ಸುದ್ದಿ

ರಾಮ ಭಂಟ ಆಂಜನೇಯನ ‘ಜಾತಿ’ ಪ್ರಮಾಣ ಪತ್ರಕ್ಕಾಗಿ ಅರ್ಜಿ!

236

ಈಗಂತೂ ರಾಜಕಾರಣಿಗಳು ತಾವು ಗೆಲ್ಲುವುದಕ್ಕಾಗಿ ಏನು ಬೇಕೋ ಮಾಡುತ್ತಾರೆ, ಹೇಗೆಂದರೆ ಹಾಗೆ ಮಾತನಾಡುತ್ತಾರೆ ಕೂಡ. ಕೊನೆಗೂ ರಾಜಕೀಯಕ್ಕೆ ದೇವರನ್ನು ಎಳೆದು ತಂದು ದೇವರಿಗೂ ಜಾತಿಯ ಪಟ್ಟಿಯನ್ನು ಕಟ್ಟಿಬಿಟ್ಟಿದ್ದಾರೆ.

ಹನುಮಂತ ಅರಣ್ಯವಾಸಿ. ಆತ ದಲಿತ ವರ್ಗಕ್ಕೆ ಸೇರಿದ್ದವನೆಂಬ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಬಳಿಕ ಈ ಕುರಿತು ಪರ-ವಿರೋಧದ ಚರ್ಚೆಗಳು ಮುಂದುವರೆದಿವೆ.

ಆದಿತ್ಯನಾಥ್ ಅವರ ಹೇಳಿಕೆಗೆ ಸ್ವಪಕ್ಷೀಯರಿಂದಲೂ ವಿರೋಧ ವ್ಯಕ್ತವಾಗಿದ್ದು, ಯೋಗಿ ಹೇಳಿಕೆಯನ್ನು ಖಂಡಿಸಿದ್ದ ಬಿಜೆಪಿ ಸಂಸದೆ ಸಾವಿತ್ರಿಬಾಯಿ ಫುಲೆ ಈಗ ಪಕ್ಷ ತೊರೆದಿದ್ದಾರೆ.

ಇದೆಲ್ಲದರ ಮಧ್ಯೆ ಶಿವಪಾಲ್ ಯಾದವ್ ನೇತೃತ್ವದ ಸಮಾಜವಾದಿ ಪಾರ್ಟಿ(ಲೋಹಿಯಾ) ವತಿಯಿಂದ ವಾರಣಾಸಿ ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಲಾಗಿದ್ದು, ಹನುಮಂತ ದಲಿತ ಜಾತಿಗೆ ಸೇರಿದವನು ಎಂದು ಪ್ರಮಾಣೀಕರಿಸುವ ಜಾತಿ ಸರ್ಟಿಫಿಕೇಟ್ ನೀಡಬೇಕೆಂದು ಕೋರಿದೆ.

ಹನುಮಂತ ದಲಿತ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದೇವರನ್ನು ಜಾತಿ ರಾಜಕಾರಣಕ್ಕೆ ಎಳೆದು ತಂದಿದ್ದಾರೆ. ಹೀಗಾಗಿ ನಾವು ಹನುಮಂತನ ಜಾತಿ ಸರ್ಟಿಫಿಕೇಟ್ ಕೋರಿ ಅರ್ಜಿ ಸಲ್ಲಿಸಿದ್ದೇವೆ ಎಂದು ಹೇಳಿರುವ ಪಕ್ಷದ ಮುಖಂಡ ಹರೀಶ್, ವಾರದೊಳಗೆ ಈ ಪ್ರಮಾಣ ಪತ್ರ ನೀಡದಿದ್ದರೆ ಧರಣಿ ನಡೆಸುವುದಾಗಿ ಎಚ್ಚರಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಮನೆಯ ಅಂಗಳದಲ್ಲಿ ಹಾವುಗಳು ಕಂಡು ಬರುತ್ತದೆಯೇ .?ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ  ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(25 ನವೆಂಬರ್, 2018) ಮನೆಯಲ್ಲಿನ ಪರಿಸ್ಥಿತಿಗಳಿಂದ ನಿಮಗೆ ಅಸಮಾಧಾನ ಉಂಟಾಗಬಹುದು. ನಿಮ್ಮ ಉತ್ಸಾಹ ನಿಮ್ಮ ಪ್ರೀತಿಯನ್ನು ಸಂಕಟಕ್ಕೆ ಸಿಲುಕಿಸಹುದಾದ್ದರಿಂದ ಅದನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ….

  • ಸಿನಿಮಾ

    ಅಬ್ಬಬ್ಬಾ “ರಾಜ್ ವಿಷ್ಣು” ಕನ್ನಡ ಚಿತ್ರದ ಟ್ರೇಲರ್ ಯೂಟ್ಯೂಬಲ್ಲಿ ಚಿಂದಿ! ಟ್ರೇಲರ್ ನೋಡಲು ಈ ಲೇಖನಿ ಓದಿ….

    ಶರಣ್ ನಾಯಕ ನಟನಾಗಿ ನಟಿಸಿದ್ದು ಪ್ರಮುಖ ಪಾತ್ರಧಾರಿಗಳಾಗಿ ಚಿಕ್ಕಣ್ಣ, ಸಾಧು ಕೋಕಿಲ ನಟಿಸಿದ್ದಾರೆ. ಅದರಲ್ಲೂ ಕನ್ನಡ ಚಿತ್ರರಂಗದ ಇಬ್ಬರು ದಿಗ್ಗಜರ ಹೆಸರುಗಳನ್ನು ಇಟ್ಟು ನಿರ್ಮಾಣವಾಗುತ್ತಿರುವ ಸಿನಿಮಾ ‘ರಾಜ್ ವಿಷ್ಣು’ ಸಿನಿಮಾದ ಟ್ರೇಲರ್ ಇದೀಗ ಯೂಟ್ಯೂಬಲ್ಲಿ

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಶುಭಾವಾಗುತ್ತೋ, ಅಶುಭಾವಾಗುತ್ತೋ ನೋಡಿ ತಿಳಿಯಿರಿ…

    ಇಂದು ಮಂಗಳವಾರದ, 13/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಸೋಮಾರಿತನದಿಂದಾಗಿ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆ. ಸಾಂಸಾರಿಕವಾಗಿ ಸುಖ,ಸಹಕಾರ. ಹಣಕಾಸಿನ ಸ್ಥಿತಿ ಉತ್ತಮ. ಪ್ರೀತಿಪಾತ್ರರ ಆಗಮನ. ಸಂಚಾರದ ಸಾಧ್ಯತೆ. ವೃಷಭ:- ಆರ್ಥಿಕವಾಗಿ ಧನಾಗಮನ.ಕೆಲಸ ಕಾರ್ಯಗಳಲ್ಲಿ ಮಂದಗತಿ. ವಾಹನ ಚಾಲನೆಯಲ್ಲಿ ಜಾಗ್ರತೆ ಇರಲಿ. ಆರೋಗ್ಯದಲ್ಲಿ ತೊಂದರೆ. ನೀವಾಡುವ ಮಾತು ಪರರಿಗೆ ನೋವುಂಟು ಮಾಡುವ ಸಾಧ್ಯತೆ ಇರುತ್ತದೆ, ಆದ್ದರಿಂದ ನೀವು ಆಡುವ ಮಾತಿನಲ್ಲಿ ಜಾಗ್ರತೆ ಇರಲಿ. ಮಿಥುನ:– ವ್ಯವಹಾರದಲ್ಲಿ ಹಾನಿಯ ಸಾಧ್ಯತೆ. ಸಾಂಸಾರಿಕ ಸಂಬಂಧಗಳ…

  • ಸುದ್ದಿ

    ಅನ್ನದಾತನಿಗೆ ಬಂಪರ್ ಆಫರ್!ಪ್ರತೀ ರೈತನ ಅಕೌಂಟ್’ಗೆ ಬೀಳಲಿದೆ 10,000.!ಏನಿದು ಯೋಜನೆ ಮುಂದೆ ಓದಿ…

    ಮುಖ್ಯಮಂತ್ರಿ ಸಿದ್ದರಾಮಯ್ಯನವರು 2018-19ನೇ ಸಾಲಿನ ಬಜೆಟ್ ಮಂಡಿಸಿದ್ದು,ಹಲವಾರು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ.ಇದರಲ್ಲಿ ರೈತರಿಗೂ ಹಲವಾರು ಯೋಜನೆಗಳನ್ನು ಪ್ರಕಟಿಸಿದ್ದು,ಕೃಷಿಗೆ ಹೆಚ್ಚು ಮಾನ್ಯತೆ ನೀಡಿದ್ದಾರೆ.

  • ದೇವರು-ಧರ್ಮ

    ಸಹಸ್ರ ದೇವತೆಗಳ ಅನುಗ್ರಹಕ್ಕಾಗಿ ಕಾರ್ತಿಕ ಹುಣ್ಣಿಮೆಯಂದು ಹೀಗೆ ಮಾಡಿ…!

    ಹಿಂದೂ ಪಂಚಾಂಗದ ಪ್ರಕಾರ ಕಾರ್ತಿಕ ಪೂರ್ಣಿಮೆಯು ಅತ್ಯಂತ ಶ್ರೇಷ್ಠವಾದ ದಿನ. ಧಾರ್ಮಿಕವಾಗಿ ಅತ್ಯಂತ ಪವಿತ್ರ ಹಾಗೂ ಶ್ರೇಷ್ಠತೆಯನ್ನು ಪಡೆದುಕೊಂಡ ಈ ದಿನ ಸಮಸ್ತ ದೇವತೆಗಳಿಗೂ ಪೂಜೆ ಹಾಗೂ ಪ್ರಾರ್ಥನೆಯನ್ನುಸಲ್ಲಿಸಬೇಕು. ಈ ದಿನ ಹರಿ-ಹರರ ಭಕ್ತರು ತಮ್ಮ ದೇವರಿಗಾಗಿ ವಿಶೇಷ ಉಪವಾಸ ವ್ರತಗಳನ್ನು ಕೈಗೊಂಡರೆ ಅವರು ಪ್ರಸನ್ನರಾಗುವರು. ಜೊತೆಗೆ ಭಕ್ತರ ಜೀವನೋದ್ಧಾರಕ್ಕೆ ಆಶೀರ್ವದಿಸುವರು ಎನ್ನಲಾಗುವುದು. ಕಾರ್ತಿಕ ಹುಣ್ಣಿಮೆಯನ್ನು ಈ ಬಾರಿ ನವೆಂಬರ್12 ರಂದು ಆಚರಿಸಲಾಗುತ್ತದೆ, ಇದನ್ನು ವಿಶೇಷವಾಗಿ ಶಿವನಿಗೆ ಮೀಸಲಾದ ದಿನ ಎಂದು ಹೇಳಲಾಗುವುದು. ಕೆಲವು ಪುರಾಣ ಕಥೆಗಳ…