ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು.
ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು ಕಳೆದು ಕೊ೦ಡರು. ಕಾರ್ನಾಡ್ ಅವರ ಪ್ರಾಥಮಿಕ ಶಿಕ್ಷಣ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ, ಪ್ರೌಢಶಿಕ್ಷಣ ಧಾರವಾಡದ ಬಾಸೆಲ್ ಮಿಷನ್ ಹೈಸ್ಕೂಲಿನಲ್ಲಿ ಹಾಗೂ ಪದವಿ ಶಿಕ್ಷಣ ಕರ್ನಾಟಕ ಕಾಲೇಜಿನಲ್ಲಿ ನಡೆಯಿತು.
ಆ ಬಳಿಕ ರ್ಹೊಡ್ಸ್ ಸ್ಕಾಲರ್ಶಿಪ್ ಪಡೆದುಕೊಂಡು ಆಕ್ಸ್‌ಫರ್ಡ್‌ನಲ್ಲಿ ಹೆಚ್ಚಿನ ವ್ಯಾಸಂಗಕ್ಕೆ ತೆರಳಿದರು. ಗಿರೀಶ ಕಾರ್ನಾಡರು ಆಕ್ಸ್‌ಫರ್ಡ್ ಡಿಬೇಟ ಕ್ಲಬ್ ಗೆ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಥಮ ಏಷಿಯನ್ ಆಗಿದ್ದಾರೆ.ಗಿರೀಶ ಕಾರ್ನಾಡರ ಮೊದಲ ಸಾಹಿತ್ಯ ಕೃತಿ’ ಯಯಾತಿ’ ನಾಟಕ ಧಾರವಾಡದ ಮನೋಹರ ಗ್ರಂಥಮಾಲೆಯಲ್ಲಿ ಪ್ರಕಟವಾಯಿತು. ಇಂಗ್ಲೆಂಡಿನಿಂದ ಮರಳಿದ ಬಳಿಕ ತುಘಲಕ್ ಹಾಗೂ ಹಯವದನ ಪ್ರಕಟವಾದವು. ಕಾರ್ನಾಡ್ ಅವರಿಗೆ ಜ್ಞಾನ ಪೀಠ ಪ್ರಶಸ್ತಿ, ಪದ್ಮಶ್ರೀ, ಪದ್ಮ ವಿಭೂಷಣ ಪ್ರಶಸ್ತಿಗಳು ಲಭಿಸಿದ್ದವು,
ಈ ನಡುವೆ ಪುಣೆ ಫಿಲ್ಮ್ ಇನ್ಸ್ಟಿಟ್ಯೂಟ್‍ನ ನಿರ್ದೇಶಕ ರಾಗಿದ್ದು, ಮತ್ತೆ ಅದನ್ನು ಬಿಟ್ಟು ಮುಂಬಯಿಗೆ ಬಂದ ಕಾರ್ನಾಡರು ಕೆಲವು ಚಲನಚಿತ್ರಗಳಲ್ಲಿ ನಟಿಸಿದರು. ಆ ರಂಗವನ್ನೂ ತ್ಯಜಿಸಿ ಮತ್ತೆ ಬೆಂಗಳೂರಿಗೆ ಬಂದರು. ನಂತರ ಕಾರ್ನಾಡ್ ಹಲವು ಸಿನಿಮಾಗಳನ್ನು ನಿರ್ದೇಶಿಸಿದ್ದರು.