ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಲಗುವುದಕ್ಕೂ ಮುನ್ನ ಹಿತವಾದ, ಧ್ಯಾನ, ಯೋಗ ಸಂಗೀತವನ್ನು ಆಲಿಸುವುದರಿಂದ ಹೃದಯದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಭಾರತೀಯ ಸಂಶೋಧಕರು ಹೇಳಿದ್ದಾರೆ.
ಈ ರೀತಿಯ ಮ್ಯೂಸಿಕ್ ಥೆರೆಪಿಯನ್ನು ಆಸ್ಪತ್ರೆಗಳಲ್ಲಿ ಪ್ರಯೋಗಿಸಲಾಗುತ್ತಿದ್ದು, ಯೋಗ ಸಂಗೀತವನ್ನು ಮಲಗುವುದಕ್ಕೂ ಮುನ್ನ ಆಲಿಸುವುದು ಹೃದಯ ಬಡಿತದ ವ್ಯತ್ಯಾಸಗಳ ಮೇಲೆ ಪರಿಣಾಮ ಬೀರಿದೆ ಎಂದು ರಾಜಸ್ಥಾನದ ಜೈಪುರದ ಹೆಚ್ ಜಿ ಎಸ್ಎಂಎಸ್ ಆಸ್ಪತ್ರೆಯ ನರೇಶ್ ಸೇನ್ ಹೇಳಿದ್ದಾರೆ.
ಈ ಅಧ್ಯಯನವನ್ನು ಜರ್ಮನಿಯಲ್ಲಿರುವ ಯುರೋಪಿಯನ್ ಸೊಸೈಟಿ ಆಫ್ ಕಾರ್ಡಿಯಾಲಜಿ ಕಾಂಗ್ರೆಸ್ 2018 ರಲ್ಲಿ ಮಂಡಿಸಲಾಗಿದೆ. ಆರೋಗ್ಯಕರವಾಗಿದ್ದ ಸುಮಾರು 149 ಜನರನ್ನು ಅಧ್ಯಯನಕ್ಕೊಳಪಡಿಸಲಾಗಿತ್ತು.
149 ಜನರ ಪೈಕಿ ಕೆಲವರು ಮಲಗುವುದಕ್ಕೂ ಮುನ್ನ ಯೋಗ ಸಂಗೀತವನ್ನು ಆಲಿಸಿದರೆ, ಇನ್ನು ಕೆಲವರು ಪಾಪ್ ಮ್ಯೂಸಿಕ್ ಗೆ ಕಿವಿಕೊಟ್ಟಿದ್ದರು, ಮತ್ತೆ ಕೆಲವರು ಯಾವುದೇ ಸಂಗೀತವನ್ನೂ ಕೇಳದೇ ಹಾಗೆಯೇ ನಿದ್ದೆ ಮಾಡಿದ್ದರು.
ಸಮೀಕ್ಷೆಗೊಳಪಡಿಸಲಾಗಿದ್ದ ವ್ಯಕ್ತಿಗಳ ಹೃದಯ ಬಡಿತವನ್ನು ಸೆಷನ್ ನಲ್ಲಿಯೂ ಸಂಗೀತ ನಿಲ್ಲುವುದಕ್ಕೆ ಅಥವಾ ನಿಶಬ್ದ ಮೂಡುವುದಕ್ಕೂ 5 ನಿಮಿಷಗಳ ಮುನ್ನ ಮಾಪನ ಮಾಡಲಾಗಿತ್ತು. ಇದರ ಜೊತೆಗೆ ಆಂಕ್ಸೈಟಿ ಮಟ್ಟವನ್ನೂ ಮಾಪನ ಮಾಡಲಾಗಿತ್ತು,
ಯೋಗ ಸಂಗೀತ ಕೇಳುವ ವೇಳೆಯಲ್ಲಿ ಹೃದಯ ಬಡಿತ ವ್ಯತ್ಯಾಸ ಹೆಚ್ಚಾಗಿದ್ದು, ಪಾಪ್ ಮ್ಯೂಸಿಕ್ ನ್ನು ಕೇಳುವ ವೇಳೆಯಲ್ಲಿ ಇಳಿಕೆಯಾಗಿತ್ತು, ನಿಶಬ್ದವಾಗಿದ್ದಾಗ ಯಾವುದೇ ಬದಲಾವಣೆಗಳೂ ಇರಲಿಲ್ಲ ಎಂದು ಸಂಶೋಧಕರು ಹೇಳಿದ್ದಾರೆ. ಇನ್ನು ಯೋಗ ಸಂಗೀತ ಕೇಳುತ್ತಿದ್ದವರ ಆಂಕ್ಸೈಟಿ (ಆತಂಕ ಮಟ್ಟ) ಮಟ್ಟ ಕಡಿಮೆಯಾಗಿದ್ದು, ಪಾಪ್ ಮ್ಯೂಸಿಕ್ ನ್ನು ಕೇಳಿದ ನಂತರ ಹಾಗೂ ಯಾವುದೇ ಸಂಗೀತ ಕೇಳದಿದ್ದಾಗ ಆಂಕ್ಸೈಟಿ ಮಟ್ಟ ಹೆಚ್ಚಿರುವುದು ಸಮೀಕ್ಷೆಯಲ್ಲಿ ದಾಖಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು ಸರ್ಕಾರದಿಂದ ಕಲ್ಲಡ್ಕ ಶಾಲೆಗೆ ಸಿಗುತಿದ್ದ ಅನುದಾನ ನಿಲ್ಲಿಸಿದ್ದು ಎಲ್ಲರಿಗೂ ತಿಳಿದೇ ಇದೆ.. ಹೀಗಿರುವಾಗ ಹಲವಾರು ಮಂದಿ ಶಾಲೆಯ ನೆರವಿಗೆ ಬಂದರು..
ಪ್ರತಿ ವರ್ಷದಂತೆ ಈ ವರ್ಷವೂ 15 ದಿನಗಳ ಕಾಲ ಆಚರಿಸಲ್ಪಡುವ ಪಿತೃಪಕ್ಷ ಶುರುವಾಗಿದೆ. ಪಿತೃ ಪಕ್ಷದಲ್ಲಿ ಪೂರ್ವಜರ ಆರಾಧನೆ ನಡೆಯುತ್ತದೆ. ಪಿತೃಪಕ್ಷದಲ್ಲಿ ಕೆಲವೊಂದು ಆಹಾರಗಳನ್ನು ಸೇವಿಸಬಾರದು. ಜ್ಯೋತಿಷ್ಯ ಕಾರಣಗಳಿಂದ ಮಾತ್ರವಲ್ಲ ಇದಕ್ಕೆ ವೈಜ್ಞಾನಿಕ ಕಾರಣಗಳೂ ಇವೆ. ಪಿತೃಪಕ್ಷದಲ್ಲಿ ಕೆಲ ಆಹಾರ ಸೇವನೆ ಮಾಡುವುದ್ರಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದು ಶ್ರಾದ್ಧದ ಕೆಲಸ ಮಾಡಲು ಅಡ್ಡಿಯುಂಟು ಮಾಡುತ್ತದೆ. ಈ ಸಮಯದಲ್ಲಿ ಹಸುವಿನ ಹಾಲನ್ನು ಕುಡಿಯಬಾರದು. ಹಸು ಈಗಷ್ಟೆ ಮಗುವಿಗೆ ಜನ್ಮ ನೀಡಿದ್ದರೆ ಆ ಹಾಲನ್ನು ಅಪ್ಪಿತಪ್ಪಿಯೂ ಕುಡಿಯಬಾರದು. ಈ ಸಮಯದಲ್ಲಿ…
ನಂಬಲೇಬೇಕಾದ ಆದರೆ ನಂಬಲು ಸಾಧ್ಯವೇ ಇಲ್ಲದ ಸತ್ಯವಿದು. ವೈಷ್ಣವ ಪರಂಪರೆಯ ದಾರ್ಶನಿಕರಲ್ಲಿ ಒಬ್ಬರಾದ ವಿಶಿಷ್ಟಾದ್ವೈತ ಪ್ರತಿಪಾದಕ, ಸನಾತನ ಧರ್ಮ ರಕ್ಷಕ ಭಗವಾನ್ ರಾಮಾನುಜಾಚಾರ್ಯರ ಮೂಲ ಶರೀರವನ್ನು ಕಳೆದ 884 ವರ್ಷಗಳಿಂದ ಜೋಪಾನವಾಗಿಡಲಾಗಿದೆ!! ತಮ್ಮ ಆರಾಧ್ಯ ರಾಮಾನುಜಾಚಾರ್ಯರ ಶರೀರವನ್ನು ಇನ್ನೂ ಸುಸ್ಥಿತಿಯಲ್ಲೇ ಇಡಲಾಗಿದೆ ಎನ್ನುವ ವಿಚಾರವೇ ಹೆಚ್ಚಿನ ವೈಷ್ಣವರಿಗೆ ಗೊತ್ತಿಲ್ಲ. ತಿರುಚರಾಪಳ್ಳಿಯ ಶ್ರೀರಂಗಮ್ ನ ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂಲ ಶರೀರವನ್ನು ಇಡಲಾಗಿದೆ. ವೈಯಕ್ತೀಕರಣ ತತ್ತ್ವಶಾಸ್ತ್ರದ ದೃಢವಾದ ಪ್ರತಿಪಾದಕರಾದ ಆಚಾರ್ಯರು ಭಗವಂತ ಮತ್ತು ವೈಯಕ್ತಿಕ ಆತ್ಮಗಳು ಗುಣಾತ್ಮಕವಾಗಿ…
ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪುಲ್ವಾಮ ಹಾಗೂ ಶೂಪಿಯಾನ್ ಬಳಿ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಮಂದಿ ಉಗ್ರರು ಹತ್ಯೆಯಾಗಿದ್ದಾರೆ. ಈ ಮಧ್ಯೆ ಯೋಧರು ಹುತಾತ್ಮರಾಗಿದ್ದು, ನಾಗರಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಪುಲ್ವಾಮಾದಲ್ಲಿ ಮೂವರು ಜೈಷ್ -ಇ- ಮೊಹಮ್ಮದ್ ಸಂಘಟನೆ ಉಗ್ರರು ಹತ್ಯೆಯಾಗಿದ್ದರೆ, ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಈ ಮಧ್ಯೆ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ. ಶೂಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜೊತೆಗಿನ ಗುಂಡಿನ ಕಾಳಗದಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್…
ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ರಜನಿಕಾಂತ್ 2 ನೇ ಮದುವೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 11 ರಂದು ಸೌಂದರ್ಯ ರಜನಿಕಾಂತ್ ವಿವಾಹ, ನಟ ಹಾಗೂ ಉದ್ಯಮಿಯಾಗಿರುವ ವಿಶಾಗನ್ ವನಂಗಮುಡಿ ಅವರೊಂದಿಗೆ ನೆರವೇರಲಿದೆ. ಈಗಾಗಲೆ ಮದುವೆ ಸಿದ್ಧತೆ ಆರಂಭವಾಗಿವೆ. ಸೌಂದರ್ಯ ರಜನಿಕಾಂತ್ ಮತ್ತು ವಿಶಾಗನ್ ವನಂಗಮುಡಿ ಅವರ ಮದುವೆಯ ಆಮಂತ್ರಣ ಪತ್ರಿಕೆಯನ್ನು ರಜನಿಕಾಂತ್ ದಂಪತಿ ಇತ್ತಿಚೆಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಮೊದಲು ಅಶ್ವಿನ್ ರಾಮ್ ಕುಮಾರ್ ಜೊತೆ…
ಹೈದ್ರಾಬಾದ್ ನಲ್ಲಿ ಡಿಸೆಂಬರ್ 1ರಂದು ಭಿಕ್ಷುಕರನ್ನು ಪತ್ತೆ ಮಾಡಿದ್ರೆ ನಿಮಗೆ 500 ರೂಪಾಯಿ ಬಹುಮಾನ ಸಿಗಲಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರಿ ಇವಾಂಕಾ ಟ್ರಂಪ್ ಹೈದ್ರಾಬಾದ್ ಗೆ ಆಗಮಿಸ್ತಿದ್ದಾರೆ.