ಸುದ್ದಿ

ರೈಲಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ಸಿಎಂ ಪಯಣ…….!

43

ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್‍ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ.

ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ ಬೆಳೆಸಲಿದ್ದಾರೆ. ಜೂನ್ 21 ರಿಂದ ಹಳ್ಳಿ ಜನರ ಕಷ್ಟ ಕೇಳುವ ಗ್ರಾಮ ವಾಸ್ತವ್ಯಕ್ಕೆ ಚಾಲನೆ ನೀಡಲಿದ್ದಾರೆ. ಇಷ್ಟು ದಿನ ಬೇರೆ ಬೇರೆ ಗೊಂದಲಗಳಲ್ಲಿ ಸಿಲುಕಿದ್ದ ಸಿಎಂ, ಈಗ ಜನರ ಬಳಿಗೆ ಸಿಂಪಲ್ಲಾಗೆ ಹೋಗಲು ಮುಂದಾಗಿದ್ದು, ತಾವು ಬದಲಾಗಿದ್ದೇವೆ ಎಂದು ತೋರಿಸುತ್ತಿದ್ದಾರಾ ಅನ್ನೋ ಚರ್ಚೆ ಆರಂಭವಾಗಿದೆ.

ಮಂಗಳವಾರ ಇಡೀ ದಿನ ಲೋಕೋಪಯೋಗಿ ಇಲಾಖೆ ಮತ್ತು ಜಲಸಂಪನ್ಮೂಲ ಇಲಾಖೆ ಸಭೆ ನಡೆಸಿದ್ದ ಸಿಎಂ ಇಂದು ಜಿಲ್ಲಾಧಿಕಾರಿಗಳು, ಪ್ರಾದೇಶಿಕ ಆಯುಕ್ತರು, ಸಿಇಓಗಳ ಸಭೆ ನಡೆಸಲಿದ್ದಾರೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯಲಿದ್ದು, ಇಡೀ ದಿನ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ರೈತರ ಸಾಲಮನ್ನಾ, ಬರ ನಿರ್ವಹಣೆ ಕುರಿತು ಅಧಿಕಾರಿಗಳ ಜೊತೆ ಸಿಎಂ ಸಭೆ ನಡೆಸಲಿದ್ದಾರೆ. ಪ್ರತಿ ಜಿಲ್ಲಾವಾರು ಸಭೆ ನಡೆಸಲಿರುವ ಸಿಎಂ, ಜಿಲ್ಲೆಗಳಿಗೆ ಸಂಬಂಧಿಸಿದ ಎಲ್ಲಾ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ, ಸ್ಪೂರ್ತಿ

    ವಿದೇಶಿ ಉದ್ಯೋಗವನ್ನ ಬಿಟ್ಟು ಬಂದು, ಈ ಒಂದು ಪ್ಲಾನ್ ನಿಂದ ಲಕ್ಷಾಧಿಪತಿಯಾದ ರೈತ, ಆ ಪ್ಲಾನ್ ಏನು ಗೊತ್ತಾ.

    ಮನುಷ್ಯ ಇಷ್ಟು ಅಭಿವೃದ್ಧಿ ಹೊಂದಿ ಈ ಹಂತಕ್ಕೆ ಬಂದಿದ್ದಾನೆ ಅಂದರೆ ಅದಕ್ಕೆ ಕಾರಣ ಆತನ ಸೂಕ್ಷ್ಮವಾದ ಬುದ್ದಿ ಮತ್ತು ಆತನ ಸೂಕ್ಷ್ಮ ಅವಲೋಕನೆ ಆಗಿದೆ. ಜೀವನದಲ್ಲಿ ಕೆಲವೊಮ್ಮೆ ನಾವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ನಮ್ಮನ್ನ ಬಹಳ ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಅಥವಾ ನಮ್ಮನ್ನ ಪಾತಾಳಕ್ಕೆ ತಳ್ಳಬಹುದು, ಆದರೆ ಕೆಲವೊಮ್ಮೆ ನಾವು ಮಾಡುವ ಚಿಕ್ಕ ಯೋಚನೆಗಳು ನಮ್ಮ ಜೀವನವನ್ನ ಬದಲಾವಣೆ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ನಾವು ಹೇಳುವ ಈ ವ್ಯಕ್ತಿ 4 ಲಕ್ಷ ಸಂಬಳದ ಉದ್ಯೋಗವನ್ನ ಬಿಟ್ಟು…

  • ಸುದ್ದಿ

    ಸುಶಾಂತ್ ಅಂತ್ಯಕ್ರಿಯೆ ನಡೆಯುತ್ತಿದ್ದ ವೇಳೆ, ಅವರ ಕುಟುಂಬದಲ್ಲಿ ಮತ್ತೊಂದು ದೊಡ್ಡ ಆಘಾತ.

    ಬಾಲಿವುಡ್ ನಟ ಶುಶಾಂತ್ ಸಿಂಗ್ ರಜಪೂತ್ ನಿಧನ ನಂತರ ಅವರ ಕುಟುಂಬದಲ್ಲಿ ಮತ್ತೊಂದು ಸಾವಿನ ಸುದ್ದಿ ಕೇಳಿ ಬಂದಿದೆ ಹೌದು ಸುಶಾಂತ್ ಸಿಂಗ್ ಸಾವಿನ ಸುದ್ದಿ ಕೇಳಿ ಅವರ ಅತ್ತಿಗೆ ಆಘಾತಕ್ಕೆ ಒಳಗಾಗಿದ್ದರು ಈಗ ಅವರು ಕೂಡ ನಿಧನರಾಗಿದ್ದಾರೆ. ಮುಂಬೈ ನಲ್ಲಿ ಶುಶಾಂತ್ ಅಂತ್ಯಕ್ರಿಯೆ ನಡೆಯುವ ವೇಳೆ. ಇತ್ತ ಬಿಹಾರದ ಪೂರ್ಣಿಯಾದಲ್ಲಿ ಸುಶಾಂತ್ ಅವರ ಅತ್ತಿಗೆ ಸುಧಾ ಅವರು ನಿಧನರಾಗಿದ್ದಾರೆ. ಶುಶಾಂತ್ ಚಿಕ್ಕಪ್ಪನ ಮಗನ ಪತ್ನಿ ನಿಧನ ಹೊಂದಿರುವುದು ಈ ಕುಟುಂಬಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಸುಶಾಂತ್…

  • ಕ್ರೀಡೆ

    ರಾತ್ರೋ ರಾತ್ರಿ ಇಂಟರ್ ನೆಟ್ ಸ್ಟಾರ್ ಆದ RCB ಗರ್ಲ್..!

    ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡವನ್ನು ಬೆಂಬಲಿಸಿದ್ದ ಅಭಿಮಾನಿಯೊಬ್ಬರು ಒಂದೇ ದಿನದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಾರೆ. ಶನಿವಾರ ನಡೆದ ಪಂದ್ಯದಲ್ಲಿ ದೀಪಿಕಾ ಘೋಷ್ ಎಂಬವರು ಬೆಂಗಳೂರು ತಂಡವನ್ನು ಧ್ವಜ ಹಿಡಿದು ಬೆಂಬಲಿಸುತ್ತಿದ್ದರು. ಇವರು ಧ್ವಜ ಹಿಡಿದು ಬೆಂಬಲಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದೇ ತಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್‍ಸ್ಟಾಗ್ರಾಮ್‍ನಲ್ಲಿ 6 ಸಾವಿರ ಮಂದಿ ಫಾಲೋ ಮಾಡುತ್ತಿದ್ದರೆ ದಿನ ಬೆಳಗಾಗುವುದರ ಒಳಗಡೆ ಒಂದು ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡಿದ್ದಾರೆ. ದೀಪಿಕಾ ತಮ್ಮ…

  • ಸುದ್ದಿ

    884 ವರ್ಷಗಳಿಂದ ರಾಮಾನುಜಾಚಾರ್ಯರ ಮೂಲ ಶರೀರವನ್ನು ಯಾವುದೇ ರಾಸಾಯನಿಕಗಳ ಪ್ರಯೋಗವಿಲ್ಲದೆ ಸಂರಕ್ಷಿಸಿ ಇಡಲಾಗಿದೆ…!

    ನಂಬಲೇಬೇಕಾದ ಆದರೆ ನಂಬಲು ಸಾಧ್ಯವೇ ಇಲ್ಲದ ಸತ್ಯವಿದು. ವೈಷ್ಣವ ಪರಂಪರೆಯ ದಾರ್ಶನಿಕರಲ್ಲಿ ಒಬ್ಬರಾದ ವಿಶಿಷ್ಟಾದ್ವೈತ ಪ್ರತಿಪಾದಕ, ಸನಾತನ ಧರ್ಮ ರಕ್ಷಕ ಭಗವಾನ್ ರಾಮಾನುಜಾಚಾರ್ಯರ ಮೂಲ ಶರೀರವನ್ನು ಕಳೆದ 884 ವರ್ಷಗಳಿಂದ ಜೋಪಾನವಾಗಿಡಲಾಗಿದೆ!! ತಮ್ಮ ಆರಾಧ್ಯ ರಾಮಾನುಜಾಚಾರ್ಯರ ಶರೀರವನ್ನು ಇನ್ನೂ ಸುಸ್ಥಿತಿಯಲ್ಲೇ ಇಡಲಾಗಿದೆ ಎನ್ನುವ ವಿಚಾರವೇ ಹೆಚ್ಚಿನ ವೈಷ್ಣವರಿಗೆ ಗೊತ್ತಿಲ್ಲ. ತಿರುಚರಾಪಳ್ಳಿಯ ಶ್ರೀರಂಗಮ್ ನ ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂಲ ಶರೀರವನ್ನು ಇಡಲಾಗಿದೆ. ವೈಯಕ್ತೀಕರಣ ತತ್ತ್ವಶಾಸ್ತ್ರದ ದೃಢವಾದ ಪ್ರತಿಪಾದಕರಾದ ಆಚಾರ್ಯರು ಭಗವಂತ ಮತ್ತು ವೈಯಕ್ತಿಕ ಆತ್ಮಗಳು ಗುಣಾತ್ಮಕವಾಗಿ…

  • ಸುದ್ದಿ

    ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋತರೂ ಸಹ ನೀಡಬೇಕಂತೆ ಸಚಿವ ಸ್ಥಾನ..!ಏಕೆ ಗೊತ್ತಾ..?

    ರಾಜ್ಯದಲ್ಲಿ ಚುನಾವಣೆ ಕಾವು ಮುಗಿದಿದೆ. ಆದ್ರೆ ಮೇ 23ರ ಫಲಿತಾಂಶದ ಮೇಲೆ ಎಲ್ಲಾ ರಾಜಕೀಯ ಪಕ್ಷಗಳು ಉಸಿರು ಬಿಗಿ ಹಿಡಿದು ಕಾಯುತ್ತಿವೆ. ಅದ್ರಲ್ಲೂ ಈ ಬಾರಿ ಹೈವೋಲ್ಟೇಜ್‍ ಕ್ಷೇತ್ರವಾಗಿದ್ದ ಮಂಡ್ಯದತ್ತ ಇಡೀ ದೇಶದ ಚಿತ್ತ ನೆಟ್ಟಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ನಿಖಿಲ್‍ ಕುಮಾರಸ್ವಾಮಿ ಕಣಕ್ಕಿಳಿದಿದ್ದು, ಜೆಡಿಎಸ್‍ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರ ಹಾಕ್ತಿದ್ದಾರೆ. ಇಂತಹ ಸಂದರ್ಭದಲ್ಲೇ ಒಂದು ವೇಳೆ ಚುನಾವಣೆ ಫಲಿತಾಂಶ ಜೆಡಿಎಸ್‍ಗೆ ವ್ಯತಿರಿಕ್ತವಾಗಿ ಬಂದ್ರೆ ನಿಖಿಲ್‍ ಅವರನ್ನು ಸಚಿವರನ್ನಾಗಿ ಮಾಡಲೇಬೇಕು ಎಂಬ ಒತ್ತಾಯ ಕೇಳಿ ಬಂದಿದೆ….