ಸುದ್ದಿ

ಹಿಮಪಾತದ ನಡುವೆ ದೇಶ ಸೇವೆ ಸಲ್ಲಿಸುತ್ತಿರುವ ಈ ವೀರಯೋಧನಿಗೊಂದು ಸಲಾಂ. ಜಾಲತಾಣಗಳಲ್ಲಿ ಸಖತ್ ವೈರಲ್.

31

ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ನಡುವೆ ಸಿಆರ್‌ಪಿಎಫ್ ಯೋಧರೊಬ್ಬರು ಕರ್ತವ್ಯ ಸಲ್ಲಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಫೋಟೋ ನೋಡಿದವರು ಆ ಚಳಿಯಲ್ಲೂ ಎದೆಗುಂದದೆ ಕರ್ತವ್ಯ ಸಲ್ಲಿಸುತ್ತಿರುವ ಯೋಧನಿಗೆ ಸಲಾಂ ಎಂದಿದ್ದಾರೆ. ನಮ್ಮ ಸೈನಿಕರು ನಮ್ಮ ಹೆಮ್ಮೆ ಎಂದು ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಆದರೆ ನಮ್ಮ ಸೈನಿಕರು ನಮಗಾಗಿ ಪ್ರತಿದಿನ ಪಡುವ ಕಷ್ಟ ಅಷ್ಟಿಷ್ಟಲ್ಲ.

ಚಳಿಗಾಳಿ ಹಿಮಮಳೆ ಯಾವುದನ್ನೂ ಲೆಕ್ಕಿಸದೆ ಸೈನಿಕರು ಬಾರ್ಡರ್ ನಲ್ಲಿ ನಮಗಾಗಿ ಪ್ರಾಣ ಒತ್ತೆಯಿಟ್ಟು ಕೆಲಸ ಮಾಡುತ್ತಿರುತ್ತಾರೆ. ಮಳೆ ಇರಲಿ, ಚಳಿ ಇರಲಿ, ಬಿಸಿಲೇ ಬರಲೇ, ದೇಶ ಕಾಯೋ ಯೋಧರಿಗೂ ಇದ್ಯಾವುದು ಲೆಕ್ಕವಿಲ್ಲ. ದೇಶಕ್ಕೊಸ್ಕರ ಪ್ರಾಣವನ್ನೇ ಮುಡಿಪಾಗಿಟ್ಟಿರುವ ಸೈನಿಕರ ತ್ಯಾಗ ಬಲಿದಾನಗಳಿಂದ ನಮ್ಮ ಸುಂದರ ನಾಳೆಗಳು ನಿಂತಿದೆ.

ಸಿಆರ್‌ಪಿಎಫ್ ಸಹಾಯಕ ಕಮಾಂಡೆಂಟ್ ಕಶ್ಯಪ್ ಕಡಗತ್ತೂರ್ ಅವರು ಈ ಫೋಟೋವನ್ನು ಟ್ವಿಟ್ಟರ್ ನಲ್ಲಿ ಶೇರ್ ಮಾಡಿದ್ದರು. ಫೋಟೋದಲ್ಲಿ ಸಿಆರ್‌ಪಿಎಫ್ ಕಾನ್‍ಸ್ಟೇಬಲ್ ಐಜಾಝ್ ಅವರು ತಮ್ಮ ಸೇನೆಯ ಸಮವಸ್ತ್ರದ ಮೇಲೆ ಹಳದಿ ಬಣ್ಣ ಕೋಟ್ ಹಾಕಿ ನಿಂತಿದ್ದಾರೆ. ಅವರ ಸುತ್ತ ಭಾರೀ ಪ್ರಮಾಣದಲ್ಲಿ ಹಿಮ ಬಿದ್ದಿರುವುದನ್ನು ಕೂಡ ಫೋಟೋದಲ್ಲಿ ಕಾಣಬಹುದಾಗಿದೆ.

ಇವರು ಬ್ಯಾಟ್‍ಮ್ಯಾನ್ ಅಲ್ಲ. ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇವೆ ಸಲ್ಲಿಸುತ್ತಿರುವ ಸಿಆರ್‌ಪಿಎಫ್ ಕಾನ್‍ಸ್ಟೇಬಲ್ ಐಜಾಝ್. ಭಾರೀ ಪ್ರಮಾಣದಲ್ಲಿ ಹಿಮಪಾತವಾಗುತ್ತಿದ್ದರೂ ಧೈರ್ಯದಿಂದ ಕರ್ತವ್ಯ ಸಲ್ಲಿಸುತ್ತಿರುವ ಯೋಧ. ವೃತ್ತಿಪರತೆಗೆ ಮತ್ತೊಂದು ಹೆಸರೇ ಸಿಆರ್‌ಪಿಎಫ್ ಎಂದು ಬರೆದು ಹೆಮ್ಮೆಯಿಂದ ಯೋಧನ ಫೋಟೋವನ್ನು ಕಶ್ಯಪ್ ಕಡಗತ್ತೂರ್ ಶೇರ್ ಮಾಡಿಕೊಂಡಿದ್ದಾರೆ.

ಈ ಫೋಟೋ ಸದ್ಯ ಎಲ್ಲೆಡೆ ಸಖತ್ ವೈರಲ್ ಆಗಿದ್ದು, ನೆಟ್ಟಿಗರು ಯೋಧನ ಕಾರ್ಯಕ್ಕೆ ಸಲಾಂ ಎಂದಿದ್ದಾರೆ. ಕೆಲವರು ಬ್ಯಾಟ್‍ಮ್ಯಾನ್ ಇದ್ದಾನೋ ಇಲ್ಲವೋ ಗೊತ್ತಿಲ್ಲ. ಆದರೆ ನಮಗೆ ನಮ್ಮ ಯೋಧರೆ ಸೂಪರ್‍ಹೀರೋ. ಕಷ್ಟಕರ ಪ್ರದೇಶದಲ್ಲಿ ಶಿಸ್ತಿನಿಂದ ನಮ್ಮ ಸಿಆರ್‌ಪಿಎಫ್ ಯೋಧರು ಕರ್ತವ್ಯ ಸಲ್ಲಿಸುತ್ತಿದ್ದಾರೆ. ಅವರಿಗೊಂದು ಸಲಾಂ ಎಂದು ಟ್ವೀಟ್ ಮಾಡಿ ಯೋಧರಿಗೆ ಗೌರವ ಸಲ್ಲಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಚಿತ್ರೀಕರಣದ ಸೆಟ್ ನಲ್ಲೇ ಕುರಿ ಬಲಿ ನೀಡಿದ್ರಾ ರಾಧಿಕಾ ಕುಮಾರಸ್ವಾಮಿ!ಕಾರಣ ಏನು ಗೊತ್ತಾ?

    ನಟಿ ರಾಧಿಕಾ ಕುಮಾರಸ್ವಾಮಿ ಭೈರಾದೇವಿ ಚಿತ್ರೀಕರಣದ ವೇಳೆ ಸ್ಮಶಾನದಲ್ಲಿ ಬಿದ್ದು ಏಟು ಮಾಡಿಕೊಂಡಿದ್ದು  ಇದೀಗ ಶೂಟಿಂಗ್ ಸೆಟ್ ನಲ್ಲೇ ಕುರಿಬಲಿ ನೀಡಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಚಿತ್ರದಲ್ಲಿ ಕಾಳಿಮಾತೆಯ ಅವತಾರ ತಾಳಿದ್ದ ರಾಧಿಕಾ ಶಾಂತಿನಗರದ ಸ್ಮಶಾನದಲ್ಲಿ ಚಿತ್ರೀಕರಣ ನಡೆಯುವ ವೇಳೆ ಗೋರಿ ಮೇಲಿಂದ ಬಿದ್ದು ಸ್ಪೈನಲ್ ಕಾರ್ಡ್ ಗೆ ಏಟು ಮಾಡಿಕೊಂಡಿದ್ದರು. ಅಂದು ಅಮಾವಾಸ್ಯೆಯಾಗಿದ್ದು ರಾಧಿಕಾ ಕುಮಾರಸ್ವಾಮಿ ಬಿದ್ದು ಪೆಟ್ಟು ಮಾಡಿಕೊಂಡ ಬಳಿಕ ಚಿತ್ರತಂಡಕ್ಕೆ ಅಡ್ಡಿಯಾಗಿದೆ. ಹೀಗಾಗಿ ಚಿತ್ರೀಕರಣದ ಸೆಟ್ ನಲ್ಲೇ ಕುರಿಬಲಿ ನೀಡಲಾಗಿದೆ ಎಂಬ ಸುದ್ದಿ…

  • ಸುದ್ದಿ

    ಹಳ್ಳಿ ಮತ್ತು ನಗರ ಬೈಕ್ ಸವಾರರೆ ಎಚ್ಚರ..!ನಿಮ್ಮಲ್ಲಿ ಇದು ಇಲ್ಲಂದ್ರೆ ಏನಾಗುತ್ತೆ ಗೊತ್ತಾ..?

    ಪೋಲೀಸರ ಕಾಟಕ್ಕೆ ಕಳಪೆಮಟ್ಟದ, ಬಿಐಎಸ್ ಅಥವಾ ಐಎಸ್‌’ಐ ಮಾರ್ಕ್ ಇಲ್ಲದ ಹೆಲ್ಮೆಟ್’ಗಳನ್ನು ಕೊಂಡು ಬೈಕ್ ಸವಾರಿ ಮಾಡುತ್ತಿದ್ದವರಿಗೆ ಇಲ್ಲೊಂದು ಶಾಕಿಂಗ್ ನ್ಯೂಸ್ ಇದೆ.ಬೆಂಗಳೂರಿನಲ್ಲಿ ಈಗಾಗ್ಲೆ ಅರ್ಧ ಹೆಲ್ಮೆಟ್ ಹಾಕಿ ಓಡಾಡುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

  • ಸುದ್ದಿ

    ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ 9 ನಕಲಿ ವಿದ್ಯಾರ್ಥಿಗಳು ಅರೆಸ್ಟ್……!

    ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಾಗಿ ಪರೀಕ್ಷೆ ಬರೆಯುತ್ತಿದ್ದ 9 ನಕಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಶಿವರಾಜ ಜಾಳಿಹಾಳ, ಮಂಜುನಾಥ ಕಡೆಮನಿ, ನಿಂಗಪ್ಪ ಕಂಬಳಿ, ಮೈಲಾರಪ್ಪ, ಫಕೀರಪ್ಪ ಸೇರಿದಂತೆ 9 ಮಂದಿ ನಕಲಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯಲ್ಲಿ ಅವರು ಬೇರೆಯವರ ಹೆಸರಲ್ಲಿ ಪರೀಕ್ಷೆ ಬರೆದ ಹಿನ್ನೆಲೆಯಲ್ಲಿ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪರೀಕ್ಷಾ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಕೊಠಡಿ ಮೇಲ್ವಿಚಾರಕರು ಸೇರಿ ನಾಲ್ವರು ಅಧಿಕಾರಿಗಳನ್ನು ಪರೀಕ್ಷೆ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದ್ದು, ಕ್ರಮಕ್ಕೆ ಆದೇಶಿಸಲಾಗಿದೆ ಎಂದು…

  • ಆರೋಗ್ಯ

    ಉತ್ತಮ ಆರೋಗ್ಯಕ್ಕೆ ಕಬ್ಬಿನ ಹಾಲು. ಕಬ್ಬಿನ ಹಾಲಿನ ಮಹತ್ವ ನೋಡಿ!

    1. ಕಬ್ಬಿನ ಹಾಲು ದೇಹಕ್ಕೆ ಶಕ್ತಿ ತುಂಬುವುದರ ಜತೆಗೆ ಮಾನಸಿಕ ಒತ್ತಡವನ್ನು ನಿವಾರಿಸುವಲ್ಲಿ ಸಹಕಾರಿ 2. ಕಬ್ಬಿನ ಹಾಲು ಕುಡಿದರೆ ನಿದ್ದೆ ಚೆನ್ನಾಗಿ ಬರುವುದು. ತಾಜಾ ಕಬ್ಬಿನ ರಸವನ್ನು ನಿಯಮಿತವಾಗಿ ಸೇವಿಸಿದರೆ ಇನ್ಸೊಮ್ನಿಯ(ನಿದ್ರೆ ಹೀನತೆ) ಸಮಸ್ಯೆಯೂ ದೂರವಾಗುತ್ತದೆ. 3. ತೂಕ ಕಡಿಮೆ ಮಾಡಿಕೊಳ್ಳುವವರಿಗೂ ಶುಗರ್‌ಕೇನ್‌ ಜ್ಯೂಸ್‌ ಬೆಸ್ಟ್‌. ಇದರಲ್ಲಿ ಅಧಿಕ ಪ್ರಮಾಣದಲ್ಲಿರುವ ನೈಸರ್ಗಿಕ ಸಕ್ಕರೆ ಕೊಬ್ಬು ಕರಗಿಸುವಲ್ಲಿ ಸಹಕಾರಿ. 4. ಕಬ್ಬಿನ ಹಾಲು ಕಾಮಾಲೆ ರೋಗದಿಂದ ಗುಣವಾಗಲು ಉತ್ತಮ ಮನೆಮದ್ದು. ದಿನಕ್ಕೊಂದು ಲೋಟ ಕಬ್ಬಿನಹಾಲು ಕುಡಿಯುವುದರಿಂದ ಯಕೃತ್‌…

  • ಜ್ಯೋತಿಷ್ಯ

    ಯುಗಾದಿ ಹೊಸ ವರ್ಷದ ಈ ದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಏಪ್ರಿಲ್, 2019) ಗಾಳಿಯಲ್ಲಿ ಮನೆ ಕಟ್ಟುವುದು ನಿಮಗೆ ಸಹಾಯ ಮಾಡಲಾರದು. ನೀವು ಕುಟುಂಬದ ನಿರೀಕ್ಷೆಗಳನ್ನು ಪೂರ್ಣಗೊಳಿಸಲು…

  • ಗ್ಯಾಜೆಟ್

    ನೀವು ನಿಮ್ಮ ಐಫೋನ್ ‘ನನ್ನು ಕಳೆದುಕೊಂಡಿದ್ದಿರಾ ಹಾಗದ್ರೆ ಹುಡುಕುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಇತ್ತೀಚಿನ ನಮ್ಮ ಜೀವನ ಶೈಲಿಯಲ್ಲಿ ವ್ಯಕ್ತಿಗಳಿಗಿಂತ ವಸ್ತುಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ, ಮೊಬೈಲ್, ಲ್ಯಾಪ್ಟಾಪ್, ಐಪಾಡ್, ಐಫೋನ್ ಇವುಗಳಿಗೆ ಪ್ರಾಮುಖ್ಯತೆ ಹೆಚ್ಚುತ್ತಿದೆ. ನಮಗೆ ಗೊತ್ತಿಲದೇ ಐಫೋನ್ ಕಳೆದರೆ ಚಿಂತೆ ಬೇಡ. ಕಳೆದುಹೋದ ಇಪ್ಪಹೋಣೆ ಹುಡುಕುವುದು ಹೇಗೆ ಎಂಬುದುಗೊತ್ತಾ..?