ಉಪಯುಕ್ತ ಮಾಹಿತಿ, ದೇವರು

ದೇವರ ಪೂಜೆ ಮಾಡುವಾಗ ನಿಮ್ಮ ಮನಸ್ಸು ಚಂಚಲವಾಗುವುದಾ ಹೀಗೆ ಮಾಡಿ.

301

ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ ಅಭ್ಯಾಸ. ಹೀಗೆ ಮಾಡಿದಾಗ ಅದು ಭಗವಂತನಲ್ಲಿ ನೆಲೆನಿಲ್ಲುತ್ತದೆ. ಭಗವಂತನಲ್ಲಿ ನೆಲೆನಿಂತ ಮನಸ್ಸು ಅಂತ್ಯಕಾಲದಲ್ಲಿ ಕೂಡಾ ಭಗವಂತನನ್ನೇ ಕಾಣುತ್ತದೆ.

ಇದು ಕೇವಲ ಚಿಂತನೆ ಅಲ್ಲ ಇದು ಅನುಚಿಂತನೆ-ಅಂದರೆ ಭಗವಂತನ ಯಥಾರ್ಥ (ಯತಾವತ್ತಾದ)ಚಿಂತನೆ. ಶ್ರುತಿಯಲ್ಲಿ ಹೇಗೆ ಹೇಳಿದ್ದಾರೋ ಹಾಗೆ ಭಗವಂತನನ್ನು ಚಿಂತನೆ ಮಾಡಬೇಕು. ಅಸತ್ಯವನ್ನು ಚಿಂತನೆ ಮಾಡಿ ಭಗವಂತನನ್ನು ಸೇರಲು ಸಾಧ್ಯವಿಲ್ಲ. ಏಕಾಗ್ರವಾದ ಮನಸ್ಸಿನಿಂದ ದಿವ್ಯನಾದ ಪರಮಪುರುಷ, ಹೃತ್ಕಮಲ ಮದ್ಯನಿವಾಸಿ ಭಗವಂತನ ಚಿಂತನೆ ಮಾಡಬೇಕು ಎನ್ನುತ್ತಾನೆ ಕೃಷ್ಣ. ಮಹತೊಮಹಿಯಾದ ಭಗವಂತ ನಿನ್ನ ಹೃದಯದಲ್ಲಿ ಅಣೋರಣೀಯವಾಗಿ ಇರುವುದನ್ನು ಧ್ಯಾನದಲ್ಲಿ ಗುರುತಿಸು ಎನ್ನುವುದು ಇಲ್ಲಿ ಕೃಷ್ಣನ ಸಂದೇಶ. ಭಗವಂತ ಸರ್ವಗತ, ಸರ್ವಸಮರ್ಥ, ಸರ್ವಗುಣಪೂರ್ಣ, ಅನಾಧಿನಿತ್ಯ. ಅಂತಹ ಭಗವಂತ ನಮ್ಮ ಹೃತ್ಕಮಲದಲ್ಲಿ ವಾಸಿಸಿದ್ದಾನೆ ಮತ್ತು ದಿವ್ಯನಾಗಿದ್ದಾನೆ.

ಇಲ್ಲಿ ಬಳಸಿರುವ ದಿವ್ಯ ಪದಕ್ಕೆ ಅನೇಕ ಅರ್ಥಗಳಿವೆ. ಮೂಲವಾಗಿ ದಿವ್ಯ ಅಥವಾ ‘ದೇವರು’ ಈ ಪದಗಳು ‘ದಿವು’ ಎನ್ನುವ ದಾತುವಿನಿಂದ ಬಂದಿರುವುದು. ಪ್ರಾಚೀನ ದಾತು ಪಾಠದಲ್ಲಿ ಈ ದಾತುವಿಗೆ ಏಳು ಅರ್ಥವನ್ನು ನೋಡಬಹುದು; ಅವುಗಳೆಂದರೆ: ಧ್ಯುತಿ, ವಿಜಿಗೀಶ, ಕಾಂತಿ, ಸ್ತುತಿ, ವ್ಯವಹಾರ, ಕ್ರೀಡಾ, ಗತಿಶು. ಇತ್ತೀಚೆಗೆ ಮೋದ, ಮದ ಮತ್ತು ಸ್ವಪ್ನ ಎನ್ನುವ ಇನ್ನೂ ಮೂರು ಅರ್ಥವನ್ನು ಸೇರಿಸಿದ್ದಾರೆ. ಆದರೆ ಇದು ಪ್ರಾಚೀನ ದಾತುಪಾಠದಲ್ಲಿ ಇಲ್ಲ. ಈಗ ಸಂಕ್ಷಿಪ್ತವಾಗಿ ಮೇಲಿನ ಏಳು ಅರ್ಥಗಳನ್ನು ನೋಡೋಣ.

ಧ್ಯುತಿ : ಧ್ಯುತಿ ಅಂದರೆ ಬೆಳಕಿನ ಸ್ವರೂಪ. ಬೆಳಕಿನ ಪುಂಜವಾದ ಸೂರ್ಯ ಚಂದ್ರಾದಿಗಳಿಗೆ ಬೆಳಕನ್ನೀಯುವ ಭಗವಂತ ನಮ್ಮೊಳಗೆ ಜ್ಞಾನದ ಬೆಳಕನ್ನು ತುಂಬುತ್ತಾನೆ.

ವಿಜಿಗೀಶ: ಭಗವಂತ ಎಲ್ಲರಿಗಿಂತ ಎತ್ತರದಲ್ಲಿರುವವನು ಹಾಗು ಗೆಲುವಿನ ಸ್ವರೂಪ.

ಕಾಂತಿ: ಕೇವಲ ಇಚ್ಚೆಯಿಂದ ಸೃಷ್ಟಿ ಮಾಡಬಲ್ಲವ. ನಮಗೆ ಇಚ್ಚೆಯನ್ನು ಕೊಟ್ಟವ ಹಾಗು ಅದನ್ನು ಅವರವರ ಯೋಗ್ಯತೆಗೆ ತಕ್ಕಂತೆ ಪೂರೈಸುವವ.

ಸ್ತುತಿ: ಎಲ್ಲರಿಂದ ಸ್ತುತನಾದವನು; ಎಲ್ಲರೂ ಯಾರನ್ನು ಸ್ತುತಿಸುತ್ತಾರೋ ಅವನು ಸರ್ವಶಬ್ದ ವಾಚ್ಯನಾದ ಭಗವಂತ.

ವ್ಯವಹಾರ: ಜಗತ್ತಿನ ಸಮಸ್ತ ವ್ಯವಹಾರವನ್ನು ನಿರ್ವಹಿಸುವವ.

ಕ್ರೀಡಾ: ಸೃಷ್ಟಿ-ಸ್ಥಿತಿ-ಸಂಹಾರ ಇದು ಭಗವಂತನಿಗೊಂದು ಕ್ರೀಡೆ. ಹುಟ್ಟು-ಸಾವು, ಸರ್ವ ವ್ಯವಹಾರಗಳು ಆತನಿಗೊಂದು ಕ್ರೀಡೆ.

ಗತಿಶು: ಚಲನೆ ಮತ್ತು ಜ್ಞಾನ ಕೊಟ್ಟವ. ಯಾರು ಎಲ್ಲಾ ಕಡೆ ಗತನಾಗಿದ್ದಾನೋ; ಎಲ್ಲವನ್ನೂ ತಿಳಿದಿದ್ದಾನೋ; ಎಲ್ಲರೊಳಗೆ ಬಿಂಬ ರೂಪದಲ್ಲಿ ನೆಲೆಸಿದ್ದಾನೋ ಅವನು ದಿವ್ಯ ಅಥವಾ ‘ದೇವ’ ಹೀಗೆ ಅನೇಕ ಅರ್ಥಗಳನ್ನು ‘ದಿವ್ಯ’ ಎನ್ನುವ ಪದದಲ್ಲಿ ಕಂಡುಕೊಳ್ಳಬಹುದು. “ಓ ದೇವರೇ” ಎನ್ನುವಾಗ ಮೇಲಿನ ಅರ್ಥವನ್ನು ಒಮ್ಮೆ ನೆನೆದರೆ ಅದರಿಂದಾಗುವ ಆನಂದ ಅಪರಿಮಿತ. ಭಗವಂತನ ನಾಮದಲ್ಲಿ ಅಷ್ಟೊಂದು ಬಲವಿದೆ. ನಾವು ಭಗವಂತನ ಜೊತೆಗೇ ಇದ್ದೂ ಕೂಡಾ ಮಾನಸಿಕವಾಗಿ ಆತನಿಂದ ದೂರವಿದ್ದೇವೆ. ಭಗವಂತನ ನಿರಂತರ ಅನುಚಿಂತನೆಯಿಂದ ನಾವು ಆತನ ಸಾಕ್ಷಾತ್ಕಾರ ಪಡೆಯಬಹುದು.

ಜ್ಯೋತಿಷ್ಯ ವಿದ್ವಾನ್ ಹಾಗೂ ದೈವಜ್ಞ ಕೊಲ್ಲುರು ಶ್ರೀ ಮೂಕಾಂಬಿಕಾ ದೇವಿ ಆರಾಧಕರು ನಿಮ್ಮ ಜೀವನದ ಸರ್ವಸಮಸ್ಯೆಗಳಿಗೆ ಅಷ್ಟದಶಶಕ್ತಿಪೀಠಗಳ ದೈವಸಿದ್ದಿಯಿಂದ ಶಾಶ್ವತ ಪರಿಹಾರ ಕರೆ ಮಾಡಿ ನೇರವಾಗಿ ಭೇಟಿಯಾಗಲು ಪೋನಿನ ಮೂಖಾಂತರ ಖಚಿತಪಡಿಸಿಕೊಳ್ಳಿ 9901077772

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಶಿಕ್ಷಣ ಇಲಾಖೆ ನಿರ್ದೇಶಕ ಅಮಾನತು..!

    ಹಿರಿಯ ಅಧಿಕಾರಿಗಳ ಅನುಮೋದನೆ ಪಡೆಯದೆ ‘ಸಂವಿಧಾನ ದಿನಾಚರಣೆ’ಗೆ ಸಂಬಂಧಿಸಿದ ಸುತ್ತೋಲೆ ಹೊರಡಿಸಿ, ಇಲಾಖೆಯ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ (ಪ್ರೌಢ ಶಿಕ್ಷಣ) ಕೆ.ಎಸ್‌.ಮಣಿ ಸೇರಿ ನಾಲ್ವರನ್ನು ಸರಕಾರ ಅಮಾನತು ಮಾಡಿದೆ. ಇಲಾಖೆಯು ನ.26ರಂದು ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಹಮ್ಮಿ ಕೊಂಡಿರುವ ‘ಸಂವಿಧಾನ ದಿನಾಚರಣೆ’ಯ ಜಾಗೃತಿ ಅಭಿಯಾನದ ಮಾರ್ಗ ದರ್ಶಿಗಳನ್ನು ಖಾಸಗಿ ಸಂಸ್ಥೆಯೊಂದು ಸಿದ್ಧಪಡಿಸಿಕೊಟ್ಟಿತ್ತು. ಈ ಮಾರ್ಗದರ್ಶಿಯಲ್ಲಿ, ‘ಡಾ.ಬಿ.ಆರ್‌.ಅಂಬೇಡ್ಕರ್‌ ಒಬ್ಬರೇ ಸಂವಿಧಾನ ರಚಿಸಿಲ್ಲ’ ಎಂಬ ವಿವಾದಾತ್ಮಕ ವಾಕ್ಯವನ್ನು ಸೇರಿಸಲಾಗಿತ್ತು. ಈ ಮಾರ್ಗಸೂಚಿಗಳನ್ನು…

  • India, Place

    ಕೈಲಾಸ ಪರ್ವತ

    ಕೈಲಾಸ ಪರ್ವತವು ಟಿಬೆಟ್ ನ ಹಿಮಾಲಯ  ಶ್ರೇಣಿಯ ಗಾಂಗ್ ಡೈಸ್ ಸರಣಿಯ ಒಂದು ಶಿಖರ. ಈ ಪರ್ವತಪ್ರದೇಶವು ಏಷ್ಯಾದ ಹಲವು ಮಹಾನದಿಗಳಿಗೆ ಮೂಲಸ್ಥಾನವಾಗಿದೆ. ಸಿಂಧೂ ನದಿ , ಸಟ್ಲೆಜ್ ನದಿ ಮತ್ತು ಬ್ರಹ್ಮಪುತ್ರ ಈ ಆಸುಪಾಸಿನಲ್ಲಿಯೇ ಉಗಮಿಸುತ್ತವೆ. ಕೈಲಾಸಪರ್ವತವು ಹಿಂದೂ ಬೌದ್ಧ, ಜೈನ ಮತ್ತು ಬಾನ್ಧರ್ಮೀಯರಿಗೆ ಪವಿತ್ರ ತಾಣವಾಗಿದೆ. ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸಪರ್ವತವು ಪರಶಿವನ ನೆಲೆ. ಕೈಲಾಸಪರ್ವತವು ಟಿಬೆಟ್ ನಲ್ಲಿ ಮಾನಸಸರೋವರ ಮತ್ತು ರಾಕ್ಷಸ್ ತಾಲ್ ಗಳ ಮಗ್ಗುಲಲ್ಲಿದೆ. ಕೈಲಾಸಪರ್ವತದ ಆರೋಹಣವನ್ನು ಮಾಡಿದುದರ ಬಗೆಗೆ ಯಾವುದೇ ದಾಖಲೆಗಳಿಲ್ಲ. ಹಿಂದೂ ಮತ್ತು ಬೌದ್ಧ ಧರ್ಮೀಯರು ಕೈಲಾಸಪರ್ವತವನ್ನು ಅತಿ ಪವಿತ್ರ ತಾಣವಾಗಿ ಪರಿಗಣಿಸುವುದರಿಂದಾಗಿ ಈ…

  • ಆಧ್ಯಾತ್ಮ

    ಕೃಷ್ಣನ ಜನ್ಮದ ಹಿಂದೆ ಅಡಗಿರುವ ಆ ರಹಸ್ಯ ಏನು ಗೊತ್ತಾ?ಕೃಷ್ಣ ಕಾರಾಗೃಹದಲ್ಲೇ ಜನಿದಿದ್ದು ಏಕೆ?ತಿಳಿಯಲು ಈ ಲೇಖನಿ ಓದಿ…

    ಭಗವಾನ್ ಮಹಾವಿಷ್ಣುವಿನ ಎ೦ಟನೆಯ ಅವತಾರವಾಗಿ ಶ್ರೀ ಕೃಷ್ಣನು ಅ೦ದು ರೋಹಿಣಿ ನಕ್ಷತ್ರದಲ್ಲಿ ಚ೦ದ್ರೋದಯ ಸಮಯದಲ್ಲಿ ಮಥುರಾದ ವಸುದೇವ ಮತ್ತು ದೇವಕಿಯರ ಮಗನಾಗಿ ಜನಿಸಿದ. ಅ೦ತೆಯೇ ಮಧ್ಯರಾತ್ರಿಯಲ್ಲಿ ಶ್ರೀ ಕೃಷ್ಣ ದೇವಾಲಯಗಳಲ್ಲಿ ಶ್ರೀ ಕೃಷ್ಣನ ಜನನದ ಅ೦ಗವಾಗಿ ವಿಶೇಷ ಪೂಜೆ, ಪುನಸ್ಕಾರ, ಅಭಿಷೇಕ ಹಾಗೂ ಧಾರ್ಮಿಕ ಪ್ರವಚನಗಳು ಜರುಗುತ್ತವೆ

  • ಉಪಯುಕ್ತ ಮಾಹಿತಿ

    ನಿಮ್ಮ ಪಾನ್‌ಕಾರ್ಡ್‌ ಆಧಾರ್‌ ಜೊತೆ ಲಿಂಕ್ ಆಗಿದೆಯೇ? ತಿಳಿಯೋದು ಹೇಗೆ? ಇಲ್ಲಿದೆ ವಿವರ

    ಸರ್ಕಾರ ನಿಗದಿಪಡಿಸಿದ ಸಮಯದ ಒಳಗೆ ಪಾನ್ಅನ್ನು ಆಧಾರ್ ಜೊತೆ ಲಿಂಕ್ ಮಾಡದಿದ್ದರೆ ಅದು ನಿಷ್ಕ್ರೀಯವಾಗುತ್ತದೆ. 31 ಮಾರ್ಚ್ 2022ರ ವರೆಗೆ ಇದ್ದ ಅವಧಿಯನ್ನು ಸರ್ಕಾರ ಮಾರ್ಚ್ 2023ರವರೆಗೆ ವಿಸ್ತರಿಸಿದೆ. ಆದ್ದರಿಂದ  (ಏಪ್ರಿಲ್ 1ರಿಂದ) ಲಿಂಕ್ ಮಾಡುವವರಿಗೆ ಶುಲ್ಕ ಅಪ್ಲೈ ಆಗಲಿದೆ. ಅಂದರೆ ದಂಡ ಶುಲ್ಕ  1000 ರೂಪಾಯಿ ತನಕ ಬೀಳಲಿದೆ. ಹೀಗಾಗಿ ನೀವು ಈಗಾಗಲೇ ಪಾನ್ ಲಿಂಕ್ ಮಾಡಿದ್ದರೆ ಅದು ಯಶಸ್ವಿಯಾಗಿದೆಯೇ? ಇಲ್ಲವೇ ಅನ್ನೋದನ್ನು ತಿಳಿಯೋದು ಹೇಗೆ? ಇಲ್ಲಿದೆ ವಿವರ. ಆದಾಯ ತೆರಿಗೆ ಕಾಯ್ದೆ 139 ಎಎ…

  • ಸುದ್ದಿ

    ಬಾಹ್ಯಾಕಾಶ ಇತಿಹಾಸದಲ್ಲಿ ಮಹತ್ವದ ಸಾಧನೆ!ಲೈವ್ ಸ್ಯಾಟೆಲೈಟ್ ಹೊಡೆದುರುಳಿಸಿದ ವಿಜ್ಞಾನಿಗಳು.. ಮೋದಿಯಿಂದ ಅಧಿಕೃತ ಘೋಷಣೆ..

    ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಮತ್ತೊಂದು ಮಹತ್ವದ ಸಾಧನೆ ಮಾಡಿದ್ದು ಬಾಹ್ಯಾಕಾಶದಲ್ಲೇ ಲೈವ್ ಸ್ಯಾಟೆಲೈಟ್ ವೊಂದನ್ನು ಹೊಡೆದುರುಳಿಸುವ ಮೂಲಕ ಅತ್ಯಂತ ಅಪರೂಪದ ಸಾಧನೆಯೊಂದನ್ನು ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮಧ್ಯಾಹ್ನ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, 300 ಕಿ.ಮೀ ದೂರದಲ್ಲಿರುವ ಉಪಗ್ರಹವನ್ನು ಭಾರತ ಇಂದು ಹೊಡೆದು ಹಾಕಿದೆ. ಒಟ್ಟು ಮೂರು ನಿಮಿಷದಲ್ಲಿ ಉಪಗ್ರಹ ಪ್ರತಿರೋಧಿ ಕ್ಷಿಪಣಿ ಪ್ರಯೋಗದ ಮಿಶನ್ ಶಕ್ತಿ ಹೆಸರಿನಲ್ಲಿ ನಡೆದ ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಮೂಲಕ ಅಮೆರಿಕ, ರಷ್ಯಾ, ಚೀನಾದ ಬಳಿಕ ಈ…