ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೇ ಸ್ಟ್ರೆಚರ್ನಲ್ಲಿ ಪುರುಷ ರೋಗಿ ಜೊತೆ ಎಕ್ಸ್ ರೇ ರೂಮಿಗೆ ಹೋಗುವಂತೆ ಮಹಿಳೆಗೆ ಒತ್ತಾಯಿಸಿದ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ಇರುವ ಮಹಾರಾಜ ಯಶವಂತರಾವ್ ಆಸ್ಪತ್ರೆಯಲ್ಲಿ ನಡೆದಿದೆ.ಸಂಗೀತಾ ಪುರುಷ ರೋಗಿ ಜೊತೆ ಸ್ಟ್ರೆಚರ್ ಹಂಚಿಕೊಂಡ ಮಹಿಳೆ. ಸಂಗೀತಾ ಕಳೆದ 12 ದಿನಗಳ ಹಿಂದೆ ಬಲಗಾಲು ಫ್ರ್ಯಾಕ್ಚರ್ ಆಗಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಎಕ್ಸ್ ರೇ ರೂಮಿಗೆ ಕರೆದುಕೊಂಡು ಹೋಗಬೇಕಾದರೆ ಸ್ಟ್ರೆಚರ್ ಇಲ್ಲವೆಂದು ಪುರುಷ ರೋಗಿಯಿದ್ದ ಸ್ಟ್ರೆಚರ್ನಲ್ಲಿ ಹೋಗುವಂತೆ ಸಿಬ್ಬಂದಿ ಒತ್ತಾಯ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ನನ್ನ ಪತ್ನಿ ಸಂಗೀತಾ ಆರ್ಥೋಪೆಡಿಕ್ ವಾರ್ಡ್ನಲ್ಲಿ ದಾಖಲಾಗಿದ್ದಳು. ಆಸ್ಪತ್ರೆಯಲ್ಲಿ ಸ್ಟ್ರೆಚರ್ ಕಡಿಮೆ ಇದ್ದ ಕಾರಣ ಎಕ್ಸ್ ರೇ ರೂಮಿಗೆ ಆಕೆಯನ್ನು ಪುರುಷನ ಜೊತೆ ಕಳುಹಿಸಲಾಯಿತು. ಇದನ್ನು ನೋಡಿ ನಾನು ಅಸಹಾಯಕನಾಗಿದ್ದೆ. ನನ್ನ ಪತ್ನಿಗೆ ಚಿಕಿತ್ಸೆ ದೊರೆಯಬೇಕು ಎಂಬ ಒಂದೇ ಕಾರಣದಿಂದ ಆಕೆಯನ್ನು ಆ ಸ್ಟ್ರೆಚರ್ನಲ್ಲಿ ಹೋಗಲು ಅನುಮತಿ ನೀಡಿದೆ ಎಂದು ಸಂಗೀತಾ ಅವರ ಪತಿ ಧಮೇಂದ್ರ ತಿಳಿಸಿದ್ದಾರೆ.
ಒಂದೇ ಸ್ಟ್ರೆಚರ್ನಲ್ಲಿ ಏಕೆ ಇಬ್ಬರು ಇದ್ದೀರಿ ಎಂದು ಸಂಗೀತಾ ಅವರನ್ನು ಪ್ರಶ್ನಿಸಿದಾಗ “ವೈದ್ಯರು ಈ ರೀತಿ ಹೋಗುವಂತೆ ಆದೇಶ ನೀಡಿದ್ದರು. ಈ ರೀತಿ ಸ್ಟ್ರೆಚರ್ನಲ್ಲಿ ಹೋಗುವುದರಿಂದ ಕಷ್ಟವಾಗುತ್ತದೆ ಎಂದು ನಾವು ಅವರಿಗೆ ತಿಳಿಸಿದ್ದೆ” ಎಂದು ಹೇಳಿದ್ದಾರೆ.ಈ ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಆಸ್ಪತ್ರೆಯ ಅಧಿಕ್ಷಕ ಡಾ. ಪಿ.ಎಸ್ ಠಾಕೂರ್ ಆಸ್ಪತ್ರೆಯ ಸಿಬ್ಬಂದಿ, ವೈದ್ಯರಿಗೆ, ನರ್ಸ್, ವಾರ್ಡ್ ಬಾಯ್ಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ಅಲ್ಲದೆ ಇವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ತಿಳಿಸಿದ್ದಾರೆ.
ಬಳಿಕ ಮಾತನಾಡಿದ ಠಾಕೂರ್ ಅವರು, ಇಲ್ಲಿ ಸ್ಟ್ರೆಚರ್ ಹಾಗೂ ಇತರ ಸೌಲಭ್ಯಗಳ ಕೊರತೆ ಇದೆ ಎಂದು ತಿಳಿಸಿದ್ದಾರೆ.ವೈದ್ಯರು ನಮಗೆ ಕೊಟ್ಟ ಸಮಯದಲ್ಲಿ ಮಾತ್ರ ಅವರು ವಾರ್ಡ್ ಗೆ ಭೇಟಿ ನೀಡುತ್ತಾರೆ. ಅವರ ಡ್ಯೂಟಿ ಸಮಯ ಮುಗಿದು ಹೋದರೆ ಅವರು ರೋಗಿಗಳಿಗೆ ಚಿಕಿತ್ಸೆ ನೀಡುವುದಿಲ್ಲ ಎಂದು ಸಂಗೀತಾ ಪತಿ ಧಮೇಂದ್ರ ವೈದ್ಯರ ವಿರುದ್ಧ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮರುಗಳಿಗೆಯೇ ರೈತರು, ಮೀನುಗಾರರು ಮತ್ತು ನೇಕಾರರಿಗೆ ಸಿಹಿಸುದ್ದಿ ನೀಡಿದ್ದ ಸಿಎಂ ಯಡಿಯೂರಪ್ಪ ವಿದ್ಯಾರ್ಥಿಗಳಿಗೂ ಶೀಘ್ರದಲ್ಲೇ ಶುಭ ಸುದ್ದಿ ನೀಡಲಿದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡುತ್ತಿರುವ ವಾರ್ಷಿಕ ವೆಚ್ಚವನ್ನು ಹೆಚ್ಚಳ ಮಾಡಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಪ್ರಸ್ತುತ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯಡಿ ರಾಜ್ಯದಲ್ಲಿ 2438 ಹಾಸ್ಟೆಲ್ಗಳಿದ್ದು, 1,88,500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಾರ್ಷಿಕ ವೆಚ್ಚವಾಗಿ ಪ್ರತಿ ವಿದ್ಯಾರ್ಥಿಗೆ 1600 ರೂ. ನೀಡಲಾಗುತ್ತಿದೆ. ಇದೀಗ…
ನೂಡಲ್ಸ್ ಎಲ್ಲರಿಗೂ ಇಷ್ಟ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ನೂಡಲ್ಸ್ ತಿನ್ನಲು ಇಷ್ಟಪಡ್ತಾರೆ. ತಿನ್ನುವ ಈ ನೂಡಲ್ಸನ್ನು ವ್ಯಕ್ತಿಯೊಬ್ಬ ಮನೆ ಕಟ್ಟಲು ಬಳಸಿದ್ದಾನೆ. ಯಸ್, ಇದು ಸತ್ಯ. ಚೀನಾದ ಜಾಂಗ್ ಎಂಬ ವ್ಯಕ್ತಿ ನೂಡಲ್ಸ್ ನಿಂದ ಮನೆ ನಿರ್ಮಾಣ ಮಾಡಿದ್ದಾನೆ. ಶೀಘ್ರವೇ ತಂದೆಯಾಗಲಿರುವ ಜಾಂಗ್, ಹುಟ್ಟುವ ಮಗುವಿಗಾಗಿ ಈ ಮನೆ ನಿರ್ಮಾಣ ಮಾಡಿದ್ದಾನೆ. ಅವಧಿ ಮೀರಿದ 2000 ನೂಡಲ್ಸ್ ಪ್ಯಾಕ್ ನಿಂದ ಈ ಮನೆ ನಿರ್ಮಾಣವಾಗಿದೆಯಂತೆ. ಜಾಂಗ್, ಮನೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಆತನ ಕೆಲಸಕ್ಕೆ…
ಹಮದಾಬಾದ್: ಕಾರಿನೊಳಗೆ ಧಗೆ ಹೆಚ್ಚಾದರೆ, ಕಾರು ಬಿಸಿಯಾದರೇ ಕಾರಿನಲ್ಲಿ ಎಸಿ ಹಾಕಿಕೊಳ್ಳುತ್ತೇವೆ, ಕಾರನ್ನು ನೆರಳಿಗೆ ನಿಲ್ಲಿಸುತ್ತೇವೆ, ಆದರೆ ಇಲ್ಲೊಬ್ಬ ಮಹಿಳೆ ತಮ್ಮ ಕಾರನ್ನು ತಂಪಾಗಿಸಲು ವಿಶೇಷ ಪ್ರಯೋಗ ಮಾಡಿದ್ದಾರೆ. ಅಹಮದಾಬಾದ್ ನಗರದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿದ್ದು ತಾಪಮಾನವು 45 ಡಿಗ್ರಿವರೆಗೂ ಏರಿಕೆಯಾಗಿದೆ. ಹೀಗಾಗಿ ಇಡೀ ಕಾರಿಗೆ ಸಗಣಿಯನ್ನು ಹಚ್ಚಿ ಕಾರನ್ನು ತಂಪಾಗಿರಿಸುವ ಜತೆಗೆ ಚಾಲನೆ ವೇಳೆ ತಂಪಾದ ಅನುಭವವನ್ನು ಪಡೆಯುವ ಪ್ರಯತ್ನವನ್ನು ಇಲ್ಲಿನ ಮಹಿಳೆಯೊಬ್ಬರು ಮಾಡಿದ್ದಾರೆ. ಸೆಜಲ್ ಶಾ ಎಂಬ ಮಹಿಳೆ ತಮ್ಮ ಟಯೋಟೋ ಆಲ್ಟೀಸ್ ಕಾರಿನ…
ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.
ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಚಿಕ್ಕಬಳ್ಳಾಪುರದಲ್ಲಿ ಇದೇ ತಿಂಗಳು 07ಕ್ಕೆ ಬೃಹತ್ ಉದ್ಯೋಗ ಮೇಳ ಅಯೋಜಿಸಲಾಗುತ್ತಿದೆ.
ಮಧ್ಯಪ್ರದೇಶ ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆ ,ವಿಧವೆಯರ ಬಾಳು ಬಂಗಾರಗೊಳಿಸುವ ಕಾರಣಕ್ಕಾಗಿ ಹೊಸ ಯೋಜನೆ ರೂಪಿಸಿದೆ.ಈ ಯೋಜನೆಯ ಪ್ರಕಾರ ವಿಧವೆಯನ್ನು ಪುನರ್ ವಿವಾಹವಾಗುವ ವ್ಯಕ್ತಿಗೆ, ಪ್ರೋತ್ಸಾಹ ಧನ ನೀಡಲಾಗುತ್ತದೆ.