು, ತನ್ನ 18 ವರ್ಷದ ಪತ್ನಿ ಬೇಬಿಯನ್ನು ಚಲಿಸುತ್ತಿರುವ ರೈಲಿನಿಂದ ತಳ್ಳಿ ನಂತರ ಪತಿ ಹಿರಾನು ಕೂಡ ಹಾರಿದ್ದಾನೆ. ಆದರೆ ಈ ಘಟನೆಯಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಫತೇಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೈಲ್ವೆ ಹಳಿಗಳ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ದಂಪತಿಯನ್ನು ಪೊಲೀಸರು ಹತ್ತಿರದ ಜಿಲ್ಲಾ ಆಸ್ಪತ್ರೆಯ ತುರ್ತು…

  • ಸುದ್ದಿ

    ನಟಿ ಕಾಜಲ್‍ಗಾಗಿ ಬರೋಬ್ಬರಿ 60 ಲಕ್ಷ ರೂ. ಕಳೆದುಕೊಂಡ ಅಭಿಮಾನಿ…!

    ನೆಚ್ಚಿನ ನಟ ನಟಿಯರನ್ನ ನೋಡುವ, ಭೇಟಿ ಮಾಡುವ ಆಸೆ ಪ್ರತಿಯೊಬ್ಬ ಅಭಿಮಾನಿಗೂ ಇರುತ್ತೆ. ಆದ್ರೆ ಹುಚ್ಚು ಅಭಿಮಾನಕ್ಕೆ ಸಿಲುಕಿ ಅದೆಷ್ಟೋ ಅಭಿಮಾನಿಗಳು, ಹಣ, ಪ್ರಾಣ ಹಾನಿ ಮಾಡಿಕೊಂಡಿದ್ದನ್ನ ಕೂಡ ನಾವು ಹಿಂದೆ ಅನೇಕ ಭಾರಿ ನೋಡಿದ್ದೇವೆ. ಇದೀಗ ಇಂಥಹದ್ದೇ ಮತ್ತೊಂದು ಘಟನೆ ನಡೆದಿದ್ದು, ದಕ್ಷಿಣ ಭಾರತದ ಪ್ರಖ್ಯಾತ ನಟಿಯನ್ನು ನೋಡುವ ಆಸೆಯಿಂದ ಅಭಿಮಾನಿಯೋರ್ವ 60 ಲಕ್ಷ ರೂಪಾಯಿ ಕಳೆದುಕೊಂಡಿದ್ದಾನೆ. ತಮಿಳುನಾಡಿನ ರಾಮನಾಥಪುರಂ ನಿವಾಸಿಯಾಗಿರುವ ಅಭಿಮಾನಿ ಕಾಜಲ್ ಅಗರ್‌ವಾಲ್ ನ ಅಪ್ಪಟ ಅಭಿಮಾನಿ. ಕಾಜಲ್ ಅವರನ್ನು ಜೀವನದಲ್ಲಿ ಒಮ್ಮೆಯಾದರೂ…