ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲಾಡಳಿತ, ಜಿಪಂ,ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ,ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಿನ್ನೀಸ್ ದಾಖಲೆಯ ಯೋಗಾಥಾನ್ ಅಂಗವಾಗಿ ನಡೆದ 10 ಸಾವಿರಕ್ಕೂ ಹೆಚ್ಚು ಮಂದಿಯೋಗ ಪ್ರದರ್ಶನದಲ್ಲಿ ಪಾಲ್ಗೊಂಡಿದರು. ನಡುಗುವ ಚಳಿಯಲ್ಲೂ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಯುವಜನರು ಜಿಲ್ಲಾ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೇರಿದರು. ವಿವಿಧ ಶಾಲೆ,ಕಾಲೇಜುಗಳಿಂದ ಆಗಮಿಸಿದ್ದ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗ ಪ್ರದರ್ಶನದಲ್ಲಿ ಗಮನ ಸೆಳೆದರು.ನಗರ ಮಾತ್ರವಲ್ಲದೇ ತಾಲ್ಲೂಕಿನ ವಿವಿಧ ಶಾಲೆಗಳ ಮಕ್ಕಳು ಪಾಲ್ಗೊಂಡಿದ್ದರು.
ಯೋಗ ಪ್ರದರ್ಶನಕ್ಕೆ 1100 ಮಕ್ಕಳನ್ನು ಕರೆತಂದಿದ್ದ ಚಿನ್ಮಯ ಶಾಲೆ, 450ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಕರೆತಂದಿದ್ದ ನಗರದ ಬಾಲಕಿಯರ ಪಿಯು ಕಾಲೇಜಿಗೆ ಕಾಲೇಜು ಹಂತದಲ್ಲಿ ಪ್ರಥಮ ಸ್ಥಾನ, ಗ್ರಾಮೀಣ ಶಾಲೆಗಳಲ್ಲಿ ಅತಿ ಹೆಚ್ಚು ಮಕ್ಕಳನ್ನು ಕರೆತಂದಿದ್ದ ಬೆಗ್ಲಿ ಪ್ರೌಢಶಾಲೆಗೆ ಪ್ರಥಮ ಸ್ಥಾನದ ಗೌರವ ಲಭಿಸಿದ್ದು, ಸಂಸದರು ಪ್ರಮಾಣಪತ್ರ ವಿತರಿಸಿದರು.
ಯೋಗ ಶಿಕ್ಷಕರಾದ ಮಾರ್ಕಂಡೇಶ್ವರ್. ಚಂದ್ರಣ್ಣ, ಮಂಜುಳಕ್ಕ ಹಾಗೂ ವೆಂಕಟ, ಸೋಮಣ್ಣ ಯೋಗ ಪ್ರದರ್ಶನದಲ್ಲಿ ಮಕ್ಕಳಿಗೆ ತರಬೇತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಂ.ನಾರಾಯಣ, ಯುವಕರ ಶೈಕ್ಷಣಿಕ, ಭೌತಿಕ ಅಭಿವೃದ್ದಿಗೂ ಯೋಗ ಸಹಕಾರಿಯಾಗಿದ್ದು, ಎಲ್ಲರೂ ಯೋಗ ಮುಂದುವರೆಸಿ, ನಿರಂತರ ಯೋಗದಿಂದ ಉತ್ತಮ ಆರೋಗ್ಯ ಪಡೆಯಿರಿ ಎಂದರು.
ಯೋಗದ ಮೂಲಕ ವಿಶ್ವಗುರುವಾಗಿರುವ ಭಾರತದಲ್ಲಿ ಯುವಕರು ದುಶ್ಚಟಗಳಿಗೆ ಬಲಿಯಾಗುವುದಿಲ್ಲ, ಮೊಬೈಲ್‌ಗೆ ದಾಸರಾಗುವುದಿಲ್ಲ ಎಂದು ಸಂಕಲ್ಪ ಮಾಡಿ ಎಂದು ಸಂಸದ ಎಸ್.ಮುನಿಸ್ವಾಮಿ ಕರೆ ನೀಡಿದರು.
ಜಿಲ್ಲಾಧಿಕಾರಿ ವೆಂಕಟ್‌ರಾಜಾ, ಯೋಗ ಪ್ರದರ್ಶನದ ಮೂಲಕ ಗಿನ್ನೀಸ್ ದಾಖಲೆ ಬರೆಯುವ ಐತಿಹಾಸಿಕ ಕ್ಷಣಕ್ಕೆ ಕೋಲಾರವೂ ಸಾಕ್ಷಿಯಾಗಿದೆ, ಈ ವರ್ಷ ಯುವಜನೋತ್ಸವದ ಅಂಗವಾಗಿ ನಡೆಸಿರುವ ಈ ಪ್ರದರ್ಶನ ಭಾರತದ ಯುವಶಕ್ತಿಯ ಕೊಡುಗೆಯಾಗಿದೆ, ಶಾಲಾ ಸಾಕ್ಷರತಾ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕ್ರೀಡಾ,ಯುವ ಸಬಲೀಕರಣ ಇಲಾಖೆ ಎಲ್ಲರ ಪ್ರಯತ್ನ ಯಶಸ್ವಿಯಾಗಿದೆ, ಸಂಕ್ರಾಂತಿಯನ್ನು ಸಂಭ್ರಮದಿAದ ಆಚರಿಸೋಣ ಎಂದು ಎಲ್ಲರಿಗೂ ಶುಭಾಷಯ ತಿಳಿಸಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ, ಪಿಯು ಡಿಸಿ ರಾಮಚಂದ್ರಪ್ಪ, ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್, ಬಿಇಒ ಕನ್ನಯ್ಯ, ಯುವ ಸಬಲೀಕರಣ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ, ಪತ್ರಕರ್ತರ ಸಂಘದ ರಾಜ್ಯಕಾರ್ಯಕಾರಿ ಸದಸ್ಯ ವಿ.ಮುನಿರಾಜು ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಹಂತಕ್ಕೆ ಬಂದಿದ್ದು, ಕೊನೆ ಕ್ಷಣದಲ್ಲಿ ಮಾತಿನ ಸಮರ ಜೋರಾಗಿದೆ. ಇಷ್ಟು ದಿನ ಜೋಡೆತ್ತುಗಳೆಂದು ದರ್ಶನ್ ಮೇಲೆ ಮುಗಿಬಿದ್ದಿದ್ದ ಸಿಎಂ ಕುಮಾರಸ್ವಾಮಿ, ಡಿ ಬಾಸ್ ಅಂತೆ ಎಂದೆಲ್ಲಾ ಟೀಕಿಸಿದ್ದರು. ಇಂದು ನಟ ಯಶ್ ವಿರುದ್ಧ ಕೆಂಡಕಾರಿದ್ದಾರೆ. ನಾನು ಕಲಾವಿದರೆಂದು ಗೌರವ ಕೊಟ್ಟಿದ್ದೆ. ಅವನ್ಯಾವನೋ ನನ್ನ ಪಕ್ಷವನ್ನೇ ಟೀಕಿಸುತ್ತಾನೆ ಎಂದಿದ್ದಾರೆ. ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಸಿಎಂ, ನನ್ನ ಪಕ್ಷವನ್ನು ಕಳ್ಳರ ಪಕ್ಷ ಅಂತಾನೆ. ಹಳ್ಳಿ ಕಡೆ ಬಂದು ನಮ್ಮ…
ನಮ್ಮ ದೇಶದಲ್ಲಿ ಮಳೆ ಬರುವಂತೆ ಪ್ರಾರ್ಥಿಸಿ ಕತ್ತೆ, ಕಪ್ಪೆ ಹಾಗೂ ಇತರ ಪ್ರಾಣಿಗಳ ಜೊತೆ ಮಾಡುವೆ ಮಾಡುವುದು ಸಾಮಾನ್ಯವಾಗಿದೆ. ಈ ಪ್ರಾಣಿಗಳ ಜೊತೆ ಮದುವೆ ಮಾಡಿಕೊಂಡು ಮೆರೆವಣಿಗೆ ಮಾಡೋದು ಎಲ್ಲರಿಗು ಗೊತ್ತಿರುವ ವಿಚಾರ.ಹೀಗೆ ವಿದೇಶಗಳಲ್ಲಿ ಇಂತಹ ಸಂಪ್ರದಾಯಗಳು ಚಾಲ್ತಿಯಲ್ಲಿವೆ.
ಓದು ಮುಗಿಸಿದ ನಂತರ ಉದ್ಯೋಗ ಹುಡುಕುವುದು, ಒಂದು ಜಾಬ್ನಲ್ಲಿ ಇದ್ದು ಮೊತ್ತೊಂದು ಉದ್ಯೋಗ ಸರ್ಚ್ ಮಾಡುವುದು ಹಲವರಿಗೆ ತುಂಬಾ ಕಷ್ಟದ ಕೆಲಸ.ಇದನ್ನು ಸರಳಗೊಳಿಸುವುದು, ಎಲ್ಲರೂ ಬೆಳೆಸಿಕೊಂಡ ವೃತ್ತಿಪರ ಸಂಪರ್ಕಗಳು ಮಾತ್ರ ಎಂಬುದನ್ನು ಮರೆಯುವ ಹಾಗಿಲ್ಲ. ಉತ್ತಮ ಸಂವಹನ ಬೆಳವಣಿಗೆಗಾಗಿ ಇರುವ ಹಲವು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು. ಖಾಸಗಿ ಕ್ಷೇತ್ರಗಳಲ್ಲಿ ಆಗಲಿ, ಸರ್ಕಾರಿ ಇಲಾಖೆಗಳ ಖಾಯಂ ಮತ್ತು ಗುತ್ತಿಗೆ ಆಧಾರದ ಕೆಲಸಗಳೇ ಆಗಲಿ, ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ವೃತ್ತಿ ಪರ ಸಂಪರ್ಕಗಳು ಮತ್ತು ಅವರೊಂದಿಗಿನ ಉತ್ತಮ ಸಂವಹನ ಮಾತ್ರ…
ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ. ಆದ್ರೆ ಈ ಹಾರ್ಟ್ ಅಟ್ಯಾಕ್ ಬರೋ ಮುನ್ಸೂಚನೆ ಮೊದ್ಲೇ ನಮ್ಗೆ ಗೊತ್ತಾದ್ರೆ ಹೇಗಿರುತ್ತೆ ಗೊತ್ತಾ?
ತಿಂದ ಆಹಾರ ಸರಿಯಾಗ ಜೀರ್ಣವಾಗದೇ ವಿಷಮಯವಾಗುವುದನ್ನು ಫುಡ್ ಪಾಯಿಸನ್ ಎಂದು ಕರೆಯಲಾಗುತ್ತದೆ. ರಾಸಾಯನಿಕಗಳು, ಬ್ಯಾಕ್ಟೀರಿಯಾಗಳು, ಕೀಟಾಣುಗಳು ಸೇರಿಕೊಂಡಿರುವ ಆಹಾರವನ್ನು ತಿಂದ್ರೆ ಅದು ಜೀರ್ಣವಾಗದೇ ಫುಡ್ ಪಾಯಿಸನ್ ಉಂಟಾಗುತ್ತದೆ.
ದಿನ ನಿತ್ಯದ ಜೀವನದಲ್ಲಿ ನಾವು ಬೆಳಿಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೂ ಅನೇಕ ವಸ್ತುಗಳನ್ನು ನಾವು ಬಳಸುತ್ತಿರುತ್ತೇವೆ.ನಾವು ಹೀಗೆ ಬಳಸುವ ವಸ್ತುಗಳು ನಮ್ಮ ಜೀವನದ ಮೇಲೆ ಒಳ್ಳೆಯ ಮತ್ತು ಕೆಟ್ಟ ಪ್ರಭಾವವನ್ನು ಬೀರುತ್ತವೆ. ನಾವು ಸಾಮಾನ್ಯವಾಗಿ ನಮ್ಮ ಸ್ನೇಹಿತರ,ಸಂಭಂದಿಕರ ವಸ್ತುಗಳನ್ನು ಅದಲು ಬದಲು ಮಾಡಿಕೊಂಡು ಉಪಯೋಗಿಸುತ್ತಿರುತ್ತೇವೆ.ಆದರೆ ಜ್ಯೋತಿಷ್ಯದಲ್ಲಿ ಹೇಳಿರುವ ಪ್ರಖಾರ ಬೇರೆಯವರ ಕೆಲವೊಂದು ವಸ್ತುಗಳನ್ನು ಉಪಯೋಗಿಸುವುದರಿಂದ ಅವರ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ ಅಂತ ಹೇಳಲಾಗಿದೆ. ಹಾಗಾದ್ರೆ ಬೇರೆಯವರ ಯಾವ ವಸ್ತುಗಳನ್ನು ಉಪಯೋಗಿಸುವುದರಿಂದ ನಮ್ಮ ಮೇಲೆ ಕೆಟ್ಟ…