ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ.
ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.ಪ್ರ
ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ ನಾಯಕರ ಜೊತೆಯಲ್ಲಿ ಮಿತ್ರಕೂಟದ ಪಕ್ಷಗಳ ನಾಯಕರು ಸಭೆ ನಡೆಸಲಿದ್ದಾರೆ,
ಮೇ 23 ರಂದು ಫಲಿತಾಂಶ ಪ್ರಕಟವಾದ ಮರು ದಿನವೇ ಮೇ 24 ರಂದೇ ಹೊಸ ಸರ್ಕಾರ ಅಧಿಕಾರಕ್ಕೆ ತರಲು ತಯಾರಿ ನಡೆಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಮೇ 24 ರಂದು ಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದು ಹೇಳಲಾಗಿದೆ.