ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂಟರ್ 19 ವಿಶ್ವಕಪ್ನ ಸೆಮಿಫೈನಲ್ನಲ್ಲಿ ಭಾರತದ ಯುವ ಪಡೆ ಪಾಕಿಸ್ತಾನದ ವಿರುದ್ಧ 88 ಎಸೆತಗಳು ಬಾಕಿ ಇರುವಂತೆ 10 ವಿಕೆಟ್ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಮಿಂಚಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು.

ಭಾರತದ ಆರಂಭಿಕ ಬ್ಯಾಟ್ಸ್ಮನ್ 18 ವರ್ಷದ ಯಶಸ್ವಿ ಜೈಸ್ವಾಲ್ 105 ರನ್ (113 ಎಸೆತ, 8 ಬೌಂಡರಿ, 4 ಸಿಕ್ಸರ್) ಹಾಗೂ ದಿವ್ಯಾಂಶ್ ಸಕ್ಸೇನಾ 59 ರನ್ (99 ಎಸೆತ, 6 ಬೌಂಡರಿ) ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು. ಈ ಮೂಲಕ 7ನೇ ಬಾರಿ ಭಾರತ ಫೈನಲ್ ಪ್ರವೇಶಿಸಿದೆ. 3 ಓವರ್ ಬೌಲಿಂಗ್ ಮಾಡಿದ ಯಶಸ್ವಿ ಜೈಸ್ವಾಲ್ ಕೇವಲ 11 ರನ್ ನೀಡಿ, ಒಂದು ವಿಕೆಟ್ ಕಿತ್ತು ತಂಡಕ್ಕೆ ಆಸರೆಯಾದರು.
ಕೆಲವು ವರ್ಷಗಳ ಹಿಂದೆ ಮುಂಬೈನ ಜನನಿಬಿಡ ಪ್ರದೇಶದಲ್ಲಿ ವಾಸಿಸುತ್ತಿದ್ದ ಯಶಸ್ವಿ ಜೈಸ್ವಾಲ್ ಇಂದು ಭಾರತೀಯ ಕ್ರಿಕೆಟ್ನಲ್ಲಿ ವೇಗವಾಗಿ ಬೆಳೆಯುತ್ತಿದ್ದಾರೆ. ಕೇವಲ 18ನೇ ವಯಸ್ಸಿನಲ್ಲಿ, ಯಶಸ್ವಿ ದೇಶೀಯ ಕ್ರಿಕೆಟ್ನಲ್ಲಿ ದ್ವಿಶತಕ ಬಾರಿಸಿ ಹಾಗೂ ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ಶತಕ ಸಾಧನೆ ಮಾಡಿದ್ದಾರೆ.

ಆದರೆ ಸೆಲೆಬ್ರಿಟಿಗಳಿಗೆ ಎಲ್ಲವೂ ಅಷ್ಟು ಸುಲಭವಲ್ಲ. ಮುಂಬೈನ ಭಾರತೀಯ ಕ್ರಿಕೆಟ್ ದೈತ್ಯರ ಮುಂದೆ ತನ್ನ ಛಾಪು ಮೂಡಿಸಲು ಯಶಸ್ವಿ 10ನೇ ವಯಸ್ಸಿನಲ್ಲಿ ಉತ್ತರ ಪ್ರದೇಶದ ಭಾದೋಹಿ ತೊರೆದಿದ್ದರು. ಆ ಬಳಿಕ ಕಠಿಣ ಸವಾಲುಗಳನ್ನು ಎದುರಿಸಬೇಕಾಯಿತು. ಕ್ರಿಕೆಟಿಗನಾಗುವ ಮೂಲಕ ದೇಶಕ್ಕಾಗಿ ಆಡುವ ಕನಸು ಹೊತ್ತಿದ್ದ ಯಶಸ್ವಿ ಮುಂದೆ ಅನೇಕ ಸವಾಲುಗಳು ಎದುರಾದವು. ಆದರೆ ಎಲ್ಲವನ್ನೂ ಸ್ಥಿರವಾಗಿ ಎದುರಿಸಿದ ಯಶಸ್ವಿ ಜೈಸ್ವಾಲ್ ಮುಂಬೈನ ಬೀದಿಯ ಅಂಗಡಿಯೊಂದರಲ್ಲಿ ಪಾನಿಪುರಿ ಮಾರುತ್ತಿದ್ದರು.
ಯಶಸ್ವಿ ಜೈಸ್ವಾಲ್ 12ನೇ ವಯಸ್ಸಿನಲ್ಲಿ ರಾಜ ಶಿವಾಜಿ ವಿದ್ಯಾಮಂದಿರ್ (ದಾದರ್) ವಿರುದ್ಧದ ಪಂದ್ಯದಲ್ಲಿ 319 ರನ್ ಗಳಿಸಿದ್ದರು. ಜೈಸ್ವಾಲ್ 2014ರ ಜನವರಿಯಲ್ಲಿ ಅಂಜುಮಾನ್ ಇಸ್ಲಾಂ ಪ್ರೌಢಶಾಲೆ (ಕೋಟೆ) ಪರ ಆಡುತ್ತಿದ್ದರು. ಗೈಲ್ಸ್ ಶೀಲ್ಡ್ ಸ್ಕೂಲ್ ಪಂದ್ಯದಲ್ಲಿ ಅವರು ತ್ರಿಶತಕ ಸಿಡಿಸಿದ್ದರು. ಜೊತೆಗೆ 99ರನ್ ನೀಡಿ 13 ವಿಕೆಟ್ ಪಡೆದಿದ್ದರು. ಕಳೆದ ವರ್ಷ ದೇಶಿ ಕ್ರಿಕೆಟ್ನಲ್ಲಿ ಜಾರ್ಖಂಡ್ ವಿರುದ್ಧ ದ್ವಿಶತಕ ಸಿಡಿಸಿದ್ದರು. ಈ ಮೂಲಕ ಲಿಸ್ಟ್-ಎ ಟೀಂನಲ್ಲಿ ದ್ವಿಶತಕ ಬಾರಿಸಿದ ಏಳನೇ ಭಾರತೀಯ ಕ್ರಿಕೆಟರ್ ಎಂಬ ಹೆಗ್ಗಳಿಕೆಗೆ ಯಶಸ್ವಿ ಜೈಸ್ವಾಲ್ ಪಾತ್ರರಾಗಿದ್ದರು.

ಈ ಹಿಂದೆ ಮಾಜಿ ಕ್ರಿಕೆಟರ್ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ಟೀಂ ಇಂಡಿಯಾ ಬ್ಯಾಟ್ಸ್ಮನ್ ರೋಹಿತ್ ಶರ್ಮಾ, ಶಿಖರ್ ಧವನ್, ಕರ್ಣ ಕೌಶಲ್ ಮತ್ತು ಸ್ಯಾಮ್ಸನ್ ದ್ವಿಶತಕ ಸಾಧನೆ ಮಾಡಿದ್ದಾರೆ. ಅದರಲ್ಲೂ ಹಿಟ್ಮ್ಯಾನ್ ರೋಹಿತ್ ಶರ್ಮ ಅತಿ ಹೆಚ್ಚು ದ್ವಿಶತಕ ಗಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಆಟೋಗ್ರಾಫ್ ಪಡೆಯಲು ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಭಾರತ ತಂಡದ ಅತ್ಯಂತ ಜನಪ್ರಿಯ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ. ವೆಸ್ಟ್ಇಂಡೀಸ್ ಪ್ರವಾಸದ ವೇಳೆಯಲ್ಲಿ ಜಮೈಕಾದಲ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆಯಲ್ಲಿರುವಾಗ ಅಚಾನಕ್ ಆಗಿ ಬಾಲಕನ ಭೇಟಿಯಾದರು. ಈ ಸಂದರ್ಭದಲ್ಲಿ ಬಾಲಕನೇ ನನ್ನ ಆಟೋಗ್ರಾಫ್ ಪಡೆಯುವೀರಾ ಎಂದು ವಿರಾಟ್ ಕೊಹ್ಲಿರನ್ನು ಪ್ರಶ್ನಿಸಿದರು. ಬಾಲಕನ ಪ್ರಶ್ನೆಯಿಂದ ಅಚ್ಚರಿಗೊಂಡರೂ ನಗುಮುಖದಿಂದಲೇ ಬಹಳ ತಾಳ್ಮೆಯಿಂದ…
ಭಿಕ್ಷುಕನ ಮನೆಯಲ್ಲಿ 1.70 ಕೋಟಿಗಳ ಹಣ ಸಿಕ್ಕಿದೆ. ಮುಂಬೈ ಪಟ್ಟಣದಲ್ಲಿನ ಕೊಳಗೇರಿಗೆ ಸೇರಿದ ಭಿಕ್ಷುಕನಿಗೆ ತನ್ನವರು ಎಂಬುವರು ಯಾರೂ ಇಲ್ಲ. ಪ್ರತಿದಿನ ಭಿಕ್ಷೆ ಬೇಡುವುದು, ದೊರೆತ್ತದ್ದನ್ನು ತಿನ್ನುವುದು, ಬಂದದ್ದನ್ನು ಎತ್ತಿಡುವುದು…..ಇದೇ ಆತನ ದಿನನಿತ್ಯದ ಕೆಲಸವಾಗಿತ್ತು
ಗುರುವಾರ, 05/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಬಹುದಿನದ ನೀರಿಕ್ಷಿತ ಕನಸು ಕೈಗೂಡುವುದು. ಎಲ್ಲರಂತೆ ನೀವು ಕೂಡಾ ಸಮಾಜ ಮುಖಿಯಾಗಿ ಉ ನ್ನತ ಅಧಿಕಾರವನ್ನು ಹೊಂದುವಿರಿ. ಇದರೊಂದಿಗೆ ಸಕಾರಾತ್ಮಕ ಚಿಂತನೆಯನ್ನು ಮೈಗೂಡಿಸಿಕೊಂಡಲ್ಲಿ ಒಳಿತಾಗುವುದು. ವೃಷಭ:- ಇವತ್ತಿನ ಕೆಲಸ ಕಾರ್ಯಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ಈ ಬಗ್ಗೆ ಈ ಅನುಭೂತಿ ನಿಮ್ಮ ಮನದಲ್ಲಿರಲಿ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಶತ್ರುವನ್ನು ಕೂಡಾ…
ಬಿಬಿಎಂಪಿ ಆಸ್ಪತ್ರೆಗಳಲ್ಲಿ ಬಾಣಂತಿಯರಿಗಾಗಿ ಹೊಸ ಯೋಜನೆಯನ್ನು ಜಾರಿಗೆ ತರಬೇಕು ಎಂದು ನಿರ್ಧರಿಸಿದ್ದಾರೆ. ಈ ನಿರ್ಧಾರ ಕೈಗೊಳ್ಳಲು ಮುಖ್ಯ ಕಾರಣವೇನೆಂದರೆ ಬಾಣಂತಿಯರಿಗಾಗಿ ಉಪಯುಕ್ತ ಪೌಷ್ಟಿಕಾಂಶ ಮತ್ತು ಅವರಿಗಾಗಿ ಹಾಲು ಸಹ ನೀಡಬೇಕು ಎಂದು ನಿರ್ಧರಿಸಲಾಗಿದೆ. ಬಿಬಿಎಂಪಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಬಾಣಂತಿಯರಿಗೆ ಎರಡು ಹೊತ್ತು ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಬಿಬಿಎಂಪಿಯ 32 ಆಸ್ಪತ್ರೆಗಳಲ್ಲಿನ ಬಾಣಂತಿಯರಲ್ಲಿ ಪೌಷ್ಟಿಕಾಂಶ ಹೆಚ್ಚಿಸಲು ಯೋಜನೆ ರೂಪಿಸಿರುವ ಅಧಿಕಾರಿಗಳು, ಪ್ರತಿದಿನ 500 ಎಂ.ಎಲ್. ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಯೋಜನೆಗಾಗಿ ಸುಮಾರು 15 ಲಕ್ಷ ರೂ ಮೀಸಲಿಡಲಾಗಿದೆ.ವರ್ಷಕ್ಕೆ…
ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.
ಬೆಳಗಾವಿ, ಚಿಕ್ಕೋಡಿ, ರಾಯಚೂರಿನಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು ಕೃಷ್ಣಾ ನದಿ ವ್ಯಾಪ್ತಿಯಲ್ಲಿರುವ ಬರುವ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ರಸ್ತೆಗಳು ಜಲಾವೃತವಾಗಿದ್ದು, ಕಾರು ಬೈಕ್ಗಳು ಆಟಿಕೆಯಂತಾಗಿವೆ, ಆದರೂ ಕೂಡ ವಾಹನ ಸವಾರರು ಮಾತ್ರ ಭೋರ್ಗರೆದು ಹರಿಯುತ್ತಿರುವ ನೀರಿನ ಮಧ್ಯೆಯೇ ದುಸ್ಸಾಹಸ ಮಾಡುತ್ತಿದ್ದಾರೆ. ಬೆಳಗಾವಿಯ ದೆಸೂರು-ಖಾನಾಪೂರ ಮಧ್ಯೆ ಇರುವ ಕೊಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನೀರು ತುಂಬಿ ಹರಿಯುತ್ತಿದ್ದರೂ ಕೂಡ ವಾಹನ ಸವಾರರು ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ವೇಗದಿಂದ ಹರಿಯುತ್ತಿರುವ ನೀರನ್ನೇ ಲೆಕ್ಕಿಸದೇ ವಾಹನ ಸವಾರರು ಕೊಳ್ಳ ದಾಟುತ್ತಿದ್ದಾರೆ. ಸ್ಥಳದಲ್ಲಿ…