ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.
ಬೊಜ್ಜು ನಿಯಂತ್ರಿಸುತ್ತದೆ :-
ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ. ಹೆಚ್ಚುಒತ್ತಡದಲ್ಲಿ ಕೆಲಸಮಾಡುವವರಿಗೆ, ಊಟಸೇರುವುದಿಲ್ಲ. ಅದಕ್ಕಾಗಿ ಅವರು ಜಂಕ್ ಫುಡ್ (ಕುರುಕಲು ತಿಂಡಿಗಳನ್ನು) ಎಂದು ಕರೆಯಲಾಗುವ, ಚಿಪ್ಸ್, ಚಾಕೊಲೆಟ್, ಮುಂತಾದ ಅಡ್ಡತಿಂಡಿಗಳನ್ನು ತಿನ್ನುತ್ತಾರೆ. ಇದರಿಂದ ಬೊಜ್ಜುಬೆಳೆಯಲು ಸಹಾಯವಾಗುತ್ತದೆ. ಕಾರ್ಬೋಹೈಡ್ರೇಟ್ ಹೆಚ್ಚಾಗಿರುವ ಹಣ್ಣುಗಳ ಸೇವನೆಯಿಂದ ರಕ್ತದ ಸಕ್ಕರೆಯ ಪ್ರಮಾಣವನ್ನು ಕಾಯ್ದುಕೊಂಡು ಅಂತಹ ಅಡ್ಡತಿಂಡಿಗಳ ವಾಂಛೆಯಿಂದ ಮುಕ್ತರಾಗಬಹುದು.
ಅಲ್ಸರ್ :-
ಆಮ್ಲೀಯತೆಯನ್ನು ತಗ್ಗಿಸುತ್ತದೆ. ಜಠರದ ಪೊರೆಯನ್ನು ಮರುಲೇಪಿಸುವ ಮೂಲಕ, ಅಲ್ಸರ್ ತೊಂದರೆಯನ್ನು ಶಮನಗೊಳಿಸುತ್ತದೆ.
ಉಷ್ಣ ನಿಯಂತ್ರಕ :-
ದೇಹಕ್ಕೆ ತಂಪು, ಎಂಬ ನಂಬಿಕೆ ವಿಶ್ವದ ಬಹುತೇಕ ಜನಾಂಗಗಳಲ್ಲಿ ಇದೆ. ಥಾಯ್ ಲ್ಯಾಂಡ್ ನಲ್ಲಿ ಗರ್ಭಿಣಿ ಸ್ತ್ರೀಯರು ಬಾಳೆಹಣ್ಣಿನ ಸೇವನೆಯನ್ನು ಮಾಡುವುದು ಸಾಮಾನ್ಯ. ಇದರಿಂದ ಅವರ ದೇಹ ಮತ್ತು ಮನಸ್ಸುಗಳೆರಡರ ಉಷ್ಣತೆ ಕಡಿಮೆಯಾಗಿ, ಹುಟ್ಟಿದ ಮಗುವಿನ ದೇಹ ಮತ್ತು-ಮನಸ್ಸುಗಳು ಶಾಂತವಾಗಿರಲೆಂಬ ನಂಬಿಕೆ ಇದೆ.
ಧೂಮಪಾನ ಹಾಗೂ ತಂಬಾಕುಸೇವನೆ :-
ಬಿ-6, ಬಿ-12 ವಿಟಮಿನ್ ಗಳು ಹಾಗೂ ಪೊಟ್ಯಾಶಿಯಮ್, ಮೆಗ್ನೀಶಿಯಮ್ ಅಂಶಗಳು, ನಿಕೊಟಿನ್ನ ಸೆಳೆತದಿಂದ ಹೊರಬರುವಾಗ, ದೇಹದ ಮೇಲಾಗುವ ಪರಿಣಾಮಗಳನ್ನು ನಿಭಾಯಿಸಲು ದೇಹಕ್ಕೆ ಸಹಾಯಮಾಡುತ್ತವೆ.
ಒತ್ತಡವನ್ನು ನಿಯಂತ್ರಿಸುತ್ತದೆ:-
ಪೊಟಾಸಿಯಂ ಪ್ರಮುಖ ಖನಿಜ. ಹೃದಯದ ಬಡಿತವನ್ನು ನಿಯಂತ್ರಿಸುತ್ತದೆ. ಮೆದುಳಿಗೆ ಆಮ್ಲಜನಕವನ್ನು ಪೂರೈಸುತ್ತದೆ. ದೇಹದ ನೀರಿನ ಪ್ರಮಾಣವನ್ನು ಸರಿದೂಗಿಸುತ್ತದೆ. ಪ್ರಪಂಚದ ಮಂಚೂಣಿಯಲ್ಲಿರುವ ಕ್ರೀಡಾಳುಗಳ ಪ್ರಥಮ ಆದ್ಯತೆ- ಸೇಬು. ನಂತರ ಬಾಳೆಹಣ್ಣು. ಇದರಲ್ಲಿ, 4 ರಷ್ಟು ಪ್ರೋಟಿನ್, ಎರಡುಪಟ್ಟು ಕಾರ್ಬೊ ಹೈಡ್ರೇಟ್, ೩ ಪಟ್ಟು ಫಾಸ್ಫರಸ್, ೫ ಪಟ್ಟು ವಿಟಮಿನ್ ಎ, ಮತ್ತು ಕಬ್ಬಿಣಾಂಶ ಹಾಗೂ ಎರಡುಪಟ್ಟು ಇತರ ವಿಟಮಿನ್, ಹಾಗೂ ಖನಿಜಗಳಿವೆ. ಪೊಟಾಷಿಯಮ್ ಅಂಶಕೂಡ ಸಮೃದ್ಧವಾಗಿದೆ. “ಹೊತ್ತಲ್ಲದ ಹೊತ್ತಿನಲ್ಲಿ ಅದೂ-ಇದು ತಿನ್ನುವಬದಲು ಬಾಳೆಹಣ್ಣಿನ ಸೇವನೆ ಮಾಡಿದರೆ ಖಂಡಿತವಾಗಿಯೂ ನಮ್ಮ ದೇಹ, ಸುಸ್ಥಿತಿಯಲ್ಲಿರುವುದು ಖಂಡಿತವೆಂದು ವೈದ್ಯರು ಹೇಳುತ್ತಾರೆ.
ರಕ್ತಹೀನತೆ :-
ಬಾಳೆಹಣ್ಣಿನಲ್ಲಿ ಕಬ್ಬಿಣದ ಅಂಶ ಸಮೃದ್ಧವಾಗಿರುವುದರಿಂದ ದೇಹದಲ್ಲಿ ಕೆಂಪು ರಕ್ತಕಣಗಳ ಉತ್ಪಾದನೆಯನ್ನು ಪ್ರಚೋದಿಸಿ, ರಕ್ತಹೀನತೆಯನ್ನು ನೀಗಿಸುತ್ತದೆ.
ರಕ್ತದೊತ್ತಡ:-
ಪೊಟಾಷಿಯಮ್, ಲವಣ ಸಮೃದ್ಧಿಯಾಗಿದ್ದು, ಉಪ್ಪಿನ ಅಂಶ ತೀರಾ ಕಡಿಮೆ. ಇದರಿಂದ ಬಾಳೆಹಣ್ಣು ರಕ್ತದೊತ್ತಡವನ್ನು ತಡೆಗಟ್ಟಲು ಸೂಕ್ತ ಅಸ್ತ್ರ. “ಅಮೆರಿಕದ ಆಹಾರ ಮತ್ತು ಔಷಧಿಗಳ ಆಡಳಿತ ಮಂಡಲಿ” ಕೂಡ ಇತ್ತೀಚೆಗೆ ಅಧಿಕೃತವಾಗಿ ಜಾಹೀರುಗೊಳಿಸಲು, ಅನುಮತಿ ನೀಡಿದೆ.
ಬುದ್ಧಿಮತ್ತೆ :-
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.
ಮಲಬದ್ಧತೆ :-
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.
ಈ ಸಮಸ್ಯೆಗಳು ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!
ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.
ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದುಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.
ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು.
ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ಸರ್ಕಾರ 3500 ಮಂದಿ ಪರಿಶಿಷ್ಟ ಜಾತಿಯವರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕಾರು ಖರೀದಿಸಲು 3 ಲಕ್ಷ ರೂ. ವರೆಗೆ ಸಬ್ಸಿಡಿ ನೀಡಲು ನಿರ್ಧರಿಸಿದೆ. ಸಾಲ ಸೌಲಭ್ಯ ಒದಗಿಸುವ ಮೂಲಕ ಕಾರು ವಿತರಣೆ ಪ್ರಕ್ರಿಯೆ ಶುರುವಾಗಿದೆ.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಭೇದಿಸಿ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಪಡೆದ ಹೆಚ್ಚುವರಿ ಪೊಲೀಸ್ ಆಯುಕ್ತ ಬಿ.ಕೆ.ಸಿಂಗ್ ನೇತೃತ್ವದ ತನಿಖಾ ತಂಡಕ್ಕೆ ರಾಜ್ಯ ಸರ್ಕಾರ 25 ಲಕ್ಷ ರು. ಬಹುಮಾನ ಘೋಷಿಸಿದೆ. ಕೊಲೆ ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ನೀಡುವಂತೆ ಕೋರಿ ಇತ್ತೀಚೆಗೆ ಬಿ.ಕೆ.ಸಿಂಗ್ ಅವರು ಗೃಹ ಇಲಾಖೆಗೆ ಪತ್ರ ಬರೆದಿದ್ದರು.ಸತತವಾಗಿ ಒಂದು ವರ್ಷ ಪರಿಶ್ರಮಪಟ್ಟವಿಶೇಷ ತನಿಖಾ ತಂಡ ಆರೋಪಿಗಳನ್ನು ಮುಂಬೈ ಸೇರಿದಂತೆ ವಿವಿಧೆಡೆ ಬಂಧಿಸಿತ್ತು. ತಂಡದ ಒಟ್ಟು 91 ಮಂದಿ…
75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್ರನ್ನು ಭೇಟಿ ಆಗಿದ್ದಾರೆ. ಪ್ರೀತಿ ಶುರುವಾಗಿದ್ದು ಹೇಗೆ? 1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ…
ಮದುವೆಗಳಲ್ಲಿ ಹಲವಾರು ವಿಚಿತ್ರ ಸನ್ನಿವೇಶಗಳು ನಡೆಯುವುದನ್ನ ಕೇಳಿರುತ್ತೇವೆ, ನೋಡಿರುತ್ತೇವೆ.ಅದರಲ್ಲಿ ಕೆಲವೊಂದು ಇನ್ನೇನು ತಾಳಿ ಕಟ್ಟುವ ಸಮಯಕ್ಕೆ ಹುಡುಗಿ ಕಾಣೆಯಾಗುವುದು, ಇಲ್ಲವಾದ್ರೆ ಹುಡುಗನೇ ಇಲ್ಲದಿರುವುದು. ಅಣ್ಣನ ಮದುವೆಯಲ್ಲಿ ತಮ್ಮ ಅಣ್ಣನ ಕೈಯಿಂದ ತಾಳಿ ಕಿತ್ತುಕೊಂಡು ವಧುವಿಗೆ ಕಟ್ಟುವುದು ಇಂತಹ ಹಲವಾರು ಸನ್ನಿವೇಶಗಳನ್ನು ಎಲ್ಲರೂ ನೋಡಿಯೇ ಇರುತ್ತೇವೆ. ಇದೇ ರೀತಿ ಇಲ್ಲಿ ವರ ಮಹಾಶಯನೊಬ್ಬ ವಧುವಿಗೆ ತಾಳಿ ತಾಳಿ ಕಟ್ಟುವ ವೇಳೆ ಎಡವಟ್ಟು ಮಾಡಿಕೊಂಡು ಬಿಟ್ಟಿದ್ದಾನೆ.ಇದನ್ನು ತಿಳಿದೇ ಮಾಡಿದ್ದಾನೋ, ತಿಳಿಯದೇ ಮಾಡಿದ್ದಾನೋ ಗೊತ್ತಿಲ್ಲ ಆ ವಿಡಿಯೋ ಮಾತ್ರ ಈಗ ಸೋಶಿಯಲ್…
ಸಾಮಾನ್ಯವಾಗಿ ಎಲ್ಲರೂ ಯಾವುದೊ ಒಂದು ಕಡೆ ಅಥವಾ ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುತ್ತಾರೆ . ಮುಖ್ಯವಾಗಿ ಹೆಚ್ಚಿನ ಆದಾಯ ಬರುವ ಭರವಸೆಗಳನ್ನು ನೀಡುವ ಕಡೆ ಮೊರೆ ಹೋಗುತ್ತಾರೆ. ಆದಾಯವನ್ನು ನೋಡುತ್ತಾರೆ ಹೊರತು ಕಂಪನಿಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡಿರುವುದಿಲ್ಲ, ಮತ್ತು ಏಜೆಂಟ್ಗಳ ಮೂಲಕ ತಮ್ಮಉತ್ಪನ್ನಗಳನ್ನು ಮಾರಾಟ ಮಾಡಿ ಮೋಸಮಾಡಿರುವ ಕಂಪನಿಗಳ ಉದಾಹರಣೆಯು ಸಹ ಸಾಕಷ್ಟಿದೆ.ಹಣ ಹೂಡಿಕೆ ಮಾಡಿದ ನಂತರ ಲಾಭವನ್ನು ಗಳಿಸದೆ, ತಮ್ಮ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗದೆ ಪರದಾಡುವ ಜನರು ಸಾಕಷ್ಟಿದ್ದಾರೆ. ಸಮಾಜದಲ್ಲಿ ಒಂದೇ ಬಾರಿಗೆ ಹಣ ಡಬಲ್ಆಗಬೇಕೆಂದು…
ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಂತರ್ಜಾಲ ಸಂಪರ್ಕವನ್ನು ಕಲ್ಪಿಸಲಾಗುತ್ತಿದ್ದು, ಅಂತರ್ಜಾಲದ ಮೂಲಕ ಪಡಿತರ ಚೀಟಿ ಪಡೆಯಬಹುದಾಗಿದೆ. ಜೊತೆಗೆ ರಾಜ್ಯದ ಯಾವುದೇ ಮೂಲೆಯಲ್ಲಿ ವಾಸವಾಗಿದ್ದರೂ, ಆ ಪ್ರದೇಶದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆದುಕೊಳ್ಳ ಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.