ಸುದ್ದಿ

IMA ವಿರುದ್ಧ 11 ಸಾವಿರಕ್ಕು ಹೆಚ್ಚು ದಾಕಲಾದ ಕಂಪ್ಲೆಂಟ್…..!

19

ಐಎಂಎ ಜ್ಯುವೆಲ್ಲರ್ಸ್ ನಿಂದ ಮೋಸಕ್ಕೊಳಗಾಗಿರುವವರ ಕಂಪ್ಲೆಂಟ್ ಸಂಖ್ಯೆ 11 ಸಾವಿರಕ್ಕೇರಿದೆ. ಶಿವಾಜಿನಗರ ಸಮದ್ ಹೌಸ್ ಚೌಟ್ರಿಯಲ್ಲಿ ಬಂಡಲ್ ಬಂಡಲ್‍ಗಟ್ಟೆ ಕಂಪ್ಲೆಂಟ್‍ಗಳನ್ನು ಪೊಲೀಸರು ಸ್ವೀಕರಿಸಿದ್ದಾರೆ.

ಎಸ್‍ಐಟಿ ಮುಖ್ಯಸ್ಥರನ್ನಾಗಿ ಎಡಿಜಿಪಿ ಸಲೀಂ ನೇಮಕ ಬಹುತೇಕ ಖಚಿತ ಅಂತ ತಿಳಿದು ಬಂದಿದೆ. ಮುಸ್ಲಿಂ ಸಮುದಾಯದವರೇ ಆಗಿರುವ ಸಲೀಂ ನಿಯೋಜಿಸಿದ್ರೆ ಉತ್ತಮ, ತನಿಖೆಗೆ ಸಹಕಾರಿಯಾಗುತ್ತದೆ ಅನ್ನೋದು ಗೃಹ ಸಚಿವ ಎಂ.ಬಿ. ಪಾಟೀಲರ ಭಾವನೆ. ಹೀಗಾಗಿ, ಇಂದು ಗೃಹ ಸಚಿವರು ಆದೇಶ ಹೊರಡಿಸುವ ಸಾಧ್ಯತೆ ಇದೆ.

ಒಂದು ವೇಳೆ, ಸಲೀಂ ಹಿಂದೆ ಸರಿದರೆ, ಎಡಿಜಿಪಿ ಪ್ರತಾಪ್ ರೆಡ್ಡಿ ಅವರನ್ನು ನೇಮಿಸುವ ಸಾಧ್ಯತೆಯೂ ಇದೆ. ಈ ಮಧ್ಯೆ ಸಾವಿರಾರು ಹೂಡಿಕೆದಾರರಿಗೆ ಕೋಟ್ಯಂತರ ರೂಪಾಯಿ ಪಂಗನಾಮ ಹಾಕಿ ನಾಪತ್ತೆಯಾಗಿರುವ ಐಎಂಎ ಮಾಲೀಕನ ವಿರುದ್ಧ ರಸ್ತೆಗಿಳಿದಿದ್ದ ಮೋಸ ಹೋದವರು, ಧಿಡೀರ್ ಅಂತ ಶಾಸಕ ರೋಷನ್ ಬೇಗ್ ಮನೆಗೆ ಲಗ್ಗೆ ಇಟ್ಟಿದರು. ಕೋಲ್ಸ್ ಪಾರ್ಕ್ ನಲ್ಲಿರುವ ರೋಷನ್ ಬೇಗ್ ಮನೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆಯೇ ಪ್ರತಿಭಟನಾಕಾರರನ್ನ ಪೊಲೀಸರು ಮನವೊಲಿಸೋ ಯತ್ನ ಮಾಡಿದರು. ರೋಷನ್ ಬೇಗ್ ಮನೆಯಲ್ಲಿ ಇಲ್ಲ ಅನ್ನೋದು ತಿಳಿದು ಪ್ರತಿಭಟನಾಕಾರರು ಜಾಗ ಖಾಲಿ ಮಾಡಿದರು. ಶಾಸಕ ರೋಷನ್ ಬೇಗ್ ದೆಹಲಿಯಿಂದ ಬೆಂಗಳೂರಿಗೆ ಮರಳುತ್ತಿದ್ದು ಮುಂಜಾಗೃತ ಕ್ರಮವಾಗಿ ರೋಷನ್ ಬೇಗ್ ಮನೆ ಬಳಿ ಪೊಲೀಸ್ ಬೀಗಿ ಭದ್ರತೆ ಒದಗಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ವಿಶ್ವದ ನಂಬರ್ 1 ಶ್ರೀಮಂತ ಬೆಜೋಸ್​ನ ಹಿಂದಿಕ್ಕಿದ ಬರ್ನಾರ್ಡ್ ಅರ್ನಾಲ್ಟ್

    ವಿಶ್ವದ ನಂಬರ್ 1 ಶ್ರೀಮಂತ ಎಂಬ ಅಗ್ಗಳಿಕೆ ಈಗ 72 ವರ್ಷದ ಬರ್ನಾರ್ಡ್ ಅರ್ನಾಲ್ಟ್ ಪಾಲಾಗಿದೆ. LVMH ಅಧ್ಯಕ್ಷ, ಸಿಇಒ ಅರ್ನಾಲ್ಟ್ ಬಗ್ಗೆ ಮಾಹಿತಿ ಇಲ್ಲಿದೆ. Published On – 25 May 2021 ಬರ್ನಾರ್ಡ್ ಅರ್ನಾಲ್ಟ್ ಈಗ ವಿಶ್ವದ ನಂಬರ್ 1 ಶ್ರೀಮಂತ ಸ್ಥಾನದಲ್ಲಿದೆ. ಫೋರ್ಬ್ಸ್ ಅಂಕಿ- ಅಂಶದ ಪ್ರಕಾರ, ಅರ್ನಾಲ್ಟ್ ನಿವ್ವಳ ಆಸ್ತಿ ಮೌಲ್ಯ 18,620 ಕೋಟಿ ಅಮೆರಿಕನ್ ಡಾಲರ್. ಇಷ್ಟು ಹಣ ಇದ್ದರೆ ಭಾರತದ ರೂಪಾಯಿ ಲೆಕ್ಕದಲ್ಲಿ ಎಷ್ಟಾಗುತ್ತದೆ ಎಂಬ ಕುತೂಹಲ ನಿಮಗೆ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶುಕ್ರವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಫೆಬ್ರವರಿ, 2019) ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು ಪ್ರಮುಖ ಕೆಲಸಗಳು ಸ್ಥಗಿತಗೊಳ್ಳುತ್ತವೆ. ಸ್ನೇಹಿತರುಇಂದು ರಾತ್ರಿ ರೋಮಾಂಚಕವಾದದ್ದನ್ನೇನಾದರೂ…

  • inspirational, ವ್ಯಕ್ತಿ ವಿಶೇಷಣ

    ವರದಕ್ಷಿಣೆ ವಿರೋಧಿಸಿ: ಈ ವರ ಮಾಡಿದ ಕೆಲಸ ನೋಡಿ ಆಶ್ಚರ್ಯಗೊಂಡ್ರು ಜನ..! ತಿಳಿಯಲು ಈ ಲೇಖನ ಓದಿ..

    ಮಧ್ಯಪ್ರದೇಶದ ನಿಮಚ್ ನಲ್ಲಿ ಅನನ್ಯ ಹಾಗೂ ಸಮಾಜಕ್ಕೆ ಮಾದರಿಯಾಗಬಲ್ಲಂತ ಮದುವೆಯೊಂದು ನಡೆದಿದೆ. ಮದುವೆಗಾಗಿ ಅಹಮದಾಬಾದ್ ನಿಂದ ಬಂದಿದ್ದ ವರ ಸಪ್ತಪದಿ ನಂತ್ರ 8ನೇ ಸುತ್ತು ಸುತ್ತಲು ಶುರುಮಾಡಿದ್ದಾನೆ. ಇದನ್ನು ನೋಡಿ ನೆರೆದಿದ್ದವರೆಲ್ಲ ಆಶ್ಚರ್ಯಕ್ಕೊಳಗಾಗಿದ್ದಾರೆ.

  • ಸುದ್ದಿ

    ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡು ರಸ್ತೆ ಮಧ್ಯದಲ್ಲಿ ಅಮಾನವೀಯ ರೀತಿ ವರ್ತಿಸಿದ ಮಹಿಳೆ.

    ಕೊರೊನಾ ಮಹಾಮಾರಿ ದೇಶ ಅದರಲ್ಲೂ ರಾಜ್ಯವನ್ನು ವಕ್ಕರಿಸಿದ ಬಳಿಕ ಅನೇಕ ಅಮಾನವೀಯ ಘಟನೆಗಳು ಬೆಳಕಿಗೆ ಬಂದಿವೆ. ಕೆಲವೊಂದು ಮಾನವೀಯ ಕೆಲಸಗಳು ಕೂಡ ನಡೆದಿವೆ. ಈ ಮಧ್ಯೆ ಸಿಲಿಕಾನ್ ಸಿಟಿಯಲ್ಲಿ ಪೌರಕಾರ್ಮಿಕರ ಮೇಲೆ ಮಹಿಳೆಯೊಬ್ಬರು ಅಮಾನವೀಯವಾಗಿ ವರ್ತಿಸಿರುವುದು ಬೆಳಕಿಗೆ ಬಂದಿದೆ. ಹೌದು. ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡ ಮಹಿಳೆ ಅವರನ್ನು ನಿಂದಿಸಿದ್ದಲ್ಲದೇ, ಬಾಟಲಿಯಲ್ಲಿ ನೀರು ತುಂಬಿಸಿ ನಂತರ ಅದನ್ನು ರಸ್ತೆ ಮಧ್ಯದಲ್ಲಿಟ್ಟು ಬಂದಿದ್ದಾರೆ. ಈ ಮೂಲಕ ಅಮಾನವೀಯತೆಯನ್ನು ಪ್ರದರ್ಶಿಸಿದ್ದಾರೆ. ಇದನ್ನು ಅಲ್ಲೆ ಇದ್ದ ಕೆಲವರು ತಮ್ಮ ಮೊಬೈಲ್…

  • ಸುದ್ದಿ

    ರಾಜೀನಾಮೆ ನೀಡಿರುವ ಎಲ್ಲ ಶಾಸಕರಿಗೆ ಕೊನೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ….

    ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲರಿಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊನೆಯ ಅವಕಾಶವನ್ನು ನೀಡಿದರು. ಮುಂಬೈನಿಂದ ಬಂದು ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲವೆ ಅನರ್ಹತೆಗೆ ದೂರು ನೀಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು…

  • ಸಿನಿಮಾ

    ನನ್ನಂತಹವರು ಎಷ್ಟೇ ಜನರು ಬಂದ್ರೂ, ಈ ನಾಲ್ಕು ಹೆಸರನ್ನು ಜನರ ಮನಸ್ಸಿನಿಂದ ಅಳಿಸಲು ಸಾಧ್ಯವಿಲ್ಲ ಎಂದ ಚಾಲೆಂಜಿಂಗ್ ಸ್ಟಾರ್..!

    ಇವತ್ತೂ ಕೂಡಾ ಮಂಡ್ಯದಲ್ಲಿ ದರ್ಶನ್ ಪ್ರಚಾರದ ಅಬ್ಬರ ಜೋರಾಗಿದೆ. ಪ್ರಚಾರದ ವೇಳೆ ಮಾತನಾಡಿದ ಡಿ ಬಾಸ್‍, ದರ್ಶನ್‍ ಅಂತವರು ಯಾರೇ ಬಂದ್ರೂ, ಇನ್ನೂ ನೂರು ವರ್ಷ ನಾಲ್ಕು ಹೆಸರುಗಳನ್ನು ಅಳಿಸಲಾಗುವುದಿಲ್ಲ ಅಂತಾ ಹೇಳಿದ್ದಾರೆ. ನಟಸಾರ್ವಭೌಮ ರಾಜ್‍ ಕುಮಾರ್, ಶಂಕರ್ ನಾಗ್‍, ಅಂಬರೀಷ್‍, ವಿಷ್ಣುವರ್ಧನ್‍ ಅವರ ಹೆಸರುಗಳನ್ನು ಅಭಿಮಾನಿಗಳ ಮನಸ್ಸಿನಿಂದ ಅಳಿಸಲು ಸಾಧ್ಯವಿಲ್ಲ ಎಂದ್ರು. ಈ ಹಿಂದೆ ಮಂಡ್ಯದಲ್ಲಿ ಅಪ್ಪಾಜಿಗೆ ಅವಕಾಶ ಕೊಟ್ಟಿದ್ದೀರಿ, ಇನ್ಮುಂದೆ ಅಮ್ಮನಿಗೂ ಅವಕಾಶ ಕೊಡಿ ಅಂತಾ ಮತ ಯಾಚಿಸಿದ್ದಾರೆ. ಇದೇ ವೇಳೆ ಸುಮಲತಾ ಕ್ರಮ…