ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನ ಅ.17ರಿಂದಆರಂಭವಾಗಲಿದ್ದು, ಅ.28ರ ವರೆಗೂ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಗುರುವಾರದಿಂದ ಹಾಸನಾಂಬ ಜಾತ್ರಾ ಮಹೋತ್ಸವ ಪ್ರಾರಂಭವಾಗಲಿದ್ದು, ಒಟ್ಟು 13 ದಿನ ನಡೆಯಲಿದೆ.
ಅಶ್ವೀಜಮಾಸದ ಮೊದಲ ಗುರುವಾರ ಮಧ್ಯಾಹ್ನ12.30ಕ್ಕೆ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ದೇವಿಯ ದರ್ಶನಕ್ಕಾಗಿ ಭಕ್ತ ಸಾಗರಹರಿದು ಬರಲಿದೆ. ವರ್ಷಕ್ಕೊಮ್ಮೆ ಮಾತ್ರ ಹಾಸನಾಂಬೆ ದೇವಿ ದರ್ಶನ ಭಾಗ್ಯ ಕರುಣಿಸುತ್ತಾಳೆ. ಹೀಗಾಗಿ ಪ್ರತಿ ವರ್ಷ ಸಾವಿರಾರು ಭಕ್ತರು ದೇವಿಯ ದರ್ಶನವನ್ನುಪಡೆಯಲು ಆಗಮಿಸುತ್ತಾರೆ.
ದೇವಿಯ ಗರ್ಭಗುಡಿಯಲ್ಲಿ ಹುತ್ತದ ಮಾದರಿಯಲ್ಲಿರುವ ಮೂರು ಗದ್ದುಗೆಗಳಿದ್ದು, ಸಪ್ತ ಮಾತೃಕೆಯರ ಪೈಕಿ ವೈಷ್ಣವಿ, ಮಹೇಶ್ವರಿ, ಕೌಮಾರಿಯರೇ ಆ ಮೂರು ಹುತ್ತದ ರೂಪಗಳು ಎಂಬ ನಂಬಿಕೆಯಿದೆ. ಗದ್ದಿಗೆಗಳರೂಪದ ದೇವಿಯ ದರ್ಶನ ವರ್ಷಕ್ಕೊಮ್ಮೆ ಮಾತ್ರ. ಹೀಗಾಗಿ, ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನದ ಭಾಗ್ಯವಿರುವ ದೇವಿಯದರ್ಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ.
ಪ್ರತಿದಿನ ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 1.30 ಹಾಗೂ ಮಧ್ಯಾಹ್ನ 3.30 ರಿಂದದಿನ ಮುಕ್ತಾಯದವರೆಗೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ವಿಶೇಷ ದರ್ಶನಕ್ಕಾಗಿ 300 ಹಾಗೂ 1000 ರೂ. ಗಳ ಟಿಕೆಟ್ ದರವನ್ನು ನಿಗದಿಪಡಿಸಲಾಗಿದೆ. ದೇವಾಲಯದ ಒಳಗೆ ಹಾಗೂ ಸುತ್ತಮುತ್ತಸಿಸಿ ಟಿವಿ ಕಣ್ಗಾವಲು ಇರಿಸಲಾಗಿದೆ.ದೇವಿಯ ಸುಗಮ ದರ್ಶನಕ್ಕೆ ಬಿಗಿಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.