ಸುದ್ದಿ

ಇನ್ನು15 ದಿನ ಮಳೆ ಬರದಿದ್ದರೆ ಮಂಜುನಾಥಸ್ವಾಮಿಯ ಅಭಿಷೇಕಕ್ಕೂ ನೀರಿಲ್ಲ: ಡಾ. ವೀರೇಂದ್ರ ಹೆಗ್ಗಡೆ

73

15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ ಕಳವಳವನ್ನು ಹೊರಹಾಕಿದ್ದಾರೆ.ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಘಟ್ಟದ ಭಾಗದಲ್ಲಿ ಮಳೆಯಾಗದ ಕಾರಣ ನೇತ್ರಾವತಿಯಲ್ಲಿ ನೀರಿಲ್ಲ. ಅಲ್ಲದೆ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಬರಲ್ಲ ಎಂದು ಸೂಚನೆ ಕೊಟ್ಟಿದೆ. ಹೀಗಾಗಿ ಕ್ಷೇತ್ರ ದರ್ಶನ ಮುಂದೂಡಿ ಎಂದು ವಿನಂತಿ ಮಾಡುತ್ತಿದ್ದೇವೆ.

ನಾವು ಈ ಬಗ್ಗೆ ಎಷ್ಟೇ ಎಚ್ಚರಿಕೆ ವಹಿಸಿದ್ದರು ಕೂಡ ಶೌಚಾಲಯಗಳಿಗೆ ನೀರು ಕೊಡಬೇಕಾಗುತ್ತದೆ. ನಮ್ಮ ವಸತಿಯಲ್ಲಿ ಇರುವವರಿಗೆ ಶೌಚಾಲಯದಲ್ಲಿ ನೀರು ಕೊಡಲೇಬೇಕು. ಶಾಲೆಗಳಿಗೆ ರಜೆ ಇರುವುದರಿಂದ ಎಲ್ಲರೂ ಇಲ್ಲಿಗೆ ಬರುತ್ತಾರೆ. ಆದರೆ ಇಲ್ಲಿ ನೀರಿನ ಸಮಸ್ಯೆ ಇದೆ. ಇಲ್ಲಿ ಬಂದರೂ ಸಾಕಷ್ಟು ನೀರು ಬೇಕಾಗುತ್ತದೆ. ಹಾಗಾಗಿ ಧರ್ಮಸ್ಥಳಕ್ಕೆ ಈಗಲೆ ಯಾರೂ ಬರಬೇಡಿ ಎಂದು ವಿನಂತಿ ಮಾಡುತ್ತಿದ್ದೇನೆ ಎಂದರು.

 ಅದು ನೇತ್ರಾವತಿ ಕಿಂಡಿ ಅಣೆಕಟ್ಟಿನಲ್ಲಿ ತಾತ್ಕಾಲಿಕ ನೀರು ಹಾಗೂ ತೀರ್ಥದ ಗುಂಡಿಯಲ್ಲಿ ಸ್ವಲ್ಪ ನೀರಿದೆ. ಮುಂದೆ ಮಳೆ ಬರದಿದ್ದರೆ ಮಂಜುನಾಥನಿಗೂ ಬರದ ಬಿಸಿ ತಟ್ಟಲಿದೆ. ಅಲ್ಲಿನ ತೀರ್ಥ ಗುಂಡಿಯಲ್ಲೂ ನಾಲ್ಕು ಅಡಿ ನೀರು ಕಡಿಮೆ ಆಗಿದೆ. ಹಿಂದೆಯೂ ಈ ರೀತಿ ಆಗಿದೆ. ಆದರೆ ಇಷ್ಟು ತೀವ್ರವಾಗಿ ಆಗಿರಲಿಲ್ಲ. ಉಪನದಿಗಳಲ್ಲಿ ನೀರು ಬತ್ತಿರುವ ಪರಿಣಾಮ ನೀರಿಗೆ ಸಮಸ್ಯೆ ಆಗಿದೆ. ಕಾಡು ಉಳಿಸದೇ ಇರುವ ಕಾರಣ ಈ ಸಮಸ್ಯೆ ಎದುರಾಗಿದೆ ಎಂದು ಅವರು ತಿಳಿಸಿದರು.

ಇದೇ ವೇಳೆ ಸರ್ಕಾರ ಮತ್ತು ಜಲತಜ್ಞರು ಈ ಬಗ್ಗೆ ಯೋಚನೆ ಮಾಡಬೇಕು. ಮುಂದಿನ 15-20 ವರ್ಷಗಳ ಭವಿಷ್ಯದ ಬಗ್ಗೆ ಯೋಚನೆ ಮಾಡಬೇಕು. ಪಶ್ಚಿಮ ಘಟ್ಟದಲ್ಲಿ ಅರಣ್ಯನಾಶದಿಂದ ನೀರಿನ ಸಮಸ್ಯೆ ಆಗಿದೆ ಎಂದು ವೀರೇಂದ್ರ ಹೆಗ್ಗಡೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಸಿನಿಮಾ ರಸಿಕರೇ ಅಪ್ಪಿ ತಪ್ಪಿ ಇವತ್ತು ಚಿತ್ರಮಂದಿರಗಳ ಕಡೆ ಹೋಗಬೇಡಿ.!ಏಕೆ ಗೊತ್ತಾ.?ಮುಂದೆ ನೋಡಿ…

    ಶುಕ್ರವಾರದ ಹೊಸ ಸಿನಿಮಾಗಳ ನೀರಿಕ್ಷೆಯಲ್ಲಿರುವ ಸಿನಿ ಪ್ರೇಕ್ಷಕರಿಗೆ ಶಾಕಿಂಗ್ ನ್ಯೂಸ್. ಈ ದಿನ ಯಾರೂ ಚಿತ್ರಮಂದಿರಗಳ ಹತ್ತಿರ ಸುಳಿಯಬೇಡಿ.

  • ಕರ್ನಾಟಕ

    ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ಮುಖಂಡ ಎನ್.ಧರಂಸಿಂಗ್ ಇನ್ನಿಲ್ಲ…

    ಕರ್ನಾಟಕದ ಮಾಜಿ ಮುಖ್ಯಮಂತ್ರಿ, 80 ವರ್ಷದ ಧರಂಸಿಂಗ್’ರವರು ಉಸಿರಾಟದ ತೊಂದರೆ, ಅಸ್ತಮಾ, ಮಧುಮೇಹ, ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು, ಇಂದು ಬೆಳಗ್ಗೆ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ

  • ಜ್ಯೋತಿಷ್ಯ

    ಶ್ರೀ ಗುರು ರಾಘವೇಂದ್ರ ಸ್ವಾಮಿಯನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಫೆಬ್ರವರಿ, 2019) ನಿಮ್ಮ ಕುಟುಂಬದ ಜೊತೆ ಕಟ್ಟುನಿಟ್ಟಾಗಿ ವರ್ತಿಸಬೇಡಿ ಇದು ಶಾಂತಿ ಭಂಗವುಂಟುಮಾಡಬಹುದು. ಇಂದು ನೀವು…

  • Sports, ಕ್ರೀಡೆ

    ಹಿರಿಯರ ಆಟ ನೋಡಲು ತುಂಬಾ ಕಾತುರರಾಗೀದ್ದೀರಾ ನೋಡಿ ಲೆಜೆಂಡ್ಸ್ ಲೀಗ್

    ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC) ನ ಉದ್ಘಾಟನಾ ಆವೃತ್ತಿಯು ಜನವರಿ 20 ರಂದು ಪ್ರಾರಂಭವಾಗಲಿದೆ ಮತ್ತು ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಂದ್ಯಗಳು ಓಮನ್‌ನ ಮಸ್ಕತ್‌ನಲ್ಲಿರುವ ಅಲ್ ಅಮರತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ.       LLC ಎರಡು ಸುತ್ತುಗಳು ಮತ್ತು ಫೈನಲ್‌ಗಳನ್ನು ಹೊಂದಲಿದ್ದರೆ, ಆಟಗಳ ಸಮಯದಲ್ಲಿ ಮೂರು ವಿಶ್ರಾಂತಿ ದಿನಗಳು ಸಹ ಇರುತ್ತವೆ. ಮೂರನೇ ಮತ್ತು ಅಂತಿಮ ವಿಶ್ರಾಂತಿ ದಿನವು ಗ್ರ್ಯಾಂಡ್ ಫಿನಾಲೆಗೆ ಒಂದು ದಿನ ಮೊದಲು ಇರುತ್ತದೆ. ಪ್ರತಿ ಎರಡು…

    Loading

  • ಸುದ್ದಿ

    ಬರದಿಂದ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ಮೊರೆ ಹೋದ ರೈತರು…..!

    ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್‌ಗಳು ಮೊರೆ ಹೋಗಿದ್ದಾರೆ. ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು. ಬೆಳೆ ಮೊಳಕೆಯೊಡೆದು ಈಗ ನೆಲ…