ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್‍ನಲ್ಲಿ ನಡೆದಿದೆ.
ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ.
ಗುರುವಾರ ಬೆಳಗ್ಗೆ ಪಕ್ಕದ ಮನೆಯವರು ಮನೆಯತ್ತ ನೋಡಿದ್ದಾರೆ. ತುಂಬಾ ಹೊತ್ತಾದರೂ ಯಾರೂ ಮನೆಯಿಂದ ಹೊರಗೆ ಬಾರದ್ದನ್ನು ಮನಗಂಡು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ಸಿಬ್ಬಂದಿ ಧಾವಿಸಿದ್ದು, ಬಾಗಿಲನ್ನು ಮುರಿದು ಒಳಗೆ ತೆರಳಿದ್ದಾರೆ.
ಬಾಗಿಲು ತೆರೆದು ಒಳಗೆ ಹೋಗುತ್ತಿದ್ದಂತೆ ಚೂರು ಚೂರಾದ ವಸ್ತುಗಳು ಹಾಗೂ ಗೋಡೆ ಕಪ್ಪಾಗಿರುವುದನ್ನು ಕಂಡಿದ್ದಾರೆ. ಪ್ರಸನ್ನ, ಪತ್ನಿ ಅರ್ಚನಾ(32) ಹಾಗೂ ತಾಯಿ ರೇವತಿ(59) ಅವರ ದೇಹ ಮನೆಯ ವಿವಿಧ ಸ್ಥಳಗಳಲ್ಲಿ ಕಂಡಿವೆ. ಮನೆಯೊಳಗಿನ ರೆಫ್ರಿಜರೇಟರ್ ಸ್ಫೋಟಗೊಂಡಿದ್ದು, ರೆಫ್ರಿಜರೇಟರ್‍ನಿಂದ ಸ್ಫೋಟಗೊಂಡ ವಿಷಕಾರಿ ಅನಿಲದಿಂದ ಸಾವನ್ನಪ್ಪಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪ್ರಕರಣದ ಕುರಿತು ತನಿಖೆ ಪ್ರಗತಿಯಲ್ಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
18 ವರ್ಷಆಗಿರುವಯುವಕ-ಯುವತಿಯರೇ… ನೀವು ಇನ್ನೂ ಮತದಾನದ ಹಕ್ಕು ಪಡೆದುಕೊಂಡಿಲ್ಲವೇ?,ಪಡೆದಿದ್ದರೂ ಏನಾದ್ರೂ ತಿದ್ದುಪಡಿಮಾಡಬೇಕೆ?ಚಿಂತೆಮಾಡ್ಬೇಡಿ.ಅಗತ್ಯ ದಾಖಲೆಗಳೊಂದಿಗೆ ರೆಡಿಯಾಗಿರಿ.ನಿಮ್ಮಮನೆಗೆ ಬಂದು ಮತದಾರರ ಪಟ್ಟಿಗೆ ಹೆಸರು ಬರೆದುಕೊಂಡುಹೋಗುತ್ತಾರೆ.ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಇದು ಉತ್ತಮ ಅವಕಾಶವಾಗಿದೆ.ಮಿಸ್ಮಾಡ್ಕೋಬೇಡಿ.ಹಾಗಿದ್ರೆ ಇದಕ್ಕೆ ದಾಖಲಾತಿಗಳೇನುಬೇಕು ಅಂತೀರಾ?ಮುಂದೆ ಓದಿ ಎಲ್ಲಾ ಮಾಹಿತಿ ಇದೆ. ಬೆಂಗಳೂರು, ಮತದಾರರ ಪಟ್ಟಿಯ ಪರಿಶೀಲನೆ ದೃಢೀಕರಣ, ಸೇರ್ಪಡೆ, ತೆಗೆದುಹಾಕುವಿಕೆ ಮತ್ತು ತಿದ್ದುಪಡಿಗೆ ಚುನಾವಣಾ ಆಯೋಗ ಮುಂದಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೆಪ್ಟೆಂಬರ್ 1 ರಿಂದ 30ರ ತನಕ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ…
ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.
ಚೆನ್ನಾಗಿಓದಲಿ ಎಂದು ಪೋಷಕರು ಆಸೆಯಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದರೆ ಅಲ್ಲಿ ನಡೆಯುವುದೇ ಬೇರೆ.ಓದಿ, ಆಡಬೇಕಾದ ಮಕ್ಕಳು ದೊಡ್ಡವರು ಮಾಡುವ ಕಷ್ಟದ ಕೆಲಸಗಳನ್ನು ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದ ಖಾಸಗಿ ಶಾಲೆಯಲ್ಲಿ ಮಕ್ಕಳಿಂದಲೇ ಟ್ರಾಕ್ಟರ್‌ಗೆ ಜಲ್ಲಿ ತುಂಬಿಸಲಾಗಿದೆ. ಶಾಲೆಯಲ್ಲಿ ಮಕ್ಕಳಿಗೆ ಪಾಠ ಕಲಿಸ ಬೇಕಾ ದ ಶಿಕ್ಷಕರು, ಸಾವಿರಾರು ರುಪಾಯಿ ಶುಲ್ಕ ಪಡೆಯುವ ಜೊತೆಗೆ ವಿದ್ಯಾರ್ಥಿಗಳನ್ನು ಕೂಲಿ ಕಾರ್ಮಿಕರನ್ನಾಗಿ ದುಡಿಸಿ ಕೊಂಡಿರುವ ಘಟನೆ ತಾಲೂಕಿನ ಚೇಳೂರು ಅರವಿಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಸಾವಿರಾರು ರುಪಾಯಿ ಶುಲ್ಕ ಪಾವತಿಸಿ ಖಾಸಗಿ…
ಇತ್ತೀಚಿಗಷ್ಟೇ ಪಿಯುಸಿ ಮತ್ತು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಿದ್ದು, ಇದರ ಬೆನ್ನಲ್ಲೆ ಈಗ ಸಿಬಿಎಸ್‍ಇ 12ನೇ ತರಗತಿಯ ಫಲಿತಾಂಶ ಕೂಡ ಹೊರಬಿದ್ದಿದೆ. ಈ ಪರೀಕ್ಷೆಯಲ್ಲಿ ನಟಿ ಸುಧಾರಾಣಿ ಪುತ್ರಿ ಅತಿಹೆಚ್ಚು ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಸುಧಾರಾಣಿ ಮಗಳು ನಿಧಿ ಸಿಬಿಎಸ್‍ಇ ಪರೀಕ್ಷೆಯಲ್ಲಿ 96.4% ಮಾರ್ಕ್ಸ್ ಪಡೆದಿದ್ದು, ಈ ಮೂಲಕ ಪೋಷಕರಿಗೆ ಹೆಮ್ಮೆ ತಂದಿದ್ದಾರೆ. ಈ ಸಂತೋಷವನ್ನು ನಟಿ ಸುಧಾರಾಣಿ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಇದು ನಮ್ಮ ಜೀವನದಲ್ಲಿ ತುಂಬಾ ಸಂತೋಷದ ಸಮಯವಾಗಿದೆ. ನಮ್ಮ ಸುಬ್ಬಿಕುಟ್ಟಿ…
ಯಾವುದೇ ಒಂದು ಕಂಪನಿಯಲ್ಲಿ ನೌಕರಿ ಮಾಡುತ್ತಿರುವವರು ನಿವೃತ್ತಿ ಹೊಂದುವ ವೇಳೆ ಅಥವಾ ಮತ್ತೊಂದು ಕಂಪನಿಗೆ ಸೇರ್ಪಡೆಗೊಳ್ಳಲು ರಾಜೀನಾಮೆ ನೀಡುವ ಸಂದರ್ಭ ಎದುರಾದಾಗ ತಮ್ಮ ಸಹೋದ್ಯೋಗಿಗಳನ್ನು ನೆನಪಿಸಿಕೊಂಡು ಭಾವುಕರಾಗುವುದು ಸಹಜ.ಆದರೆ ಇಲ್ಲೊಬ್ಬ ಬ್ಯಾಂಕ್ ಉದ್ಯೋಗಿ ತನ್ನ ಕೆಲಸದ ಕಡೆ ದಿನ ಸ್ಪೈಡರ್ ಮ್ಯಾನ್ ವೇಷ ಧರಸಿ ಆಫೀಸ್ ಗೆ ಹೋಗಿದ್ದಾರೆ. ಈ ಘಟನೆ ಬ್ರೆಜಿಲ್ ನ ಸಾವೋ ಪಾಲೊದಲ್ಲಿ ನಡೆದಿದ್ದು,ಇಡೀ ದಿನ ಸ್ಪೈಡರ್ ಮ್ಯಾನ್ ವೇಷದಲ್ಲಿ ತನ್ನ ಕೆಲಸ ಮಾಡಿದ್ದಾನೆ. ಈ ದೃಶ್ಯಗಳನ್ನು ಸೆರೆ ಹಿಡಿದ ಸಹೋದ್ಯೋಗಿಯೊಬ್ಬರು ಸಾಮಾಜಿಕ…
ವಯಸ್ಸಿಗೆ ಸಭಂದಪಟ್ಟ ವಿಷಯ ಬಂದಾಗ ಯಾರನ್ನಾದರೂ ನೋಡಿದ್ರೆ, ಅಂದಾಜು ಅವರ ವಯಸ್ಸನ್ನು ಗುರುತಿಸುವುದು ಕಷ್ಟದ ಕೆಲಸವೇನಲ್ಲ. ಆದ್ರೆ ಕೆಲವೊಬ್ಬರನ್ನು ನೋಡಿದಾಗ ಅದು ಕಷ್ಟ ಸಾಧ್ಯವೆನಿಸಬಹುದು. ಅಂತವರೇ ಆದ ಒಬ್ಬರ ಬಗ್ಗೆ ನಾವು ಹೇಳುತ್ತಿದ್ದೇವೆ.