ಸುದ್ದಿ

ನಗರಸಭೆ ಚುನಾವಣೆಗೂ ಮುಂಚಿತವಾಗಿಯೇ ಖಾತೆಯನ್ನು ತೆರೆದ ಜೆಡಿಎಸ್ ಶಾಸಕರು!

42

ಚುನಾವಣೆಗೂ ಮುನ್ನವೇ ಹಿರಿಯೂರು ನಗರಸಭೆಯಲ್ಲಿ ಜೆಡಿಎಸ್ ಖಾತೆ ತೆರೆದಿದ್ದು, ಜೆಡಿಎಸ್ ಅಭ್ಯರ್ಥಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಏಳನೇ ವಾರ್ಡಿನ ಪಾಂಡುರಂಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 29 ರಂದು ನಗರಸಭೆ ಚುನಾವಣೆ ನಡೆಯಬೇಕಿತ್ತು. ಈ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಪಾಂಡುರಂಗ ಅವರು ನಾಮಪತ್ರ ಸಲ್ಲಿಸಿದ್ದರು. ಇವರ ಪ್ರತಿಸ್ಪರ್ಧಿಯಾಗಿ ಪಕ್ಷೇತರ ಅಭ್ಯರ್ಥಿ ಈರಲಿಂಗೇಗೌಡ ನಾಮಪತ್ರ ಸಲ್ಲಿಸಿದ್ದರು.

ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾವಾಗಿತ್ತು. ಈರಲಿಂಗೆಗೌಡ ಚುನಾವಣೆಯಲ್ಲಿ ನನಗೆ ಸ್ಪರ್ಧಿಸಲು ಇಷ್ಟವಿಲ್ಲ ಎಂದು ಹೇಳಿ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ. ಹೀಗಾಗಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್ ಅಭ್ಯರ್ಥಿ ಪಾಂಡುರಂಗ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಒಬ್ಬರೇ ಅಭ್ಯರ್ಥಿ ಇರುವ ಕಾರಣ ಮೇ 29 ರಂದು ನಡೆಯಬೇಕಿದ್ದ ನಗರಸಭೆ ಚುನಾವಣೆ ರದ್ದಾಗಿದೆ. ನಗರಸಭಾ ಸದಸ್ಯನಾಗಿ ಆಯ್ಕೆಯಾಗಿರುವುದಕ್ಕೆ ಪಾಂಡುರಂಗ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ