ಸುದ್ದಿ

ಕಾರ್ನಾಡ್ ಅವರ ಕೊನೆಯ ಇಚ್ಚೆಯಂತೆ ಅಂತ್ಯಸಂಸ್ಕಾರ…….

304

ಗಿರೀಶ್ ಕಾರ್ನಾಡ್ ಅವರ ಆಸೆಯಂತೆ ಅವರ ಅಂತ್ಯಸಂಸ್ಕಾರ ನಡೆಸಲು ಕುಟುಂಬದವರು ಸಿದ್ಧತೆ ನಡೆಸುತ್ತಿದ್ದಾರೆ.

ನನ್ನ ಅಂತ್ಯ ಸಂಸ್ಕಾರಕ್ಕೆ ಯಾವುದೇ ರಾಜಕಾರಣಿ, ಸಾರ್ವಜನಿಕರು ಬರಬಾರದು. ಸರ್ಕಾರಿ ಗೌರವ, ಸರ್ಕಾರಿ ಜಾಗದ ಅಗತ್ಯವಿಲ್ಲ. ಕುಟುಂಬದ ಸದಸ್ಯರು ಮಾತ್ರ ಬರಬೇಕು. ಯಾವುದೇ ವಿಧಿವಿಧಾನವನ್ನು ಅನುಸರಿಸಬಾರದು. ಅಂತಿಮ ನಮನವನ್ನು ಸಲ್ಲಿಸಬಾರದು ಎಂದು ಗಿರೀಶ್ ಕಾರ್ನಾಡ್ ತಮ್ಮ ಪತ್ನಿ ಸರಸ್ವತಿ ಜೊತೆ ಹೇಳಿದ್ದರು.

ಮನೆ ಬಳಿ ಯಾರೂ ಬಂದು ನಮನ ಸಲ್ಲಿಸಬಾರದು. ಯಾವುದೇ ಸಂಪ್ರದಾಯ, ವಿಧಿ ವಿಧಾನ ಇಲ್ಲದೇ ಸಂಸ್ಕಾರ ಮಾಡಬೇಕು ಎಂದು ಕೊನೆಯ ಆಸೆಯನ್ನು ವ್ಯಕ್ತಪಡಿಸಿದ್ದರು. ಮಧ್ಯಾಹ್ನ ನಾವು ಅಂತ್ಯ ಸಂಸ್ಕಾರದ ಸಮಯದ ನಿಗದಿ ಮಾಡುತ್ತೇವೆ. ಅಪಾರ್ಟ್ ಮೆಂಟ್ ಬಳಿ, ಸಾರ್ವಜನಿಕರು ರಾಜಕಾರಣಿಗಳು ಬರುವುದು ಬೇಡ ಎಂದು ಪತ್ನಿ ಸರಸ್ವತಿ ಕಾರ್ನಾಡ್ ಮನವಿ ಮಾಡಿಕೊಂಡಿದ್ದಾರೆ.

ಸಾಹಿತಿಗಳನ್ನು ಸರ್ಕಾರಿ ಜಾಗದಲ್ಲಿ ಅಂತ್ಯಕ್ರಿಯೆ ನಡೆಸುವ ಬಗ್ಗೆ ಈ ಹಿಂದೆ ಭಾರೀ ಟೀಕೆ ವ್ಯಕ್ತವಾಗಿತ್ತು. ಜಿ ಎಸ್ ಶಿವರುದ್ರಪ್ಪ, ಅನಂತಮೂರ್ತಿ ಅಂತ್ಯಕ್ರಿಯೆ ವೇಳೆ ಕಲಾಗ್ರಾಮದಲ್ಲಿ ಸ್ಥಳ ನೀಡುವ ಬಗ್ಗೆ ಭಿನ್ನ ಅಭಿಪ್ರಾಯ ಗಳು ಹೊರಬಿದ್ದಿತ್ತು. ಈ ಸಂದರ್ಭದಲ್ಲಿ ಸಾವಿನಲ್ಲೂ ರಾಜಕೀಯ ಬೇಡ ಎಂಬ ಅಭಿಪ್ರಾಯವನ್ನ ತಮ್ಮ ಪತ್ನಿ ಬಳಿ ತಿಳಿಸಿ ಸರ್ಕಾರಿ ಗೌರವ, ಸರ್ಕಾರಿ ಜಾಗ ಬೇಡ ಎಂದು ತಿಳಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ರೆಫ್ರಿಜರೇಟರ್, ಏರ್‍ಕಂಡಿಷನರ್,ಫ್ರಿಜ್‍ನಂಥ ಗೃಹೋಪಯೋಗಿ ಸಾಧನಗಳು ಕಡಿಮೆ ಬೆಲೆಯಲ್ಲಿ ದೊರಿಯಳಿವೆ..!ತಿಳಿಯಲು ಇದನ್ನು ಓದಿ..

    ಜನರ ತೆರಿಗೆ ಹೊರೆ ತಪ್ಪಿಸಲು ಗ್ರಾಹಕರ ಉತ್ಪನ್ನಗಳು ಹಾಗೂ ದಿನ ಬಳಕೆ ವಸ್ತುಗಳ ಮೇಲಿನ ಸರಕುಗಳು ಮತ್ತು ಸೇವೆಗಳ ತೆರಿಗೆ (ಜಿಎಸ್‍ಟ) ಕಡಿಮೆ ಮಾಡಿರುವ ಕೇಂದ್ರ ಸರ್ಕಾರ ಈಗ ವಾಷಿಂಗ್‍ಮೆಷಿನ್, ಫ್ರಿಜ್‍ನಂಥ ಗೃಹೋಪಯೋಗಿ ಸಾಧನಗಳ ಸುಂಕ ಕಡಿಮೆ ಮಾಡಲು ಚಿಂತನೆ ನಡೆಸಿದೆ.

  • ಆರೋಗ್ಯ

    ತೂಕ ಇಳಿಸಲು ಬಯಸುವವರು ಸೀಬೇಕಾಯಿ ಸೇವಿಸಬಹುದು..!ತಿಳಿಯಲು ಈ ಲೇಖನ ಓದಿ..

    ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.

  • ಸಿನಿಮಾ

    ಹಾಲಿವುಡ್’ಗೆ ಹಾರಲಿರುವ ಸೂಪರ್ ಸ್ಟಾರ್ ‘ಕಿಚ್ಚ ಸುದೀಪ್’!

    ಕನ್ನಡ ಸೂಪರ್ ಸ್ಟಾರ್ ಕಿಚ್ಚ ಸುದೀಪ್’ರವರು ಸ್ಯಾಂಡಲ್‍ವುಡ್,ಕಾಲಿವುಡ್, ಟಾಲಿವುಡ್, ಮತ್ತು ಬಾಲಿವುಡ್ ಚಿತ್ರಗಳಲ್ಲಿ ನಟಿಸಿ ಈಗ ಹಾಲಿವುಡ್ ಸಿನಿಮಾ ಮಾಡಲು ಸಹಿ ಹಾಕಿದ್ದಾರೆ ಎಂಬ ಸುದ್ದಿ ವರದಿಯಾಗಿದೆ.

  • ಸುದ್ದಿ

    ಸಾರ್ವಜನಿಕರ ಮುಂದೆಯೇ ಚಾಕುವಿನಿಂದ ಇರಿದು ಯುವತಿಯ ಬರ್ಬರ ಹತ್ಯೆ …!

    20 ವರ್ಷದ ಯುವತಿಯನ್ನು ಸಾರ್ವಜನಿಕವಾಗಿ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯ ಭೋಗಲ್ ಪ್ರದೇಶದಲ್ಲಿ ನಡೆದಿದೆ.ಈ ಘಟನೆ ಭೋಗಲ್ ಬಸ್ ನಿಲ್ದಾಣದ ಬಳಿ ನಡೆದಿದೆ. ಆರೋಪಿಯನ್ನು ಮುನಾಸೀರ್ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಆತನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ದೆಹಲಿ ಪೊಲೀಸರು ಆರೋಪಿ ಮತ್ತು ಮೃತ ಯುವತಿಗೆ ಸಂಬಂಧ ಇದೆಯೇ ಎಂದು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಮೊದಲಿಗೆ ಮೃತ ಯುವತಿಯ ಬಳಿ ಬಂದು ಮಾತನಾಡುತ್ತಿದ್ದನು. ಆದರೆ…

  • ಆರೋಗ್ಯ

    ಎಲೆಕೋಸಿನಿಂದ ಮಾನವನ ದೇಹಕ್ಕೆ ಏನೆಲ್ಲಾ ಲಾಭವಿದೆ ಗೊತ್ತಾ. ಈ ಅರೋಗ್ಯ ಮಾಹಿತಿ ನೋಡಿ.

    ಎಲೆಕೋಸು ರುಚಿಯಷ್ಟೆ ಅಲ್ಲ, ದೇಹದ ಆರೋಗ್ಯ ಕಾಪಾಡುವಲ್ಲಿ ಕೂಡ ಬಹಳ ಮುಖ್ಯವಾದ ತರಕಾರಿ. ಬೇರೆ ತರಕಾರಿಗಳಿಗೆ ಹೋಲಿಸಿದರೆ ಕಡಿಮೆ ಕ್ಯಾಲೋರಿ ಹೊಂದಿರುತ್ತದೆ. ಆದರೆ ಉತ್ತಮ ಪೌಷ್ಟಿಕಾಂಶ ಹೊಂದಿರುತ್ತದೆ. ಅತ್ಯಂತ ಪ್ರಮಾಣದಲ್ಲಿ ತೇವಾಂಶ ಹೊಂದಿರುತ್ತದೆ. ಇದರಲ್ಲಿ ನಾರಿನಂಶ ಉತ್ತಮವಾಗಿರುವುದರಿಂದ ಮೂಲವ್ಯಾಧಿಗಳ ತೊಂದರೆ ಇರುವವರು ದಿನನಿತ್ಯ ಬೇಯಿಸಿದ ಎಲೆಕೋಸನ್ನು ಸೇವಿಸಿ. ಹೊಟ್ಟೆಯಲ್ಲಿ ಉಂಟಾಗುವ ಹುಣ್ಣುಗಳಿಗೂ ಕೂಡ ಇದು ಉತ್ತಮ ತರಕಾರಿ. ಇದರಲ್ಲಿರುವ ಆಂಟಿ-ಅಲ್ಸರ್‌ ಅಂಶಗಳು ವಿಟಮಿನ್‌ ಯು ದೊರಕುತ್ತದೆ. ಇದು ಹಸಿ ಇದ್ದಾಗ ಮಾತ್ರ ದೊರಕುತ್ತದೆ. ಬೇಯಿಸಿದಾಗ ಇದು ನಾಶವಾಗಿ ಬಿಡುತ್ತದೆ….

  • ಸುದ್ದಿ

    ರಾಜ್ಯ ಸರ್ಕಾರಿ ನೌಕರರಿಗೆ 4ನೇ ಶನಿವಾರ ರಜೆ ನೀಡುವಂತೆ ಸಚಿವ ಸಂಪುಟ ಅಸ್ತು…!

    ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ರಜೆ ನೀಡಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ಅವರು, 17 ರಾಜ್ಯಗಳಲ್ಲಿ ಪ್ರತಿ ಶನಿವಾರ ರಜೆ ಜಾರಿಯಲ್ಲಿದೆ. 4 ರಾಜ್ಯಗಳಲ್ಲಿ ತಿಂಗಳಲ್ಲಿ ಎರಡು ಶನಿವಾರ ರಜೆ ಇದೆ. ಅದೇ ರೀತಿ‌ ನಮ್ಮ ರಾಜ್ಯದಲ್ಲೂ ರಜೆಗೆ ಒತ್ತಾಯ ಇತ್ತು. ಜಯಂತಿಗಳು, ಹಬ್ಬಗಳನ್ನು ಕಡಿತ ಮಾಡಬೇಕಾ…