ಸುದ್ದಿ

ರೈಲಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ಸಿಎಂ ಪಯಣ…….!

36

ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್‍ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ.

ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ ಬೆಳೆಸಲಿದ್ದಾರೆ. ಜೂನ್ 21 ರಿಂದ ಹಳ್ಳಿ ಜನರ ಕಷ್ಟ ಕೇಳುವ ಗ್ರಾಮ ವಾಸ್ತವ್ಯಕ್ಕೆ ಚಾಲನೆ ನೀಡಲಿದ್ದಾರೆ. ಇಷ್ಟು ದಿನ ಬೇರೆ ಬೇರೆ ಗೊಂದಲಗಳಲ್ಲಿ ಸಿಲುಕಿದ್ದ ಸಿಎಂ, ಈಗ ಜನರ ಬಳಿಗೆ ಸಿಂಪಲ್ಲಾಗೆ ಹೋಗಲು ಮುಂದಾಗಿದ್ದು, ತಾವು ಬದಲಾಗಿದ್ದೇವೆ ಎಂದು ತೋರಿಸುತ್ತಿದ್ದಾರಾ ಅನ್ನೋ ಚರ್ಚೆ ಆರಂಭವಾಗಿದೆ.

ಮಂಗಳವಾರ ಇಡೀ ದಿನ ಲೋಕೋಪಯೋಗಿ ಇಲಾಖೆ ಮತ್ತು ಜಲಸಂಪನ್ಮೂಲ ಇಲಾಖೆ ಸಭೆ ನಡೆಸಿದ್ದ ಸಿಎಂ ಇಂದು ಜಿಲ್ಲಾಧಿಕಾರಿಗಳು, ಪ್ರಾದೇಶಿಕ ಆಯುಕ್ತರು, ಸಿಇಓಗಳ ಸಭೆ ನಡೆಸಲಿದ್ದಾರೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯಲಿದ್ದು, ಇಡೀ ದಿನ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ರೈತರ ಸಾಲಮನ್ನಾ, ಬರ ನಿರ್ವಹಣೆ ಕುರಿತು ಅಧಿಕಾರಿಗಳ ಜೊತೆ ಸಿಎಂ ಸಭೆ ನಡೆಸಲಿದ್ದಾರೆ. ಪ್ರತಿ ಜಿಲ್ಲಾವಾರು ಸಭೆ ನಡೆಸಲಿರುವ ಸಿಎಂ, ಜಿಲ್ಲೆಗಳಿಗೆ ಸಂಬಂಧಿಸಿದ ಎಲ್ಲಾ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಪಾತಾಳಕ್ಕೆ ಕುಸಿದ ಚಿನ್ನದ ಬೆಲೆ ಮತ್ತು ಚಿನ್ನ ಕೊಳ್ಳಲು ಸಾಲಾಗಿ ನಿಂತ ಜನರು, ವರ್ಷದಲ್ಲಿ ಇದೆ ಮೊದಲು.

    ಕಳೆದ ಮೂರೂ ನಾಲ್ಕು ತಿಂಗಳುಗಳಿಂದ ದೇಶದಲ್ಲಿ ಅತೀ ಹೆಚ್ಚು ಸುದ್ದಿಯಾಗುತ್ತಿರುವ ಸುದ್ದಿ ಅಂದರೆ ಅದೂ ಚಿನ್ನದ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿನ್ನದ ಬೆಲೆಯಲ್ಲಿ ಎಂದೂ ಕಾಣದ ಏರಿಕೆ ಕಂಡಿದ್ದು ಮೂರೂ ನಾಲ್ಕು ತಿಂಗಳುಗಳಿಂದ ಭಾರಿ ಸುದ್ದಿ ಮಾಡುತ್ತಿದೆ. ಇನ್ನು ಚಿನ್ನದ ಬೆಲೆಯ ಏರಿಕೆಯ ಕಾರಣ ಅದೆಷ್ಟೋ ಬಡವರು ತಮ್ಮ ಮನೆಯ ಮದುವೆ ಸಮಾರಂಭಗಳನ್ನ ಮುಂದೂಡಿದ್ದಾರೆ, ಇನ್ನು ಈ ತಿಂಗಳ ಆರಂಭದಿಂದ ಚಿನ್ನದ ಬೆಲೆ ಇಳಿಕೆಯತ್ತ ಮುಖ ಮಾಡಿದ್ದೂ ಬಡದವರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ….

  • ಸುದ್ದಿ

    ಪವಿತ್ರ ಲೋಹವಾದ ಬೆಳ್ಳಿಯನ್ನು ಶುಭ ಸಮಾರಂಭಗಳಲ್ಲಿ ಯಾಕೆ ಬಳಸುತ್ತಾರೆ ಗೊತ್ತಾ..?

    ಊಟಕ್ಕೆ ಬೆಳ್ಳಿ ತಟ್ಟೆ ಹಾಗೂ ನೀರು ಕುಡಿಯಲು ಬೆಳ್ಳಿ ಲೋಟ ಬಳಸಿದರೆ ಅದು ಶ್ರೀಮಂತರ ಶೋಕಿ ಎಂದು ಕೆಲವರು ಭಾವಿಸುತ್ತಾರೆ. ಆದರೆ, ಹಳೆ ಕಾಲದವರು ಬೆಳ್ಳಿ ಪೂಜಾ ಸಾಮಗ್ರಿಗಳು, ಮಕ್ಕಳಿಗೆ ಊಟ ಹಾಕಲು ಬೆಳ್ಳಿ ಬಟ್ಟಲು, ಮನೆಗೆ ಬಂದವರಿಗೆ ನೀರು ಕುಡಿಯಲು ಬೆಳ್ಳಿ ಲೋಟ…. ಹೀಗೆ ಸಾಧ್ಯವಾದಷ್ಟು ಬೆಳ್ಳಿ ಪಾತ್ರೆಗಳನ್ನೇ ಬಳಸುತ್ತಿದ್ದರು. ಅದನ್ನು ಎಲ್ಲರೂ ಬಳಸಲಿ ಎಂದೇ ಬೆಳ್ಳಿಗೆ ಪವಿತ್ರ ಲೋಹ ಎಂಬ ಹಣೆಪಟ್ಟಿ ಕಟ್ಟಿದರು. ಇದಕ್ಕೆ ಕಾರಣ ಬೆಳ್ಳಿ ದುಬಾರಿ ಎಂಬುದಲ್ಲ. ಬದಲಿಗೆ, ಬೆಳ್ಳಿಯಲ್ಲಿರುವ ಆರೋಗ್ಯವರ್ಧಕ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ,ಈ ದಿನದ ರಾಶಿ ಭವಿಷ್ಯದಲ್ಲಿ ರಾಜಯೋಗವಿದ್ದು ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 13 ಜನವರಿ, 2019 ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ನಿಮ್ಮ…

  • ಆರೋಗ್ಯ

    ಈ ಹಣ್ಣು ಯಾವುದು ಗೊತ್ತಾ. ತಿಂದರೆ ಏನಾಗುತ್ತೆ?

    ಈ ಆಪಲ್ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಅಂತಹ ಆಪಲ್ ಇದ್ಯಾವುದಪ್ಪ ಅಂತ ಯೋಚಿಸುತ್ತಿದ್ದೀರಾ? ಇದನ್ನ ವ್ಯಾಕ್ಸನ್ ಆಪಲ್ ಅಂತಾರೆ ಅಥವಾ ರೆಡ್ ಚುಂಬಕ ಅಂತಾರೆ ಅಥವಾ ವಾಟರ್ ಆಪಲ್ ಎಂದೂ ಕರೆಯುತ್ತಾರೆ. ಬಹಳಷ್ಟು ಹೆಸರಿನಲ್ಲಿ ಈ ಹಣ್ಣನ್ನು ಕರೆಯುತ್ತಾರೆ. ಇದು ನಮ್ಮ ದೇಶದಲ್ಲಿ ಬೆಳೆಯುವ ತುಂಬಾನೇ ರೇರ್ ಆದಂತಹ ಹಣ್ಣು ಎಂದೇ ಹೇಳಬಹುದು.ಈ ಹಣ್ಣು ಪೂರ್ತಿಯಾಗಿ ನೀರಿನಿಂದಲೇ ತುಂಬಿಕೊಂಡಿರುತ್ತದೆ ಅಂತ ಹೇಳಿದರೆ ತಪ್ಪಾಗಲ್ಲ. ಈ ಹಣ್ಣು ಕೇವಲ ಕೆಂಪು ಬಣ್ಣದಲ್ಲಿ ಅಷ್ಟೇ ಅಲ್ಲ. ಬಿಳಿ, ಹಸಿರು…

  • ಸ್ಪೂರ್ತಿ

    ತನ್ನ ತಂದೆಯ ಜೀವ ಉಳಿಸಲು ತನ್ನ ಲೀವರ್ ಅನ್ನೇ ದಾನ ಮಾಡಿದ 19ವರ್ಷದ ಮಗಳು..!

    19 ವರ್ಷದ ಚಿಕ್ಕ ವಯಸ್ಸಿನ ಮಗಳೊಬ್ಬಳು ತಂದೆಯ ಜೀವ ಉಳಿಸಲು ತನ್ನ ಲಿವರ್ ದಾನ ಮಾಡಿ ಆದರ್ಶ ಮಗಳೆನಿಸಿಕೊಂಡಿದ್ದಾಳೆ. ರಾಖಿ ದತ್ತ ತಂದೆಗಾಗಿ ತನ್ನ ಲಿವರ್ ದಾನ ಮಾಡಿದ್ದಾಳೆ. ದೇಹದ ಮೇಲೆ ಲಿವರ್ ಶಸ್ತ್ರಚಿಕಿತ್ಸೆಯ ಕಲೆ ಹಾಗೆ ಉಳಿದುಕೊಳ್ಳುತ್ತದೆ, ತನ್ನ ಮುಂದಿನ ಜೀವನದಲ್ಲಿ ಇದರಿಂದ ತೊಂದರೆಯಾತ್ತದೆ ಎನ್ನುವುದನ್ನೂ ಲೆಕ್ಕಿಸದೇ ಈ ಯುವತಿ ತನ್ನ ತಂದೆಯ ಜೀವ ಉಳಿಸಲು ತನ್ನ 65% ಲಿವರ್‍ನನ್ನು ದಾನ ಮಾಡಿ, ತಂದೆಗೆ ಪುನರ್ಜನ್ಮ ನೀಡಿದ್ದಾಳೆ. ಈ ಬಗ್ಗೆ ವಾಣಿಜ್ಯೋದ್ಯಮಿ ಹರ್ಷ ಗೋಯೆಂಕಾ ಅವರು…