ಸುದ್ದಿ

ಹೇರ್ ಫಾಲ್ ಟೆನ್ಶನ್ ಇಲ್ಲಿಗೆ ಬಿಡಿ, ಇನ್ಮುಂದೆ ನ್ಯಾಚುರಲ್ ಪರಿಹಾರ ಟ್ರೈ ಮಾಡಿ,..!

194

ತುಂಬಾ ಕೂದಲು ಉದುರುತ್ತಿದೆ ಅಂತ ಚಿಂತೆ ಶುರುವಾಗಿದ್ಯಾ? ಕೂದಲು ಯಾಕೆ ಉದುರುತ್ತೆ? ಈ ಸಮಸ್ಯೆಗೆ ನೈಸರ್ಗಿಕ ಮದ್ದು ಏನು? ಯಾವೆಲ್ಲಾ ಆಹಾರವನ್ನೂ ಸೇವಿಸಬೇಕು? ಹೇಗೆ ಕೂದಲಿನ ರಕ್ಷಣೆ ಮಾಡಬೇಕು ಎನ್ನುವ ಚಿಂತೆಯಲ್ಲಿದ್ದೀರಾ? ಏನಪ್ಪಾ ಮಾಡೋದು ಈ ಸಮಸ್ಯೆಗೆ ಅಂತ ಯೋಚನೆ ಮಾಡೋದನ್ನ ಬಿಡಿ.

ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಸಮಸ್ಯೆ ಅಂದ್ರೆ ಅದು ಹೇರ್ ಫಾಲ್. ದೇಹಕ್ಕೆ ಆರೋಗ್ಯಕರ, ಪೌಷ್ಠಿಕಾಂಶವುಳ್ಳ ಆಹಾರ ಸೇವಿಸದಿದ್ದರೆ ಈ ಹೇರ್ ಫಾಲ್ ಸಮಸ್ಯೆ ಬರುತ್ತದೆ. ಅಲ್ಲದೆ ಅತಿಯಾದ ಯೋಚನೆ, ನಿದ್ರಾಹೀನತೆ ಹಾಗೂ ಟೆನ್ಶನ್‍ನಿಂದ ಕೂಡ ಕೂದಲು ಉದುರೋಕೆ ಶುರುವಾಗುತ್ತದೆ. ಸಾಮಾನ್ಯವಾಗಿ ಎಲ್ಲರಿಗೂ ಕೂದಲು ಉದುರತ್ತೆ. ಆದ್ರೆ ಕೂದಲು ಉದುರಿರುವ ಸ್ಥಳದಲ್ಲಿ ಮತ್ತೆ ಕೂದಲು ಬೆಳೆಯದಿದ್ದರೆ ಅದಕ್ಕೆ ಹೇರ್ ಫಾಲ್ ಸಮಸ್ಯೆ ಎನ್ನುತ್ತಾರೆ. ನಾವು ತಿಳಿಸುವ ಸುಲಭ ಹಾಗೂ ನೈಸರ್ಗಿಕ ಮದ್ದನ್ನು ಹಾಗೂ ಕೆಲವು ಆರೋಗ್ಯದ ಸಲಹೆಯನ್ನು ಪಾಲಿಸಿದರೆ ನೀವು ನಿಮ್ಮ ಹೇರ್ ಫಾಲ್ ಸಮಸ್ಯೆಯಿಂದ ಹೊರಬರಬಹುದು. ಹೌದು ಆ ಸುಲಭ, ನೈಸರ್ಗಿಕ ಸಲಹೆಗಳು ಇಲ್ಲಿವೆ ನೋಡಿ.

ಯಾವೆಲ್ಲಾ ವಿಟಮಿನ್ಸ್ ಬರಿತ ಆಹಾರ ಸೇವಿಸಬೇಕು?  ಹೇರ್ ಫಾಲ್ ನಿಯಂತ್ರಿಸಲು ವಿಟಿಮಿನ್-ಎ, ವಿಟಮಿನ್-ಬಿ, ಓಮೆಗಾ-3 ಹಾಗೂ ವಿಟಮಿನ್-ಇ ಸಮೃದ್ಧವಾಗಿರುವ ಆಹಾರವನ್ನು ಸೇವಿಸಬೇಕು. ಇದರಿಂದ ಕೂದಲ ಬೆಳವಣಿಗೆಗೆ ಉತ್ತಮ ವಿಟಮಿನ್ ಅಂಶ ದೊರಕಿ ಹೇರ್ ಫಾಲ್ ಕಡಿಮೆಯಾಗುತ್ತದೆ.

ಆಂಟಿ ಆಕ್ಸಿಡೆಂಟ್ ಗುಣಗಳುಳ್ಳ ವಿಟಮಿನ್-ಎ ಪದಾರ್ಥಗಳು ಆರೋಗ್ಯಕರ ಕೂದಲು ಮತ್ತು ಕೂದಲು ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಸಿಹಿ ಆಲೂಗೆಡ್ಡೆ, ಕ್ಯಾರೆಟ್, ಕರಿಬೇವಿನ ಸೊಪ್ಪು, ಒಣಗಿದ ಏಪ್ರಿಕಾಟ್, ಸ್ವೀಟ್ ಕೆಂಪು ಮೆಣಸು, ಟ್ಯೂನಾ ಮೀನು, ಉಷ್ಣವಲಯದ ಹಣ್ಣುಗಳು(ಮಾವು) ವಿಟಮಿನ್-ಎ ಅಂಶವನ್ನು ಒಳಗೊಂಡಿರುತ್ತದೆ. ಇದು ಕೂದಲ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಮತ್ತು ಕೂದಲು ನಷ್ಟವನ್ನು ತಡೆಯುತ್ತದೆ. ಮೊಟ್ಟೆ, ಮೀನು, ಮತ್ತು ಹಾಲು ನಮ್ಮ ಆಹಾರದಲ್ಲಿ ಒಮೆಗಾ -3 ಅಂಶವಿರುತ್ತದೆ. ಬೀಜಗಳು (ಬಾದಾಮಿ), ಶೆಲ್ಫಿಶ್, ಮೀನು, ಆಲಿವ್ ಎಣ್ಣೆ, ಬ್ರೊಕೊಲಿನಲ್ಲಿ ವಿಟಮಿನ್ ಇ ಅಂಶ ಅಡಕವಾಗಿರುತ್ತದೆ. ವಿಟಮಿನ್ ಇ ಆರೋಗ್ಯ ಸುಧಾರಣೆಗೆ ಸಹಾಯ ಮಾಡಿ ದೇಹದಲ್ಲಿ ರಕ್ತದ ಸಂಚಲನವನ್ನು ಉತ್ತಮಗೊಳಿಸುತ್ತದೆ. ಮಾಂಸ, ಮೊಟ್ಟೆಗಳು, ಮೀನುಗಳು ಅಥವಾ ಡೈರಿ ಆಹಾರಗಳು ವಿಟಮಿನ್-ಬಿಯಿಂದ ಸಮೃದ್ಧವಾಗಿವೆ. ಈ ವಿಟಮಿನ್‍ಗಳು ಮೆಲನಿನ್ ಅನ್ನು ಉತ್ಪಾದಿಸಲು ಸಹಾಯ ಮಾಡುತ್ತವೆ, ಇದು ಕೂದಲಿಗೆ ಆರೋಗ್ಯಕರ ಬಣ್ಣವನ್ನು ನೀಡುತ್ತದೆ. ಜೊತೆಗೆ ರಕ್ತ ಸಂಚಲವನ್ನು ಸುಧಾರಿಸುತ್ತದೆ ಮತ್ತು ಕೂದಲು ಉದುರುವಿಕೆಯನ್ನು ನಿಲ್ಲುಸುತ್ತದೆ.


ಹೆಡ್ ಮಸಾಜ್  ಪ್ರತಿ ನಿತ್ಯ 15 ನಿಮಿಷಗಳ ಕಾಲ ನಿಮ್ಮ ತಲೆಯನ್ನು ಮಸಾಜ್ ಮಾಡುವುದರಿಂದ ನೆತ್ತಿಯಲ್ಲಿ ರಕ್ತ ಸಂಚಲನ ಉತ್ತಮ ರೀತಿಯಲ್ಲಿ ಆಗುತ್ತದೆ. ತಲೆ ಮಸಾಜ್ ಮಾಡಲು ತೆಂಗಿನ ಎಣ್ಣೆ ಅಥವಾ ಬಾದಾಮಿ ತೈಲವನ್ನು ಬಳಸಿದರೆ ಉತ್ತಮ. ಯಾಕೆಂದರೆ ಬಾದಾಮಿ ತೈಲ ನಿಮ್ಮ ನೆತ್ತಿಯನ್ನು ಮೃದುಗೊಳಿಸುವುದು. ಸಾಧ್ಯವಾದರೆ, ವಾರಕ್ಕೆ ಕನಿಷ್ಠ ಎರಡು ಬಾರಿ ಕೂದಲು ಉದುರುವಿಕೆಯನ್ನು ನಿಲ್ಲಿಸಲು ಬಾದಾಮಿ ತೈಲದಿಂದ ತಲೆಗೆ ಮಸಾಜ್ ಮಾಡಿಕೊಳ್ಳಿ ಉತ್ತಮ ಫಲಿತಾಂಶ ಪಡೆಯಿರಿ.

ಮೊಟ್ಟೆ  ವಾರದಲ್ಲಿ ಎರಡು ಬಾರಿ ಮೊಟ್ಟೆಯ ಬಿಳಿಯ ಬಿಳಿಯ ಭಾಗವನ್ನು ಬೇರ್ಪಡಿಸಿ ಅದನ್ನು ನಿಮ್ಮ ನೆತ್ತಿಯನ್ನು ಮಸಾಜ್ ಮಾಡುವುದರಿಂದ ಇದು ನಿಮ್ಮ ಕೂದಲನ್ನು ಬಲಪಡಿಸುತ್ತದೆ ಮತ್ತು ಪೋಷಣೆ ನೀಡುತ್ತದೆ. ಕೂದಲು ಉದುರುವಿಕೆಯನ್ನು ತಡೆಗಟ್ಟಿ ಕೂದಲು ವೇಗವಾಗಿ ಬೆಳೆಯಲು ಸಹಾಯ ಮಾಡುತ್ತದೆ.

ಬಿಸಿ ತೈಲ ಮಸಾಜ್  ತೆಂಗಿನ ಎಣ್ಣೆ, ಆಲಿವ್ ಎಣ್ಣೆ ಅಥವಾ ಕ್ಯಾನೋಲ ಎಣ್ಣೆಯನ್ನು ತೆಗೆದುಕೊಂಡು ಅದನ್ನು ಕೊಂಚ ಬಿಸಿ ಮಾಡಿ, ಕೆಲವು ನಿಮಿಷಗಳ ಕಾಲ ಈ ಬಿಸಿ ಎಣ್ಣೆಯಿಂದ ನಿಮ್ಮ ನೆತ್ತಿಯನ್ನು ಮಸಾಜ್ ಮಾಡಿ. ಬಳಿಕ ಒಂದು ಗಂಟೆ ಬಿಟ್ಟು ತಲೆ ಸ್ನಾನ ಮಾಡಿ. ಇದರಿಂದ ಕೂದಲು ಉದುರುವುದು ಕಡಿಮೆಯಾಗುತ್ತದೆ. ಹಾಗೂ ಕೂದಲ ಬೆಳವಣಿಗೆ ಆಗಲು ಕೂಡ ಇದು ಸಹಾಯ ಮಾಡುತ್ತದೆ.

ನೈಸರ್ಗಿಕ ರಸಗಳು  ಬೆಳ್ಳುಳ್ಳಿ ರಸ, ಈರುಳ್ಳಿ ರಸ ಅಥವಾ ಶುಂಠಿಯ ರಸವನ್ನು ತೆಗೆದುಕೊಂಡು ಕೆಲವು ನಿಮಿಷಗಳ ಕಾಲ ನಿಮ್ಮ ನೆತ್ತಿಯನ್ನು ಮಸಾಜ್ ಮಾಡಿ. ಇದು ಉತ್ತಮ ಕೂದಲು ಬೆಳವಣಿಗೆಯನ್ನು ಸಹಾಯಕಾರಿ ಹಾಗೂ ಕೂದಲು ಉದುರುವುದನ್ನು ತಡೆಯುತ್ತದೆ.


ಯೋಗಾಸನ ಕೂದಲು ಉದುರುವಿಕೆಯನ್ನು ತಡೆಯಲು ಮತ್ತು ಕೂದಲ ಬೆಳವಣಿಗೆಯನ್ನು ಸುಧಾರಿಸಲು ಖಾಲಿ ಹೊಟ್ಟೆಯಲ್ಲಿ ಪ್ರತಿನಿತ್ಯ ಬೆಳಿಗ್ಗೆ ಅಥವಾ ಸಂಜೆ ಯೋಗಾಸನ ಮಾಡಬೇಕು. ಯೋಗಾಸನ ಮಾಡುವುದರಿಂದ ಒತ್ತಡ ಕಡಿಮೆಯಾಗುತ್ತದೆ. ಸೂರ್ಯನಮಸ್ಕಾರ, ವಜ್ರಾಸನ, ಸರ್ವಂಗಾಸನ,ಹಲಾಸನ. ಪ್ರಾಣಾಯಾಮ ಮಾಡಿದರೆ ಉಳ್ಳೆದು.ಕೂದಲು ಉದುರುವಿಕೆಯನ್ನು ನೈಸರ್ಗಿಕವಾಗಿ ನಿಲ್ಲಿಸುವುದರಲ್ಲಿ ಪ್ರಾಣಾಯಾಮ ಪ್ರಮುಖ ಪಾತ್ರ ವಹಿಸುತ್ತದೆ. ನಿತ್ಯವೂ ಪ್ರಾಣಾಯಾಮ ಮಾಡುವುದರಿಂದ ಒತ್ತಡ ಮತ್ತು ಖಿನ್ನತೆ ಕಡಿಮೆಯಾಗುತ್ತದೆ. ನಿಮ್ಮ ಒತ್ತಡ ಮತ್ತು ಖಿನ್ನತೆಯನ್ನು ನೀವು ಕಡಿಮೆ ಮಾಡಿದರೆ, ನೀವು ಕೂದಲ ಉದುರುವಿಕೆಯನ್ನು ಕಡಿಮೆಗೊಳಿಸಬಹುದು. ಹೆಚ್ಚಿನ ಸಂದರ್ಭಗಳಲ್ಲಿ ಒತ್ತಡ ಮತ್ತು ಖಿನ್ನತೆಯೇ ಹೇರ್ ಫಾಲ್‍ಗೆ ಕಾರಣವಾಗಿರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಲ್ಲಿದೆ ನೋಡಿ ಮದ್ಯ ಪ್ರಿಯರಿಗೊಂದು ಸಿಹಿಸುದ್ದಿ…!

    ಗೋವಾ ಪ್ರವಾಸಮಾಡ ಹೊರಟಿರುವ ಪ್ರವಾಸಿಗರೂ ಮತ್ತು ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಇದ್ದು, ಇನ್ನು ಮುಂದೆ ಗೋವಾದಿಂದಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅಲ್ಲಿನ ಸರ್ಕಾರ ಅವಕಾಶ ನೀಡಿದೆ.  ಅಚ್ಚರಿ ಪಡಬೇಡಿಇದು ನಿಜ…. ಹೌದು.. ಗೋವಾ ಪ್ರವಾಸಕ್ಕೆ ಹೋಗುವ ಮದ್ಯಪ್ರಿಯರಿಗೆ ಅಲ್ಲಿನ ಸರ್ಕಾರ ಸಿಹಿ ಸುದ್ದಿನೀಡಿದ್ದು, ಇನ್ನು ಮುಂದೆ ಪ್ರವಾಸ ಮುಗಿಸಿ ಮನೆಗೆ ಮರಳುವ ಇತರೆ ರಾಜ್ಯಗಳ ಪ್ರವಾಸಿಗರು ಹೆಚ್ಚುವರಿಮದ್ಯದ ಬಾಟಲಿಗಳನ್ನು ಮನೆಗೆ ಕೊಂಡೊಯ್ಯಬಹುದು.  ಆದಾಯ ಕೊರತೆಯಿಂದ ಕಂಗೆಟ್ಟಿರುವ ಗೋವಾ ಸರ್ಕಾರ ಇಂತಹುದೊಂದು ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಶೀಘ್ರದಲ್ಲಿಯೇ ಈ…

  • ಆಧ್ಯಾತ್ಮ

    ಶ್ರೀ ಶಿರಡಿ ಸಾಯಿಬಾಬಾ ಅವರ ಬಗ್ಗೆ ನಿಮ್ಗೆ ಗೊತ್ತಿಲ್ಲದ ವಿಷಯಗಳು..!

    ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.

  • ಸುದ್ದಿ

    ಆದಿವಾಸಿಗಳ ಪಾಲಿಗೆ ಮರಣ ಶಾಸನವಾದ ನೂತನ ಅರಣ್ಯ ಕಾಯ್ದೆ,.ಇದನ್ನೊಮ್ಮೆ ಓದಿ …!

    ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ…

  • ಆರೋಗ್ಯ

    ಪ್ರತಿದಿನ ರಾತ್ರಿ ಮಲಗುವ ಮೊದಲು ಬೆಲ್ಲ ಸೇವಿಸಿದರೆ ಏನಾಗುತ್ತದೆ ಗೊತ್ತಾ, ಬಹಳಷ್ಟು ಜನರಿಗೆ ಗೊತ್ತಿಲ್ಲ ಬೆಲ್ಲದ ಮಹತ್ವ.

    ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ತಿಂಡಿಯಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯನ್ನೇ ಹೆಚ್ಚಾಗಿ ಬಳಸುತ್ತಿದ್ದಾರೆ. ಆಯುರ್ವೇದದ ಪ್ರಕಾರ ಉತ್ತಮ ಆಹಾರವು ದೇಹಕ್ಕೆ ಅತ್ಯುತ್ತಮ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ಇರುವುದರಿಂದ ಬೆಲ್ಲವನ್ನು ತಿನ್ನುವುದು ಆರೋಗ್ಯಕ್ಕೆ ಉತ್ತಮ ಔಷದಿ. ಕಣ್ಣುಗಳಲ್ಲದೆ ಕೂದಲು,…

  • ಸುದ್ದಿ

    ಹುಟ್ಟುಹಬ್ಬದಂದು ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಪರೀಕ್ಷೆ ಮಾಡಿಸಿ ಆಚರಿಸಿದ ನಟಿ ಪ್ರಣಿತ…!

    ಸ್ಯಾಂಡಲ್‍ವುಡ್ ನಟಿ ಪ್ರಣಿತಾ ಸುಭಾಷ್ ಇಂದು ತಮ್ಮ 28ನೇ ವರ್ಷದ ಹುಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ನಗರದ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಣಿತಾ ಪ್ರತಿ ವರ್ಷ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಹುಟ್ಟುಹಬ್ಬದಂದು ಪ್ರಣಿತಾ ಸರ್ಕಾರಿ ಶಾಲೆ ದತ್ತು ಪಡೆದುಕೊಂಡು, 5 ಲಕ್ಷ ರೂ. ಹಣವನ್ನು ನೀಡಿದ್ದರು. ಈ ಬಾರಿ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಣಿತಾ ಸಮಾಜಮುಖಿ ಕಾರ್ಯಕ್ರಮಗಳನ್ನು…

  • ಸುದ್ದಿ

    11 ಶಿಪ್ ಕಂಟೇನರ್​ಗಳಲ್ಲಿ ನಿರ್ಮಾಣವಾಗಿರುವ 3 ಅಂತಸ್ತಿನ ಮನೆ ಹೇಗಿದೆ ಗೊತ್ತಾ,ನೋಡಿದರೆ ಅಚ್ಚರಿ ಪಡುವುದು ಗ್ಯಾರಂಟಿ,.!

    ಜೀವನದಲ್ಲಿ ಎಲ್ಲರೂ  ತಮಗೆ ಸ್ವಂತ  ಮನೆಯನ್ನು  ಕಟ್ಟಿಕೊಳ್ಳಬೇಕು ಎಂಬ ಆಸೆ ಎಲ್ಲರಲ್ಲಿಯೂ ಇದ್ದೆ ಇರುತ್ತೆ.  ಹಾಗಾಗಿ ಮನೆ ಹೀಗಿರಬೇಕು, ಪೀಠೋಪಕರಣಗಳು ಮಾದರಿ, ಮನೆಯ ವಿನ್ಯಾಸ ಸೇರಿದಂತೆ ಪ್ರತಿಯೊಂದರಲ್ಲಿ ಸೂಕ್ತವಾದದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ತಮ್ಮ ಬಜೆಟ್ ಅನುಗುಣವಾಗಿ ಮನೆಯನ್ನು ಸುಂದರಗೊಳಿಸುವ ಖರೀದಿಸಲು ಬ್ಲೂಪ್ರಿಂಟ್ ಸಿದ್ಧಮಾಡಿಕೊಂಡಿರುತ್ತಾರೆ. ಆದರೆ ಅಮೆರಿಕದ ವಿಲ್ ಬ್ರೆಕ್ಸ್ ಎಂಬವರು 11 ಶಿಪ್ ಕಂಟೇನರ್ ಗಳಲ್ಲಿ ಮನೆ ಕಟ್ಟಿ ಎಲ್ಲರೂ ಹುಬ್ಬೇರುವಂತೆ ಮಾಡಿದ್ದಾರೆ. ವಿಲ್ ಬ್ರೆಕ್ಸ್ ಹಣದ ಅಡಚಣೆಯಿಂದಾಗಿ ಕಂಟೇನರ್ ಗಳ ಮೂಲಕ ಮನೆ ಕಟ್ಟಲು ನಿರ್ಧರಿಸದ್ದರು….