ಸುದ್ದಿ

ಜನರ ಆರೋಗ್ಯ ರಕ್ಷಣೆ, ಪ್ರವಾಸೋದ್ಯಮಕ್ಕೆ ಒತ್ತು ಮತ್ತು ಕೆಫೀನ್​ ಪೇಯಗಳ ತೆರಿಗೆ ಹೆಚ್ಚಿಸಿದಂತಹ ಜಿಎಸ್​ಟಿ ಮಂಡಳಿ,.!

26

ಪಣಜಿ,  ದೇಶದ ಜನರ ಆರೋಗ್ಯ ರಕ್ಷಣೆಗೆ ಒತ್ತು ನೀಡಿರುವ ಜಿಎಸ್​ಟಿ ಮಂಡಳಿ ಕೆಫೀನ್​ ಆಧಾರಿತ ಪೇಯಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಿದೆ. ಇದೇ ವೇಳೆ ಪ್ರವಾಸೋದ್ಯಮಕ್ಕೆ ಒತ್ತು ಕೊಡಲು ಹೋಟೆಲ್​ ಕೋಣೆಗಳ ಬಾಡಿಗೆ ಮೇಲಿನ ತೆರಿಗೆಯನ್ನು ಇಳಿಸಿದೆ.

ಜಿಎಸ್​ಟಿ ಮಂಡಳಿ ಸಭೆಯ ಬಳಿಕ ಶುಕ್ರವಾರ ರಾತ್ರಿ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​, ಒಂದು ರಾತ್ರಿ ತಂಗಲು 1 ಸಾವಿರ ರೂ.ವರೆಗಿನ ಹೋಟೆಲ್​ ಕೋಣೆಗಳ ಬಾಡಿಗೆ ಮೇಲೆ ವಿಧಿಸಲಾಗುತ್ತಿದ್ದ ತೆರಿಗೆಯನ್ನು ಸಂಪೂರ್ಣ ರದ್ದುಗೊಳಿಸಲಾಗಿದೆ. ಒಂದು ರಾತ್ರಿಗೆ 1,001 ರೂ.ನಿಂದ 7,500 ರೂ.ವರೆಗೆ ವಿಧಿಸಲಾಗುವ ಬಾಡಿಗೆ ಮೇಲಿನ ತೆರಿಗೆಯನ್ನು ಶೇ.18ರಿಂದ ಶೇ.12ಕ್ಕೆ, 7,500 ರೂ.ಗೂ ಹೆಚ್ಚು ಬಾಡಿಗೆ ಮೇಲಿನ ತೆರಿಗೆಯನ್ನು ಶೇ.28ರಿಂದ ಶೇ.18ಕ್ಕೆ ಇಳಿಕೆ ಮಾಡಲಾಗಿದೆ ಎಂದರು.

ಹೊರಾವರಣದ ಕ್ಯಾಟರಿಂಗ್​ ಮೇಲೆ ವಿಧಿಸಲಾಗುತ್ತಿದ್ದ ಇನ್​ಪುಟ್​ ಟ್ಯಾಕ್ಸ್ ಕ್ರೆಡಿಟ್​ ಅನ್ನು ಶೇ.18ರಿಂದ ಶೇ.5ಕ್ಕೆ, ನೌಕಾ ಇಂಧನದ ಮೇಲಿನ ಜಿಎಸ್​ಟಿಯನ್ನು ಶೇ.5ಕ್ಕೆ ಇಳಿಸಲಾಗಿದ್ದು, ಸರಕು ಸಾಗಣೆ ರೈಲಿನ ವ್ಯಾಗನ್​ಗಳು, ಬೋಗಿಗಳ ಮೇಲಿನ ಜಿಎಸ್​ಟಿಯನ್ನು ಶೇ.5ರಿಂದ ಶೇ.12ಕ್ಕೆ ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದರು.

ಭಾರತದಲ್ಲಿ ಉತ್ಪಾದಿಸಲಾಗದ, ಹೊರದೇಶಗಳಿಂದ ಆಮದು ಮಾಡಿಕೊಳ್ಳಲಾಗುವ ರಕ್ಷಣಾ ಉಪಕರಣಗಳ ಮೇಲಿನ ಜಿಎಸ್​ಟಿಯನ್ನು ಸಂಪೂರ್ಣ ರದ್ದುಗೊಳಿಸಲಾಗಿದೆ. ಹೆಣೆದ/ಹೆಣೆಯದ ಪಾಲಿಥೀನ್​ ಬ್ಯಾಗ್​ಗಳ ಮೇಲೆ ಏಕಪ್ರಕಾರವಾಗಿ ಶೇ.12ರ ಜಿಎಸ್​ಟಿ ವಿಧಿಸಲಾಗುವುದು. 10-13 ಜನರು ಪ್ರಯಾಣಿಸಬಹುದಾದ ಪೆಟ್ರೋಲ್​ ವಾಹನಗಳ ಮೇಲಿನ ವಿಧಿಸಲಾಗುತ್ತಿದ್ದ ಶೇ.28 ತೆರಿಗೆಯನ್ನು ಶೇ.1ರಷ್ಟು ಹಾಗೂ ಡೀಸೆಲ್​ ವಾಹನಗಳ ಮೇಲಿನ ಶೇ.28 ತೆರಿಗೆಯನ್ನು ಶೇ.3ರಷ್ಟು ಇಳಿಸಲಾಗಿದೆ ಎಂದು ಮಾಹಿತಿ ಒದಗಿಸಿದರು. (ಏಜೆನ್ಸೀಸ್​)

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಸುದ್ದಿ

    200 ವರ್ಷದ ಹಳೆಯ ಶಿವನ ದೇವಾಲಯ ಪತ್ತೆ ಅಚ್ಚರಿಗೆಗೊಳಗಾದ ಜನ!

    ಸುಮಾರು 200 ವರ್ಷ ಹಳೆಯ ಶಿವಾಲಯ ದೇವಾಲಯವು ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಪತ್ತೆಯಾಗಿದೆ. ಮರಳು ಗಣಿಗಾರಿಕೆ ವೇಳೆ ಶಿವ ದೇವಾಲಯ ಕಂಡು ಜನರು ಅಚ್ಚರಿಗೆಗೊಳಗಾಗಿದ್ದಾರೆ. ಸುಮಾರು 200 ವರ್ಷ ಹಳೆಯ ದೇಗುಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮರಳು ಗಣಿಗಾರಿಕೆಯ ಸಮಯದಲ್ಲಿ ಈ ದೇಗುಲದ ಗೋಪುರ ಕಾಣಿಸಿಕೊಂಡಿದೆ. ಈ ಗೋಪುರವನ್ನು ಕಲ್ಲುಗಳಿಂದ ಮಾಡಲ್ಪಟ್ಟಿದ್ದು ಇದರ ಹಿನ್ನೆಲೆ ಮರಳಿನಲ್ಲಿ ಕಂಡ ದೇವಾಲಯವನ್ನು ತೆಗೆಯಲು ಸ್ಥಳೀಯರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಿದೆ ಎಂದು…

  • inspirational

    ರೈತರಿಂದ ನೇರವಾಗಿ ಬೆಳೆ ಖರೀದಿಗೆ ಮುಂದಾದ ಉಪೇಂದ್ರ

    Mayoon N ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಉಪೇಂದ್ರ ಅವರು ತಮ್ಮ ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’…

  • ಆರೋಗ್ಯ

    ಅತಿ ವ್ಯಾಯಾಮ ಮಾಡುವುದರಿಂದ ಆರೋಗ್ಯಕ್ಕೆ ಆಗುವ ತೊಂದರೆಗಳು ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ…

    ದೇಹದ ತೂಕವನ್ನು ಇಳಿಸುವುದು ಇತ್ತೀಚಿನ ದಿನಗಳಲ್ಲಿ ಒಂದು ಸವಾಲಾಗಿ ಪರಿಣಮಿಸಿದೆ. ದೇಹಕ್ಕೆ ಶ್ರಮ ನೀಡದಿರುವುದು, ಅನಾರೋಗ್ಯಕರ ಆಹಾರ ಶೈಲಿ, ಅನಿಯಂತ್ರಿತ ಬೊಜ್ಜು ಪದಾರ್ಥಗಳ ಸೇವನೆ, ಒತ್ತಡ ಈ ಎಲ್ಲವೂ ಸೇರಿ ದೇಹದ ತೂಕವನ್ನು ಹೆಚ್ಚಿಸುತ್ತವೆ.

  • ದೇವರು-ಧರ್ಮ

    ಶಾಸ್ತ್ರಗಳ ಪ್ರಕಾರ ಒಂದು ಸಣ್ಣ ಅಡಿಕೆಯಿಂದ ನೀವು ಸುಲಭವಾಗಿ ಶ್ರೀಮಂತರಾಗಬಹುದು..!ತಿಳಿಯಲು ಈ ಲೇಖನ ಈ ಲೇಖನ ಓದಿ..

    ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.

  • ಸುದ್ದಿ

    ಕೊಡಗು ನೆರೆ ಸಂತಸ್ತರಿಗೆ ನಿರ್ಮಿಸುತ್ತಿರೋ ಮನೆಗಳು ಚೆನ್ನಾಗಿಲ್ಲ ಎಂದು ಹೇಳಿಕೆ ನೀಡಿದ ಹರ್ಷಿಕಾ ಪೂಣಚ್ಚ….!

    ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್‍ವುಡ್‍ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ…