ಸುದ್ದಿ

ರಾಜ್ಯ ಸರ್ಕಾರಿ ನೌಕರರಿಗೆ 4ನೇ ಶನಿವಾರ ರಜೆ ನೀಡುವಂತೆ ಸಚಿವ ಸಂಪುಟ ಅಸ್ತು…!

57

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ರಜೆ ನೀಡಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ಅವರು, 17 ರಾಜ್ಯಗಳಲ್ಲಿ ಪ್ರತಿ ಶನಿವಾರ ರಜೆ ಜಾರಿಯಲ್ಲಿದೆ. 4 ರಾಜ್ಯಗಳಲ್ಲಿ ತಿಂಗಳಲ್ಲಿ ಎರಡು ಶನಿವಾರ ರಜೆ ಇದೆ. ಅದೇ ರೀತಿ‌ ನಮ್ಮ ರಾಜ್ಯದಲ್ಲೂ ರಜೆಗೆ ಒತ್ತಾಯ ಇತ್ತು. ಜಯಂತಿಗಳು, ಹಬ್ಬಗಳನ್ನು ಕಡಿತ ಮಾಡಬೇಕಾ ಎಂಬ ಚರ್ಚೆ ನಡೆಯಿತು. ಆದರೆ ಆ ಬಗ್ಗೆ ಅಂತಿಮ ನಿರ್ಧಾರಕ್ಕೆ ಬಂದಿಲ್ಲ. ಅದರ ಬದಲಾಗಿ ಸರ್ಕಾರಿ ನೌಕರರಿಗೆ ನೀಡಲಾಗುತ್ತಿದ್ದ 15 ಸಾಂದರ್ಭಿಕ ರಜೆಯನ್ನು ಕಡಿತಗೊಳಿಸಿ 10ಕ್ಕೆ ಇಳಿಸಲಾಗಿದೆ ಎಂದರು.

ಎರಡನೇ ಶನಿವಾರ ರಜೆ ಎಲ್ಲಾ ಇಲಾಖೆಗಳಿಗೂ ಅನ್ವಯಿಸುವುದಾಗಿ ಸ್ಪಷ್ಟಪಡಿಸಿದ ಅವರು, ಮತ್ತೊಮ್ಮೆ ಮುಖ್ಯಮಂತ್ರಿ ಕುಮಾರಸ್ವಾಮಿ ಈ ಸಂಬಂಧ ಸಭೆ ನಡೆಸಲಿದ್ದಾರೆ. ತಕ್ಷಣದಿಂದ ರಜೆ ಘೋಷಣೆಯಾಗುತ್ತಿಲ್ಲ. ಮುಂದಿನ ವರ್ಷದಿಂದ ಇದು ಜಾರಿಗೆ ಬರುವುದಾಗಿ ಅವರು ತಿಳಿಸಿದರು.ಕನಕ, ಬಸವ ಹಾಗೂ ವಾಲ್ಮೀಕಿ ಜಯಂತಿ ಸೇರಿದಂತೆ ಕೆಲ ಜಯಂತಿಗಳ ರಜೆ ಕಡಿತಗೊಳಿಸುವ ಬಗ್ಗೆ ಕಾಂಗ್ರೆಸ್​-ಜೆಡಿಎಸ್​ ಸಚಿವರು ಅಂತಿಮ ನಿರ್ಣಯಕ್ಕೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ರಜೆಗಳನ್ನು ರದ್ದು ಮಾಡದೇ, ಯಥಾವತ್​ ಆಗಿ ಮುಂದುವರೆಸಲಾಗುವುದು. ಆದರೆ, ನಾಲ್ಕನೇ ಶನಿವಾರದಂದು ಸರ್ಕಾರಿ ರಜೆ ನೀಡಲು ಸಿಎಂ ಸೂಚಿಸಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

6ನೇ ವೇತನ ಆಯೋಗದ ಶಿಫಾರಸಿನಂತೆ ಜಯಂತಿಗಳನ್ನು ರದ್ದುಗೊಳಿಸುವ ಬಗ್ಗೆ ಪರಿಶೀಲನೆಗೆ ರಚಿಸಲಾಗಿದ್ದ ಕೃಷ್ಣಭೈರೇಗೌಡ ನೇತೃತ್ವದ ಸಂಪುಟ ಉಪಸಮಿತಿ ಜಯಂತಿಗಳ ರಜೆ ಕಡಿತಗೊಳಿಸಿ 4ನೇ ಶನಿವಾರ ರಜೆ ನೀಡುವಂತೆ ಶಿಫಾರಸು ಮಾಡಿತ್ತು. ಆದರೆ ಈ ವರದಿ ಅನ್ವಯ ಜಯಂತಿಗಳಿಗೆ ರಜೆ ಕಡಿತಗೊಳಿಸಿದರೆ, ಲಿಂಗಾಯತ, ಕುರುಬ, ವಾಲ್ಮೀಕಿ ಸೇರಿದಂತೆ ಅನೇಕ ಸಮುದಾಯಗಳು ಅಸಮಾಧಾನಕ್ಕೆ ಒಳಗಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಸಂಪುಟ ಸಭೆಯಲ್ಲಿ ಪರ ವಿರೋಧ ಚರ್ಚೆಯಾಗಿದ್ದು, ಅಂತಿಮವಾಗಿ ಈ ರಜೆ ಕಡಿತ ನಿರ್ಧಾರದಿಂದ ಸದ್ಯದ ಮಟ್ಟಿಗೆ ಹಿಂದೆ ಸರಿಯಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ವಿಘ್ನ ನಿವಾರಕ ಶ್ರೀ ಗಣೇಶನನ್ನು ನೆನೆಯುತ್ತಾ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 27 ಜನವರಿ, 2019 ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮಗುವಿನ ಒಂದು…

  • ಸಿನಿಮಾ

    ನುಡಿದಂತೆ ನಡೆದ “ಹಳ್ಳಿ ಹುಡುಗ ಪ್ರಥಮ್”.

    ನಮ್ಮ ದೇಶದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿರೋ ರಾಜಕಾರಣಿಗಳೇ ಸಾವಿರಾರೂ ಭರವಸೆಗಳನ್ನು ಕೊಡ್ತಾ ಇನ್ನೂ ಜೀವಂತವಾಗಿ ಸನ್ಮಾನ ಮಾಡಿಸಿಕೊಂಡು ಓಡಾಡುತ್ತಿರುವಾಗ, ಕನ್ನಡದ ಬಿಗಬಾಸ್ ಸಂಚಿಕೆ-4ರ ವಿಜೇತರಾದ ಒಳ್ಳೆ ಹುಡುಗ “ಪ್ರಥಮ್” ರವರು ಆ ದಿನ ತಾವು ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.

  • ಸುದ್ದಿ

    ನಾವು ಸಹ ಮಂಗಳ ಗ್ರಹಕ್ಕೆ ಹೋಗಬಹುದು ; ಇಲ್ಲಿದೆ ನೋಡಿ ಪೂರ್ತಿ ಮಾಹಿತಿ,.!!

    ಮಂಗಳಗ್ರಹಕ್ಕೆ ನೀವು ಹೋಗಲು ಇಚ್ಚಿಸುವಿರಾ..? ಅಂತರಿಕ್ಷಕ್ಕೆ ತೆರಳಲು ತುಂಬಾ ಸಿದ್ಧತೆ ಮತ್ತು ಭಾರೀ ಹಣ ಬೇಕು. ಸಾಮಾನ್ಯ ಜನರು ಅಲ್ಲಿಗೆ ಹೋಗುವುದು ಕನಸಿನ ಮಾತು…! ಆದರೆ ಕೆಂಪುಗ್ರಹವನ್ನು ಹೋಲುವಂತೆ ಸ್ಥಳವೊಂದು ಈ ಭೂಮಂಡಲದಲ್ಲಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಉತ್ತರ ಸ್ಪೇನ್‍ನ ಗುಹೆಯೊಂದರಲ್ಲಿ ಮಂಗಳಗ್ರಹದ ಪರಿಸರವನ್ನು ಹೋಲುವ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಆಸ್ಟ್ರೋಲ್ಯಾಂಡ್ಸ್ ಎಂಬ ಸಂಸ್ಥೆ ನಿರ್ಮಿಸಿರುವ ಏರ್ ಸ್ಟೇಷನ್ ಎಂಬ ಈ ಸ್ಥಳವು ಕೆಂಪು ಗ್ರಹಕ್ಕೆ ಅಂತರಿಕ್ಷಯಾನ ಕೈಗೊಂಡ ಅನುಭವ ನೀಡುತ್ತದೆ. ಕಾಂಟಾಬ್ರಿಯಾದಲ್ಲಿನ ಅರ್ರೆದೊಂಡೊ ಎಂಬಲ್ಲಿ 1.5 ಕಿಲೋಮೀಟರ್…

  • ಸುದ್ದಿ

    ಬರ್ಗರ್ ತಿಂದ ತಕ್ಷಣವೇ ಆಟೋ ಚಾಲಕನ ಬಾಯಿಂದ ರಕ್ತ ಹೊರಬಂತು…ಕಾರಣ?

    ಮುಂಬೈ: ಆಟೋ ಚಾಲಕರೊಬ್ಬರು ಬರ್ಗರ್ ಕಿಂಗ್‍ನಲ್ಲಿ ಬರ್ಗರ್ ತಿಂದ ತಕ್ಷಣವೇ ಬಾಯಿಂದ ರಕ್ತ ಹೊರಬಂದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.ಸಾಜಿತ್ ಪಠಾಣ್(31) ಬರ್ಗರ್ ತಿಂದ ಆಟೋ ಚಾಲಕ. ಇವರು ಕಳೆದ ಬುಧವಾರ ತನ್ನ ಸ್ನೇಹಿತರ ಜೊತೆ ಬರ್ಗರ್ ಕಿಂಗ್‍ಗೆ ಬಂದಿದ್ದರು. ಅಲ್ಲಿ ಅವರು ಬರ್ಗರ್, ಫ್ರೈಂಚ್ ಫ್ರಯಿಸ್ ಹಾಗೂ ಸಾಫ್ಟ್ ಡ್ರಿಂಕ್ ಆರ್ಡರ್ ಮಾಡಿದ್ದರು. ಸಾಜಿತ್ ಬರ್ಗರ್ ತಿಂದ ತಕ್ಷಣವೇ ಗಂಟಲಿನಲ್ಲಿ ನೋವುಂಟಾಗಿ ರಕ್ತ ಹೊರ ಬಂದಿದೆ. ಸಾಜಿತ್ ಗಂಟಲಿನಲ್ಲಿ ಏನೋ ಸಿಲುಕಿಕೊಂಡಿದೆ ಎಂದು ಹೇಳಿದ್ದಾರೆ. ಹೀಗಾಗಿ…

  • ಆರೋಗ್ಯ

    ಹೆಚ್ಚಾಗಿ ಲಟಿಕೆ ತೆಗೆಯುವ ಅಭ್ಯಾಸ ಇದೆಯಾ, ಹಾಗಾದರೆ ಅಪಾಯ ತಪ್ಪಿದಲ್ಲ.

    ಲಟಿಕೆ ತಗೆಯದ ವ್ಯಕ್ತಿ ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಲಟಿಕೆ ಎಲ್ಲರೂ ತೆಗೆಯುತ್ತಾರೆ, ಇನ್ನು ಕೆಲವರು ಕೈ ಕಾಲು ಬೆರಳುಗಳ ನೋವಿನಿಂದ ಲಟಿಕೆ ತೆಗೆದರೆ ಇನ್ನು ಕೆಲವರು ಲಟಿಕೆಯ ಶಬ್ದವನ್ನ ಕೇಳಲು ಲಟಿಕೆ ತೆಗೆಯುತ್ತಾರೆ. ಇನ್ನು ಕೆಲವರಿಗೆ ಈ ಲಟಿಕೆ ತೆಗೆಯುವುದು ಒಂದು ತರಾ ಚಟ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಕೆಲವು ಜನರು ಇಡೀ ಹೊತ್ತು ಕೈ ಮತ್ತು ಕಾಲುಗಳ ಲಟಿಕೆ ತೆಗೆಯುತ್ತಲೇ ಇರುತ್ತಾರೆ ಮತ್ತು…

  • Sports

    ಶಿವಂದುಬೆಗೆ ಕೋವಿಡ್-19

    ಶಿವಂದುಬೆಗೆ ಕೋವಿಡ್-19 ಪತ್ತೆಯಾಗಿದೆ.ವೀಡೀಯೊ ಅನಲಿಸ್ಟ್ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. ಶಿವಂದುಬೆ ಬದಲಿ ಆಟಗಾರನಾಗಿ ಸಾಯಿರಾಜ್ ಪಾಟೀಲ್ ಹೆಸರು ಘೋಷಣೆ ಮಾಡಿದ್ದಾರೆ. ಇಂದು ಮುಂಬೈ ತಂಡ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಕೋಲ್ಕತ್ತಾ ನಗರಕ್ಕೆ ತೆರಳಬೇಕಿತ್ತು. ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಶಿವಂದುಬೆ ತೆರಳಲಿಲ್ಲ ಕೋವಿಡ್-19 ಕಾರಣದಿಂದ ರಣಜಿ ಟ್ರೋಫಿ ಪಂದ್ಯಾವಳಿಯನ್ನು 6 ನಗರಗಳಲ್ಲಿ ಆಯೋಜಿಸಲಾಗಿದೆ. ಅವು ಯಾವುವೆಂದರೆ ಕೋಲ್ಕತ್ತಾ ಬೆಂಗಳೂರು ಚೆನ್ನೈ ಅಹಮದಾಬಾದ್ ಮುಂಬೈ ತಿರುವನಂತಪುರಂ  

    Loading