ಶ್ರದ್ಧಾಂಜಲಿ

ಪ್ರಧಾನಿ ನರೇಂದ್ರ ಮೋದಿಯವರ ತಾಯಿ ನಿಧನ

55

ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ  ಅವರ ತಾಯಿ ಹೀರಾ ಬೆನ್(100) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ತಮ್ಮ ತಾಯಿ 100 ನೇ ವಯಸ್ಸಿನಲ್ಲಿ ನಿಧನರಾಗಿದ್ದಾಗಿ ಪ್ರಧಾನಿ ಮೋದಿ ಟ್ಟಿಟ್ ಮೂಲಕ ತಿಳಿಸಿದ್ದಾರೆ.

ಹೀರಾ ಬೆನ್ ‌ಕಳೆದೆರಡು ದಿನದಿಂದ ಅಹ್ಮದಾಬಾದ್ ನ ಯುನ್ ಮೆಹ್ತಾ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆರೋಗ್ಯದಲ್ಲಿ ಏರುಪೇರಾದ ಕಾರಣ ಎರಡು ದಿನಗಳ ಹಿಂದೆ ಅವರನ್ನು ಗುಜರಾತ್ ನ ಅಹಮದಾಬಾದ್ ನಲ್ಲಿರುವ  ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ನಿನ್ನೆಯಷ್ಟೇ ವೈದ್ಯರು ಘೋಷಣೆಯನ್ನು ಮಾಡಿದ್ದರು.

 

ಬಗ್ಗೆ ಟ್ವೀಟ್  ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ’’ಭವ್ಯವಾದ ಶತಮಾನವು ದೇವರ ಪಾದದ ಮೇಲೆ ನಿಂತಿದೆ .. ನನ್ನ ತಾಯಿಯಲ್ಲಿ ನಾನು ಯಾವಾಗಲೂ ತ್ರಿಮೂರ್ತಿಗಳ ಶಕ್ತಿ ಹಾಗೂ ಪ್ರೀತಿ, ವಾತ್ಸಲ್ಯವನ್ನು ಅನುಭವಿಸಿದ್ದೇನೆ, ಅವರದ್ದು ತಪಸ್ವಿಯ ಪ್ರಯಾಣ, ನಿಸ್ವಾರ್ಥ ಕರ್ಮಯೋಗಿಯ ಸಂಕೇತ ಮತ್ತು ಮೌಲ್ಯಗಳಿಗೆ ಬದ್ಧವಾಗಿರುವ ಜೀವನವನ್ನು ಒಳಗೊಂಡಿದೆ‘‘ ಎಂದು  ಗುಣಗಾನ ಮಾಡಿದ್ದಾರೆ.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ