ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು:ಗೃಹಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದ್ದು, ಒಟ್ಟು ಅಂದಾಜು ಸರಾಸರಿ 13ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.

ಬೆಸ್ಕಾಂ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಗೃಹಬಳಕೆದಾರರ ಸರಾಸರಿ ಒಂದು ವರ್ಷದ ವಿದ್ಯುತ್ ಬಳಕೆಯ ಪ್ರಮಾಣವನ್ನು ಪಡೆದುಕೊಂಡ ಬಳಿಕ ಉಚಿತವಾಗಿ ವಿದ್ಯುತ್ ಪ್ರಮಾಣವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿಒಟ್ಟು 2.16 ಕೋಟಿ ಗ್ರಾಹಕರಿದ್ದು, ಈ ಪೈಕಿ 200 ಯೂನಿಟ್ ಗಿಂತ ಕಡಿಮೆ ಬಳಕೆ ಮಾಡುವ ಗ್ರಾಹಕರು 2.14 ಕೋಟಿ ಇದ್ದಾರೆ. ಇವರ ವಾರ್ಷಿಕ ಬಳಕೆ 13,575 ಮಿಲಿಯನ್ ಯೂನಿಟ್ಗಳು. ಈ ಗ್ರಾಹಕರು ಪ್ರತಿ ತಿಂಗಳು ಸರಾಸರಿ 53 ಯೂನಿಟ್ ವಿದ್ಯುತ್ ಬಳಕೆ ಮಾಡುತ್ತಾರೆ. 2 ಲಕ್ಷಜ ನರು 200 ಯೂನಿಟ್ ಹೆಚ್ಚು ಬಳಕೆ ಮಾಡುತ್ತಾರೆ ಎಂದರು.
ಸೇವಾ ಸಿಂಧು ಪೋರ್ಟ್‌ಲ್ ನಲ್ಲಿ ಜೂನ್ 15 ರಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡುವ ಮೂಲಕ ಯೋಜನೆಯನ್ನು ಜಾರಿಗೊಳಿಸುತ್ತೇವೆ. ಗ್ರಾಹಕರು ಸರಾಸರಿ ಬಿಲ್ ಗಿಂತ ಹೆಚ್ಚು ಉಪಯೋಗ ಮಾಡಿದರೆ ಹೆಚ್ಚುವರಿ ಬಳಕೆಗೆ ಬಿಲ್ ಕಟ್ಟಬೇಕಿದೆ. ಆದರೆ ಉಚಿತ ಯೋಜನೆಅಡಿಯಲ್ಲಿ ಗ್ರಾಹಕರು ನಿಗದಿತ ಶುಲ್ಕವನ್ನು ಕಟ್ಟುವಹಾಗಿಲ್ಲ. ಸರಾಸರಿ ಬಳಕೆಗಿಂತ ಹೆಚ್ಚುವರಿ ಬಳಕೆ ಮಾಡಿದರೆ ಅಂತಹ ಗ್ರಾಹಕರು ನಿಗದಿತ ಶುಲ್ಕ ಕಟ್ಟಬೇಕಾಗಿಲ್ಲ. ಹೆಚ್ಚುವರಿ ಬಳಕೆಗೆ ಮಾತ್ರ ಇಂಧನ ಶುಲ್ಕವನ್ನು ಕಟ್ಟಬೇಕಾಗುತ್ತದೆ.

ಅರ್ಜಿಸಲ್ಲಿಕೆಹೇಗೆ?
ಸೇವಾ ಸಿಂಧು ಪೋರ್ಟಲ್ ನಲ್ಲಿ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಗ್ರಾಹಕರ ಅನುಕೂಲಕ್ಕಾಗಿ ಕಂಪ್ಯೂಟರ್, ಮೊಬೈಲ್ ನಿಂದ ಅರ್ಜಿ ಸಲ್ಲಿಸುವ ಅವಕಾಶವನ್ನು ಕಲ್ಪಿಸಲಾಗುವುದು ಹಾಗೂ ಬೆಂಗಳೂರುಒನ್, ಕರ್ನಾಟಕಒನ್, ಗ್ರಾಮಒನ್ ಸೆಂಟರ್ ಗಳಲ್ಲೂ ಅವಕಾಶ ಕಲ್ಪಿಸಲಾಗುತ್ತಿದ್ದು ಜೂನ್ 15 ರಿಂದ ಅರ್ಜಿ ಪ್ರಾರಂಭ ಮಾಡುತ್ತೇವೆ. ಗ್ರಾಹಕರ ದೃಷ್ಟಿಯಿಂದ ಸರ್ವರ್ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಎಲ್ಲಾ ಸಿದ್ಧತೆಗಳನ್ನುE-Governance ಇಲಾಖೆ ಮಾಡಿಕೊಂಡಿರುತ್ತದೆ.
ಯೋಜನೆಯಡಿ ಬಾಡಿಗೆದಾರರು ಸೌಲಭ್ಯ ಪಡೆಯುವುದುಹೇಗೆ?
ವಿದ್ಯುತ್ ಬಿಲ್’ನಲ್ಲಿ ನಮೂದಿಸಲಾಗಿರುವ ಗ್ರಾಹಕರ ಸಂಖ್ಯೆ/ಖಾತೆ ಸಂಖ್ಯೆ, ಬಾಡಿಗೆ/ಭೋಗ್ಯದ ಕರಾರು ಪತ್ರಸಲ್ಲಿಸುವುದು ಅಥವಾ ಸಂಬಂಧಿತ ವಿಳಾಸವನ್ನು ಸೂಚಿಸುವ ವೋಟರ್ ಐಡಿ ಜೊತೆಗೆ ಆಧಾರ್ ಅನ್ನು ಸಲ್ಲಿಸುವುದು.

ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಯಾವುದು?
ಜೂನ್ 15 ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಇದೆ.
ಎಂಬ ಎರಡೂ ಅಂಶಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳು ಹಾಗು ಸಚಿವ ಸಂಪುಟದ ಗಮನಕ್ಕೆ ತಂದು ತುರ್ತಾಗಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮಾನ್ಯ ಇಂಧನ ಸಚಿವರು ಹೇಳಿದರು.

ಈ ಯೋಜನೆಗೆ ಸಂಬಂಧಿಸಿದಂತಹ ಮೇಲಿಂದ ಮೇಲೆ ಕೇಳಲಾಗುವ ಪ್ರಶ್ನೆಗಳು ಮತ್ತು ಸಂಶಯಗಳನ್ನು ನಿವಾರಿಸುವ ದೃಷ್ಠಿಯಿಂದ FAQ’s ತಯಾರಿಸಲಾಗಿದ್ದು,ಅದನ್ನು ಈ ಟಿಪ್ಪಣಿಯೊಂದಿಗೆ ಲಗತ್ತಿಸಿದೆ. ಈ ಮೂಲಕ ಗೃಹಬಳಕೆಯ ಗ್ರಾಹಕರಲ್ಲಿ ಮೂಡಿರುವ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯಲು ಪ್ರಯತ್ನಿಸಲಾಗಿದೆ.
ಆದಾಗ್ಯೂ ಈ ಯೋಜನೆಯ ಜಾರಿಯ ಸಂದರ್ಭದಲ್ಲಿ ಆಗ್ಗಾಗ್ಗೆ ಉದ್ಬವಿಸಬಹುದಾದ ಸಮಸ್ಯೆಗಳನ್ನು ಸಂದರ್ಭಕ್ಕೆ ಅನುಗುಣವಾಗಿ ಸ್ಪಂದಿಸಿ, ಅದಕ್ಕೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು. ಒಟ್ಟಾರೆ ಕರ್ನಾಟಕ ಸರ್ಕಾರದ ಈ ಮಹತ್ವದ ಯೋಜನೆಯನ್ನು ಅತ್ಯಂತ ಸಮರ್ಥವಾಗಿ ಜಾರಿಗೊಳಿಸಲು ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ್ ಗುಪ್ತ, ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರಾದ ಮಹಾಂತೇಶ ಬೀಳಗಿ, ಹಣಕಾಸು ನಿರ್ದೇಶಕರಾದ ದರ್ಶನ್. ಜೆರವರು ಉಪಸ್ಥಿತರಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಜಮಮೆಚ್ಚಿನ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮ ದಿನದಿಂದ ದಿನಕ್ಕೆ ರೋಚಕಗೊಳ್ಳುತ್ತಿದ್ದು ಕೆಲವೇ ದಿನಗಳಲ್ಲಿ ಫೈನಲ್ ತಲುಪಲಿದೆ.18ಜನರ ಪೈಕಿ ಈಗ ಕೇವಲ 7 ಜನ ಉಳಿದಿದ್ದು ಈ ವಾರದ ಎಲಿಮಿನೇಷನ್ ಪ್ರಕ್ರಿಯಗೆ ಎಲ್ಲಾ ಸ್ಪರ್ದಿಗಳು ನಾಮಿನೇಟ ಆಗಿದ್ದರು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನೀವು ಸ್ವಲ್ಪ…
ಪೈಲಟ್ ಇಲ್ಲದ ವಿಮಾನ ತಯಾರಿಸಲು ಬೋಯಿಂಗ್ ಕಂಪನಿ ಮುಂದೆ ಬಂದಿದೆ. ವಿಮಾನ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿರುವ ಬೋಯಿಂಗ್ ಕಂಪನಿ ಮುಂದಿನ ವರ್ಷದ ವೇಳೆಗೆ ಪೈಲಟ್ ಇಲ್ಲದ ವಿಮಾನ ನಿರ್ಮಾಣದ ಕನಸು ನನಸಾಗಿರುವ ಗುರಿ ಹೊಂದಿದೆ.
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ. ಅವರು ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಎಐಸಿಸಿ ಕಚೇರಿಯಲ್ಲಿ ಸಿಡಬ್ಲೂಸಿ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸ್ಥಿರವಾಗಿರಲಿದೆ ಯಾವುದೇ ತೊಂದರೆ ಇಲ್ಲ. ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಸಿಎಂ ರಾಜೀನಾಮೆ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ಫುಲ್ ಸ್ಟಾಪ್ ಹಾಕಿದ್ದಾರೆ. ಸಭೆಯಲ್ಲಿ ರಾಜ್ಯದ ಸೋಲಿನ ಬಗ್ಗೆ ಚರ್ಚೆ ಮಾಡಲಾಗುವುದು. ಪಾರ್ಟಿ ಫೋರಂನಲ್ಲಿ…
ಬಿಜೆಪಿ ಆಡಳಿತ ಸರ್ಕಾರವಿರುವ ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ರೈತರ ಸಾಲಮನ್ನಾ, ಹಾಗೂ ಕಾಂಗ್ರೆಸ್ ಆಡಳಿತದ ಪಂಜಾಬ್ ನಲ್ಲಿಯೂ ರೈತರ ಸಾಲ ಮನ್ನಾ ಘೋಷಣೆಯಾದ ನಂತರ ಕರ್ನಾಟಕದಲ್ಲಿಯೂ ರೈತರ ಸಾಲ ಮನ್ನಾ ಮಾಡಬೇಕೆಂದು ಪ್ರತಿಪಕ್ಷಗಳು ತೀವ್ರವಾಗಿ ಆಗ್ರಹಿಸಿದ್ದವು.
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ.