ಉಪಯುಕ್ತ ಮಾಹಿತಿ

ಅಪ್ಪಳಿಸಲಿದೆ ಗಜ ಚಂದ ಮಾರುತ..!ಎಲ್ಲೆಲ್ಲಿ ಮಳೆಯಾಗುತ್ತೆ ಗೊತ್ತಾ..?

By admin

November 13, 2018

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಮುನ್ಸೂಚನೆ ನೀಡಿದೆ.

ವಾಯುಭಾರ ಕುಸಿತದಿಂದ ಚಂಡಮಾರುತ ಎದ್ದಿದ್ದು ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶ, ತಮಿಳುನಾಡು ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ಸ್ತುತ ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ ಗಜ ಚಂಡಮಾರುತ ದಕ್ಷಿಣ ಆಂಧ್ರ ಪ್ರದೇಶ ಕರಾವಳಿಯಲ್ಲೂ ಭಾರಿ ಮಳೆ ಆತಂಕ ಸೃಷ್ಟಿ ಮಾಡಿದೆ.

ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಮಳೆಯಾಗಲಿದೆ. ಭಾರೀ ಪ್ರಮಾಣದಲ್ಲಿ ಮಳೆಯಾಗುವುದಿಲ್ಲ. ಚಂಡಮಾರುತ ಯಾವ ಪ್ರದೇಶದ ಕಡೆ ಹೋಗುತ್ತದೆ ಎನ್ನುವ ಆಧಾರದ ಮೇಲೆ ಈ ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಹೇಳಲಾಗಿದೆ.

ಗಜ ಚಂಡಮಾರುತದ ಪ್ರಭಾವದಿಂದ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಇನ್ನೆರೆಡು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲೂ ಎರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ನೈಸರ್ಗಿಕ ವಿಕೋಪ, ವಿಪತ್ತು ನಿರ್ವಹಣಾ ಮಂಡಳಿ ನಿರ್ದೇಶಕ ಶ್ರೀನಿವಾಸ ರೆಡ್ಡಿ ಹೇಳಿದ್ದಾರೆ