ಸುದ್ದಿ

ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ ಮಹಿಳಾ ಐಪಿಎಸ್‌ ಅಧಿಕಾರಿ, ಇದಕ್ಕೆ ಕಾರಣವಾದರೂ ಏನು ?

47

ಹೆಣ್ಣಾಗಿದ್ದುಕೊಂಡ ಆ ಅಧಿಕಾರಿ ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ್ದಾರೆ.ಹಾಗಂತ ಈಕೆಯೇನೂ ಅನಕ್ಷರಸ್ಥರಲ್ಲ. ಐಪಿಎಸ್ ಪಾಸ್ ಮಾಡಿಕೊಂಡು ಹಿರಿಯ ಪೊಲೀಸ್ ಅಧಿಕಾರಿಯಾಗಿರುವವರು. ಅಧಿಕಾರದ ಮದವನ್ನು ನೆತ್ತಿಗೇರಿಸಿಕೊಂಡು ಈ ಕೆಲಸ ಮಾಡಿದ್ದಾರೆ.

ಈ ಘಟನೆ ಒಡಿಶಾದಲ್ಲಿ ನಡೆದಿದೆ. ಕಳೆದ ಜುಲೈ 3 ರಂದು ಕನಿಕಾ ಗ್ರಾಮದಲ್ಲಿ ವೇಗವಾಗಿ ಬಂದ ಎಸ್.ಯು.ವಿ. ವಾಹನ 19 ವರ್ಷದ ಯುವಕನ ಮೇಲೆ ಹರಿದ ಪರಿಣಾಮ ಆತ ಮೃತಪಟ್ಟಿದ್ದ. ಇದನ್ನು ಖಂಡಿಸಿ ಕನಿಕಾ ಗ್ರಾಮಸ್ಥರು ಪ್ರತಿಭಟನೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರಲ್ಲದೇ ಈ ವೇಳೆ ಆಕ್ರೋಶಗೊಂಡು ಪೊಲೀಸ್ ಬೀಟ್ ಹೌಸ್ ಮೇಲೆ ಕಲ್ಲು ತೂರಾಟ ನಡೆಸಿದ್ದರು.

ಕಲ್ಲು ತೂರಾಟ ನಡೆಸಿದವರಲ್ಲಿ ಪೊಲೀಸಮ್ಮನಿಂದ ಒದೆಸಿಕೊಂಡ ಪ್ರಿಯಾಳ ಪತಿ ಉತ್ತಮ್ ಡೇ ಕೂಡ ಇದ್ದ. ಆತನನ್ನು ಎಳೆದೊಯ್ಯಲು ಸುಂದರ್ ಗಢ್ ನ ಎಸ್ಪಿ ಸೌಮ್ಯ ಮಿಶ್ರಾ ಬಂದಿದ್ದರು. ಇದಕ್ಕೆ ಅಡ್ಡಿಪಡಿಸಿದಾಗ ತುಂಬು ಗರ್ಭಿಣಿ ಪ್ರಿಯಾಳ ಹೊಟ್ಟೆಗೆ ಜಾಡಿಸಿ ಕಾಲಿನಿಂದ ಒದ್ದಿದ್ದಾರೆ.

ಒದ್ದ ರಭಸಕ್ಕೆ ಅಸ್ವಸ್ಥಳಾದ ಪ್ರಿಯಾಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಜುಲೈ 4 ರಂದು ಗರ್ಭಪಾತವಾಗಿದೆ. ಈ ಸಂಬಂಧ ಪ್ರಿಯಾ, ಸಬ್ ಡಿವಿಶನಲ್ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ ಗೆ ದೂರು ಸಲ್ಲಿಸಿದ್ದು, ಇದರ ವಿಚಾರಣೆ ನಡೆಸಿದ ನ್ಯಾಯಾಧೀಶರು, ದುರಹಂಕಾರಿ ಅಧಿಕಾರಿ ಸೌಮ್ಯ ಮಿಶ್ರಾ ವಿರುದ್ಧ ದೂರು ದಾಖಲಿಸಿ ತನಿಖೆ ನಡೆಸುವಂತೆ ಆದೇಶ ನೀಡಿದ್ದಾರೆ. ಇದರನ್ವಯ ಆಕೆಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ