ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೋಪಾಲ್, ರಕ್ಷಾ ಬಂಧನ ಹಬ್ಬದಲ್ಲಿ ರಾಖಿ ಕಟ್ಟಿದ ಸಹೋದರಿಯರಿಗೆ ಸಹೋದರರು ಉಡುಗೊರೆ ಕೊಡುವುದು ಪದ್ಧತಿ. ಅದೇ ರೀತಿ ಮಧ್ಯಪ್ರದೇಶದಲ್ಲಿ ತಮಗೆ ರಾಖಿ ಕಟ್ಟಿದ ಹುತಾತ್ಮ ಯೋಧನ ಪತ್ನಿಗೆ ಊರಿನವರು ಸೇರಿ ಸರ್ಪ್ರೈಸ್ ಗಿಫ್ಟ್ ಕೊಟ್ಟು ಹಬ್ಬ ಆಚರಿಸಿದ್ದಾರೆ.ಹೌದು. ಮಧ್ಯಪ್ರದೇಶದ ದೆಪಲ್ಪುರ ಜಿಲ್ಲೆಯ ಪಿರ್ ಪಿಪ್ಲಿಯ ಗ್ರಾಮದ ಹುತಾತ್ಮ ಯೋಧ ಹವಾಲ್ದಾರ್ ಮೋಹನ್ ಸಿಂಗ್ ಕುಟುಂಬಕ್ಕೆ ಗ್ರಾಮಸ್ಥರು ಮನೆ ಕಟ್ಟಿಸಿಕೊಟ್ಟಿದ್ದಾರೆ. ಈ ಮನೆಯನ್ನು ಯೋಧನ ಪತ್ನಿ ರಾಜು ಬಾಯಿ ಅವರಿಗೆ ಗ್ರಾಮಸ್ಥರು ರಕ್ಷಾಬಂಧನ ಉಡುಗೊರೆಯಾಗಿ ನೀಡಿದ್ದಾರೆ. ಅಲ್ಲದೆ ಗ್ರಾಮಸ್ಥರು ನೆಲದ ಮೇಲೆ ತಮ್ಮ ಕೈಗಳನ್ನು ಇಟ್ಟು ಅದರ ಮೇಲೆ ರಾಜು ಬಾಯಿ ಅವರನ್ನು ನಡೆಸಿ, ಮನೆಯೊಳಗೆ ಕಳುಹಿಸಿ ಗೌರವ ಸಲ್ಲಿಸಿದ್ದಾರೆ.

1992ರಲ್ಲಿ ದಕ್ಷಿಣ ತ್ರಿಪುರ ಜಿಲ್ಲೆಯ ದಳಪತಿಪುರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೋಹನ್ ಸಿಂಗ್ ಹುತಾತ್ಮರಾಗಿದ್ದರು. ಅಂದಿನಿಂದ ಮೋಹನ್ ಸಿಂಗ್ ಅವರ ಪತ್ನಿ ರಾಜು ಬಾಯಿ, ಇಬ್ಬರು ಮಕ್ಕಳು ಮುರಿದ ಗುಡಿಸಲಿನಲ್ಲಿಯೇ ಜೀವನ ನಡೆಸುತ್ತಿದ್ದರು. ಸರ್ಕಾರ ಕೂಡ ಅವರ ನೆರವಿಗೆ ಬಂದಿರಲಿಲ್ಲ. ಸರ್ಕಾರದಿಂದ ಬರುತ್ತಿದ್ದ ಕೇವಲ 700 ರೂ. ಮಾಸಿಕ ಪಿಂಚಣಿಯಲ್ಲಿ ಮೋಹನ್ ಸಿಂಗ್ ಕುಟುಂಬ ಜೀವನ ನಡೆಸಬೇಕಾಗಿತ್ತು. ಇದನ್ನು ಕಂಡ ಗ್ರಾಮಸ್ಥರು ಯೋಧನ ಕುಟುಂಬಕ್ಕೆ ನೆರವಾಗಲು ನಿರ್ಧರಿಸಿ, ಬರೋಬ್ಬರಿ 11 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸಿ ರಕ್ಷಾಬಂಧನದ ಶುಭದಿನದಂದು ಉಡುಗೊರೆಯಾಗಿ ಯೋಧನ ಪತ್ನಿಗೆ ನೀಡಿದ್ದಾರೆ.

ಮೋಹನ್ ಸಿಂಗ್ ಹುತಾತ್ಮರಾಗಿ 3 ದಶಕಗಳಾಗುತ್ತಾ ಬಂದರೂ ಸರ್ಕಾರ ಮಾತ್ರ ಅವರ ಕುಟುಂಬಕ್ಕೆ ಯಾವುದೇ ರೀತಿಯ ಸಹಾಯ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಪಿಪ್ಲಿಯ ಗ್ರಾಮಸ್ಥರು ಸೇರಿಕೊಂಡು ತಮ್ಮ ಗ್ರಾಮದಲ್ಲಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ದೇಣಿಗೆ ಸಂಗ್ರಹಿಸಿ ಮೋಹನ್ ಸಿಂಗ್ ಕುಟುಂಬಕ್ಕೆ ಮನೆಯನ್ನು ಕಟ್ಟಿಕೊಡಲು ಮುಂದಾದರು. ಮುರುಕಲು ಗುಡಿಸಲಿನಲ್ಲಿ ಜೀವನ ಸಾಗಿಸುತ್ತಿದ್ದ ಕುಟುಂಬಕ್ಕಾಗಿ ದೇಣಿಗೆ ಹಣದಲ್ಲಿ ಕಾಂಕ್ರೀಟ್ ಮನೆ ಕಟ್ಟಿಸಿದರು.

ಆ ಮನೆಯನ್ನು ಗುರುವಾರ ರಾಜು ಬಾಯಿ ಅವರಿಗೆ ಊರಿನವರು ಗಿಫ್ಟ್ ಆಗಿ ನೀಡಿದ್ದಾರೆ. ರಕ್ಷಾಬಂಧನ ಹಬ್ಬವಿದ್ದ ಕಾರಣಕ್ಕೆ ತನ್ನೂರಿನ ಎಲ್ಲಾ ಯುವಕರಿಗೂ ರಾಜು ಬಾಯಿ ಅವರು ರಾಖಿ ಕಟ್ಟಿ ಹೊಸ ಮನೆಯೊಳಗೆ ಪ್ರವೇಶಿಸಿ ಹಬ್ಬ ಆಚರಿಸಿದ್ದಾರೆ. ದೇಶಕ್ಕಾಗಿ ಬಲಿದಾನ ಮಾಡಿದ ಹುತಾತ್ಮ ಯೋಧ ಮೋಹನ್ ಸಿಂಗ್ ಅವರ ಪ್ರತಿಮೆಯನ್ನು ಗ್ರಾಮದಲ್ಲಿ ನಿರ್ಮಿಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ಯೋಧನ ಬಲಿದಾನಕ್ಕೆ ಸರ್ಕಾರ ಯಾವುದೇ ಗೌರವ ನೀಡದೇ ಇದ್ದರೂ ಗ್ರಾಮಸ್ಥರು ಸೇರಿಕೊಂಡು ಊರಿನ ಮುಖ್ಯರಸ್ತೆಯಲ್ಲಿ ಪ್ರತಿಮೆ ನಿರ್ಮಿಸಲು ಮುಂದಾಗಿದ್ದಾರೆ. ಈ ಮೂಲಕ ಹುತಾತ್ಮ ಯೋಧನಿಗೆ ಗೌರವ ಸಲ್ಲಿಸುವುದಾಗಿ ಗ್ರಾಮಸ್ಥರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಕ್ಷದಲ್ಲಿ ಯಾರೋ ಒಬ್ಬರಿಗೆ ಮಾತ್ರ ಈ ಕನಸು ಬೀಳುತ್ತದೆ ಆದರೆ ಈ ಕನಸು ಬಿದ್ದರೆ ಮಾತ್ರ ನೀವು ಕೊಟ್ಯಧಿಪತಿ ಆಗೋದು ಅಂತೂ ಸತ್ಯ ಬಿಡಿ. ಹಾಗಾದ್ರೆ ಆ ಕನಸು ಯಾವುದು ಮತ್ತು ಈ ಕನಸು ಏಕೆ ಬೀಳುತ್ತೆ ಮತ್ತು ಯಾವ ಪುಣ್ಯ ಫಲ ಇದ್ದರೆ ಮಾತ್ರ ಈ ಕನಸು ಬೀಳುತ್ತದೆ ಎಂಬುದನ್ನು ತಿಳಿಯಲು ಈ ಲೇಖನ ಮರೆಯದೇ ಸಂಪೂರ್ಣ ಓದಿರಿ. ಮನುಷ್ಯ ಅಂದಮೇಲೆ ಪ್ರತಿ ಒಬ್ಬರಿಗೆ ಸಹ ರಾತ್ರಿ ಮಲಗಿದ ಮೇಲೆ ಕನಸು ಬೀಳುತ್ತದೆ, ಕೆಲವು ಜನಕ್ಕೆ…
ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹಿಮ್ ಸಿಂಗ್ ಜೈಲು ಪಾಲಾಗಿದ್ದಾರೆ.ಇದರ ಬೆನ್ನಲ್ಲೇ ಸ್ವಯಂಘೋಷಿತ ದೇವ ಮಹಿಳೆಯೊಬ್ಬರು ಸಂಕಷ್ಟಕ್ಕೀಡಾಗಿದ್ದಾರೆ.
ಬ್ರಹ್ಮಾವರ ತಾಲೂಕಿನೆಲ್ಲೆಡೆ ಕುಂಭ ದ್ರೋಣ ಮಳೆಯ ಅಬ್ಬರ ಜೋರಾಗಿದ್ದು, ಮಂಗಳವಾರ ಬೆಳಗ್ಗಿನಿಂದಲೇ ಸುರಿದ ಮಳೆಯಿಂದಾಗಿ ಹಲವೆಡೆಗಳಲ್ಲಿ ನೆರೆ ಆವರಿಸಿದೆ. ಕೆಲವೆಡೆ ಮನೆಯೊಳಗೆ ನೀರು ನುಗ್ಗಿದ್ದರೆ, ಅನೇಕ ಕಡೆಗಳಲ್ಲಿ ಗದ್ದೆ, ಅಡಿಕೆ, ತೆಂಗಿನ ತೋಟ ಸಹಿತ ಕೃಷಿ ಪ್ರದೇಶಗಳು ಜಲಾವೃತಗೊಂಡಿವೆ. ಬ್ರಹ್ಮಾವರ ಪರಿಸರದ ಮಟಪಾಡಿ, ನೀಲಾವರ, ನಂದನಕುದ್ರು, ರಾಮನಕುದ್ರು, ಬಲ್ಜಿ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು ಇದರಿಂದಾಗಿ ವಾಹನ ಸವಾರರು ಕೂಡ ಸಮಸ್ಯೆಯನ್ನು ಅನುಭವಿಸಿದರು. ಅನೇಕ ಕಡೆಗಳಲ್ಲಿ ಭತ್ತದ ಕೃಷಿ ಬೆಳೆದಿರುವ ಗದ್ದೆ ಜಲಾವೃತಗೊಂಡಿದ್ದರೆ, ಅಡಿಕೆ ತೋಟಗಳಲ್ಲಿ ನೀರು ನಿಂತಿದೆ….
ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು.
ನಗರ ಮತ್ತು ಪಟ್ಟಣಗಳಲ್ಲಿ ನೀರಿನ ಅವಶ್ಯಕತೆಯೇ ನೀರಿನ ಒಂದು ದೊಡ್ಡ ಬಿಜನೆಸ್ ನ ಮೂಲವಾಗಿದೆ. ಜನರಿಗೆ ಸ್ವಚ್ಛವಾದ ಶುದ್ಧ ನೀರಿನ ಉಪಲಬ್ಧವನ್ನು ಮಾಡಿ ಕೊಡುವ ಒಳ್ಳೆಯ ವ್ಯವಸಾಯ ಮಾಡಬಹುದು ಜೊತೆಗೆ ತಿಂಗಳಿಗೆ ಸಮಾಧಾನವೆನ್ನುವದಕ್ಕಿಂತ ಹೆಚ್ಚಿಗೆ ಆದಾಯ ಗಳಿಸಬಹುದು.
ನಮ್ಮ ಭಾರತೀಯ ಸನಾತನ ಹಿಂದೂ ಸಂಸ್ಕೃತಿಯಲ್ಲಿ ಸ್ತೋತ್ರ ಮತ್ತು ಮಂತ್ರಗಳಿಗೆ ವಿಶೇಷ ಸ್ಥಾನವಿದೆ. ಹಾಗೆಯೇ ಪ್ರತಿಯೊಂದು ಗುರಿ ಉದ್ದೇಶಗಳು ಸಾಕಾರಗೊಳ್ಳುವುದಕ್ಕೆ ಪ್ರತ್ಯೇಕ ಮಂತ್ರಗಳನ್ನು ಆಧ್ಯಾತ್ಮಿಕ ಚಿಂತಕರು ನೀಡಿದ್ದಾರೆ.