ಸುದ್ದಿ

ಮಂಡ್ಯದ ಗ್ರಾಮವೊಂದರಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ಕೂಡಿಹಾಕಿದ ಪೊಲೀಸರು!ಕಾರಣ ಏನು ಗೊತ್ತಾ?

218

ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು.

ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ ಮುಂಜಾಗೃತೆ ಕ್ರಮವಾಗಿ ಚಾಮಲಾಪುರ ಗ್ರಾಮದಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಬಂಗಲೆಯೊಂದರ ಕಾಂಪೌಂಡ್‍ನಲ್ಲಿ ಪೊಲೀಸರು ಕೂಡಿ ಹಾಕಿದ್ದರು.

ಬೆಳ್ಳೂರು ಗ್ರಾಮ ಅತಿಸೂಕ್ಷ್ಮ ಪ್ರದೇಶ ಆಗಿರುವುದರಿಂದ ಇಬ್ಬರು ಅಭ್ಯರ್ಥಿಗಳು ಮುಖಾಮುಖಿಯಾದಾಗ ಯಾವುದೇ ಸಮಸ್ಯೆ ಆಗಬಾರದೆಂದು, ಗ್ರಾಮದಲ್ಲಿ ರಸ್ತೆ ಬದಿಯಲ್ಲಿ ಭಾರೀ ಪೊಲೀಸ್ ಭದ್ರತೆಯನ್ನು ನಿಯೋಜನೆ ಮಾಡಲಾಗಿತ್ತು. ಸುಮಾರು ಒಂದು ಕಿಲೋಮೀಟರ್ ರಸ್ತೆಯುದ್ದಕ್ಕೂ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು. ಅಲ್ಲದೆ ಸುಮಲತಾ ಅವರು ಹೋಗುವಾಗ ವಿರೋಧವಾಗಿ ಜೈಕಾರ ಕೂಗದಂತೆ ಜೆಡಿಎಸ್ ಕಾರ್ಯಕರ್ತರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದರು.

ಸುಮಲತಾ ಅವರು ಚಾಮಲಾಪುರ ಮಾರ್ಗದಲ್ಲಿ ತೆರಳುತ್ತಿದ್ದ ಹಿನ್ನೆಲೆಯಲ್ಲಿ ಇದೇ ಸ್ಥಳದಲ್ಲಿದ್ದ ನಿಖಿಲ್ ಕುಮಾರಸ್ವಾಮಿ ಅವರನ್ನು ಕೂಡ ಐದು ನಿಮಿಷ ಗೇಟಿನಲ್ಲೇ ಪೊಲೀಸರು ತಡೆಹಿಡಿದಿದ್ದರು. ಈ ವೇಳೆ ಪೊಲೀಸರನ್ನು ಜೆಡಿಎಸ್ ಶಾಸಕ ಸುರೇಶ್ ಗೌಡ ತರಾಟೆಗೆ ತೆಗೆದುಕೊಂಡ ಬಳಿಕ ನಿಖಿಲ್ ಅವರ ವಾಹನವನ್ನು ಪೊಲೀಸರು ಬಿಟ್ಟು ಕಳುಹಿಸಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಫುಟ್ಪಾತ್ ಮೇಲೆ ಭಿಕ್ಷೆ ಬೇಡುತ್ತಿದ್ದ ಹುಡುಗನ ಇವತ್ತಿನ ಸಾಧನೆ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಹಿಂದೊಂದು ದಿನ ಊಟ ಇಲ್ಲದೆ, ಮಲಗೋಕೆ ಜಾಗ ಇಲ್ಲದೆ ಚೆನ್ನೈನ ಫುಟ್ಪಾತ್ ಮೇಲೆ ಇದ್ದ ಈ ಹುಡುಗನ ಇವತ್ತಿನ ಸಾಧನೆ ಕೇಳಿದ್ರೆ ನೀವೆಲ್ಲ ಹುಬ್ಬೇರುಸ್ತೀರಾ. ಜೀವನ ಒಂದೇ ರೀತಿಯಲ್ಲಿ ಯಾವತ್ತೂ ಇರೋದಿಲ್ಲ ಅನ್ನೋದಕ್ಕೆ ಈ ಹುಡುಗನೇ ಸ್ಪಷ್ಟ ಉದಾಹರಣ..

  • ಸಿನಿಮಾ

    ಕನ್ನಡಕ್ಕೆ ಡಬ್ ಆಗ್ತಿವೆ ಸಾಲು ಸಾಲು ಪರಭಾಷಾ ಚಿತ್ರಗಳು..!

    ಕೆಜಿಎಫ್ ಪರಭಾಷೆಗಳಿಗೆ ಡಬ್ ಆಗಿ ಧೂಳು ಎಬ್ಬಿಸಿದ ಬೆನ್ನಲ್ಲೇ ಇತ್ತ ಬೇರೆ ಭಾಷೆಯ ಚಲನ ಚಿತ್ರಗಳು ಸಹ ಡಬ್ ಆಗಿ ಬಿಡುಗಡೆಯಾಗಲು ಸಿದ್ಧವಾಗಿ ನಿಂತಿವೆ. ಇಷ್ಟು ದಿನ ಬೇರೆ ಭಾಷೆಯ ಚಲನ ಚಿತ್ರಗಳು ಕನ್ನಡ ಭಾಷೆಗೆ ಡಬ್ ಆಗಲು ಭಾರಿ ವಿರೋಧ ವಿತ್ತು. ಡಬ್ ವಿಷಯವನ್ನು ಮಾತನಾಡುವಂತೂ ಇರಲಿಲ್ಲ. ಅದರಲ್ಲೂ ಕನ್ನಡ ಚಲನಚಿತ್ರ ಮಂಡಲಿಯಂತೂ ಇದನ್ನು ತೀವ್ರವಾಗಿ ವಿರೋಧಿಸಿತ್ತು. ಕಾರಣ ಕನ್ನಡ ಚಲನಚಿತ್ರ ರಂಗವು ಮೊದಲೇ ಮಾರ್ಕೆಟಿಂಗ್ ವಿಚಾರದಲ್ಲಿ ಹಿಂದೆ ಇರುವುದರಿಂದ ಪರಭಾಷಾ ಚಿತ್ರಗಳು ಡಬ್ ಆದರೆ…

  • Archive

    RRR ಚಲನಚಿತ್ರಕ್ಕೆ ಆಸ್ಕರ್ ಪ್ರಶಸ್ತಿ

    ಇತಿಹಾಸ ಸೃಷ್ಟಿಸಿದ RRR  ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್​ ಹಾಡುಗಳು ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ‍್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್​ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ…

  • ಆರೋಗ್ಯ

    ದಾಳಿಂಬೆ ಹಣ್ಣಿನಲ್ಲಿರುವ ಆರೋಗ್ಯಕಾರಿ ಗುಣಗಳು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶನಿವಾರ, 21/4/2018,  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:– ಎಲ್ಲಾ ವಿಚಾರಕ್ಕೂ ಪರರ ಸಲಹೆಯನ್ನು ಕೇಳುತ್ತಾ ಕೂತರೆ ಉತ್ತಮ ಅವಕಾಶ ತಪ್ಪಿ ಹೋಗುವುದು ಸಾಧ್ಯತೆ. ಅಂಜಿಕೆ, ಅಧೈರ್ಯ ಬದಿಗಿಟ್ಟು?   ಕಾರ್ಯವನ್ನು ಮುನ್ನುಗ್ಗಿ ಮಾಡಿ. ದೈವಬಲವಿದೆ. ನೀವು ಯಶಸ್ಸನ್ನು ಹೊಂದುವಿರಿ….

  • ಉಪಯುಕ್ತ ಮಾಹಿತಿ

    ಕೆಟ್ಟ ಕನಸುಗಳು ಬೀಳದಿರಲು ಹಾಗೂ ಸುಖ ನಿದ್ರೆ ಮಾಡಲು..! ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಈ ಭೂಮಿಮೇಲೆ ಹುಟ್ಟಿರುವ ಎಲ್ಲ ಜೀವಿಗಳಿಗೂ ನಿದ್ರೆ ಅತೀ ಅವಶ್ಯಕ. ನಿದ್ದೆ ಮಾಡುವುದರಿಂದ ಶರೀರ ಉತ್ತೇಜನಗೊಂಡು ,ಮಾರನೇ ದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಿರುವ ಶಕ್ತಿ ಲಭಿಸುತ್ತದೆ. ನಿದ್ರಿಸುವುದರಿಂದ ಶರೀರಕ್ಕೆ ಇನ್ನೂ ಅನೇಕ ರೀತಿಯ ಪ್ರಯೋಜನಗಳು ಆಗುತ್ತವೆ.