Health

ಹಲವು ರೋಗಗಳಿಗೆ ರಾಮಬಾಣ ಗೋಲ್ಡನ್ ಮಿಲ್ಕ್​. ಇದರ ಬಗ್ಗೆ ನಿಮಗೆ ಗೊತ್ತಾ?

86

ಅರಿಶಿನ ಬೆರೆತ ಹಾಲು ಭಾರತೀಯರಿಗೆ ಅಪರಿಚಿತವೇನಲ್ಲ. ಯಾವಾಗ ಶೀತ ಕೆಮ್ಮು ನೆಗಡಿ ಜ್ವರ ಬಂತೋ ನಮ್ಮ ಹಿರಿಯರು ಮೊದಲಾಗಿ ಅರಿಶಿನ ಪುಡಿ ಹಾಕಿ ಕುದಿಸಿದ ಹಾಲನ್ನು ಬಿಸಿಬಿಸಿಯಾಗಿ ಕುಡಿಸುತ್ತಿದ್ದರು. ಈ ಹಾಲು ನಮಗೆ ಔಷಧಿಯ ರೂಪದಲ್ಲಿ ಪರಿಚಿತವೇ ಹೊರತು ತೂಕ ಇಳಿಸುವ ಉಪಾಯದ ರೂಪದಲ್ಲಲ್ಲ! ನಮಗೆ ಕಾಣದ ಈ ಗುಣವನ್ನು ವಿದೇಶೀಯರು ಈಗಾಗಲೇ ಕಂಡುಕೊಂಡು ವ್ಯಾಪಾರ ಪ್ರಾರಂಭಿಸಿಬಿಟ್ಟಿದ್ದಾರೆ.

‘ಟರ್ಮರಿಕ್ ಲ್ಯಾಟೇ’ ಅಥವಾ “ಗೋಲ್ಡನ್ ಮಿಲ್ಕ್” ಎಂಬ ಅಂದ ಚೆಂದದ ಆಕರ್ಷಕ ಹೆಸರುಗಳನ್ನಿಟ್ಟು ಗ್ರಾಹಕರನ್ನು ಸೆಳೆಯುತ್ತಿದ್ದಾರೆ. ಚೆಂದದ ಹೆಸರಿಗೆ ಮರುಳಾಗಿ ದುಬಾರಿ ಬೆಲೆ ತೆತ್ತು ಕೊಳ್ಳುವ ಬದಲು ಇದನ್ನು ಮನೆಯಲ್ಲಿಯೇ ತಯಾರಿಸಿ ಕೊಳ್ಳುವುದು ಅತಿ ಸುಲಭ. ಒಂದು ಲೋಟ ಹಾಲನ್ನು ಚೆನ್ನಾಗಿ ಬಿಸಿ ಮಾಡಿ ಕುದಿ ಬರುವ ಮುನ್ನ ಒಂದು ಲೋಟಕ್ಕೆ ಕಾಲು ಚಿಕ್ಕಚಮಚದಷ್ಟು ಅರಿಶಿನ ಪುಡಿ ಬೆರೆಸಿ ಕದಡಿ ಉರಿ ಆರಿಸಿದರೆ ಆಯ್ತು. ಅರಿಶಿನ ಬೆರೆತ ಹಾಲು ಸಿದ್ಧ.

ಮೆದುಳಿಗೆ ಪ್ರಯೋಜನಕಾರಿ ಗೋಲ್ಡನ್ ಮಿಲ್ಕ್​ ಮೆದುಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರಲ್ಲಿ ಅನೇಕ ಪೋಷಕಾಂಶಗಳು ಕಂಡುಬರುತ್ತವೆ. ಇದರೊಂದಿಗೆ ದಾಲ್ಚಿನ್ನಿ ಮತ್ತು ಶುಂಠಿಯನ್ನು ಸೇರಿಸಿದರೆ, ಅದರ ಪ್ರಯೋಜನವು ಅನೇಕ ಪಟ್ಟು ಹೆಚ್ಚಾಗುತ್ತದೆ. ದಾಲ್ಚಿನ್ನಿ ಬಳಸುವುದರಿಂದ ಪಾರ್ಕಿನ್ಸನ್ ಕಾಯಿಲೆಯ ಲಕ್ಷಣಗಳನ್ನು ಕಡಿಮೆ ಮಾಡಬಹುದು. ಹಾಗೆಯೇ ಶುಂಠಿ ಮೆದುಳಿನ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಇದರಿಂದ ಜ್ಞಾಪಕ ಶಕ್ತಿ ಸುಧಾರಿಸುತ್ತದೆ.

ಗೋಲ್ಡನ್ ಹಾಲಿನಲ್ಲಿ ಅಥವಾ ಅರಿಶಿನದಲ್ಲಿ ಉರಿಯೂತವನ್ನು ಕಡಿಮೆ ಮಾಡುವ ಗುಣಗಳಿವೆ. ಉರಿಯೂತ ಅಥವಾ ಗಾಯ ಸಮಸ್ಯೆಗೆ ಇದನ್ನು ಬಳಸಲಾಗುತ್ತದೆ. ಕ್ಯಾನ್ಸರ್, ಆಲ್ಜೈಮರ್, ಹೃದ್ರೋಗ ಮತ್ತು ಮೆಟಾಬಾಲಿಕ್ ಸಿಂಡ್ರೋಮ್‌ ತೊಂದರೆ ಇರುವವರು ಅರಿಶಿನ ಹಾಲನ್ನು ಕುಡಿಯುವುದು ಉತ್ತಮ ಎಂದು ವೈದ್ಯಲೋಕ ಅಭಿಪ್ರಾಯಪಟ್ಟಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದಂಡ ಪಾವತಿಸಿದವರಿಗೆ ಉಚಿತವಾಗಿ ಹೆಲ್ಮೆಟ್ ವಿತರಿಸಿ ಪ್ರೋತ್ಸಾಹಿಸಿದ ಪೊಲೀಸ್…!

    ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಜಾರಿಗೆ ತಂದಾಗಿನಿಂದಲೂ ಸಂಚಾರ ನಿಯಮ ಉಲ್ಲಂಘನೆಗೆ ಮಾಡಿದವರಿಗೆ ದಂಡ ವಿಧಿಸುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಕೆಲ ದಂಡದ ಮೊತ್ತ 80 ಸಾವಿರ ರೂ. ತಲುಪಿದ್ದು ಇದೆ. ಮೋಟಾರು ವಾಹನ ಕಾಯಿದೆ (ತಿದ್ದುಪಡಿ) 2019, ಜಾರಿಗೆ ಬಂದ ದಿನದಿಂದಲೂ ದೇಶಾದ್ಯಂತ ಸಂಚಾರ ಶಿಸ್ತು ಪಾಲನೆ ಮಾಡದ ಸವಾರರಿಗೆ ಭಾರೀ ಮೊತ್ತದ ದಂಡ ಪೀಕಿಸುತ್ತಿರುವ ಸುದ್ದಿಗಳೇ ಎಲ್ಲೆಲ್ಲೂ. ಇವುಗಳ ನಡುವೆ ಒಡಿಶಾ ರಾಜಧಾನಿ ಭುವನೇಶ್ವರದ…

  • India

    ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!

    ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ. ವಿಶೇಷ ನಾಣ್ಯದ ವಿಶೇಷತೆ ಹೀಗಿದೆ: ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ…

  • ಸುದ್ದಿ

    62 ಅಡಿ ಆಂಜನೇಯನ ವಿಗ್ರಹವನ್ನು, ದೇವಸ್ಥಾನದ ಆವರಣದೊಳಗೆ ಪ್ರವೇಶಿಸದಂತೆ ತಡೆ.!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸ್ಥಳಕ್ಕೆ ಈಗಾಗಲೇ ಸಾಗಿಸಲಾಗಿದೆ. ಆದರೆ ವಿಪರ್ಯಾಸ ಎಂದರೆ, ಅಂದು ಪರ್ವತವನ್ನೇ ಹೊತ್ತು ತಂದು  ಲಕ್ಷ್ಮಣನನ ಜೀವ ಉಳಿಸಿದ, ರಾಮ ಭಕ್ತ ಹನುಮಂತನ ಪ್ರತಿಷ್ಟಾಪನೆಗೆ ವಿಘ್ನದ ಮೇಲೆ ವಿಘ್ನ ಶುರುವಾಗಿದೆ. ಕೋಲಾರದಿಂದ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಗೆ ಹೊರಟಿದ್ದ ಬೃಹತ್ ಆಂಜನೇಯನ ವಿಗ್ರಹಕ್ಕೆ ಮಾರ್ಗ ಮಧ್ಯದಲ್ಲೇ ತೊಂದರೆ ಎದುರಾಗಿತ್ತು….

  • ಆರೋಗ್ಯ

    ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿಯುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ. ಈ ಅರೋಗ್ಯ ಮಾಹಿತಿ ನೋಡಿ.

    ಜಗತ್ತಿನಲ್ಲಿ ಬಿಸಿ ನೀರು ಕುಡಿಯುವರ ಸಂಖ್ಯೆ ಬಹಳ ಕಮ್ಮಿ ಹೇಳಿದರೆ ತಪ್ಪಾಗಲ್ಲ, ವೈದ್ಯರು ಸಲಹೆಯನ್ನ ನೀಡಿದರು ಕೂಡ ಜನರು ಬಿಸಿ ನೀರನ್ನ ಕುಡಿಯಲು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇನ್ನು ಒಬ್ಬ ಮನುಷ್ಯ ಆಹಾರವಿಲ್ಲದೆ ಬಹಳ ಕಾಲ ಬದುಕಬಹುದು ಆದರೆ ನೀರಿಲ್ಲದೆ ಬಹಳ ಕಾಲ ಬದುಕಲು ಸಾಧ್ಯವಿಲ್ಲ, ನಮ್ಮ ದೇಹದಲ್ಲಿ ಎಷ್ಟು ನೀರು ಇರುತ್ತದೆಯೋ ನಮ್ಮ ಆರೋಗ್ಯ ಕೂಡ ಅಷ್ಟೇ ಬಲವಾಗಿರುತ್ತದೆ. ಇನ್ನು ಬಿಸಿ ನೀರನ್ನ ದಿನಾಲೂ ಸೇವನೆ ಮಾಡಿದರೆ ನಿಮ್ಮ ದೇಹಕ್ಕೆ ಎಷ್ಟೆಲ್ಲಾ ಲಾಭಗಳಿವೆ ಎಂದು ತಿಳಿದರೆ ಒಮ್ಮೆ…

  • ಜ್ಯೋತಿಷ್ಯ

    ರಾಘವೇಂದ್ರ ಸ್ವಾಮಿಯ ಆಶೀರ್ವಾದದಿಂದ ಈ ರಾಶಿಗಳಿಗೆ ಶುಭಯೋಗ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ನಿಯಂತ್ರಣವನ್ನು ಮೀರಿ ಖರ್ಚು ವೆಚ್ಚಗಳು ಏರವ ಸಾಧ್ಯತೆಗಳಿವೆ. ಈ ಬಗ್ಗೆ ಎಚ್ಚರ ಇರಲಿ. ಅಂತೆಯೇ ನಿಮ್ಮ ಸುತ್ತಮುತ್ತ ಹೊಗಳು ಭಟ್ಟಂಗಿಗಳು ಇರುವರು. ಇವರ ಬಗ್ಗೆ ಹೆಚ್ಚಿನ ಜಾಗರೂಕತೆಯಿಂದ…

  • ತಂತ್ರಜ್ಞಾನ

    ಶೌಚಾಲಯಗಳ ಸ್ವಚ್ಛತೆಗೆ ರೈಲ್ವೆ ಇಲಾಖೆ 42 ಕೋಟಿ ಮೌಲ್ಯದ ಹಸುವಿನ ಬೆರಣಿ ಖರೀದಿಸ್ತಿ ಏಕೆ..?ತಿಳಿಯಲು ಇದನ್ನು ಓದಿ..

    ಭಾರತೀಯ ರೈಲ್ವೆ ಇಲಾಖೆ ಶೌಚಾಲಯಗಳ ಸ್ವಚ್ಛತೆ ಬಗ್ಗೆ ಗಮನ ಹರಿಸಿದೆ. ಸಿಎಜಿ ನೀಡಿರುವ ವರದಿ ಪ್ರಕಾರ 25,000 ಬಯೋ ಟಾಯ್ಲೆಟ್ ಗಳು ಅಧೋಗತಿಗೆ ತಲುಪಿವೆ. ಅದನ್ನು ದುರಸ್ತಿ ಮಾಡುವುದು ರೈಲ್ವೆ ಇಲಾಖೆ ಮುಂದಿರೋ ಬಹು ದೊಡ್ಡ ಸವಾಲು.