ಸಿನಿಮಾ

ಕೊನೆಗೂ ಎಲ್ಲರ ಮುಂದೆ ಕ್ಷಮೆ ಯಾಚಿಸಿದ ಗಂಡ ಹೆಂಡತಿ ನಟಿ ಸಂಜನಾ..!ಏಕೆ ಗೊತ್ತಾ..?

295

ಗಂಡ ಹೆಂಡತಿ” ಸಿನಿಮಾ ವೇಳೆ ನಿರ್ದೇಶಕ ರವಿ ಶ್ರೀವತ್ಸ ಚಿತ್ರೀಕರಣದ ಸಮಯ ಕಿರುಕುಳ ನಿಡಿದ್ದರೆಂದು, ಬೆದರಿಕೆ ಹಾಕಿದ್ದರೆಂದೂ ಆರೋಪಿಸಿದ್ದ ನಟಿ ಸಂಜನಾ ಇದೀಗ ತಣ್ಣಗಾಗಿದ್ದಾರೆ.ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಸಂಜನಾ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ.

ಗಂಡ-ಹೆಂಡತಿ ಚಿತ್ರದಲ್ಲಿ ಪದೇ ಪದೇ ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ಆರೋಪಿಸಿದ್ದ ಸಂಜನಾ ತಮ್ಮ ಆರೋಪದ ಕುರಿತು ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಸಂಜನಾ ಕಲಾವಿದರ ಸಂಘ, ನಿರ್ದೇಶಕರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಕ್ಷಮೆ ಕೇಳಿದ್ದಾರೆ.

ನಾನು ನನ್ನ ಅನುಭವ ಹಾಗೂ ಜೀವನದಲ್ಲಿ ನಡೆದ ಸತ್ಯವನ್ನೇ ಹೇಳಿಕೊಂಡಿದ್ದೇನೆ.ಗಂಡ ಹೆಂಡತಿ ಚಿತ್ರದ ವೇಳೆ ನಡೆದ ಘಟನೆಗಳ, ನನ್ನ ಅನುಭವಗಳನ್ನು ನಾನು ಮೀಟೂ ಅಭಿಯಾನದ ಮೂಲಕ ಹಂಚಿಕೊಂಡಿದ್ದೆ. ಇದರಿಂದ ಆ ಚಿತ್ರ ನಿರ್ದೇಶಕರಿಗೆ, ನಿರ್ದೇಶಕರ ಸಂಘದ ಸದಸ್ಯರಿಗೆ ನೋವಾಗಿದೆ. ನನಗೆ ಯಾರನ್ನೂ ನೋವು ಮಾಡಬೇನ್ನುವುದಿಲ್ಲ. ಯಾರ ಜೀವನ ಹಾಳಾಗಬೇಕೆಂದು ನಾನು ಬಯಸಲ್ಲ.

ನನ್ನ ಉದ್ದೇಶ ಯಾರ ಹೆಸರು ಹಾಗೂ ಜೀವನವನ್ನು ಹಾಳು ಮಾಡಬೇಕೆಂದು ಇರಲಿಲ್ಲ.ಹಿರಿಯ ನಟ ಅಂಬರೀಶ್, ದೊಡ್ಡಣ್ಣ ಹಾಗೂ ರಾಕ್‍ಲೈನ್ ವೆಂಕಟೇಶ್ ಅವರ ಮಾತಿಗೆ ಬೆಲೆಕೊಟ್ಟು ನಾನು ನಿರ್ದೇಶಕರ ಹಾಗೂ ಚಿತ್ರತಂಡದ ಸರ್ವರಲ್ಲಿ ಕ್ಷಮೆ ಬೇಡುತ್ತೇನೆ ಎಂದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • govt

    ಮೇ 23 ರಂದು ಫಲಿತಾಂಶ, ಮೇ 24 ರಿಂದ ಹೊಸ ಸರ್ಕಾರ…..

    ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.ಪ್ರ ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ…

  • ಸುದ್ದಿ

    ‘ಮೇಕಪ್ ಮಾಡದ ದೃಶ್ಯಗಳನ್ನೆ ಹೆಚ್ಚು ತೋರಿಸಿದ್ದಾರೆ’ ಎಂದ ಚೈತ್ರಾ ಹೇಳಿಕೆಗೆ ಸುದೀಪ್ ಗರಂ..!

    ಬಿಗ್ ಬಾಸ್ ಕನ್ನಡ ಏಳನೇ ಆವೃತ್ತಿಯ ಎರಡನೇ ವಾರ ಚೈತ್ರಾ ವಾಸುದೇವನ್ ಎಲಿಮಿನೇಟ್ ಆದರು. ದೊಡ್ಮನೆಯಿಂದ ಚೈತ್ರಾ ಅವರನ್ನ ಹೊರಗೆ ಕರೆದ ಸುದೀಪ್ ವೇದಿಕೆ ಮೇಲೆ ಮಾತುಕತೆ ಮುಂದುವರಿಸಿದರು. ಈ ವೇಳೆ ಚೈತ್ರಾ ವಾಸುದೇವನ್ ಅವರಿಗೆ ತಮ್ಮ ಎರಡು ವಾರದ ಜರ್ನಿ ಕುರಿತು VT (ವಿಡಿಯೋ ದೃಶ್ಯ) ತೋರಿಸಲಾಯಿತು. ಈ ವಿಡಿಯೋ ನೋಡಿದ ಚೈತ್ರಾ ವಾಸುದೇವನ್’ ಮೇಕಪ್ ಇಲ್ಲದ ದೃಶ್ಯ ಹೆಚ್ಚು ತೋರಿಸಿದ್ದಾರೆ’ ಒಂದು ವಿಚಾರಕ್ಕೆ ಕಾಮೆಂಟ್ ಮಾಡಿದರು. ಈ ಮಾತಿನಿಂದ ಬೇಸರಗೊಂಡ ಸುದೀಪ್ ಅವರು, ವೇದಿಕೆಯಲ್ಲೇ…

  • ಸಿನಿಮಾ

    ಒಳ್ಳೆ ಹುಡುಗನ ಒಳ್ಳೆ ಕೆಲಸ….

    ಕನ್ನಡ ಚಿತ್ರಗಳಲ್ಲಿ ಪೋಷಕ ಪಾತ್ರಗಳ ಭಾವಪೂರ್ಣ ಅಭಿನಯದಿಂದಲೇ ಜನ ಮಾನಸವನ್ನು ಆವರಿಸಿಕೊಂಡಿರುವವರು ದಿವಂಗತ ಅಶ್ವತ್ಥ್. ಇಂಥಾ ಅಭಿಜಾತ ಕಲಾವಿದನ ಪುತ್ರ ಶಂಕರ್ ಅಶ್ವತ್ಥ್ ಕಷ್ಟ ನೀಗಿಕೊಳ್ಳಲು ಮೈಸೂರಿನಲ್ಲಿ ಊಬರ್ ಕ್ಯಾಬ್ ಡ್ರೈವರ್ ಆಗಿದ್ದಾರೆಂಬ ಸುದ್ದಿ ಈವತ್ತು ಎಲ್ಲೆಡೆ ಪ್ರಚಾರ ಪಡೆದುಕೊಂಡಿತ್ತಲ್ಲಾ? ಅದು ಗೊತ್ತಾದ ಕೂಡಲೆ ಕೆಲಸ ಕಾರ್ಯ ಬಿಟ್ಟು ಮೈಸೂರಿಗೆ ತೆರಳಿರೋ ಪ್ರಥಮ್ ತಮ್ಮ ‘ಬಿಲ್ಡಪ್ ಚಿತ್ರದಲ್ಲಿ ನಟಿಸೋ ಅವಕಾಶವನ್ನ ಶಂಕರ್ ಅಶ್ವತ್ಥ್‌ಗೆ ಕೊಟ್ಟು ಜೊತೆಗೆ ಅಡ್ವಾನ್ಸ್ ರೂಪದಲ್ಲಿ ಬ್ಲ್ಯಾಂಕ್ ಚೆಕ್ ಕೊಡೋ ಮೂಲಕ ಆಪತ್ಭಾಂಧವನಾಗಿದ್ದಾರೆ. ಈವತ್ತು…

  • ಮನರಂಜನೆ

    ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಎಲಿಮಿನೇಟ್, ಬಿಗ್ ಟ್ವಿಸ್ಟ್ ನೀಡಿದ ಕಿಚ್ಚ ಸುದೀಪ್.

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ 90 ದಿನಗಳನ್ನು ಮುಗಿಸಿದೆ. ಈ ಕಾರ್ಯಕ್ರಮ ಮುಗಿಯಲು ಇನ್ನೂ ಕೆಲವು ದಿನಗಳು ಇರುವಾಗಲೇ ಭಾನುವಾರ ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಡಬಲ್ ಎಲಿಮಿನೇಟ್ ಆಗಿದ್ದಾರೆ. ಹೌದು.ಭಾನುವಾರ ನಟ ಸುದೀಪ್ ಅವರು ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಇಬ್ಬರನ್ನು ಎಲಿಮಿನೇಟ್ ಮಾಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಸರ್ಪ್ರೈಸ್ ಕೊಟ್ಟಿದ್ದಾರೆ. ಮುಂದಿನ ವಾರ ಡಬಲ್ ಎಲಿಮಿನೇಷನ್ ಇದೆ. ಹೀಗಾಗಿ ಈ ವಾರ ಎಲಿಮಿನೇಟ್ ಇರಲಿಲ್ಲ. ಈ ವಿಚಾರ ಮನೆಯ ಸದಸ್ಯರಿಗೆ ಗೊತ್ತಿರಲಿಲ್ಲ….

  • ದೇಶ-ವಿದೇಶ

    ಜಗತ್ತಿನ ಹತ್ತು ಸರ್ವಾಧಿಕಾರಿಗಳ ಶಾಸನದ ಬಗ್ಗೆ ನಿಮಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು

  • inspirational

    ವಾಟ್ಸಪ್ ಗ್ರೂಪ್ ಸ್ನೇಹಿತರಿಂದ ನೆರೆ ಸಂತ್ರಸ್ತ ಪ್ರದೇಶದ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ…!

    ಹೊಳೆ ನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್‌ನ ಸ್ನೇಹಿತರೆಲ್ಲ ಒಂದಾಗಿ ನೆರೆ ಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್ ಬ್ಯಾಗ್‌ಗಳನ್ನು ವಿತರಿಸಿದ್ದಾರೆ. ಎರಡು ಜಿಲ್ಲೆಗಳ ಒಟ್ಟು ಮೂರು ಸರ್ಕಾರಿ ಶಾಲೆಗಳ 350ಕ್ಕೂ ಹೆಚ್ಚು ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ. ಸ್ನೇಹಿತರೆಲ್ಲ ತಮ್ಮ ಶಕ್ತಿಯಾನುಸಾರ ಹಣ ಸಂಗ್ರಹಿಸಿ ನಂತರ ಹೋಲ್…