ಸುದ್ದಿ

ಹೆಣ್ಣು ಮಗು ಭವಿಷ್ಯಕ್ಕೆ ಕಂಟಕವೆಂದ ಜ್ಯೋತಿಷಿ; ಮಗುವನ್ನೇ ಕೊಂದ ಅಪ್ಪ…!

69

ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟ‌ನೆ ನಡೆದಿದೆ. 27 ವರ್ಷದ ಮಂಜುನಾಥ್‌ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ.

Good Health Baby Getty

ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು ಹಿಚುಕಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಹೆಣ್ಣು ಮಗುವಿನಿಂದ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂದೆಲ್ಲ ತಲೆಗೆ ತುಂಬಿಸಿದ್ದ ಜ್ಯೋತಿಷಿಗಾಗಿ ಪೊಲೀಸರ ಹುಡುಕಾಟ ನಡೆಸಿದ್ದಾರೆ.

ತಾಯಿ ಇಲ್ಲದ ವೇಳೆ ಮಗುವನ್ನ ಅಪ್ಪ‌ ಹತ್ಯೆ ಮಾಡಿದ್ದಾನೆ ಎನ್ನಲಾಗಿದ್ದು, ಮಗುವಿನ ಕುತ್ತಿಗೆಯಲ್ಲಿ ಗಂಭೀರ ಗಾಯ ಕಂಡು ಬಂದಿದೆ. ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರ ಭೇಟಿ, ಆರೋಪಿಯನ್ನು ಬಂಧಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ