ಜ್ಯೋತಿಷ್ಯ

ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆ- ಕೇರಳ ಫಸ್ಟ್, ಉತ್ತರ ಪ್ರದೇಶ ಲಾಸ್ಟ್ – ಕರ್ನಾಟಕ 8ನೇ ಸ್ಥಾನದಲ್ಲಿ……

26

ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ.

23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India” ಎಂಬ ವರದಿಯನ್ನು ನೀತಿ ಆಯೋಗದ ಉಪಾಧ್ಯಕ್ಷ ಡಾ. ರಾಜೀವ್ ಕುಮಾರ್ ಬಿಡುಗಡೆ ಮಾಡಿದರು. ಈ ವರದಿಯ ಪ್ರಕಾರ ಆರೋಗ್ಯ ಸೂಚ್ಯಂಕದಲ್ಲಿ ಬಿಹಾರ ಹಾಗೂ ಉತ್ತರ ಪ್ರದೇಶ ತೀರಾ ಹಿಂದುಳಿದಿದೆ ಎಂದು ಹೇಳಿದೆ.

ಕೇರಳದ ನಂತರದ ಸ್ಥಾನದಲ್ಲಿ ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದು, ಉತ್ತಮ ಆರೋಗ್ಯ ಮಟ್ಟವನ್ನು ಕಾಪಾಡಿಕೊಂಡು ಬಂದಿವೆ. ಇವುಗಳನ್ನು ಬಿಟ್ಟರೆ ಹರಿಯಾಣ, ರಾಜಸ್ಥಾನ ಮತ್ತು ಜಾರ್ಖಂಡ್ ಆರೋಗ್ಯ ಗುಣಮಟ್ಟದಲ್ಲಿ ಸುಧಾರಣೆ ಆಗಿದೆ. ಆದರೆ ಛತ್ತೀಸ್‍ಗಢ ಅತಿ ಕಡಿಮೆ ಗುಣಮಟ್ಟ ಸಾಧಿಸಿರುವ ರಾಜ್ಯವಾಗಿದೆ.

2018ರ ಫೆಬ್ರವರಿಯಲ್ಲಿ ಬಿಡುಗಡೆಯಾಗಿದ್ದ ಮೊದಲ ಹಂತದ ಆರೋಗ್ಯ ಸೂಚ್ಯಂಕಕ್ಕಾಗಿ 2014-15 ರಿಂದ 2015-16ರ ಅವಧಿಯ ನಿರ್ವಹಣೆಯನ್ನು ಪರಿಗಣಿಸಲಾಗಿತ್ತು. ಎರಡನೇ ಹಂತದ ಆರೋಗ್ಯ ಸೂಚ್ಯಂಕಕ್ಕಾಗಿ 2015-16 ರಿಂದ 2017-18ರ ಅವಧಿಯ ನಿರ್ವಹಣೆಯನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ.

ಮೊದಲ ಹತ್ತು ಆರೋಗ್ಯಕರ ರಾಜ್ಯಗಳು

  1. ಕೇರಳ
  2. ಆಂಧ್ರ ಪ್ರದೇಶ
  3. ಮಹಾರಾಷ್ಟ್ರ
  4. ಗುಜರಾತ್
  5. ಪಂಜಾಬ್
  6. ಹಿಮಾಚಲ ಪ್ರದೇಶ
  7. ಜಮ್ಮು -ಕಾಶ್ಮೀರ
  8. ಕರ್ನಾಟಕ
  9. ತಮಿಳುನಾಡು
  10. ತೆಲಂಗಾಣ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಪಿರಿಯಡ್ಸ್ ಸಮಯದಲ್ಲಿ ಆಗುವ ನೋವುಗಳಿಗೆ ಇಲ್ಲಿದೆ ಪರಿಹಾರ…ತಿಳಿಯಲು ಈ ಲೇಖನ ಓದಿ…

    ಋತುಸ್ರಾವದ ಸಂದರ್ಭದಲ್ಲಿ ಮಹಿಳೆಯರು ಬಹಳಷ್ಟು ನೋವನ್ನ ಅನುಭವಿಸುತ್ತಾರೆ, ಈ ನೋವನ್ನ ಹೇಗೆ ಕಾಪಾಡಿ ಕೊಳ್ಳ ಬಹುದು ಎಂಬುದು ಹಲವರಲ್ಲಿ ಕಾಡುವ ಪ್ರಶ್ನೆ. ಇಂತಹ ಸಂದರ್ಭದಲ್ಲಿ ನಾವು ಸೇವಿಸುವ ಆಹಾರದಲ್ಲಿಯೂ ನಾವು ಬದಲಾವಣೆಯನ್ನ ಮಾಡಿಕೊಳ್ಳ ಬೇಕು, ಹಾಗೂ ದಿನದ ಆಗು ಹೋಗುಗಳನ್ನ ಬದಲಾವಣೆ ಮಾಡಿಕೊಳ್ಳ ಬೇಕು.

  • ಸುದ್ದಿ

    ‘ಹುಷಾರ್’ ಹೆತ್ತವರನ್ನು ನಿರ್ಲಕ್ಷಿಸಿದರೆ ಜೈಲು ಪಾಲು ಗ್ಯಾರಂಟಿ..ಎಚ್ಚರ..!

    ತಮ್ಮನ್ನು ಹೆತ್ತು ಹೊತ್ತು ಬೆಳೆಸಿದವರನ್ನು ನಿರ್ಲಕ್ಷಿಸುವ ಪರಿಪಾಠ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಇದರ ಪರಿಣಾಮ ವಯೋವೃದ್ಧರು ತಮ್ಮ ಜೀವನ ಸಂಧ್ಯಾಕಾಲದಲ್ಲಿ ಅಸಹಾಯಕರಂತೆ ಬದುಕಬೇಕಾಗಿದೆ. ಇದೀಗ ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಈಗಾಗಲೇ ಇರುವ ಹೆತ್ತವರು ಮತ್ತು ಹಿರಿಯ ನಾಗರಿಕರ ಪೋಷಣೆ ಮತ್ತು ಕಲ್ಯಾಣ ಕಾಯ್ದೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೆಲವೊಂದು ತಿದ್ದುಪಡಿಗಳನ್ನು ತರಲಾಗಿದ್ದು. ಇದರ ಜೊತೆಗೆ ಹೆತ್ತವರನ್ನು ನಿರ್ಲಕ್ಷಿಸುವವರಿಗೆ ವಿಧಿಸುವ ಶಿಕ್ಷೆಯ ಪ್ರಮಾಣವನ್ನು ಮೂರು ತಿಂಗಳಿನಿಂದ ಆರು ತಿಂಗಳವರೆಗೆ ವಿಸ್ತರಿಸುವ ತೀರ್ಮಾನ ಕೈಗೊಳ್ಳಲಾಗಿದೆ….

  • ಜ್ಯೋತಿಷ್ಯ, ಭವಿಷ್ಯ

    ದಿನ ಭವಿಷ್ಯ ಗುರುವಾರ..ಹೇಗಿದೆ ನೋಡಿ ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ…ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 12/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ ತಿಂಗಳು (ಹುಣ್ಣಿಮಾಂತ್ಯ):ವೈಶಾಖ ಪಕ್ಷ : ಕೃಷ್ಣ ಪಕ್ಷ…

  • corona

    ಕೋವಿಡ್-19 ಮಾರ್ಗಸೂಚಿ ಪಾಲನೆಗೆ ಸೂಚನೆ

    ಜಿಲ್ಲೆಯಲ್ಲಿ ಕೋವಿಡ್-19 ಪರಿಸ್ಥಿತಿಯು ನಿಯಂತ್ರಣದಲ್ಲಿದೆ. ಆದಾಗ್ಯೂ, ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ಮುಂಬರುವ ಕ್ರಿಸ್‌ಮಸ್ ಮತ್ತು ಹೊಸ ವರ್ಷಾಚರಣೆಯ ಸಂದರ್ಭಗಳಲ್ಲಿ ಎಚ್ಚರ ವಹಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ, ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು, ಜಿಲ್ಲೆಯ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಈ ಅಂಶಗಳ ಹಿನ್ನೆಲೆಯಲ್ಲಿ, ಪೂರ್ವಭಾವಿಯಾಗಿ ಸಾರ್ವಜನಿಕರು ಈ ಕ್ರಮಗಳನ್ನು ಪಾಲಿಸುವುದು ಅವಶ್ಯವಾಗಿದೆ. ಮುಚ್ಚಿದ ಸಂರಕ್ಷಣೆಗಳಾದ  (closed spaces) ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್‌ಗಳು, ಶಾಪಿಂಗ್ ಮಾಲ್, ಕಛೇರಿಗಳು…

  • ಆಧ್ಯಾತ್ಮ

    ಯಾವ ದೇವರಿಗೆ ಯಾವ ಹೂವಿನ ಮೂಲಕ ಪೂಜೆ ಮಾಡಿದ್ರೆ ಹೆಚ್ಚು ಫಲ ಸಿಗುತ್ತೆ ಗೊತ್ತಾ ನಿಮ್ಗೆ?

    ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.