ಸುದ್ದಿ

ಇದ್ದಿದ್ದು ಇದ್ದ ಹಾಗೆ ಹೇಳಿದ್ರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು- ಸಚಿವರಿಗೆ ತಿರುಗೇಟು ಹರ್ಷಿಕಾ ಪೂನಚ್ಚ….!

140

ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ಎಂಬುವುದು ನನ್ನ ಪರಿಸ್ಥತಿ. ನಾನು ಯಾರನ್ನು ದೋಷಿಸಿಲ್ಲ. ಕೊಡಗು ಸಂತ್ರಸ್ಥರಿಗೆ ಸರ್ಕಾರ ಚೆನ್ನಾಗಿರುವ ಮನೆ ನಿರ್ಮಿಸಿ ಕೊಡಲಿ ಎಂದು ಮನವಿ ಮಾಡಿದ್ದು ಎಂದು ಸಚಿವ ಸಾರಾ ಮಹೇಶ್‍ಗೆ ನಟಿ ಹರ್ಷಿಕಾ ಪೂಣಚ್ಚ ತಿರುಗೇಟು ನೀಡಿದ್ದಾರೆ.ವಿಡಿಯೋ ಮೂಲಕ ಶನಿವಾರ ತಾವು ಕೊಡಗು ಸಂಸ್ರಸ್ಥರ ಬಗ್ಗೆ ನೀಡಿದ ಹೇಳಿಕೆಗೆ ಹರ್ಷಿಕಾ ಪೂಣಚ್ಚ ಸ್ಪಷ್ಟನೆ ನೀಡಿದ್ದಾರೆ. ವಿಡಿಯೋದಲ್ಲಿ ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ನನ್ನ ಪರಿಸ್ಥತಿ. ಮೈಸೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಾನು ಹೇಳಿದ್ದು, ಕೆಲವು ಮಾಡೆಲ್ ಮನೆಗಳ ಫೋಟೋ ನೋಡದೆ. ಅದು ನನಗೆ ಇಷ್ಟವಾಗಿಲ್ಲ. ಯಾಕೆಂದರೆ ಆ ಮನೆಗಳು ಶೀಟ್ ಮನೆ ತರಹ,

ಗಾಳಿ ಬೆಳಕಿಲ್ಲದಂತೆ ಕೆಟ್ಟದಾಗಿ ಇತ್ತು. ಹೀಗಾಗಿ ರಾಜ್ಯ ಸರ್ಕಾರ ಕೊಡಗು ಸಂತ್ರಸ್ಥರಿಗೆ ಮನೆ ಕಟ್ಟಿಕೊಡುವಾಗ ಚೆನ್ನಾಗಿರುವ ಮನೆ ಕಟ್ಟಿಕೊಡಿ. ಕೊಡಗಿನ ಸಂತ್ರಸ್ಥರ ಸ್ವಾಭಿಮಾನಕ್ಕೆ ದಕ್ಕೆ ಬರದಂತೆ ಒಳ್ಳೆಯ ಮನೆಗಳನ್ನ ಕಟ್ಟಿಕೊಡಿ ಎಂದು ನಾನು ಮನವಿ ಮಾಡಿದ್ದೇನೆ ಅಷ್ಟೆ. ನಾನು ಈ ವಿಷಯಕ್ಕೆ ಯಾರನ್ನೂ ದೂರಿಲ್ಲ ಎಂದು ಸ್ಪಷ್ಟಪಡಿಸಿದರು.ಈ ಬಗ್ಗೆ ಮಾತನಾಡಲು ಅವರು ಯಾರು? ಏನು ಓದಿದ್ದಾರೆ? ಎಂದು ಕೇಳಿದ್ದಾರೆ. ನಾನು ಇಂಜಿನಿಯರ್ ಬಿ.ಇ ಪದವಿ ಪಡೆದಿದ್ದೇನೆ. ನಾನು ಕೊಡಗಿನ ಮಗಳು, ಭಾರತದ ಪ್ರಜೆ ನನಗೆ ಈ ಬಗ್ಗೆ ಕೇಳುವ ಎಲ್ಲಾ ಹಕ್ಕಿದೆ. ನಮ್ಮ ದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಅವರು ಕೂಡ ಸಿನಿಮಾದವರು. ತಮಿಳುನಾಡಿನ ಸಾಕಷ್ಟು ಮಂತ್ರಿಗಳು ಸಿನಿಮಾದವರು.

ಅಷ್ಟೇ ಅಲ್ಲದೆ ಸಿನಿಮಾದವರು ಏನು ಮಾಡಬಹುದು ಅನ್ನೋದು ಇತ್ತೀಚಿಗೆ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಗೊತ್ತಾಗಿದೆ. ದಯವಿಟ್ಟು ಸಿನಿಮಾದವರ ಬಗ್ಗೆ ಹಗುರವಾಗಿ ಮಾತನಾಡಬೇಡಿ ಎಂದು ಸಚಿವ ಸಾರಾ ಮಹೇಶ್ ಅವರಿಗೆ ಮಾತಿನ ಚಾಟಿ ಬೀಸಿದ್ದಾರೆ.ಹಾಗೆಯೇ ಕೊಡಗಿನಲ್ಲಿ ತುರ್ತು ಚಿಕಿತ್ಸಾ ಆಸ್ಪತ್ರೆ ಮಾಡಿ ಎನ್ನುವುದು ನಮ್ಮ ಮನವಿ. ಕೊಡಗಿನಲ್ಲಿ 7 ಲಕ್ಷಕ್ಕೂ ಅಧಿಕ ಮಂದಿ ವಾಸಿಸುತ್ತಿದ್ದಾರೆ. ಅಲ್ಲದೆ 35 ಲಕ್ಷಕ್ಕೂ ಅಧಿಕ ಮಂದಿ ಪ್ರವಾಸಿಗರು ಪ್ರತಿ ವರ್ಷ ಕೊಡಗಿಗೆ ಪ್ರವಾಸಕ್ಕೆ ಬರುತ್ತಾರೆ. ಇಷ್ಟೆಲ್ಲಾ ಜನಸಂಖ್ಯೆ ಇರುವ ಜಿಲ್ಲೆಯಲ್ಲಿ ಒಂದು ತುರ್ತು ಚಿಕಿತ್ಸಾ ಆಸ್ಪತ್ರೆ ಇಲ್ಲವೆಂದರೆ ಅದಕ್ಕಿಂತ ಬೇಸರದ ಸಂಗತಿ ಮತ್ತೊಂದಿಲ್ಲ. ಹೀಗಾಗಿ ಕೊಡಗಿಗೆ ತುರ್ತು ಚಿಕಿತ್ಸಾ ಆಸ್ಪತ್ರೆ ಬೇಕು ಎಂದು ನಾವು ಅಭಿಯಾನ ಮಾಡುತ್ತಿದ್ದೇವೆ. ಅದಕ್ಕೆ ನಿಮ್ಮ ಸಹಕಾರ ಬೇಕು.

ಆಸ್ಪತ್ರೆ ನಿರ್ಮಾಣ ಮಾಡಿ ಎಂದು ಮನವಿ ಮಾಡುತ್ತಿದ್ದೇವೆ. ಅಲ್ಲದೆ ಮಳೆಗಾಲ ಆರಂಭವಾಗುವ ಮುನ್ನ ಕೊಡಗು ಜನರಿಗೆ ಮನೆ ನಿರ್ಮಿಸಿಕೊಡಿ, ಮಳೆ ಆರಂಭವಾದರೆ ಅವರಿಗೆ ಬೇರೆ ಕಡೆ ಶಿಫ್ಟ್ ಆಗಲು ಕಷ್ಟವಾಗುತ್ತೆ ಎಂದು ಮನವಿ ಮಾಡಿಕೊಂಡರು.
ಸಾರಾ ಮಹೇಶ್ ಹೇಳಿದ್ದೇನು?
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾ.ರಾ ಮಹೇಶ್, ಯಾರವರು? ಹರ್ಷಿಕಾ ಪೂಣಚ್ಚ ಏನಾಗಿದ್ದಾರೆ?. ಅವರೇನು ಸಿನಿಮಾ ನಟಿನಾ? ಸಿನಿಮಾ ನಟಿ ಆದರೆ ಅವರು ಸಿನಿಮಾ ಬಗ್ಗೆ ಮಾತ್ರ ಮಾತನಾಡಬೇಕು. ಅದನ್ನು ಬಿಟ್ಟು ಕೊಡಗು ಸಂತ್ರಸ್ತರ ಮನೆಗಳ ಬಗ್ಗೆ ಹರ್ಷಿಕಾ ಪೂಣಚ್ಚ ಅವರಿಗೆ ಏನು ಗೊತ್ತು? ಅವರ ವಿದ್ಯಾಭ್ಯಾಸ ಹಿನ್ನೆಲೆ ಏನು?. ವಾಸ್ತವ ಅರ್ಥ ಮಾಡಿಕೊಳ್ಳದೆ ತಜ್ಞರಂತೆ ಮಾತನಾಡಬಾರದು ಎಂದು ಪೂಣಚ್ಚ ವಿರುದ್ಧ ಸಚಿವರು ಕಿಡಿಕಾರಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ರಸ್ತೆಗಳ ಮೇಲೆ ಹಾಕಿರುವ ಹಳದಿ ಮತ್ತು ಬಿಳಿ ಪಟ್ಟಿಗಳ ಬಗ್ಗೆ ನಿಮಗೆಷ್ಟು ಗೊತ್ತು..?ತಿಳಿಯಲು ಈ ಲೇಖನ ಓದಿ…

    ಹೆದ್ದಾರಿಗಳ ಮೇಲೆ ಬಿಳಿ, ಹಳದಿ ಬಣ್ಣಗಳಲ್ಲಿ ಹಾಕುವ ಹಲವು ವಿಧದ ಪಟ್ಟೆಗಳನ್ನು ಸಹ ಎಲ್ಲರೂ ನೋಡಿಕೊಂಡು ಹೋಗಬೇಕು. ಇಷ್ಟಕ್ಕೂ ಆ ಪಟ್ಟೆಗಳನ್ನು ಯಾಕೆ ಹಾಕುತ್ತಾರೆ? ಅವುಗಳ ಉಪಯೋಗವೇನು ಎಂದು ಈಗ ತಿಳಿದುಕೊಳ್ಳೋಣ.

  • ಜ್ಯೋತಿಷ್ಯ

    ರಾಘವೇಂದ್ರ ಸ್ವಾಮಿಯ ಕೃಪೆಯಿಂದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಮಾರ್ಚ್, 2019) ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ನಿಮ್ಮ ಮನೆಯ ಕರ್ತವ್ಯಗಳನ್ನು ನೀವು…

  • ಸುದ್ದಿ

    ಟಿಕ್‌ಟಾಕ್‌ಗೆ ಮತ್ತೊಂದು ಬಲಿ : ಕೋಲಾರದಲ್ಲಿ ಕೃಷಿ ಹೊಂಡದ ಬಳಿ ವಿಡಿಯೋ ಮಾಡಲು ಹೋಗಿ ವಿದ್ಯಾರ್ಥಿನಿ ಸಾವು…!

    ಟಿಕ್ ಟಾಕ್ ಹಾವಳಿ ಎಲ್ಲೇ ಮೀರುತ್ತಿದೆ. ಈ ಆ್ಯಪ್​​ ನಿಷೇಧವಾಗಬೇಕೆಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಟಿಕ್​ಟಾಕ್​ ಆ್ಯಪ್​ನಿಂದ ಜೀವ ಕಳೆದುಕೊಳ್ಳುತ್ತಿರುವವ ಸಂಖ್ಯೆಯೂ ಹೆಚ್ಚುತ್ತಿದೆ. ತುಮಕೂರಿನಲ್ಲಿ ಯುವಕನೊರ್ವ ಪ್ರಾಣ ಕಳೆದುಕೊಂಡ ಬೆನ್ನಲ್ಲೇ, ಇದೀಗ ಕೋಲಾರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಟಿಕ್​ಟಾಕ್​ ಕ್ರೇಜ್​​ಗೆ ಬಲಿಯಾಗಿದ್ದಾಳೆ. ಮಾಲಾಗೆ ವಿಪರೀತ ಟಿಕ್​ಟಾಕ್​ ಗೀಳು ಅಂಟಿಕೊಂಡಿತ್ತು. ಹೀಗಾಗಿ ಕೂತಲ್ಲಿ ನಿಂತಲ್ಲಿ ಟಿಕ್​ಟಾಕ್​ ಚಿತ್ರೀಕರಿಸುತ್ತಿದ್ದಳು. ಇದೇ ರೀತಿ ಅಪಾಯಕಾರಿ ಕೃಷಿ ಹೊಂಡದ ಬಳಿ ಟಿಕ್​ಟಾಕ್​ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾಳೆ. ಕೋಲಾರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಮಾಲಾ…

  • ಸುದ್ದಿ

    ಪತ್ನಿಗೆ ಬೆಂಕಿ ಹಚ್ಚಿ ತಾನೂ ವಿಷ ಸೇವಿಸಿದ 70 ವಯಸ್ಸಿನ ವೃದ್ಧ..!

    ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ…

  • ಸುದ್ದಿ

    ಫ್ಲೈಯಿಂಗ್ ಕಿಸ್ ಕೊಟ್ಟ ವ್ಯಕ್ತಿಗೆ 3 ವರ್ಷ ಜೈಲು, 3 ಸಾವಿರ ದಂಡ ವಿಧಿಸಿದ ಕೋರ್ಟ್ ….!

    ಪಕ್ಕದ ಮನೆ ಮಹಿಳೆಗೆ ಫ್ಲೈಯಿಂಗ್ ಕಿಸ್ ನೀಡಿದ ವ್ಯಕ್ತಿಗೆ  ಮೂರು ವರ್ಷ ಜೈಲು ಹಾಗೂ 3 ಸಾವಿರ ರೂ. ದಂಡ ವಿಧಿಸಲಾಗಿದೆ.ವಿನೋದ್ ಜೈಲು ಸೇರಿದ ವ್ಯಕ್ತಿ. ವಿನೋದ್ ತನ್ನ ಪಕ್ಕದ ಮನೆ ಮಹಿಳೆಯನ್ನು ನೋಡಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನು. ಅಲ್ಲದೆ ಸನ್ನೆ ಮಾಡುವ ಮೂಲಕ ಅನುಚಿತವಾಗಿ ವರ್ತಿಸುತ್ತಿದ್ದನು. ಇದರಿಂದ ಬೇಸತ್ತ ಮಹಿಳೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಹಿಳೆ ತನ್ನ ಪತಿಯ ಜೊತೆ ವಾಸಿಸುತ್ತಿದ್ದರು. ಅಲ್ಲದೆ ಈ ವಿಷಯವನ್ನು ಪತಿಗೆ ಹೇಳಿದ್ದಾರೆ. ಬಳಿಕ ಇಬ್ಬರು…

  • ವೀಡಿಯೊ ಗ್ಯಾಲರಿ

    ಕೇವಲ 3 ನಿಮಿಷದ ಈ ವಿಡಿಯೋ ಆಸ್ಕರ್ ಗೆದ್ದಿದೆ.!ನಾವು ಮಾಡುವ ಒಂದು ಚಿಕ್ಕ ಸಹಾಯ ನಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರುತ್ತೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ.!ನೋಡಿ ಹೆಚ್ಚೆಚ್ಚು ಶೇರ್ ಮಾಡಿ…

    ಕೇವಲ ಮೂರೂ ನಿಮಿಷದ ಈ ಅನಿಮೇಟೆಡ್ ವಿಡಿಯೋ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.ನಾವು ಮಾಡುವ ಒಂದು ಚಿಕ್ಕ ಸಹಾಯ ನಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರುತ್ತೆ ಎಂಬುದಕ್ಕೆ ಈ ವಿಡಿಯೋನೆ ಸಾಕ್ಷಿ. ಪ್ಯಾಶನ್’ಸ್ ಕೆಯ್ರ & ಕಾನ್ಸ್ಟಂಟೈನ್ ಅನ್ನುವವರು ಈ ಅದ್ಭುತವಾದ ವಿಡಿಯೋ ನಿರ್ದೇಶನ ಮಾಡಿದ್ದಾರೆ. ತಪ್ಪದೆ ಕೊನೆಯವರೆಗೂ ನೋಡಿ… ಒಂದು ಒಳ್ಳೆ ಮೆಸೇಜ್ ಹೊಂದಿರೋ ಈ ವಿಡಿಯೋವನ್ನು ನೋಡಿ ಮತ್ತು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…