ಸುದ್ದಿ

ಹಿರಿಯ ಸಾಹಿತಿ ,ಜ್ಞಾನಪೀಠ ಪ್ರಶಸ್ತಿ ವಿಜೇತ ಶ್ರೀ ಗಿರೀಶ್ ಕಾರ್ನಡ್ ಇನ್ನಿಲ್ಲ….

172

ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು.

ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು ಕಳೆದು ಕೊ೦ಡರು. ಕಾರ್ನಾಡ್ ಅವರ ಪ್ರಾಥಮಿಕ ಶಿಕ್ಷಣ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ, ಪ್ರೌಢಶಿಕ್ಷಣ ಧಾರವಾಡದ ಬಾಸೆಲ್ ಮಿಷನ್ ಹೈಸ್ಕೂಲಿನಲ್ಲಿ ಹಾಗೂ ಪದವಿ ಶಿಕ್ಷಣ ಕರ್ನಾಟಕ ಕಾಲೇಜಿನಲ್ಲಿ ನಡೆಯಿತು.

ಆ ಬಳಿಕ ರ್ಹೊಡ್ಸ್ ಸ್ಕಾಲರ್ಶಿಪ್ ಪಡೆದುಕೊಂಡು ಆಕ್ಸ್‌ಫರ್ಡ್‌ನಲ್ಲಿ ಹೆಚ್ಚಿನ ವ್ಯಾಸಂಗಕ್ಕೆ ತೆರಳಿದರು. ಗಿರೀಶ ಕಾರ್ನಾಡರು ಆಕ್ಸ್‌ಫರ್ಡ್‌ ಡಿಬೇಟ ಕ್ಲಬ್ ಗೆ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಥಮ ಏಷಿಯನ್ ಆಗಿದ್ದಾರೆ.ಗಿರೀಶ ಕಾರ್ನಾಡರ ಮೊದಲ ಸಾಹಿತ್ಯ ಕೃತಿ’ ಯಯಾತಿ’ ನಾಟಕ ಧಾರವಾಡದ ಮನೋಹರ ಗ್ರಂಥಮಾಲೆಯಲ್ಲಿ ಪ್ರಕಟವಾಯಿತು. ಇಂಗ್ಲೆಂಡಿನಿಂದ ಮರಳಿದ ಬಳಿಕ ತುಘಲಕ್ ಹಾಗೂ ಹಯವದನ ಪ್ರಕಟವಾದವು. ಕಾರ್ನಾಡ್ ಅವರಿಗೆ ಜ್ಞಾನ ಪೀಠ ಪ್ರಶಸ್ತಿ, ಪದ್ಮಶ್ರೀ, ಪದ್ಮ ವಿಭೂಷಣ ಪ್ರಶಸ್ತಿಗಳು ಲಭಿಸಿದ್ದವು,

ಈ ನಡುವೆ ಪುಣೆ ಫಿಲ್ಮ್ ಇನ್ಸ್ಟಿಟ್ಯೂಟ್‍ನ ನಿರ್ದೇಶಕ ರಾಗಿದ್ದು, ಮತ್ತೆ ಅದನ್ನು ಬಿಟ್ಟು ಮುಂಬಯಿಗೆ ಬಂದ ಕಾರ್ನಾಡರು ಕೆಲವು ಚಲನಚಿತ್ರಗಳಲ್ಲಿ ನಟಿಸಿದರು. ಆ ರಂಗವನ್ನೂ ತ್ಯಜಿಸಿ ಮತ್ತೆ ಬೆಂಗಳೂರಿಗೆ ಬಂದರು. ನಂತರ ಕಾರ್ನಾಡ್ ಹಲವು ಸಿನಿಮಾಗಳನ್ನು ನಿರ್ದೇಶಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬುಧವಾರ, 18/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹಣಕಾಸಿನ ಹರಿವಿಗೆ ಇದ್ದ ತೊಂದರೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್‌ ಚಾತುರ್ಯದಿಂದ ನಿಮ್ಮ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಏಪ್ರಿಲ್, 2019) ಇಂದು ನೀವು ನಿಮ್ಮ ಆರೋಗ್ಯ ಮತ್ತು ನೋಟವನ್ನು ಸುಧಾರಿಸಲು ಕೆಲಸ ಮಾಡಲು ಸಾಕಷ್ಟು ಸಮಯ…

  • ಸುದ್ದಿ

    ಸ್ನಾಕ್ಸ್ ಗೆ ಮನೆಯಲ್ಲೇ ಸ್ಪೈಸಿ ಸ್ಪೈಸಿ ಸೋಯಾ ಮಂಚೂರಿ ಮಾಡುವ ವಿಧಾನ,.!

    ಭಾನುವಾರ ರಜೆ ದಿನ. ಪ್ರತಿನಿತ್ಯ ಕೆಲಸ, ಶಾಲೆ ಎಂದು ಬ್ಯುಸಿಯಾಗಿರೋ ಕುಟುಂಬಸ್ಥರು ಮನೆಯಲ್ಲಿ ರೆಸ್ಟ್ ಮಾಡುತ್ತಾ ಇರುತ್ತಾರೆ. ಮಕ್ಕಳು ಸಹ ಇಂದು ಮನೆಯಲ್ಲಿಯೇ ಇರುತ್ತಾರೆ. ಎಲ್ಲರೂ ಒಟ್ಟಿಗೆ ಕುಳಿತು ರುಚಿ ರುಚಿಯಾದ ಮಸಲಾ ಚಾಟ್ಸ್ ತಿನ್ನೋ ಬಯಕೆ ಎಲ್ಲರಲ್ಲಿ ಮನೆ ಮಾಡಿರುತ್ತದೆ. ಹೊರಗಡೆ ತಂದ ತಿಂಡಿ ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾಗಿ ಮನೆಯಲ್ಲಿ ಏನು ಮಾಡಬೇಕೆಂದು ಚಿಂತೆಯಲ್ಲಿದ್ದೀರಾ. ಒಮ್ಮೆ ಸ್ಪೈಸಿ ಸೋಯಾ ಮಂಚೂರಿ ಮಾಡಿ ತಿನ್ನಿ. ಸ್ಪೈಸಿ ಸೋಯಾ ಮಂಚೂರಿ ಮಾಡುವ ವಿಧಾನ ಇಲ್ಲಿದೆ. ಬೇಕಾಗುವಸಾಮಾಗ್ರಿಗಳು* ಸೋಯಾ –…

  • Law

    ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ 10 ವರ್ಷ ಜೈಲು ಶಿಕ್ಷೆ..!

    ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ರೇಪಿಸ್ಟ್, ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ ಸಿಬಿಐ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆಯಾಗಿದೆ.

  • ಕರ್ನಾಟಕ

    ರಾಷ್ಟ್ರಕವಿ ಕುವೆಂಪುರವರಿಗೆ ಗೂಗಲ್‌ ಡೂಡಲ್‌ ಗೌರವ…ಗೂಗಲ್‌ ಮುಖಪುಟದಲ್ಲಿ ರಾರಾಜಿಸುತ್ತಿರುವ ಕನ್ನಡದ ಕಂಪು…

    ಇಂದು ಡಿಸೆಂಬರ್‌ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್‌ ಕವಿಗೆ ಗೂಗಲ್‌ ವಿಶೇಷ ಡೂಡಲ್‌ ಮೂಲಕ ಗೌರವ ಸಲ್ಲಿಸಿದೆ.

  • ಸುದ್ದಿ

    ಚಾಲೆಂಜಿಂಗ್ ಸ್ಟಾರ್ ದರ್ಶನ್ :ಅಂಬರೀಶ್ ನಂತರ ಶಿವಣ್ಣರಿಗೆ ಅಪ್ಪಾಜಿ ಸ್ಥಾನ ಕೊಟ್ಟಿದ್ಯಾಕೆ? ದರ್ಶನ್ ಹೇಳಿದ ಈ ಮಾತುಗಳನ್ನು ಕೇಳಿ,

    ಸ್ಯಾಂಡಲ್ ವುಡ್ ದಿಗ್ಗಜ ನಟರಿಬ್ಬರು (ದರ್ಶನ್ ಮತ್ತು ಶಿವಣ್ಣ) ಒಂದೇ ವೇದಿಕೆಯಲ್ಲಿ ಇಂದು ಸಿನಿಮಾ ಒಂದರ ಮೂಹೂರ್ತದಲ್ಲಿ ಕಾಣಿಸಿಕೊಂಡು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅಣ್ಣಾವ್ರ ಸಂಬಂಧಿಕರು ಪಾರ್ವತಮ್ಮ ರಾಜಕುಮಾರ್ ಸಹೋದರಿಯ ಮಗ ಆಗಿರುವ ಧ್ರುವನ್ ಅವರ ಚಿತ್ರಕ್ಕೆ  ಕಂಠೀರವ ಸ್ಟುಡಿಯೋದಲ್ಲಿ ಇಂದು ಮುಹೂರ್ತ ನಡೆದಿದ್ದು ಅಲ್ಲಿ ಹ್ಯಾಟ್ರಿಕ್ ಹೀರೋ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಹಾಗೂ ಡಿ ಬಾಸ್ ದರ್ಶನ್ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದು ನೋಡುಗರನ್ನು ಅಚ್ಚರಿ ಪಡುವಂತೆ ಮಾಡಿತು.‌ ಧ್ರುವನ್ ಅವರು‌…