ರೆಸಿಪಿ

ಬೇಕರಿ ಸ್ಟೈಲ್ ಸಿಹಿ ಬೂಂದಿ & ಖಾರಾ ಬೂಂದಿ ಮಾಡುವ ವಿಧಾನ.

182

ಸಿಹಿ ಬೂಂದಿ ಮಾಡಲು ಬೇಕಾದ ಪದಾರ್ಥಗಳು : ಕಡ್ಲೆ ಹಿಟ್ಟು 2 ಕಪ್, ಅಡುಗೆ ಸೋಡ 1/4 ಚಮಚ, ಉಪ್ಪು ಚಿಟಿಕೆ, ದ್ರಾಕ್ಷಿ 2 ಚಮಚ, ಗೋಡಂಬಿ 2 ಚಮಚ, ತುಪ್ಪ 2 ಚಮಚ, ಸಕ್ಕರೆ 1/2ಕಪ್, ಏಲಕ್ಕಿ ಪುಡಿ 1/2 ಚಮಚ, ಅಡುಗೆ ಎಣ್ಣೆ 2 ಕಪ್.

ಮಾಡುವ ವಿಧಾನ : ಕಡ್ಲೆಹಿಟ್ಟು , ಉಪ್ಪುಚಿಟಿಕೆ , ಅಡುಗೆ ಸೋಡ ಚೆನ್ನಾಗಿ ಮಿಶ್ರ ಮಾಡಿ. ಸ್ವಲ್ಪ ಸ್ವಲ್ಪ ನೀರು ಚಿಮುಕಿಸಿ ,ಇಡ್ಲಿ ಹಿಟ್ಟಿನ ಹದಕ್ಕೆ ಕಲಸಿ ಕೊಳ್ಳಿ. ಸಕ್ಕರೆ ಪಾಕ ಒಂದು ಕಪ್ ಸಕ್ಕರೆ ಗೆ ಮುಕ್ಕಾಲು ಕಪ್ ನೀರು ಸೇ ರಿಸಿ ಕುದಿಸಿ, 5 ನಿಮಿಷ ಏಲಕ್ಕಿ ಪುಡಿಯನ್ನು ಸೇರಿಸಿ. ಸ್ಟೌ ಆರಿಸಿ. ಬಾಣಲೆಯಲ್ಲಿ ಎಣ್ಣೆ ಹಾಕಿ. ಕಾದಮೇಲೆ ಕಲಸಿದ ಹಿಟ್ಟನ್ನು ಬೂಂದಿ ಜರಡಿ ಯಲ್ಲಿ ಹಾಕಿ. ಕಾದ ಎಣ್ಣೆಗೆ ಉದುರಿಸಿ. ಗರಿಗರಿಯಾಗಿ ಕರಿದು ತೆಗೆದು, ಸಕ್ಕರೆ ಪಾಕಕ್ಕೆ ಹಾಕಿ, 2 ನಿಮಿಷಗಳ ಕಾಲ ನೆನೆಯಲಿ. ನಂತರ ತೆಗೆದು ಬೇರೆ ಪಾತ್ರೆಗೆ ಹಾಕಿ. ಆರಲು ಬಿಡಿ. ದ್ರಾಕ್ಷಿ ಗೋಡಂಬಿ ತುಪ್ಪದಲ್ಲಿ ಹುರಿದು ಉದುರಿಸಿ. ಸಿಹಿ ಬೂಂದಿ ಸವಿಯಲು ಸಿದ್ಧ.

ಖಾರಾ ಬೂಂದಿ : 2ಕಪ್ ಕಡ್ಲೆ ಹಿಟ್ಟು, ಅಚ್ಚಖಾರದಪುಡಿ 2 ಚಮಚ , ಹಿಂಗು, ಉಪ್ಪು, ಸ್ವಲ್ಪ ಅರಿಶಿನ ಸೇರಿಸಿ ಚೆನ್ನಾಗಿ ಕಲಸಿ. ಸ್ವಲ್ಪ ಸ್ವಲ್ಪ ನೀರು ಚಿಮುಕಿಸಿ (ಇಡ್ಲಿ ಹಿಟ್ಟಿನ ಹದಕ್ಕೆ) ಚೆನ್ನಾಗಿ ಕಲಸಿ. ಬಾಣಲೆಯಲ್ಲಿ ಎಣ್ಣೆ ಹಾಕಿ ಕಾಯಿಸಿ ಬೂಂದಿ ಜರಡಿಯಲ್ಲಿ ಕಲಸಿದ ಹಿಟ್ಟನ್ನು ಉದುರಿಸಿ ಕರಿಯಿರಿ. ಕಡ್ಲೆಬೀಜ 1/2 ಕಪ್, ಸಣ್ಣಗೆ ಹೆಚ್ಚಿದ, ಕೊಬ್ಬರಿ 1/4 ಕಪ್, ಹುರಿಗಡಲೆ 1/2 ಕಪ್, ಕರಿಬೇವಿನ ಸೊಪ್ಪು ಒಂದು ಹಿಡಿ, ಒಣಮೆಣಸಿನಕಾಯಿ 7-8 ಚೂರು ಗಳು ಎಲ್ಲವನ್ನೂ ಬೇರೆ ಬೇರೆ ಕರಿಯಿರಿ. ನಂತರ ಕರಿದಿರುವ ಬೂಂದಿಯನ್ನು ಮಿಶ್ರ ಮಾಡಿ.
ಚೆನ್ನಾಗಿ ಮಿಶ್ರ ಮಾಡಿ. ಖಾರಾ ಬೂಂದಿ ಸವಿಯಲು ಸಿದ್ಧ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಈ ಪ್ರದೇಶದಲ್ಲಿ ಮದುವೆಯಾದ ಮೊದಲ ರಾತ್ರಿಯೇ 8 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ..!ತಿಳಿಯಲು ಈ ಲೇಖನ ಓದಿ..

    ಯೆಮೆನ್ ನಲ್ಲಿ ಮದುವೆಯಾದ ಮೊದಲ ರಾತ್ರಿಯೇ 8 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ವಿಶ್ವದಾದ್ಯಂತ ಮಹಿಳಾ ಸಂಘಟನೆಗಳು ಇದರ ವಿರುದ್ಧ ತಿರುಗಿ ಬಿದ್ದಿವೆ. ಯೆಮೆನ್ ಕೆಟ್ಟ ಪದ್ಧತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ.

  • ಸುದ್ದಿ

    ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್,.!!

    ಸ್ಯಾಂಡಲ್‍ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್  ಎಂದರೆ ನಮ್ಮೆಲ್ಲರ ಅಚ್ಚುಮೆಚ್ಚಿನ  ಜೋಡಿ. ರಾಧಿಕಾ ಪಂಡಿತ್ ಅವರು  ಇಂದು ಮುಂಜಾನೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು  ಮಗು ಇಬ್ಬರು  ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದವರು ತಿಳಿಸಿದ್ದಾರೆ. ಸದ್ಯ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್  ಮನೆಯವರು  ಮತ್ತು  ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ತುಂಬಾ  ಖುಷಿಯಾಗಿದ್ದಾರೆ. ಇತ್ತೀಚೆಗೆ ರಾಧಿಕಾ ಪಂಡಿತ್…

  • ಸುದ್ದಿ

    ತನ್ನ ಧ್ವನಿಯಿಂದಲೇ ಬಾಟಲ್ ಕ್ಯಾಪ್ ತೆರೆದ ಗಾಯಕಿ….!

    ಸಾಮಾಜಿಕ ಜಾಲತಾಣಗಳಲ್ಲಿ ಹೊಸತೊಂದು ಚಾಲೆಂಜ್ ಬಂದಿದೆ; ಅದೇ ಬಾಟಲ್ ಕ್ಯಾಪ್ ಚ್ಯಾಲೆಂಜ್. ಇದರಲ್ಲಿ ಚಾಲೆಂಜ್ ತಗೊಂಡವರು ರೌಂಡ್‌ ಹೌಸ್ ಕಿಕ್ ಹೊಡೆದು ಬಾಟಲ್‌ಗೆ ಹಾಕಿದ ಮುಚ್ಚಳವನ್ನು ತೆಗೆಯಬೇಕು. ಜೇಸನ್ ಸ್ಟ್ಯಾಥಮ್, ಅಕ್ಷಯ್ ಕುಮಾರ್, ಟೈಗರ್ ಶ್ರಾಫ್‌ರಂತಹ ನಟರು ಹಾಗೂ ಹಲವು ಫೈಟರ್‌ಗಳು ಇದರಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಇಲ್ಲೊಬ್ಬ ಗಾಯಕಿ ಕೇವಲ ತನ್ನ ಧ್ವನಿಯಿಂದಲೇ ಬಾಟಲ್ ಕ್ಯಾಪ್ ಎಗರಿಸಿರುವಂತೆ ಕಾಣುತ್ತದೆ. ಮರಿಯಾ ಕ್ಯಾರಿ ಎನ್ನುವ ಅಮೆರಿಕಾದ ಗಾಯಕಿ ಟ್ವೀಟರ್‌ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಅವರು ಹೈ ಪಿಚ್‌ನಲ್ಲಿ ರಾಗ ಎಳೆಯುತ್ತಿದ್ದಂತೆ…

  • ಸುದ್ದಿ

    ತಿರುವನಂತಪುರಂ ದೇವಾಲಯದ ಏಳನೇ ಬಾಗಿಲಿನ ರಹಸ್ಯ ಇಲ್ಲಿದೆ ನೋಡಿ.

    ಭಾರತದಲ್ಲಿ ಅನೇಕ ದೇವಾಲಯಗಳಿವೆ. ಆದರೆ ಕೆಲವು ದೇವಾಲಯಗಳ ರಹಸ್ಯಗಳನ್ನು ಇಲ್ಲಿಯವರೆಗೆ ಯಾರೂ ಬಹಿರಂಗಪಡಿಸಿಲ್ಲ. ಇಂದು ನಾವು ನಿಮಗೆ ಕೇರಳದ ತಿರುವನಂತಪುರಂನಲ್ಲಿರುವ ಪದ್ಮನಾಭಸ್ವಾಮಿ ದೇವಸ್ಥಾನದ ಬಗ್ಗೆ ಹೇಳಲಿದ್ದೇವೆ. ಈ ದೇವಾಲಯವನ್ನು ನೀವು ನೋಡಿರದಿದ್ದರೂ, ಅದರ ಹೆಸರನ್ನು ಖಂಡಿತ ಕೇಳಿರುತ್ತೀರಿ. ಏಕೆಂದರೆ ಈ ದೇವಾಲಯವು ಕೆಲವು ನಿಗೂಢತೆಗಳಿಗೆ ಮತ್ತು ಅದರ ಸಂಪತ್ತಿಗೆ ವಿಶ್ವದಾದ್ಯಂತ ಪ್ರಸಿದ್ಧವಾಗಿದೆ. ಆದ್ದರಿಂದ ಇದನ್ನು ಭಾರತದ ಶ್ರೀಮಂತ ದೇವಾಲಯ ಎಂದೂ ಕರೆಯುತ್ತಾರೆ. ಈ ದೇವಾಲಯದಲ್ಲಿ ಅನೇಕ ರಹಸ್ಯ ನೆಲಮಾಳಿಗೆಗಳಿವೆ. ಅವುಗಳಲ್ಲಿ ಕೆಲವು ತೆರೆದಿವೆ. ಆ ಮಳಿಗೆಗಳಿಂದ ಕೋಟ್ಯಂತರ…

  • corona, Health, karnataka, ಆರೋಗ್ಯ, ಕರ್ನಾಟಕ

    ರಾಜ್ಯದಲ್ಲಿ ಟಫ್ ರೂಲ್ಸ್ ಮತ್ತೆ ಜಾರಿ

    ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ   ಸರ್ಕಾರಿ ಕಚೇರಿಗಳು ಮಾಲ್​ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…

    Loading