govt

ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

145

ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ

 

ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ.

ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ ಮಹಿಳೆಯರು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಆದರೆ ಯೋಜನೆ ಜಾರಿಯಾಗಿ ಒಂದು ವಾರ ಕಳೆದರೂ
ಹಣ ಬಾರದ ಕಾರಣ ಮಹಿಳೆಯರು ಗೃಹಲಕ್ಷ್ಮಿಗಾಗಿ ಜಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. ಇಷ್ಟಕ್ಕೂ ಗೃಹಲಕ್ಷ್ಮೀಯ ಹಣ ಖಾತೆಗೆ ಬಾರದೇ ಇದ್ದ ಮಹಿಳೆಯರು ಏನು ಮಾಡ್ಬೇಕು? ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿಯೂ ನಿಮಗೆ ಹಣ ಬರುತ್ತಿಲ್ಲವಾದರೆ ಸರ್ಕಾರವೇ ನಿಮಗೊಂದು ಸಹಾಯವಾಣಿ ಸಂಖ್ಯೆಯನ್ನು ತಿಳಿಸಿದೆ.

ನಿಮ್ಮ ಪಡಿತರ ಚೀಟಿ, ಬ್ಯಾಂಕ್ ಅಕೌಂಟ್, ಆಧಾರ್ ನಂಬರ್ ಮಿಸ್ ಮ್ಯಾಚ್ ಆಗಿದ್ದಲಿ ಇದರ ಮಾಹಿತಿಯನ್ನು ನೀಡಲು ಇಲಾಖೆ ಸಹಾಯವಾಣಿಯ ನಂಬರ್ ವೊಂದನ್ನು ನೀಡಿದೆ. ಅರ್ಜಿಯ ಸ್ಟೇಟಸ್ ಪರಿಶೀಲಿಸಲು ಈ ಸಹಾಯವಾಣಿ ನೆರವಾಗಲಿದೆ. 8147500500 ಈ ನಂಬರ್ ಗೆ ನಿಮ್ಮ ಆಧಾರ್ ರಿಜಿಸ್ಟರ್ಡ್ ಮೊಬೈಲ್ ನಂಬರ್ ನಿಂದ ನಿಮ್ಮ ರೇಷನ್ ಕಾರ್ಡ್ ನಂಬರ್ ನ್ನು ಮೆಸೆಜ್ ಮಾಡಿ. ಹೀಗೆ ಮೆಸೆಜ್ ಮಾಡಿದ ತಕ್ಷಣ ನಿಮ್ಮ ಪಡಿತರ ಚೀಟಿ ಸಂಖ್ಯೆ ಆಧರಿಸಿ ನಿಮ್ಮ ಗೃಹಲಕ್ಷ್ಮೀ ಯೋಜನೆಯ ಬಗ್ಗೆ ಸಂದೇಶ ಬರಲಿದೆ. ಆ ಮೂಲಕ ನೀವು ನಿಮಗೆ ಯಾವ ಕಾರಣಕ್ಕಾಗಿ ಹಣ ಬರುತ್ತಿಲ್ಲ ಎಂಬುದನ್ನು ತಿಳಿದುಕೊಳ್ಳಬಹುದಾಗಿದೆ.

ಅಲ್ಲದೆ ಅದನ್ನು ಸರಿಪಡಿಸಿಕೊಳ್ಳಬಹುದಾಗಿದೆ. ನಿಮ್ಮ ಎಲ್ಲಾ ಪ್ರಶ್ನೆಗೂ ಈ ನಂಬರ್ ಮೆಸೆಜ್ ನಲ್ಲಿ ಮಾಹಿತಿ ಸಿಗಲಿದೆ. ನಿಮ್ಮ ಅರ್ಜಿ ಅಸ್ವೀಕೃತವಾಗಿದ್ದರೇ, ಮತ್ತೊಮ್ಮೆ ಅರ್ಜಿ ಸಲ್ಲಿಸುವಂತೆಯೂ ಮಾಹಿತಿ ಬರಲಿದೆ. ಪಡಿತರ ಚೀಟಿಯಲ್ಲಿ ಮನೆ ಯಜಮಾನಿ ಹೆಸರನ್ನು ತಿದ್ದುಪಡಿ ಮಾಡಿಸಲು ಸಪ್ಟೆಂಬರ್ 1 ರಿಂದ 10 ರವರೆಗೆ ಅವಕಾಶ ನೀಡಲಾಗಿತ್ತು. ಈಗ ಅವಧಿಯನ್ನು ಸಪ್ಟೆಂಬರ್ 14 ರವರೆಗೆ ವಿಸ್ತರಿಸಲಾಗಿದೆ.ರಾಜ್ಯದಲ್ಲಿ ಒಟ್ಟು 1.28 ಫಲಾನುವಿಗಳಿದ್ದಾರೆ ಎಂದು ಅಂದಾಜಿಸಲಾಗಿದ್ದು, ಈ ಪೈಕಿ 1.11 ಕೋಟಿ ಮಹಿಳೆಯರು ಮಾತ್ರ ನೋಂದಣಿಯನ್ನು ಮಾಡಿಸಿ ಕೊಂಡಿದ್ದಾರೆ. ಹೀಗಾಗಿ ಸರ್ಕಾರ ಗೃಹಲಕ್ಷ್ಮೀ ನೋಂದಣಿಗೆ ಯಾವುದೇ ಕೊನೆಯ ದಿನಾಂಕ ನಿಗದಿಪಡಿಸಿಲ್ಲ.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ