ರೆಸಿಪಿ

ಚಳಿಗಾಲಕ್ಕೆ ಬಿಸಿ ಬಿಸಿ ಹಳ್ಳಿ ಶೈಲಿಯ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಮಾಡುವ ವಿಧಾನ ನೋಡಿ…

1425

ಈಗಂತೂ ಚಳಿಗಾಲ. ಏನಾದರೂ ಸ್ಪೈಸಿ ಸ್ಪೈಸಿ ತಿನ್ನಲೇ ಬೇಕು ಅನ್ನಿಸದೆ ಇರೋದಿಲ್ಲ. ಅದರಲ್ಲೂ ನಾನ್ವೆಜ್ ತಿನ್ನುವವರು ಚಿಕನ್ ನಲ್ಲಿ ವಿಧ ವಿಧವಾದ ಸ್ಪೈಸಿಯಾದ ಕಬಾಬ್, ಚಿಕನ್ ಫ್ರೈ ಮಾಡಿ ತಿನ್ನುತ್ತಾರೆ.
ಆದರೆ ಇನ್ನೂ ಏನಾದರೂ ಸ್ಪೆಷಲ್ ಮಾಡಬೇಕು ಎನ್ನಿಸಿದರೆ ಈ ಚಳಿಗಾಲದಲ್ಲಿ ಅದೂ ಹಳ್ಳಿ ಶೈಲಿಯಲ್ಲಿ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಆದರೆ ಮಾಡೋದು ಹೇಗೆ ಗೊತ್ತಿಲ್ಲ ಎಂದರೆ ಚಿಕನ್ ಚಾಪ್ಸ್ ಮಾಡುವ ವಿಧಾನ ಇಲ್ಲಿದೆ ನೋಡಿ…

ಚಿಕನ್ ಚಾಪ್ಸ್ ಮಾಡಲು ಬೇಕಾಗುವ ಸಾಮಾಗ್ರಿಗಳು

ಈರುಳ್ಳಿ – 1 ದಪ್ಪದ್ದು, ಪುದಿನ ಸೊಪ್ಪು – ಸ್ವಲ್ಪ, ಕೊತ್ತಂಬರಿ ಸೊಪ್ಪು – ಸ್ವಲ್ಪ
ತೆಂಗಿನ ತುರಿ – 2 ಚಮಚ, ಬೆಳ್ಳುಳ್ಳಿ – ಒಂದು ಗೆಡ್ಡೆ, ಹಸಿರು ಮೆಣಸಿನಕಾಯಿ – 3
ಶುಂಠಿ – ಸ್ವಲ್ಪ, ಚಕ್ಕೆ-ಲವಂಗ – 2-3, ಚಿಕನ್ – 1/2 ಕೆ.ಜಿ, ಎಣ್ಣೆ -3-4 ಚಮಚ
ಉಪ್ಪು ರುಚಿಗೆ ತಕ್ಕಷ್ಟು, ದನಿಯಾ ಪುಡಿ – 1 ಚಮಚ, ಮೆಣಸಿನ ಪುಡಿ – 1 ಚಮಚ
ಮೊದಲು ಮಸಲಾ ರುಬ್ಬಿಕೊಳ್ಳಿ. ತೆಂಗಿನ ತುರಿ, ಶುಂಠಿ, ಬೆಳ್ಳುಳ್ಳಿ, ಚಕ್ಕೆ, ಲವಂಗ್, ಮೆಣಸಿನಕಾಯಿ, ಕೊತ್ತಂಬರಿ ಸೊಪ್ಪು, ಪುದಿನ ಮಿಕ್ಸಿ ಜಾರಿಗೆ ಹಾಕಿ ರುಬ್ಬಿಕೊಳ್ಳಿ.(ತುಂಬಾ ನುಣ್ಣಗೆ ಬೇಡ ಸ್ವಲ್ಪ ತುರಿಯಾಗಿ ರುಬ್ಬಿಕೊಳ್ಳಿ).

ಮಾಡುವ ವಿಧಾನ ಹೇಗೆಂದು ತಿಳಿಯಿರಿ…

  • ಮೊದಲಿಗೆ ಚಿಕನ್ ಚೆನ್ನಾಗಿ ತೊಳೆದು ಚಿಟಿಕೆ ಅರಿಶಿಣ ಮತ್ತು ಚಿಟಿಕೆ ಉಪ್ಪನ್ನು ಹಾಕಿ ನೆನೆಸಿಡಿ.
  • ಈಗ ಒಂದು ಬಾಣಲಿಗೆ ಎಣ್ಣೆ ಹಾಕಿ, ಬಿಸಿಯಾದ ಬಳಿಕ 2 ಬೆಳ್ಳುಳ್ಳಿ ಮತ್ತು ಈರುಳ್ಳಿ ಹಾಕಿ ಫ್ರೈ ಮಾಡಿ.(ಸ್ಟವ್ ಮೀಡಿಯಮ್ ನಲ್ಲಿ ಇರಲಿ)
  • ಸ್ವಲ್ಪ ಈರುಳ್ಳಿ ಫ್ರೈ ಆದ ಮೇಲೆ ತೊಳೆದಿಟ್ಟಿದ್ದ ಚಿಕನ್, ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಚಿಕನ್ ಚೆನ್ನಾಗಿ ಫ್ರೈ ಮಾಡಿ.ಚಿಕನ್ ಹಾಕಿದ ನಂತರ ನೀರಿನಾಂಶ ಬಿಟ್ಟುಕೊಳ್ಳುತ್ತದೆ. ಆದ್ದರಿಂದ ನೀರು ಸಂಪೂರ್ಣವಾಗಿ ಪಂಗೋವರೆಗೂ (ನೀರಿನ ಅಂಶ ಕಡಿಮೆ ಆಗುವವರೆಗೆ) ಚಿಕನ್ ಫ್ರೈ ಮಾಡಿಕೊಳ್ಳಿ.
  • ಈ ನೀರು ಪಂಗಿದ ನಂತರ 1 ಚಮಚ ದನಿಯಾ ಪುಡಿ ಮತ್ತು 1 ಚಮಚ ಮೆಣಸಿನ ಪುಡಿ ಹಾಕಿ ಫ್ರೈ ಮಾಡಿ.
  • ರುಬ್ಬಿದ ಮಸಾಲೆ ಹಾಕಿ, ಸ್ವಲ್ಪ ನೀರು ಹಾಕಿ ಲಿಡ್ ಮುಚ್ಚಿ 10 ನಿಮಿಷ ಬೇಯಲು ಬಿಡಿ(ಆಗಾಗ ಲಿಡ್ ತೆಗೆದು ತಿರುಗಿಸುತ್ತೀರಿ)
  • ಈಗ ಸ್ಟವ್ ಆಫ್ ಮಾಡಿದರೆ ಚಿಕನ್ ಚಾಪ್ಸ್ ತಿನ್ನಲು ಸಿದ್ಧ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ