ಸುದ್ದಿ

ಪ್ರಸಿದ್ದ ಆಭರಣ ಶೋರೂಂಗಳ ಮೇಲೆ ಐಟಿ ದಾಳಿ, 125 ಕೋಟಿ ರೂ. ಅಕ್ರಮ ಸಂಪತ್ತು ಪತ್ತೆ…!

74
ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರಪ್ರದೇಶದ ಡಿಜಿಐಟಿಗಳ ನೆರವಿನೊಡನೆ ದಾಯ ತೆರಿಗೆ – ಕರ್ನಾಟಕ ಮತ್ತು ಗೋವಾದ ಆದಾಯ ತೆರಿಗೆ ನಿರ್ದೇಶನಾಲಯ (ಡಿಜಿಐಟಿ) ದ ತನಿಖಾ ವಿಭಾಗವು  ರಾಜ್ಯದಾದ್ಯಂತ ಚಿನ್ನದ ಅಂಗಡಿ ಮೇಲೆ ನಡೆಸಿದ್ದ ದಾಳಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ.

ಕಳೆದ ವಾರ ಎರಡು ಪ್ರಸಿದ್ಧ ಆಭರಣ ಶೋ ರೂಂಗಳಾದ  ‘ಸುಲ್ತಾನ್’ ಮತ್ತು ‘ಸಿಟಿ ಗೋಲ್ಡ್’ ಮೇಲೆ ಸರಣಿ ದಾಳಿ ನಡೆಸಲಾಗಿತ್ತು.ಎರಡೂ ಆಭರಣ ಮಾರಾಟ ಸಮೂಹವು ಸುಮಾರು 125 ಕೋಟಿ ರೂ.ಗಳ  ದಾಖಲೆ ಇಲ್ಲದ  ಆದಾಯವನ್ನು ಹೊಂದಿದ್ದಾಗಿ ಹೆಸರು ಹೇಳಲು ಇಚ್ಚಿಸದ ಮೂಲಗಳಿಂದ ಪತ್ರಿಕೆಗೆ ಮಾಹಿತಿ ಲಭಿಸಿದೆ.

ಶೋಧ ಮತ್ತು ವಶಪಡಿಸಿಕೊಳ್ಳುವ ಕಾರ್ಯಾಚರಣೆಯಲ್ಲಿ ಎರಡು ಆಭರಣ  ಮಾರಾಟ ಸಮೂಘಗಳು ಮುಂಬಯಿಯಿಂದ ಲೆಕ್ಕವಿಲ್ಲದ ಮರುಬಳಕೆಯ ಚಿನ್ನವನ್ನು ನೂರಾರು ಕೋಟಿ ಮೌಲ್ಯ ಕೊಟ್ಟು  ಖರೀದಿಸುತ್ತಿದ್ದವು ಎಂದು ಯ್ತಿಳಿದುಬಂದಿದೆ.”ಎರಡೂ ಶೋ ರೂಂ ಗಳಲ್ಲಿ ಲೆಕ್ಕ ಪುಸ್ತಕದ ಆಚಿನ ನಗದು ಮಾರಾಟವು ನೂರಾರು ಕೋಟಿಗಳಲ್ಲಿರಬಹುದು. ಈ ವಿಷಯವು ತನಿಖೆಯಲ್ಲಿದೆ, ”ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ

ಡಿಜಿಐಟಿ, ಕರ್ನಾಟಕ ಮತ್ತು ಗೋವಾ ಕಳೆದ ವಾರ ಬೆಂಗಳೂರು, ಉಡುಪಿ, ಮಂಗಳೂರು ಮತ್ತು ಶಿವಮೊಗ್ಗಗಳಲ್ಲಿನ ‘ಸುಲ್ತಾನ್’ ಮತ್ತು ‘ಸಿಟಿ ಗೋಲ್ಡ್’ ನ ಶೋ ರೂಂಗಳಲ್ಲಿ ಏಕಕಾಲದಲ್ಲಿ ಶೋಧ ಕಾರ್ಯಾಚರಣೆ ನಡೆಸಿತ್ತು. ಕೇರಳ, ಆಂಧ್ರಪ್ರದೇಶ ಮತ್ತು ಮುಂಬೈಗಳಲ್ಲಿ  ಸಹ ಏಕಕಾಲಕ್ಕೆ ದಾಳಿ ನಡೆಸಲಾಯಿತು. “ಇದು  ಸಾಮೂಹಿಕ ಪ್ರಯತ್ನವಾಗಿದ್ದು ಭಾರೀ ಯಶಸ್ಸು ಕಂಡಿದೆ”ಅಧಿಕಾರಿ ಹೇಳಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health, karnataka, Lifestyle, ಆರೋಗ್ಯ

    ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…

  • ಸುದ್ದಿ

    ಇದೊಂದು ಭಯಾನಕ ಸುದ್ದಿ ; ನೀವು ಶೌಚಾಲಯಕ್ಕೆ ಹೋಗುವ ಮುನ್ನ ಇದನ್ನೊಮ್ಮೆ ಓದಿ…!

    ಇದೊಂದು ಭಯಾನಕ ಸುದ್ದಿ.  ಎಲ್ಲರೂ ಭಹಯಬೀಳುವಂತಹ  ಸುದ್ದಿಯೇ. ಹೆಬ್ಬಾವೊಂದು ಮನೆಯೊಳಗಿನ ಶೌಚಾಲಯದಲ್ಲಿ ಇಲಿ ಬೇಟೆಯಾಡಿದಂತಹ ದಿಗಿಲುಗೊಳ್ಳುವಂತಹ ಸಂಗತಿ. ಇದು ನಡೆದಿರುವುದು ಆಸ್ಟ್ರೇಲಿಯಾದ ಕೈನ್ಸ್‌ನಲ್ಲಿ. ಇಲ್ಲಿನ ಜನ್ನಾ ಎಂಗ್ಲರ್ ಬೆಳಗ್ಗೆ ಸುಮಾರು 4 ಗಂಟೆಗೆ ಎದ್ದು ಮನೆಯ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ, ಇವರಿಗೆ ಶೌಚಾಲಯದೊಳಗೆ ಏನೋ ಶಬ್ದ ಆದಂತೆ  ಕಂಡಿತು. ತಕ್ಷಣ ಏನದು ಎಂದು ನೋಡಿದಾಗ ಅಲ್ಲಿನ  ದೃಶ್ಯವನ್ನು ಕಂಡು ಇವರು ಒಂದು ಕ್ಷಣ ಭಯಬೀತರಾಗಿದ್ದರು. ಯಾಕೆಂದರೆ, ಶೌಚಾಲಯದೊಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಇಲಿ ಬೇಟೆಯಲ್ಲಿ ತೊಡಗಿತ್ತು….

  • ಆರೋಗ್ಯ

    ವಿಟಮಿನ್ ನಮ್ಮ ದೇಹಕ್ಕೆ ಎಷ್ಟೋಂದು ಅವಶ್ಯಕವೆಂಬುದು ನಿಮಗೆ ಗೊತ್ತಾ?ತಿಳಿಯಲು ಈ ಲೇಖನ ಓದಿ..

    ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.

  • ಆರೋಗ್ಯ

    ಅತಿಯಾದರೆ ಅಮೃತವೂ ವಿಷ, ಹೆಚ್ಚು ನಿಂಬೆರಸ ಸೇವನೆ ಆರೋಗ್ಯಕ್ಕೆ ಹಾನಿಕರ.

    ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ. ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ…