ಸುದ್ದಿ

IMA ವಿರುದ್ಧ 11 ಸಾವಿರಕ್ಕು ಹೆಚ್ಚು ದಾಕಲಾದ ಕಂಪ್ಲೆಂಟ್…..!

22

ಐಎಂಎ ಜ್ಯುವೆಲ್ಲರ್ಸ್ ನಿಂದ ಮೋಸಕ್ಕೊಳಗಾಗಿರುವವರ ಕಂಪ್ಲೆಂಟ್ ಸಂಖ್ಯೆ 11 ಸಾವಿರಕ್ಕೇರಿದೆ. ಶಿವಾಜಿನಗರ ಸಮದ್ ಹೌಸ್ ಚೌಟ್ರಿಯಲ್ಲಿ ಬಂಡಲ್ ಬಂಡಲ್‍ಗಟ್ಟೆ ಕಂಪ್ಲೆಂಟ್‍ಗಳನ್ನು ಪೊಲೀಸರು ಸ್ವೀಕರಿಸಿದ್ದಾರೆ.

ಎಸ್‍ಐಟಿ ಮುಖ್ಯಸ್ಥರನ್ನಾಗಿ ಎಡಿಜಿಪಿ ಸಲೀಂ ನೇಮಕ ಬಹುತೇಕ ಖಚಿತ ಅಂತ ತಿಳಿದು ಬಂದಿದೆ. ಮುಸ್ಲಿಂ ಸಮುದಾಯದವರೇ ಆಗಿರುವ ಸಲೀಂ ನಿಯೋಜಿಸಿದ್ರೆ ಉತ್ತಮ, ತನಿಖೆಗೆ ಸಹಕಾರಿಯಾಗುತ್ತದೆ ಅನ್ನೋದು ಗೃಹ ಸಚಿವ ಎಂ.ಬಿ. ಪಾಟೀಲರ ಭಾವನೆ. ಹೀಗಾಗಿ, ಇಂದು ಗೃಹ ಸಚಿವರು ಆದೇಶ ಹೊರಡಿಸುವ ಸಾಧ್ಯತೆ ಇದೆ.

ಒಂದು ವೇಳೆ, ಸಲೀಂ ಹಿಂದೆ ಸರಿದರೆ, ಎಡಿಜಿಪಿ ಪ್ರತಾಪ್ ರೆಡ್ಡಿ ಅವರನ್ನು ನೇಮಿಸುವ ಸಾಧ್ಯತೆಯೂ ಇದೆ. ಈ ಮಧ್ಯೆ ಸಾವಿರಾರು ಹೂಡಿಕೆದಾರರಿಗೆ ಕೋಟ್ಯಂತರ ರೂಪಾಯಿ ಪಂಗನಾಮ ಹಾಕಿ ನಾಪತ್ತೆಯಾಗಿರುವ ಐಎಂಎ ಮಾಲೀಕನ ವಿರುದ್ಧ ರಸ್ತೆಗಿಳಿದಿದ್ದ ಮೋಸ ಹೋದವರು, ಧಿಡೀರ್ ಅಂತ ಶಾಸಕ ರೋಷನ್ ಬೇಗ್ ಮನೆಗೆ ಲಗ್ಗೆ ಇಟ್ಟಿದರು. ಕೋಲ್ಸ್ ಪಾರ್ಕ್ ನಲ್ಲಿರುವ ರೋಷನ್ ಬೇಗ್ ಮನೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆಯೇ ಪ್ರತಿಭಟನಾಕಾರರನ್ನ ಪೊಲೀಸರು ಮನವೊಲಿಸೋ ಯತ್ನ ಮಾಡಿದರು. ರೋಷನ್ ಬೇಗ್ ಮನೆಯಲ್ಲಿ ಇಲ್ಲ ಅನ್ನೋದು ತಿಳಿದು ಪ್ರತಿಭಟನಾಕಾರರು ಜಾಗ ಖಾಲಿ ಮಾಡಿದರು. ಶಾಸಕ ರೋಷನ್ ಬೇಗ್ ದೆಹಲಿಯಿಂದ ಬೆಂಗಳೂರಿಗೆ ಮರಳುತ್ತಿದ್ದು ಮುಂಜಾಗೃತ ಕ್ರಮವಾಗಿ ರೋಷನ್ ಬೇಗ್ ಮನೆ ಬಳಿ ಪೊಲೀಸ್ ಬೀಗಿ ಭದ್ರತೆ ಒದಗಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸಾವಿನಲ್ಲಿಯೂ ಸಹ ಸಾರ್ಥಕತೆ, ಮೆದುಳು ನಿಷ್ಕ್ರಿಯಗೊಂಡ ಉಡುಪಿ ಯುವಕನ ಅಂಗಾಂಗ ದಾನ…!

    ಇತ್ತೀಚಿಗೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಉಡುಪಿಯ ಬ್ರಹ್ಮಾವರದವಾರ ಸಂದೀಪ್ ಪೂಜಾರಿ ಮೇ 27ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಿ ಮರುದಿನ ಮೇ 28ರಂದು ವೈದ್ಯರು ಸಂದೀಪ್ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ಘೊಷಿಸಿದ್ದಾರೆ. ಆಗ ಅವರ ಸೋದರರಾದ ಪ್ರದೀಪ್ ಪೂಜಾರಿ ತನ್ನ ಸೋದರನ ಅಂಗಾಂಗ ದಾನಕ್ಕೆ ಸಮ್ಮತಿಸಿದ್ದಾರೆ. ಅಂಗಾಂಗ ದಾನಕ್ಕೆ ಒಪ್ಪಿಗೆ ಸಿಕ್ಕ…

  • ಸುದ್ದಿ

    ಶೀಘ್ರದಲ್ಲೆ ‘ಆಯುಷ್ಮಾನ್ ಭವ’ ರಿಲೀಸ್;ಶಿವಣ್ಣ ಅಭಿಮಾನಿಗಳಿಗೆ ಶುಭ ಸುದ್ದಿ..!

    ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ. ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ. ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ….

  • ಸುದ್ದಿ

    ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಯಾರು ಮಾಡುತ್ತಿರುವ ಮಹಿಳೆ ಈಗ 1 ಕೋಟಿಯ ಒಡತಿ,.! ಏಗೆ ಗೊತ್ತಾ.?

    ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್‍ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ…

  • ಉಪಯುಕ್ತ ಮಾಹಿತಿ

    14 ವಾಹನಗಳನ್ನು ಓಡಿಸಿ ದಾಖಲೆ ಬರೆದ 2ನೇ ತರಗತಿ ವಿದ್ಯಾರ್ಥಿ! ಮೈಸೂರಿನ ಈ ಸಾಹಸಿ ಬಗ್ಗೆ ತಿಳಿಯಲು ಇಲ್ಲಿ ನೋಡಿ…

    7 ವರ್ಷದ  ಬಾಲಕಿಯಬ್ಬಳು 14 ವಾಹನಗಳನ್ನು ಚಾಲನೆ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ  ದಾಖಲೆ ನಿರ್ಮಿಸಿದ್ದಾಳೆ. ಮೈಸೂರಿನ 2ನೇ ತರಗತಿ ವಿದ್ಯಾರ್ಥಿ ಈ ಸಾಹಸ ಮಾಡಿದ್ದಾಳೆ. 2ನೇ ತರಗತಿ ಓದುತ್ತಿರುವ ರಿಫಾ ತಸ್ಕೀನ್ ದಾಖಲೆ ನಿರ್ಮಿಸಿರುವ ಪುಟ್ಟ ಬಾಲಕಿಯಾಗಿದ್ದಾಳೆ. ದ್ವಿಚಕ್ರ ವಾಹನದಿಂದ ಬಹುಚತ್ರದ ಲಾರಿಯ ಸ್ವೀ ರಿಂಗ್ ಹಿಡಿದು ಕು ಳಿತ ಬಾಲಕಿ ದೂಳೆಬ್ಬಿಸುವ ವೇಗದಲ್ಲಿ ಮೈಸೂರಿನ ಈದ್ಗಾ ಮೈದಾನದಲ್ಲಿ ಹಲವು ಸುತ್ತುಗಳನ್ನು ಹಾಕುವ ಮೂಲಕ ನೆರೆದಿದ್ದ ಜನರಲ್ಲಿ ಅಚ್ಚರಿಯನ್ನುಂಟು ಮಾಡಿದಳು. ಬಳಿಕ ಬನ್ನಿಮಂಟಪದ ಸಂತ ಸೋಸೆಫ್…

  • Cinema

    ದರ್ಶನ್ ಸಿನಿಮಾ ಬಗ್ಗೆ ಧುನಿಯಾ ರಶ್ಮಿ ಹೇಳಿದ ಶಾಕಿಂಗ್ ಮಾತೇನು ಗೊತ್ತಾ?

    ಬಿಗ್ ಬಾಸ್ ಕನ್ನಡ 7ನೇ ಆವೃತ್ತಿಯ ಮೂರನೇ ವಾರ ದುನಿಯಾ ರಶ್ಮಿ ಎಲಿಮಿನೇಟ್ ಆಗಿದ್ದಾರೆ. ಬಿಗ್ ಮನೆಯಿಂದ ಹೊರಬಂದ ಬಳಿಕ ಸಂದರ್ಶನ ಒಂದರಲ್ಲಿ ಭಾಗವಹಿಸಿದ್ದರು. ಬಿಗ್ ಬಾಸ್ ಜರ್ನಿ ಬಗ್ಗೆ  ತಮ್ಮ ಅನುಭವಗಳನ್ನ ಹೇಳಿದ ರಶ್ಮಿ,  ಒಬ್ಬ ಸೂಪರ್ ಸ್ಟಾರ್ ಜೊತೆ ನಟಿಸಬೇಕು ಎಂಬ ಆಸೆಯನ್ನು ಅಂಚಿಕೊಂಡಿದ್ದಾರೆ. ರಶ್ಮಿ  ಅವರನ್ನು ನಿಮಗೆ ಕನ್ನಡದ ಯಾವ ನಟ ಇಷ್ಟ ಎಂದು ಸಂದರ್ಶನದಲ್ಲಿ ಕೇಳಿದರು. ಇದಕ್ಕೆ ಉತ್ತರವಾಗಿ  ಇಬ್ಬರು ನಟರ  ಹೆಸರನ್ನು ಹೇಳಿದರು, ಒಬ್ಬರನ್ನು  ಆಯ್ಕೆ ಮಾಡಬೇಕಿತ್ತು. ದುನಿಯಾ ರಶ್ಮಿ…

  • ರಾಜಕೀಯ

    ಮಂಡ್ಯದಲ್ಲಿ ಸುಮಲತಾಗೆ ಭಾರಿ ಮುನ್ನಡೆ, ನಿಖಿಲ್‌ಗೆ ಹಿನ್ನಡೆ

    ಮಂಡ್ಯ, ಮೇ 22: ತೀವ್ರ ಜಿದ್ದಾಜಿದ್ದಿನ ಕದನ ನಡೆಯುತ್ತಿರುವ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವಿನ ಪೈಪೋಟಿ ಕುತೂಹಲ ಕೆರಳಿಸಿದೆ. ಒಂದು ಸುತ್ತಿನ ಎಣಿಕೆಯಲ್ಲಿ ನಿಖಿಲ್ ಮುನ್ನಡೆ ಪಡೆದುಕೊಂಡರೆ ಸುಮಲತಾ ಮತ್ತೊಂದು ಸುತ್ತಿನಲ್ಲಿ ಬಲ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಸ್ತುತ ಸುಮಲತಾ 40 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಇನ್ನೂ 12 ಸುತ್ತಿನ ಮತ ಎಣಿಕೆ ಬಾಕಿ ಇರುವುದರಿಂದ, ಸಂಪೂರ್ಣ ಚಿತ್ರಣವೇ ಬದಲಾಗುವ…