ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಣಜಿ, ದೇಶದ ಜನರ ಆರೋಗ್ಯ ರಕ್ಷಣೆಗೆ ಒತ್ತು ನೀಡಿರುವ ಜಿಎಸ್ಟಿ ಮಂಡಳಿ ಕೆಫೀನ್ ಆಧಾರಿತ ಪೇಯಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಿದೆ. ಇದೇ ವೇಳೆ ಪ್ರವಾಸೋದ್ಯಮಕ್ಕೆ ಒತ್ತು ಕೊಡಲು ಹೋಟೆಲ್ ಕೋಣೆಗಳ ಬಾಡಿಗೆ ಮೇಲಿನ ತೆರಿಗೆಯನ್ನು ಇಳಿಸಿದೆ.
ಜಿಎಸ್ಟಿ ಮಂಡಳಿ ಸಭೆಯ ಬಳಿಕ ಶುಕ್ರವಾರ ರಾತ್ರಿ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಒಂದು ರಾತ್ರಿ ತಂಗಲು 1 ಸಾವಿರ ರೂ.ವರೆಗಿನ ಹೋಟೆಲ್ ಕೋಣೆಗಳ ಬಾಡಿಗೆ ಮೇಲೆ ವಿಧಿಸಲಾಗುತ್ತಿದ್ದ ತೆರಿಗೆಯನ್ನು ಸಂಪೂರ್ಣ ರದ್ದುಗೊಳಿಸಲಾಗಿದೆ. ಒಂದು ರಾತ್ರಿಗೆ 1,001 ರೂ.ನಿಂದ 7,500 ರೂ.ವರೆಗೆ ವಿಧಿಸಲಾಗುವ ಬಾಡಿಗೆ ಮೇಲಿನ ತೆರಿಗೆಯನ್ನು ಶೇ.18ರಿಂದ ಶೇ.12ಕ್ಕೆ, 7,500 ರೂ.ಗೂ ಹೆಚ್ಚು ಬಾಡಿಗೆ ಮೇಲಿನ ತೆರಿಗೆಯನ್ನು ಶೇ.28ರಿಂದ ಶೇ.18ಕ್ಕೆ ಇಳಿಕೆ ಮಾಡಲಾಗಿದೆ ಎಂದರು.
ಹೊರಾವರಣದ ಕ್ಯಾಟರಿಂಗ್ ಮೇಲೆ ವಿಧಿಸಲಾಗುತ್ತಿದ್ದ ಇನ್ಪುಟ್ ಟ್ಯಾಕ್ಸ್ ಕ್ರೆಡಿಟ್ ಅನ್ನು ಶೇ.18ರಿಂದ ಶೇ.5ಕ್ಕೆ, ನೌಕಾ ಇಂಧನದ ಮೇಲಿನ ಜಿಎಸ್ಟಿಯನ್ನು ಶೇ.5ಕ್ಕೆ ಇಳಿಸಲಾಗಿದ್ದು, ಸರಕು ಸಾಗಣೆ ರೈಲಿನ ವ್ಯಾಗನ್ಗಳು, ಬೋಗಿಗಳ ಮೇಲಿನ ಜಿಎಸ್ಟಿಯನ್ನು ಶೇ.5ರಿಂದ ಶೇ.12ಕ್ಕೆ ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದರು.
ಭಾರತದಲ್ಲಿ ಉತ್ಪಾದಿಸಲಾಗದ, ಹೊರದೇಶಗಳಿಂದ ಆಮದು ಮಾಡಿಕೊಳ್ಳಲಾಗುವ ರಕ್ಷಣಾ ಉಪಕರಣಗಳ ಮೇಲಿನ ಜಿಎಸ್ಟಿಯನ್ನು ಸಂಪೂರ್ಣ ರದ್ದುಗೊಳಿಸಲಾಗಿದೆ. ಹೆಣೆದ/ಹೆಣೆಯದ ಪಾಲಿಥೀನ್ ಬ್ಯಾಗ್ಗಳ ಮೇಲೆ ಏಕಪ್ರಕಾರವಾಗಿ ಶೇ.12ರ ಜಿಎಸ್ಟಿ ವಿಧಿಸಲಾಗುವುದು. 10-13 ಜನರು ಪ್ರಯಾಣಿಸಬಹುದಾದ ಪೆಟ್ರೋಲ್ ವಾಹನಗಳ ಮೇಲಿನ ವಿಧಿಸಲಾಗುತ್ತಿದ್ದ ಶೇ.28 ತೆರಿಗೆಯನ್ನು ಶೇ.1ರಷ್ಟು ಹಾಗೂ ಡೀಸೆಲ್ ವಾಹನಗಳ ಮೇಲಿನ ಶೇ.28 ತೆರಿಗೆಯನ್ನು ಶೇ.3ರಷ್ಟು ಇಳಿಸಲಾಗಿದೆ ಎಂದು ಮಾಹಿತಿ ಒದಗಿಸಿದರು. (ಏಜೆನ್ಸೀಸ್)
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಕರ್ನಾಟಕ ಸೇರಿದಂತೆ ಭಾರತದ ಮೂಲೆ ಮೂಲೆಯಲ್ಲೂ ಕೆಜಿಎಫ್ ಸಿನಿಮಾದ್ದೇ ಸೌಂಡ್. ಇದೀಗ ಮುಂಬೈನಲ್ಲೂ ರಾಕಿ ಭಾಯ್ ಹವಾ ಶುರುವಾಗಿದೆ. ಕೆಜಿಎಫ್ ಹಿಂದಿ ಅವತರಣಿಕೆ ಸಿನಿಮಾ ಮಹಾರಾಷ್ಟ್ರ ಸೇರಿದಂತೆ ಉತ್ತರ ಭಾರತದ ಹಲವಾರು ಚಿತ್ರಮಂದಿರಗಳಲ್ಲಿ ಇದೇ ತಿಂಗಳು 21 ರಂದು ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಸದ್ಯ ಹಿಂದಿ ಪ್ರಮೋಷನ್ ಕೂಡ ಭರದಿಂದ ಸಾಗುತ್ತಿದ್ದು, ಮುಂಬೈನ ಪ್ರಮುಖ ಸ್ಥಳಗಳಲ್ಲಿ ಯಶ್, ಪೋಸ್ಟರ್ಸ್ ಗಳು ರಾರಾಜಿಸುತ್ತಿವೆ. ಕನ್ನಡದಲ್ಲಿ ಜೋಕೆ ನಾನು ಬಳ್ಳಿಯ ಮಿಂಚು ಹಾಡನ್ನು ಕೆಜಿಎಫ್ ಚಿತ್ರಕ್ಕಾಗಿ ರಿಕ್ರಿಯೇಟ್…
ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಇಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. 33 ವರ್ಷ ಸೇವೆ ಸಲ್ಲಿಸಿದವರ ಅಥವಾ 60 ವರ್ಷ ತುಂಬಿದವರನ್ನು ಸೇವೆಯಿಂದ ನಿವೃತ್ತಿಗೊಳಿಸುವ ಕುರಿತು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಲಾಗಿತ್ತು. ಆದರೆ, ಈ ಕುರಿತ ಗೊಂದಲಗಳಿಗೆ ತೆರೆ ಬಿದ್ದಿದೆ. ನಿವೃತ್ತಿ ವಯಸ್ಸನ್ನು ಕಡಿಮೆ ಮಾಡುವ ಯಾವುದೇ ಪ್ರಸ್ತಾಪ ಸರಕಾರದ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಊಹಾಪೋಹ ಮತ್ತು ವದಂತಿಗಳು ಹರಡಿದ ಬಗ್ಗೆ ಕೇಂದ್ರ ಸರ್ಕಾರ…
ವಿಶ್ವದಲ್ಲಿ ಅನೇಕ ಶಾಲೆಗಳು ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿವೆ. ವಿದ್ಯಾಭ್ಯಾಸ ಹೇಳುವ ವಿಧಾನ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಿಂದ ಶಾಲೆ ಹೆಸರು ಮಾಡಿರುತ್ತದೆ. ಆದ್ರೆ ಈ ಶಾಲೆ ಎಲ್ಲಕ್ಕಿಂತ ಭಿನ್ನವಾಗಿದೆ. ಇಲ್ಲಿ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸ ಹೇಳುವ ಜೊತೆಗೆ ಅವ್ರ ಮದುವೆ ಜವಾಬ್ದಾರಿಯನ್ನೂ ಶಾಲೆಯೇ ಹೊರುತ್ತದೆ. ಹೌದು, ಭಿನ್ನವಾಗಿರುವ ಈ ಶಾಲೆ ಗುಜರಾತಿನ ಅಹಮದಾಬಾದ್ ನಲ್ಲಿದೆ. ಈ ಶಾಲೆ ಹೆಸರು ‘ಬ್ಲೈಂಡ್ ಕನ್ಯಾ ಪ್ರಕಾಶ್ ಘರ್’. ನಾಲ್ಕು ಮಕ್ಕಳೊಂದಿಗೆ ಶಾಲೆ ತೆರೆಯಲಾಗಿತ್ತು. ಆದ್ರೀಗ ಶಾಲೆ ಹೆಸ್ರು ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ. ದಿವ್ಯಾಂಗ…
ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ಪಂದ್ಯ ನಡೆಯಿತು. ಅಲ್ಲದೆ ಬುಧವಾರ ವರನಟ ಡಾ. ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಆಗಿದ್ದರಿಂದ ಕ್ರೀಡಾಂಗಣದ ಸ್ಕ್ರೀನ್‍ನಲ್ಲಿ ಅವರ ಫೋಟೋ ಹಾಕಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದೆ. ಬುಧವಾರ ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಇರುವುದರಿಂದ ಕ್ರೀಡಾಂಗಣದ ಎಲ್‍ಇಡಿ ಸ್ಕ್ರೀನ್‍ನಲ್ಲಿ ಅವರ ಫೋಟೋ ಹಾಕುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿತ್ತು. ಫೋಟೋ ಕೆಳಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಕೂಡ ಬರೆದಿತ್ತು. ಇದನ್ನು ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ರಾಯಲ್…
ಪೈಲಟ್ ಇಲ್ಲದ ವಿಮಾನ ತಯಾರಿಸಲು ಬೋಯಿಂಗ್ ಕಂಪನಿ ಮುಂದೆ ಬಂದಿದೆ. ವಿಮಾನ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿರುವ ಬೋಯಿಂಗ್ ಕಂಪನಿ ಮುಂದಿನ ವರ್ಷದ ವೇಳೆಗೆ ಪೈಲಟ್ ಇಲ್ಲದ ವಿಮಾನ ನಿರ್ಮಾಣದ ಕನಸು ನನಸಾಗಿರುವ ಗುರಿ ಹೊಂದಿದೆ.
ಹೆಂಡತಿಗೆ ಗಂಡ, ಗಂಡನಿಗೆ ಹೆಂಡತಿ ಗಿಫ್ಟ್ ನೀಡುವುದು ವಾಡಿಕೆ. ಮದುವೆ ವಾರ್ಷಿಕೋತ್ಸವ ಅಥವಾ ಬೇರೆ ವಿಶೇಷ ಸಂದರ್ಭಗಳಲ್ಲಿ ಈ ರೀತಿಯ ಗಿಫ್ಟ್ ಗಳನ್ನು ನೀಡಲಾಗುತ್ತದೆ. ಈಗ ಹೆಂಡತಿಯೊಬ್ಬರು ತಮ್ಮ ಪತಿಗೆ ಗಿಫ್ಟ್ ನೀಡುತ್ತಿರುವ ಸಂದರ್ಭ ವೈರಲ್ ಆಗಿದೆ. ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಜಾವಾ ಕಂಪನಿಯು ಮರಳಿ ಬಂದ ನಂತರ ಭಾರತದ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ತಮ್ಮ ಪತಿಗಾಗಿ ಜಾವಾ ಕ್ಲಾಸಿಕ್ ಬೈಕ್ ಅನ್ನು ಬುಕ್ಕಿಂಗ್ ಮಾಡಿದ್ದರು. ಬೈಕಿನ ವಿತರಣೆಯನ್ನು ಪಡೆದ ನಂತರ…