ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ.

ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ಬಹುಪಾಲು ಜನರ ಕಣ್ಣಿಗೆ ಬಿದ್ದಿರಲಿಲ್ಲ. ಇತ್ತೀಚೆಗೆ ಈತ ಎಂಜಿನಿಯರ್ ಪದವಿ ಪೂರ್ತಿಗೊಳಿಸಿದ್ದಾರೆ. ಕ್ಯಾಂಪಸ್ ಇಂಟರ್ವ್ಯೂನಲ್ಲಿ ಪ್ರತಿಷ್ಠಿತ ಇಸ್ಫೋಸಿಸ್ ಸಂಸ್ಥೆಯಲ್ಲಿ ಉನ್ನತ ಹುದ್ದೆಯೊಂದಕ್ಕೆ ಆಯ್ಕೆಯಾಗಿದ್ದಾನೆ.

ಇದನ್ನು ತಿಳಿದ ಪ್ರಕೃತಿ ವಿದ್ಯಾಸಂಸ್ಥೆಯು, ಎಲ್ಲ ವಿದ್ಯಾರ್ಥಿಗಳಿಗೂ ಮಾದರಿಯಾಗಿರುವ ಅಂಕಿತ್ನ ಸಾಧನೆಯನ್ನು ಗೌರವಿಸುವ ಕಾರ್ಯಕ್ರಮ ಏರ್ಪಡಿಸಿತ್ತು. ಎಲ್ಲ ಸವಲತ್ತುಗಳಿದ್ದು, ವಿದ್ಯಾಭ್ಯಾಸ ಮಾಡದ ವಿದ್ಯಾರ್ಥಿಗಳ ನಡುವೆ ಆತನ ಸಾಧನೆ ಗಮನ ಸೆಳೆದಿದ್ದು, ಅದು ಇತರರಿಗೂ ಪ್ರೇರಣೆಯಾಗಬೇಕೆಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಸಂಸ್ಥೆ ಆಯೋಜಿಸಿತ್ತು.

ಸಾಧಕ ಅಂಕಿತ್ ಮಾತನಾಡಿ, ತಂದೆ ಎಲ್ಐಸಿ ಉದ್ಯೋಗಿ, ಸಹೋದರಿ ಐಬಿಎಂ ಉದ್ಯೋಗಿ. ಆರ್ಥಿಕವಾಗಿ ಬಡತನವಿರಲಿಲ್ಲ. ಆದರೂ ಸಮಯ ವ್ಯರ್ಥ ಮಾಡಬಾರದೆಂಬ ಕಾರಣಕ್ಕೆ ರಾತ್ರಿ ಪಾಳಿಯಲ್ಲಿ ಕಾವಲುಗಾರನಾಗಿ ಕೆಲಸ ಮಾಡಿದ್ದೇನೆ. ಕಠಿಣ ಪರಿಶ್ರಮದಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು. ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ…
ಈ ಕೊರೊನ ಸಮಯದ ಲಾಕ್ ಡೌನ್ ನಲ್ಲಿ ಈ ಕಲಾವಿದ ಕಲ್ಲಿನಲ್ಲಿ ರಚಿಸಿದ ಕಲಾಕೃತಿಗೆ ಒಳ್ಳೆಯ ಬೆಲೆ ದೊರಿತಿದೆ ಈ ಲಾಕ್ ಡೌನ್ ನಲ್ಲಿಇದ್ದರು ಸಮಯವನ್ನು ವ್ಯರ್ಥ ಮಾಡದೇ ಸದುಪಯೋಗಪಡಿಸಿಕೊಂಡಿದ್ದಾರೆ. ಹೌದು ಈ ಕಲಾಕೃತಿಯನ್ನು ಮಾಡಿದ ಮಲ್ಲಪ್ಪ ಬಡಿಗೇರ ಅವರು ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರದವರು . ಈ ಕ್ವಾರಂಟೈನ್ನ 14 ಅವಧಿಯಲ್ಲಿ ಕಲ್ಲಿನಿಂದ ಕೆತ್ತನೆ ಮಾಡಿದ ಗಣೇಶನ ವಿಗ್ರಹವನ್ನು 10 ಸಾವಿರ ರೂ ಗೆ ಮಾರಾಟ ಮಾಡಿದ್ದಾರೆ. ಕ್ವಾರಂಟೈನ್ನಲ್ಲೂ ಕೂಡ ತಮ್ಮ ಕಾಯಕವನ್ನು ಬಿಡದ ಮಲ್ಲಪ್ಪನವರಿಗೆ…
ಖಾಸಗಿ ಶಾಲೆಗಳು ಇದೀಗ ಎಲ್ಲೆಂದರೆಲ್ಲಿ ತಲೆಯೆತ್ತುತ್ತಿವೆ. ಗಲ್ಲಿಗೊಂದರಂತೆ ಶಾಲೆಗಳು ನಮಗೆ ಕಾಣಸಿಗುತ್ತವೆ. ಶಿಕ್ಷಣವು ಮೂಲಭೂತ ಹಕ್ಕಾಗಿರದೇ, ಇದೀಗ ವ್ಯಾಪಾರದ ಸರಕಾಗಿ ಮಾರ್ಪಟ್ಟಿದೆ.
ಷಿಫಾಲಿ ಎಂಬ ಯುವತಿ ಆ ರೀತಿ ಇದ್ದ ಯುವತಿ…ಈಗ ಈ ರೀತಿ ಯಾಕೆ ಆದಳೆಂದರೆ ಅದಕ್ಕೆ ಕಾರಣ ದೀಕ್ಷೆಯೊಂದನ್ನು ಕೈಗೊಂಡಿದ್ದು..! ಗುಜರಾತ್ನಲ್ಲಿನ ವಡೋದರ ವ್ಯಾಪ್ತಿಯಲ್ಲಿನ ನಿಜಾಮ್ ಪುರಾ ಮೂಲದ ಯುವತಿ. ಈ ಎರಡೂ ಫೋಟೋಗಳಲ್ಲೂ ಇರುವ ಯುವತಿ ಒಬ್ಬರೇ..
ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ.. ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ನಿಮ್ಮ ಹತ್ತಿರದ ಆಧಾರ್ ದಾಖಲಾತಿ ಕೇಂದ್ರಕ್ಕೆ ಭೇಟಿಕೊಡಿ. ಅಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಆಧಾರ್ ಅಪ್ ಡೇಟ್ ಪಾರಂ ಅಥವಾ ತಿದ್ದುಪಡಿ…
ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ತಮ್ಮ ಪತಿ, ನಟ ರಣ್ವೀರ್ ಸಿಂಗ್ರಂತೆ ಉಡುಪು ಧರಿಸಿ ಟ್ರೋಲ್ ಆಗುತ್ತಿದ್ದಾರೆ.ದೀಪಿಕಾ ಪಡುಕೋಣೆ ತನ್ನ ಪತಿ ರಣ್ವೀರ್ ಸಿಂಗ್ರನ್ನು ಭೇಟಿ ಆಗಲು ಲಂಡನ್ಗೆ ಹೋಗುತ್ತಿದ್ದರು. ಈ ವೇಳೆ ಅವರು ವಿಮಾನ ನಿಲ್ದಾಣದಲ್ಲಿ ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದಾರೆ. ದೀಪಿಕಾ ಅವರ ಈ ಲುಕ್ ನೋಡಿ ಅಭಿಮಾನಿಗಳು ಒಂದು ಕ್ಷಣ ದಂಗಾಗಿ ಹೋಗಿದ್ದಾರೆ. ವಿಮಾನ ನಿಲ್ದಾಣಕ್ಕೆ ದೀಪಿಕಾ ಬಿಳಿ ಬಣ್ಣದ ಟೀ-ಶರ್ಟ್ ಧರಿಸಿ ಅದಕ್ಕೆ ನಿಯಾನ್ ಪ್ಯಾಂಟ್ ಹಾಗೂ ಲಾಂಗ್ ಜಾಕೆಟ್ ಧರಿಸಿದ್ದರು….