ಸುದ್ದಿ, ಸ್ಪೂರ್ತಿ

42 ನಿಮಿಷಗಳಲ್ಲಿ 80 ಕಿಮೀ ಚಲಿಸಿ. ಅವಳಿ ಮಕ್ಕಳ ಜೀವ ಉಳಿಸಿದ ಅಂಬ್ಯುಲೆನ್ಸ್ ಸಿಬ್ಬಂದಿ.

41

ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ.

ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ.

ಹುಬ್ಬಳ್ಳಿಯ ಹೊರವಲಯಕ್ಕೆ ಅಂಬ್ಯುಲೆನ್ಸ್ ಬರುತ್ತಿದ್ದಂತೆ ಹುಬ್ಬಳ್ಳಿ ಸಂಚಾರಿ ಪೊಲೀಸರು ಅಂಬ್ಯುಲೆನ್ಸಗೆ ಯಾವುದೇ ಟ್ರಾಫಿಕ್ ಸಮಸ್ಯೆ ಬರದಂತೆ ಕಿಮ್ಸ್ ವರೆಗೆ ದಾರಿ ಮಾಡಿಕೊಟ್ಟಿದ್ದಾರೆ. ಈ ಮೂಲಕ ಟ್ರಾಫಿಕ್ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಅಂಬ್ಯುಲೆನ್ಸ್ ಸಿಬ್ಬಂದಿ ತೌಫಿಕ್ ಪಠಾಣ್ ಮತ್ತು ಕುಮಾರ್ ಹಾಗೂ ಹುಬ್ಬಳ್ಳಿ ಟ್ರಾಫಿಕ್ ಪೊಲೀಸರ ಈ ಕಾರ್ಯ ಜನರ ಮೆಚ್ಚುಗೆಗೆ ಪಾತ್ರವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಂಬಂಧ

    ರಕ್ಷಾಬಂಧನಕ್ಕೂ ಭಗವಾನ್ ಶ್ರೀ ಕೃಷ್ಣನ ಈ ಕತೆಗೂ ಇರುವ ಸಂಬಂದ ಏನ್ ಗೊತ್ತಾ…..

    ನಮ್ಮ ಭಾರತವು ಹಲುವು ಧರ್ಮ, ಜಾತಿಗಲಿರುವ ಒಂದು ರಾಷ್ಟ್ರ. ಇಲ್ಲಿ ಹಲವು ಹಬ್ಬಗಳನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಅದೇ ರೀತಿ ರಕ್ಷಾಬಂಧನ ಹಬ್ಬವನ್ನು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುತ್ತಾರೆ. ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ವಿಶ್ವಾಸದ ಹಬ್ಬವಾಗಿದೆ. ಹಿರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ.

  • ಸುದ್ದಿ

    ನಮಗೆ ಶಂಕ್ರಣ್ಣನ ಬಗ್ಗೆ ಗೊತ್ತಿರದ ಕುತೂಹಲಕಾರಿ ವಿಚಾರವೊಂದನ್ನು ಅಂಚಿಕೊಂಡ ಜೈ ಜಗದೀಶ್…​!

    ಬಿಗ್​ಬಾಸ್​ ರಿಯಾಟಲಿ ಶೋ ದಿನದಿಂದ ದಿನಕ್ಕೆ ತನ್ನ ಕುತೂಹಲವನ್ನು ದ್ವಿಗುಣಗೊಳಿಸುತ್ತಿದೆ. ಚಿತ್ರರಂಗದಲ್ಲಿ ಘಟಿಸಿಹೋದಂತಹ ಹಲವು ಘಟನೆಗಳು ಬಿಗ್​ಬಾಸ್​ನಲ್ಲಿ ಅನಾವರಣಗೊಳ್ಳುತ್ತಿದೆ. ಮೊನ್ನೆ ಶಂಕರ್​ನಾಗ್​ ಹಾಗೂ ಮಂಜುಳಾ ಬಗ್ಗೆ ರವಿಬೆಳಗೆರೆ ಅವರು ಮಾತನಾಡಿದ್ದರು. ಇದೀಗ ಹಿರಿಯ ನಟ ಜೈ ಜಗದೀಶ್ ಶಂಕರ್​ನಾಗ್​ ಬಗ್ಗೆ ಕುತೂಹಲಕಾರಿ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ. ನಿನ್ನೆ ನಡೆದ ಸಂಚಿಕೆಯಲ್ಲಿ ಜೈ ಜಗದೀಶ್​ ಇತರೆ ಸ್ಪರ್ಧಿಗಳ ಜತೆ ಮಾತನಾಡುವಾಗ ಒಂದು ಪ್ರಶ್ನೆಯನ್ನು ಮುಂದಿಟ್ಟರು. ಒಬ್ಬ ಫೇಮಸ್​ ನಟ ತನ್ನ ಮಾರ್ಕೆಟ್​ ಬಿದ್ದಾಗ ವ್ಯಾನ್​ ಒಳಗೆ ಕ್ಯಾಂಟೀನ್​ ಇಟ್ಟುಕೊಂಡು ಓಡಾಡುತ್ತಿದ್ದರು….

  • ವಿಸ್ಮಯ ಜಗತ್ತು

    30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿರುವ ಮಹಿಳೆ..!

    ಚಳಿಗಾಲದಲ್ಲಿ ಒಂದು ಕಪ್ ಬಿಸಿ ಬಿಸಿ ಟೀ ಕುಡಿಯುವುದಕ್ಕಿಂತ ಯಾವುದು ಹೆಚ್ಚು ಸುಖ ಕೊಡುವುದಿಲ್ಲ, ಆದರೆ ಕೇವಲ ಟೀ ಕುಡಿದೇ ಬದುಕಿರಲು ಸಾಧ್ಯವೇ?ಬೆಳಗ್ಗೆ, ಸಂಜೆ ಟೀ ಕುಡಿಯೋರನ್ನ ನೋಡಿರ್ತೀರಿ ಆದರೆ ಛತ್ತೀಸ್‍ಗಢದಲ್ಲಿ ಮಹಿಳೆಯೊಬ್ಬರು 30 ವರ್ಷದಿಂದ ಕೇವಲ ಟೀ ಕುಡಿದೇ ಬದುಕುತ್ತಿದ್ದಾರೆ. ಹೌದು, ಈ ವಿಷಯ ನೋಡಿದರೇ ಬರೀ ಟೀ ಕುಡಿದು ಬದುಕಿದ್ದಾರಾ ಅಂತ ಆಶ್ಚರ್ಯ ಆಗೋದು ಸಹಜ. ಹೌದು, ಛತ್ತೀಸ್ ಗಡದ ಕೊರಿಯಾ ಜಿಲ್ಲೆಯ ಮಹಿಳೆಯೊಬ್ಬರು ಕಳೆದ 30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿದ್ದಾರೆ,…

  • ಸರ್ಕಾರಿ ಯೋಜನೆಗಳು

    ಶಾಲೆಗೆ ಹೋಗ್ತಿರುವ ವಿದ್ಯಾರ್ಥಿಗಳಿಗೆ ಒಂದು ಸಿಹಿ ಸುದ್ದಿ..!ತಿಳಿಯಲು ಈ ಲೇಖನ ಓದಿ..

    ಮಕ್ಕಳು 18 ವರ್ಷಕ್ಕಿಂತ ಚಿಕ್ಕವರಿದ್ದರೆ, ಸರ್ಕಾರಿ ಅಥವಾ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಾರೆಂದಾದ್ರೆ ಇಲ್ಲೊಂದು ಸುವರ್ಣಾವಕಾಶವಿದೆ. ಮಕ್ಕಳಿಗೆ 1 ಲಕ್ಷದಿಂದ 10 ಸಾವಿರದವರೆಗೆ ಹಣ ಗೆಲ್ಲುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡ್ತಿದೆ.

  • ಆಟೋಮೊಬೈಲ್ಸ್

    ಈ ಸ್ಕೂಟರ್ 125 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ..! ತಿಳಿಯಲು ಈ ಲೇಖನ ಓದಿ..

    ಯುಜೆಟ್ ಎಂಬ ಹೆಸರಿನ ಫೋಲ್ಡ್ ಮಾಡಬಹುದಾದ ಒಂದು ಅನನ್ಯ ಸ್ಕೂಟರನ್ನು ತರಲು ಸಿದ್ಧವಾಗಿದೆ. ಬ್ಯಾಟರಿ ಚಾಲಿತವಾದ ಈ ಸ್ಕೂಟರ್ ಪೂರ್ಣ ಚಾರ್ಜ್ ಮಾಡಿದ ನಂತರ 125 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ ಎಂದು ಕಂಪನಿ ಹೇಳಿದೆ. 2018 ರಲ್ಲಿ ಲಾಸ್ ವೇಗಾಸ್ನಲ್ಲಿ ಓಡುವ ಸ್ಕೂಟರ್ ಕನ್ಸ್ಯೂಮರ್ ಎಲೆಕ್ಟ್ರಾನಿಕ್ ಶೋ (ಸಿಇಎಸ್) ಅನ್ನು ಯುಜೆಟ್ ಕಂಪನಿಯು ಪ್ರಾರಂಭಿಸಿದೆ.

  • ದೇಶ-ವಿದೇಶ

    ಹೇಡಿ ನೀಚ ಉಗ್ರರಿಂದ ಅಮರನಾಥ ಯಾತ್ರಾ, ಶಿವ ಭಕ್ತರ ಮೇಲೆ ದಾಳಿ…

    ಹಿಂದೂಗಳ ಪವಿತ್ರ ಯಾತ್ರೆಗಳಲ್ಲಿ ಒಂದೆನಿಸಿರುವ ಅಮರನಾಥ ಯಾತ್ರೆಗೆ ತೆರಳಿದ್ದ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ನಿರಂತರ ದಾಳಿಯಿಂದ ನಲುಗಿರೋ ಕಣಿವೆ ರಾಜ್ಯ ಜಮ್ಮುಕಾಶ್ಮೀರದಲ್ಲಿ ರಾತ್ರಿ ಉಗ್ರರು ನಡೆಸಿದ ಬೀಭತ್ಸ ಕೃತ್ಯಕ್ಕೆ 7 ಮಂದಿ ಅಮರನಾಥ ಯಾತ್ರಿಗಳು ಬಲಿಯಾಗಿದ್ದಾರೆ.