ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಅಂತರ್ಜಾತಿ ವಿವಾಹವಾಗುವ ಪರಿಶಿಷ್ಟ ಜಾತಿಯವರಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಇದನ್ನು ಪರಿಶಿಷ್ಟ ಪಂಗಡದ ಸಮುದಾಯಕ್ಕೂ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು.

ಪರಿಶಿಷ್ಟ ಪಂಗಡದವರಿಗೆ ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಈ ಮೊದಲು 2 ಲಕ್ಷ ರೂ. ನೀಡಲಾಗುತ್ತಿತ್ತು. ಅದನ್ನು 3 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಪರಿಶಿಷ್ಟ ಪಂಗಡ ಸಮುದಾಯದ 51 ಜಾತಿಯವರು ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ.

ಎಸ್.ಟಿ. ಸಮುದಾಯದ ಹೆಣ್ಣುಮಕ್ಕಳನ್ನು ಬೇರೆ ಜಾತಿಯ ಯುವಕರು ಮದುವೆಯಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಎಸ್.ಟಿ. ಸಮುದಾಯದ ಯುವಕರು ಬೇರೆ ಜಾತಿಯ ಹೆಣ್ಣು ಮಕ್ಕಳನ್ನು ಮದುವೆಯಾದಲ್ಲಿ 2 ಲಕ್ಷ ರೂ ಪ್ರೋತ್ಸಾಹ ಧನ ನೀಡಲಾಗುವುದು.

ದಂಪತಿ ವಾಸವಾಗಿರುವ ಜಿಲ್ಲೆಯಿಂದ ಅರ್ಜಿಯನ್ನು ಸಲ್ಲಿಸಬೇಕು. ಷರತ್ತುಗಳು ಅನ್ವಯವಾಗುತ್ತವೆ. ಯೋಜನೆಯಡಿ ಮದುವೆಯಾಗುವ ಯುವತಿಗೆ ಕನಿಷ್ಠ 18 ವರ್ಷವಾಗಿರಬೇಕು. ಪುರುಷರಿಗೆ 45 ವರ್ಷ ಮೀರಿರಬಾರದು ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಧ್ಯಪ್ರದೇಶ ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆ ,ವಿಧವೆಯರ ಬಾಳು ಬಂಗಾರಗೊಳಿಸುವ ಕಾರಣಕ್ಕಾಗಿ ಹೊಸ ಯೋಜನೆ ರೂಪಿಸಿದೆ.ಈ ಯೋಜನೆಯ ಪ್ರಕಾರ ವಿಧವೆಯನ್ನು ಪುನರ್ ವಿವಾಹವಾಗುವ ವ್ಯಕ್ತಿಗೆ, ಪ್ರೋತ್ಸಾಹ ಧನ ನೀಡಲಾಗುತ್ತದೆ.
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರೂವರೆ ವರ್ಷದಲ್ಲಿ ಪ್ರಚಾರಕ್ಕಾಗಿ 3,755 ಕೋಟಿ ರೂಪಾಯಿ ವ್ಯಯಿಸಿದೆ ಎಂಬ ವಿಚಾರ ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ್ದ ಅರ್ಜಿಯಿಂದ ಬಯಲಿಗೆ ಬಂದಿದೆ.
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.
ಯಮುನಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬಸ್ ವೊಂದು ಜಾರಿ ಹದಿನೈದು ಅಡಿ ಆಳದ ದೊಡ್ಡ ಮೋರಿಯಲ್ಲಿ ಬಿದ್ದ ಪರಿಣಾಮ ಇಪ್ಪತ್ತೊಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ನೂರಾ ಅರವತ್ತೈದು ಕಿ.ಮೀ. ಉದ್ದ ಎಕ್ಸ್ ಪ್ರೆಸ್ ಹೈವೆ ಉತ್ತರಪ್ರದೇಶದಲ್ಲಿ ನೋಯ್ಡಾ ಹಾಗೂ ಆಗ್ರಾದ ಮಧ್ಯೆ ಸಂಪರ್ಕ ಕಲ್ಪಿಸುತ್ತದೆ.ರಾಜ್ಯ ರಸ್ತೆ ಸಾರಿಗೆ ಬಸ್ ಸ್ಕಿಡ್ ಆಗಿ 50 ಅಡಿ ಆಳದ ಚರಂಡಿಗೆ ಬಿದ್ದ ಪರಿಣಾಮ ಸ್ಥಳದಲ್ಲಿಯೇ 29 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಚಾಲಕ ನಿದ್ದೆ…
ನಮ್ಮ ದೇಹದ ಸೂಕ್ಷ್ಮ ಭಾಗವಾಗಿರುವ ಕಣ್ಣಿನ ಬಗೆಗಿನ ಈ 10 ವಿಷಯಗಳು ನಮ್ಮ ಕಣ್ಣನ್ನ ನಾವೇ ನಂಬದ ಹಾಗೆ ಮಾಡ್ತವೆ
ಜುಲೈ 2, 2019ರಂದು ಸಂಪೂರ್ಣ ಸೂರ್ಯ ಗ್ರಹಣ ಆಗಲಿದೆ. ಈ ಸೂರ್ಯ ಗ್ರಹಣವು ರಾತ್ರಿ 10.25ಕ್ಕೆ (ಭಾರತೀಯ ಕಾಲಮಾನ) ಸಂಭವಿಸಲಿದೆ. ಈ ಗ್ರಹಣವು 4.33 ನಿಮಿಷಗಳ ಕಾಲ ಸಂಭವಿಸಲಿದೆ. ಆ ಸಂದರ್ಭದಲ್ಲಿ ಸೂರ್ಯ ಸಂಪೂರ್ಣವಾಗಿ ಚಂದ್ರನ ನೆರಳಲ್ಲಿ ಮರೆಯಾಗುತ್ತದೆ. ಈ ಗ್ರಹಣವು ಚಿಲಿ, ಅರ್ಜೆಂಟೀನಾ ಹಾಗೂ ದಕ್ಷಿಣ ಪೆಸಿಫಿಕ್ ಸಾಗರದಿಂದ ಗೋಚರವಾಗುತ್ತದೆ. ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ, ಗ್ರಹಣದ ವೇಳೆ ಭೂಮಿಯಲ್ಲಿ ವಾತಾವರಣ ಕಲುಷಿತ ಆಗುತ್ತದೆ. ಆದ್ದರಿಂದ ಯಾವುದೇ ನಕಾರಾತ್ಮಕ ಅಡ್ಡ ಪರಿಣಾಮಗಳು ಸಂಭವಿಸಬಾರದು ಅಂದರೆ ಕೆಲವು…