ಸುದ್ದಿ

ಸಿಹಿ ಸುದ್ದಿ : ಗ್ಯಾಸ್ ಸಿಲಿಂಡರ್ ಜೊತೆ ಸಿಗುತ್ತೆ 50 ಲಕ್ಷ ರೂ. ಉಚಿತ ವಿಮೆ

54

ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಪಡೆಯುವವರಿಗೆ ಸಿಲಿಂಡರ್ ಜೊತೆ 50 ಲಕ್ಷ ರೂಪಾಯಿವರೆಗೆ ವಿಮೆ ಸಂಪೂರ್ಣ ಉಚಿತವಾಗಿ ಸಿಗಲಿದೆ. ಅಂದ್ರೆ ಅಡುಗೆ ಮಾಡುವ ವೇಳೆ ಸಿಲಿಂಡರ್ ಸ್ಫೋಟಿಸಿ ಅನಾಹುತ ಸಂಭವಿಸಿದ್ರೆ ಕುಟುಂಬಕ್ಕೆ 50 ಲಕ್ಷ ರೂಪಾಯಿಯವರೆಗೆ ಪರಿಹಾರ ಸಿಗಲಿದೆ.

ಸರ್ವೆಯೊಂದರ ಪ್ರಕಾರ, ಭಾರತದಲ್ಲಿ ಪ್ರತಿ ವರ್ಷ 100ಕ್ಕೂ ಹೆಚ್ಚು ಮಂದಿ ಸಿಲಿಂಡರ್ ಸ್ಫೋಟಿಸಿ ಸಾವನ್ನಪ್ಪುತ್ತಾರೆ. ಆದ್ರೆ ಅನೇಕ ಬಾರಿ ಜನರು ಇದ್ರ ಪರಿಹಾರವನ್ನು ಪಡೆಯುವುದಿಲ್ಲ. ಪರಿಹಾರದ ಬಗ್ಗೆ ಅವ್ರಿಗೆ ಮಾಹಿತಿಯಿಲ್ಲದಿರುವುದು ಇದಕ್ಕೆ ಕಾರಣ.

ಈ ಪರಿಹಾರವನ್ನು ವಿಮೆ ಕಂಪನಿ ನೀಡುತ್ತದೆ. ಎಲ್ಪಿಜಿ ಕಂಪನಿಗಳು ವಿಮಾ ಕಂಪನಿಗಳಿಂದ ಸಾರ್ವಜನಿಕ ಹೊಣೆಗಾರಿಕೆ ಪಾಲಿಸಿ ಪಡೆಯುತ್ತವೆ. ಇದು ಮೂರನೇ ವ್ಯಕ್ತಿಯ ವಿಮೆ. ಇದಕ್ಕಾಗಿ ಎಲ್ಪಿಜಿ ಕಂಪನಿಗಳು ವಿಮೆ ಕಂಪನಿಗಳಿಗೆ ಹಣ ನೀಡಬೇಲಾಗುತ್ತದೆ.

ಇದಕ್ಕೆ ಗ್ರಾಹಕ ಹಣ ಪಾವತಿ ಮಾಡಬೇಕಾಗಿಲ್ಲ. ಹಾಗೆ ದುರ್ಘಟನೆಗೊಳಗಾದ ವ್ಯಕ್ತಿ ಕುಟುಂಬಕ್ಕೆ ವಿಮೆ ಸಿಗುತ್ತದೆ. ವ್ಯಕ್ತಿ ಹೆಸರಿನಲ್ಲಿ ಯಾವುದೇ ವಿಶೇಷ ವಿಮೆ ಇರುವುದಿಲ್ಲ. ದುರ್ಘಟನೆ ನಡೆದ ನಂತ್ರ ಬಲಿಪಶು ವ್ಯಕ್ತಿ ವಯಸ್ಸು, ಆದಾಯ ಮತ್ತು ಷರತ್ತುಗಳನ್ನು ಪರಿಶೀಲಿಸಿ ಹಣ ನಿಗದಿ ಮಾಡಲಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ತಂತ್ರಜ್ಞಾನ

    ನೀವು ದಿನನಿತ್ಯ ನಡೆಯುವುದರಿಂದ ಬ್ಯಾಟರಿ ಚಾರ್ಜ್ ಮಾಡಬಹುದು ಹೇಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ…

    ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ.

  • ಸುದ್ದಿ

    ಬಹುಅಂತಸ್ತಿನ ಕಟ್ಟಡದಲ್ಲಿ ಆಕಸ್ಮಿಕ ಅಗ್ನಿ ಅವಘಡ,7 ಮಂದಿ ಸಾವು..!

    ರಾಜಧಾನಿ ದೆಹಲಿಯ ಜನನಿಬಿಡ ಝಾಕಿರ್ ನಗರದ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 16 ಮಂದಿ ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸುಟ್ಟು ಕರಕಲಾಗಿದ್ದರೆ, ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇನೆಗಳು ಮುಖ್ಯ ಅಧಿಕಾರಿ ಅತುಲ್ ಗರ್ಗ್ ಹೇಳಿದ್ದಾರೆ.ಬೆಂಕಿವ್ಯಾಪಿಸಿದಸಂದರ್ಭದಲ್ಲಿಕಟ್ಟಡದಲ್ಲಿದ್ದಕೆಲವರುಅಪಾಯದಿಂದಪಾರಾಗಲುಮಹಡಿಗಳಿಂದಕೆಳಕ್ಕೆಜಿಗಿದರು. ಇವರಲ್ಲಿಕೆಲವರಿಗೆಗಾಯಗಳಾಗಿವೆ. ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗೂ…

  • ಆರೋಗ್ಯ

    ಕರ್ಜೂರದಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಕರ್ಜೂರ ತಿನ್ನುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶ ನಮ್ಮ ದೇಹ ಸೇರುತ್ತದೆ.

  • ಸುದ್ದಿ

    ಶೀಘ್ರದಲ್ಲೇ ಇನ್ಮುಂದೆ ದೇಶದ ಎಲ್ಲಾ ರೈಲ್ವೆ ನಿಲ್ದಾಣಗಳಲ್ಲಿ ಮಣ್ಣಿನ ಕುಡಿಕೆಗಳಲ್ಲಿ ಬಿಸಿ ಬಿಸಿ ಟೀ ಲಭ್ಯ…!

    ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳು, ಬಸ್ ಡಿಪೋಗಳು, ಏರ್ಪೋರ್ಟ್ಗಳು ಮತ್ತು ಮಾಲ್ಗಳಲ್ಲಿ ನೀವು ‘ಟೀ’ಯನ್ನು ಮಣ್ಣಿನ ಲೋಟಗಳಲ್ಲಿ(ಕುಲ್ಹಾದ್) ಕುಡಿಯುವ ಅವಕಾಶ ಸದ್ಯದಲ್ಲೇ ಸಿಗಲಿದೆ. ಇಂಥದ್ದೊಂದು ವ್ಯವಸ್ಥೆ ಜಾರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಲವು ತೋರಿಸಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬೇಡಿಕೆಗೆ ಅನುಗುಣವಾಗಿ ಮಣ್ಣಿನ ಲೋಟಗಳ ಉತ್ಪಾದನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುವಂತೆ ಖಾದಿ ಮತ್ತು ಗ್ರಾಮೋದ್ಯಮ ಆಯೋಗಕ್ಕೂ ನಿರ್ದೇಶನ ನೀಡಿದ್ದಾರೆ ಮಣ್ಣಿನ ಲೋಟಗಳನ್ನು ಬಳಸುವ ಪರಿಸರಸ್ನೇಹಿ ವ್ಯವಸ್ಥೆಯನ್ನು ದೇಶದ ಪ್ರಮುಖ100 ರೈಲ್ವೆ…

  • ಆರೋಗ್ಯ

    ದಾಳಿಂಬೆ ಹಣ್ಣು ತಿಂದರೆ ಏನಾಗುತ್ತದೆ ಎಂದು 90% ಜನರಿಗೆ ಗೊತ್ತೇ ಇಲ್ಲ, ಏನಿದರ ಮಹತ್ವ ಗೊತ್ತಾ.

    ಹಣ್ಣುಗಳು ದೇಹದ ಆರೋಗ್ಯಕ್ಕೆ ಬಹಳಷ್ಟು ಉತ್ತಮ ಎನ್ನುವುದನ್ನು ನಾವೆಲ್ಲರೂ ತಿಳಿದಿದ್ದೇವೆ, ಆದರೆ ಯಾವ ಯಾವ ಹಣ್ಣುಗಳು ಯಾವ ಯಾವ ಅಂಶಗಳನ್ನು ಒಳಗೊಂಡಿರುತ್ತವೆ ಮತ್ತು ಅವು ನಮ್ಮ ಆರೋಗ್ಯವೃದ್ಧಿಗೆ ಹೇಗೆ ಸಹಕರಿಸುತ್ತವೆ ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಈ ಭೂಮಿಯ ಮೇಲೆ ಹಲವು ರೀತಿಯ ಹಣ್ಣುಗಳಿವೆ ಮತ್ತು ಒಂದೊಂದು ಹಣ್ಣು ಕೂಡ ಒಂದೊಂದು ರೀತಿಯ ಗುಣಲಕ್ಷಣಗಳನ್ನ ಹೊಂದಿರುತ್ತದೆ, ಇನ್ನು ಹಣ್ಣುಗಳನ್ನು ತಿನ್ನಲೂ ಕ್ರಮವಿದೆ, ಹಾಗಾದರೆ ಹಣ್ಣುಗಳನ್ನ ತಿನ್ನುವಾಗ ಅನುಸರಿಸಬೇಕಾದ ಕ್ರಮಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ…

  • ಸುದ್ದಿ

    ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ವಾಹನ ಹರಿದು ನಾಲ್ಕು ಜನರ ಸಾವು…!

    ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್‍ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ. ಯುವಕರು ರಸ್ತೆಯಲ್ಲಿ…