ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ ಕಳವಳವನ್ನು ಹೊರಹಾಕಿದ್ದಾರೆ.ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಘಟ್ಟದ ಭಾಗದಲ್ಲಿ ಮಳೆಯಾಗದ ಕಾರಣ ನೇತ್ರಾವತಿಯಲ್ಲಿ ನೀರಿಲ್ಲ. ಅಲ್ಲದೆ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಬರಲ್ಲ ಎಂದು ಸೂಚನೆ ಕೊಟ್ಟಿದೆ. ಹೀಗಾಗಿ ಕ್ಷೇತ್ರ ದರ್ಶನ ಮುಂದೂಡಿ ಎಂದು ವಿನಂತಿ ಮಾಡುತ್ತಿದ್ದೇವೆ.
ನಾವು ಈ ಬಗ್ಗೆ ಎಷ್ಟೇ ಎಚ್ಚರಿಕೆ ವಹಿಸಿದ್ದರು ಕೂಡ ಶೌಚಾಲಯಗಳಿಗೆ ನೀರು ಕೊಡಬೇಕಾಗುತ್ತದೆ. ನಮ್ಮ ವಸತಿಯಲ್ಲಿ ಇರುವವರಿಗೆ ಶೌಚಾಲಯದಲ್ಲಿ ನೀರು ಕೊಡಲೇಬೇಕು. ಶಾಲೆಗಳಿಗೆ ರಜೆ ಇರುವುದರಿಂದ ಎಲ್ಲರೂ ಇಲ್ಲಿಗೆ ಬರುತ್ತಾರೆ. ಆದರೆ ಇಲ್ಲಿ ನೀರಿನ ಸಮಸ್ಯೆ ಇದೆ. ಇಲ್ಲಿ ಬಂದರೂ ಸಾಕಷ್ಟು ನೀರು ಬೇಕಾಗುತ್ತದೆ. ಹಾಗಾಗಿ ಧರ್ಮಸ್ಥಳಕ್ಕೆ ಈಗಲೆ ಯಾರೂ ಬರಬೇಡಿ ಎಂದು ವಿನಂತಿ ಮಾಡುತ್ತಿದ್ದೇನೆ ಎಂದರು.
ಅದು ನೇತ್ರಾವತಿ ಕಿಂಡಿ ಅಣೆಕಟ್ಟಿನಲ್ಲಿ ತಾತ್ಕಾಲಿಕ ನೀರು ಹಾಗೂ ತೀರ್ಥದ ಗುಂಡಿಯಲ್ಲಿ ಸ್ವಲ್ಪ ನೀರಿದೆ. ಮುಂದೆ ಮಳೆ ಬರದಿದ್ದರೆ ಮಂಜುನಾಥನಿಗೂ ಬರದ ಬಿಸಿ ತಟ್ಟಲಿದೆ. ಅಲ್ಲಿನ ತೀರ್ಥ ಗುಂಡಿಯಲ್ಲೂ ನಾಲ್ಕು ಅಡಿ ನೀರು ಕಡಿಮೆ ಆಗಿದೆ. ಹಿಂದೆಯೂ ಈ ರೀತಿ ಆಗಿದೆ. ಆದರೆ ಇಷ್ಟು ತೀವ್ರವಾಗಿ ಆಗಿರಲಿಲ್ಲ. ಉಪನದಿಗಳಲ್ಲಿ ನೀರು ಬತ್ತಿರುವ ಪರಿಣಾಮ ನೀರಿಗೆ ಸಮಸ್ಯೆ ಆಗಿದೆ. ಕಾಡು ಉಳಿಸದೇ ಇರುವ ಕಾರಣ ಈ ಸಮಸ್ಯೆ ಎದುರಾಗಿದೆ ಎಂದು ಅವರು ತಿಳಿಸಿದರು.
ಇದೇ ವೇಳೆ ಸರ್ಕಾರ ಮತ್ತು ಜಲತಜ್ಞರು ಈ ಬಗ್ಗೆ ಯೋಚನೆ ಮಾಡಬೇಕು. ಮುಂದಿನ 15-20 ವರ್ಷಗಳ ಭವಿಷ್ಯದ ಬಗ್ಗೆ ಯೋಚನೆ ಮಾಡಬೇಕು. ಪಶ್ಚಿಮ ಘಟ್ಟದಲ್ಲಿ ಅರಣ್ಯನಾಶದಿಂದ ನೀರಿನ ಸಮಸ್ಯೆ ಆಗಿದೆ ಎಂದು ವೀರೇಂದ್ರ ಹೆಗ್ಗಡೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.
ಸೌತ್ ವೆಸ್ಟ್ರನ್ ರೈಲ್ವೆ ವಲಯದಲ್ಲಿ ರೈಲು ಹಳಿಗಳ ವಿದ್ಯುತೀಕರಣ ಭರದಿಂದ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ಇಂಜಿನ್ ಗಳನ್ನು ನಿರ್ವಹಣೆ ಮಾಡುವ ವ್ಯವಸ್ಥೆ ಪ್ರಾಮುಖ್ಯತೆ ಪಡೆಯಲಿದೆ. ಪ್ರಸ್ತುತ ಕೆ.ಆರ್ ಪುರಂ ನಲ್ಲಿರುವ ಡೀಸೆಲ್ ಲೋಕೋ ಶೆಡ್ ನ್ನು ಎಲೆಕ್ಟ್ರಿಕ್ ಲೋಕೋ ಶೆಡ್ ನ್ನಾಗಿ ಮಾರ್ಪಾಡು ಮಾಡಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಎಲೆಕ್ಟ್ರಿಕ್ ಲೋಕೋ ಶೆಡ್ ಸ್ಥಾಪನೆಯಾಗಲಿದೆ. ಬೆಂಗಳೂರು ಮೂಲದ ಬಾಲಾಜಿ ಬಿಲ್ಡರ್ಸ್ ಗೆ ಈ ಗುತ್ತಿಗೆ ಲಭ್ಯವಾಗಿದ್ದು, ವರ್ಷಾಂತ್ಯ ಅಥವಾ 2020 ರ ಜನವರಿಗೆ ಕಾಮಗಾರಿ…
ಕೇಂದ್ರ ಸರ್ಕಾರ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್’ ನಿಧಿ ಯೋಜನೆಯಡಿ ಸಣ್ಣ ರೈತರಿಗೆ ಇದೇ ತಿಂಗಳಿಂದ ಹಣ ನೀಡಲು ಶುರು ಮಾಡಲಿದೆ. ಈ ಯೋಜನೆಯಡಿ 2 ಹೆಕ್ಟೆರ್ ನಷ್ಟು ಕೃಷಿ ಭೂಮಿ ಹೊಂದಿರುವ ರೈತರ ಖಾತೆಗೆ ಹಣ ಜಮಾ ಆಗಲಿದೆ. ವರ್ಷಕ್ಕೆ 6 ಸಾವಿರ ರೂಪಾಯಿ ಖಾತೆಗೆ ಬರಲಿದೆ. ಮೂರು ಕಂತಿನಲ್ಲಿ ಹಣ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಮಾರ್ಚ್ ತಿಂಗಳಿನಲ್ಲಿ ಮೊದಲ ಕಂತಿನ ಹಣ 2000 ರೂಪಾಯಿ ಸಿಗಲಿದೆ. ಆದ್ರೆ ಇದಕ್ಕೆ ಆಧಾರ್ ಕಾರ್ಡ್ ಅನಿವಾರ್ಯವಾಗಿದೆ….
ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.
ಧ್ಯಾನವು ಚಿನ್ನದ ಹಾಗೆ ಬಹು ಮೂಲ್ಯವುಳ್ಳದು. ಭೌತಿಕ ಐಶ್ವರ್ಯಕ್ಕೂ,ಮುಕ್ತೀಗೂ,ಶಾಂತಿಗೂ ಧ್ಯಾನವು ಒಳ್ಳೆಯದು. ಅದಕ್ಕಾಗಿ ಉಪಯೋಗಿಸುವ ಸಮಯ ಎಂದಿಗೂ ನಷ್ಟವಾಗುವಂತದಲ್ಲ. ಧ್ಯಾನದ ಲಾಭಗಳು ವರ್ಣಿಸಲು ಹೋದರೆ ಅದಕ್ಕೆ ಅಂತ್ಯವೇ ಇಲ್ಲ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು 2018-19ನೇ ಸಾಲಿನ ಬಜೆಟ್ ಮಂಡಿಸಿದ್ದು,ಹಲವಾರು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ.ಇದರಲ್ಲಿ ರೈತರಿಗೂ ಹಲವಾರು ಯೋಜನೆಗಳನ್ನು ಪ್ರಕಟಿಸಿದ್ದು,ಕೃಷಿಗೆ ಹೆಚ್ಚು ಮಾನ್ಯತೆ ನೀಡಿದ್ದಾರೆ.