ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ ಈದ್ ಮಿಲಾದ್ ಪ್ರಯುಕ್ತ ನವಂಬರ್ 10 ರಂದು ಬೆಂಗಳೂರಿನಾದ್ಯಂತ ಮದ್ಯಬಂದ್ ಮಾಡಿ ಪೊಲೀಸ್ ಆಯುಕ್ತ ಆದೇಶ ಹೊರಡಿಸಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯಮಾರಟ ನಿಷೇಧ ಮಾಡಿ ಆದೇಶ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ಇಂದು ಮಂಗಳವಾರ ಆದೇಶ ಹೊರಡಿಸಿದ್ದಾರೆ. ಇದರಿಂದ ಎಲ್ಲರು ಸಂತೋಷದಿಂದ ಹಬ್ಬವನ್ನು ಆಚರಿಸಲಿ ಎಂಬ ಉದ್ದೇಶವಷ್ಟೇ.
ಇದೇ ನವೆಂಬರ್ 10 ರಂದು ಭಾನುವಾರ ಬೆಳಗ್ಗೆ 6 ರಿಂದ ಅದೇ ದಿನ ಮಧ್ಯರಾತ್ರಿ 12 ಗಂಟೆವರೆಗೂ ಮದ್ಯ ಮಾರಾಟ ನಿಷೇಧಿಸಲಾಗಿದೆಎಂದು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಆದೇಶ ಪ್ರತಿಯಲ್ಲಿ ಉಲ್ಲೇಖಿಸಿದ್ದಾರೆ.
ಬೆಂಗಳೂರು ನಗರದಾದ್ಯಂತ ನ.10ರಂದು ಮುಸ್ಲಿಮರು ಈದ್ ಮಿಲಾದ್ ಹಬ್ಬವನ್ನು ಆಚರಿಸುವ ಪ್ರಯುಕ್ತ, ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ, ನಂತರ ಮೆರವಣಿಗೆ ಸಾಗಲಿದೆ. ಕಾನೂನು ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದುಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಬಾರ್, ವೈನ್ ಶಾಪ್, ಪಬ್ ಹಾಗೂ ಎಲ್ಲಾ ರೀತಿಯ ಮದ್ಯ ಮಾರಾಟ ಮಾಡುವ ಅಂಗಡಿಗಳನ್ನು ಮುಚ್ಚಲು ಹಾಗೂ ಮದ್ಯ ಮಾರಾಟವನ್ನು ಮಾಡದಿರಲು ನಿಷೇದಾಜ್ಞೆ ಹೊರಡಿಸಲಾಗಿದೆ.