ಆಟೋಮೊಬೈಲ್ಸ್

ಭಾರತದಲ್ಲಿ ಲಾಂಚ್ ಆಗಲಿದೆ ಆಸೂಸ್ ‘ಝೆನ್‌ಫೋನ್ 6’!..ಟು ಇನ್‌ ಒನ್‌ ಕ್ಯಾಮೆರಾ!

66

ಟೆಕ್‌ ವಲಯದಲ್ಲಿ ಭಾರೀ ಹೆಸರು ಮಾಡಿರುವ ‘ಆಸೂಸ್’ ಕಂಪನಿಯು ಇತ್ತೀಚಿಗೆ ವಿಶ್ವ ಮೊಬೈಲ್‌ ಮಾರುಕಟ್ಟೆಗೆ ‘ಝೆನ್‌ಫೋನ್ 6’ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿ ಸಖತ್ ಸುದ್ದಿ ಮಾಡಿತ್ತು. ವಿಶೇಷ ಫ್ಲಿಪ್‌ ಸೆಲ್ಫಿ ಕ್ಯಾಮೆರಾ ಫೀಚರ್‌ ಹೊಂದಿರುವ ಈ ಸ್ಮಾರ್ಟ್‌ಫೋನ್‌ ಅನ್ನು ಕಂಪನಿಯು ಈಗ ಭಾರತೀಯ ಮಾರುಕಟ್ಟೆಗೂ ಬಿಡುಗಡೆ ಮಾಡಲು ಮುಂದಾಗಿದ್ದು, ಆದರೆ ದೇಶಿಯ ಮಾರುಕಟ್ಟೆಯಲ್ಲಿ ಅದರ ಹೆಸರು ಬದಲಾಗಲಿದೆ. ಅದಕ್ಕಾಗಿ ಬಿಡುಗಡೆಯ ದಿನಾಂಕವನ್ನು ಫಿಕ್ಸ್‌ ಮಾಡಿಕೊಂಡಿದೆ

ಹೌದು, ಆಸೂಸ್‌ ಕಂಪನಿಯು ತನ್ನ ಹೊಸ ‘ಝೆನ್‌ಫೋನ್ 6’ ಸ್ಮಾರ್ಟ್‌ಫೋನ್‌ ಅನ್ನು ಇದೇ ಜೂನ್ 11 ರಂದು ರಿಲೀಸ್‌ ಮಾಡಲು ಮೂಹೂರ್ತ್ ನಿಗದಿ ಮಾಡಿಕೊಂಡಿದ್ದು, ಆದರೆ ಕಂಪನಿಯು ಈ ಫೋನನ್ನು ‘ಆಸೂಸ್‌ 6z’ ಹೆಸರಿನಿಂದ ಬಿಡುಗಡೆ ಮಾಡಲಿದೆ ಎನ್ನಲಾಗುತ್ತಿದೆ. ಈ ಫ್ಲ್ಯಾಗ್‌ಶಿಪ್ ಸ್ಮಾರ್ಟ್‌ಫೋನ್ ಮೇನ್‌ ಅಟ್ರ್ಯಾಕ್ಷನ್‌ ಫ್ಲಿಪ್‌ ಕ್ಯಾಮೆರಾ ಆಗಿದ್ದು, ಇದರೊಂದಿಗೆ ಹೈ ಎಂಡ್‌ . ಹೆಚ್‌ಡಿ ಡಿಸ್‌ಪ್ಲೇ ಆಸೂಸ್‌ ಝೆನ್‌ಫೋನ್ 6 ಸ್ಮಾರ್ಟ್‌ಫೋನಿನಲ್ಲಿ 6.4 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದ್ದು, ಸ್ಕ್ರೀನ್‌ LCD ಮಾದರಿಯಲ್ಲಿದೆ. ಡಿಸ್‌ಪ್ಲೇಯ ಸುತ್ತಲೂ ನಾಚ್‌ ಇಲ್ಲದ, ಅತೀ ಕಡಿಮೆ ಅಂಚಿನ ರಚನೆಯನ್ನು ಪಡೆದಿದೆ. ಹಾಗಾಯೇ ಡಿಸ್‌ಪ್ಲೇ ಸುತ್ತಲಿನ ನಾಲ್ಕು ಮೂಲೆಗಳು ಕರ್ವ್ ಮಾದರಿಯ ಆಕಾರದಲ್ಲಿದ್ದು, ಸ್ಮಾರ್ಟ್‌ಫೋನ್‌ ಅಂದವನ್ನು ಹೆಚ್ಚಿಸಿದೆ.

ಬಲವಾದ ಪ್ರೊಸೆಸರ್ ಆಸೂಸ್‌ನ ಈ ಸ್ಮಾರ್ಟ್‌ಫೋನಿನಲ್ಲಿ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 855 ಪ್ರೊಸೆಸರ್‌ ಅನ್ನು ಹೊಂದಿದ್ದು, ಈ ಫೋನ್ ಎರಡು RAM ಆಯ್ಕೆಗಳನ್ನು ಹೊಂದಿದೆ. ಅವು ಕ್ರಮವಾಗಿ 6GB RAM ಮತ್ತು 8GB RAM ಸಾಮರ್ಥ್ಯದಲ್ಲಿವೆ. ಹಾಗೆಯೇ ಆಂತರಿಕ ಸಂಗ್ರಹಕ್ಕಾಗಿ 64GB, 128GB ಮತ್ತು 256GB ಸ್ಥಳಾವಕಾಶದ ಮೂರು ಆಯ್ಕೆಗಳನ್ನು ಒದಗಿಸಲಾಗಿದೆ.

ಕ್ಯಾಮೆರಾ ವಿಶೇಷತೆ ಝೆನ್‌ಫೋನ್‌ 6 ಸ್ಮಾರ್ಟ್‌ಫೋನಿನ್ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ನೀಡಲಾಗಿದ್ದು, ಕ್ಯಾಮೆರಾ ಆಯ್ಕೆಯು ಫ್ಲಿಪ್ ಮಾದರಿಯಲ್ಲಿದೆ. ಪ್ರಮುಖ ಕ್ಯಾಮೆರಾವು ಸೋನಿಯ IMX586 ಸೆನ್ಸಾರ್‌ನೊಂದಿಗೆ 48 ಮೆಗಾಪಿಕ್ಸಲ್ ಸಾಮರ್ಥ್ಯದಲ್ಲಿದ್ದು, ಸೆಕೆಂಡರಿ ಕ್ಯಾಮೆರಾವು ವೈಲ್ಡ್‌ ಆಂಗಲ್ ಲೆನ್ಸ್‌ನೊಂದಿಗೆ 13 ಮೆಗಾಪಿಕ್ಸಲ್ ಸಾಮರ್ಥ್ಯದಲ್ಲಿದೆ. ಸೆಲ್ಫಿಗೂ ಈ ಕ್ಯಾಮೆರಾವೇ ಬಳಕೆಯಾಗಲಿದೆ.
ಹೇವಿ ಬ್ಯಾಟರಿ ಲೈಫ್ ಆಸೂಸ್‌ ಝೆನ್‌ಫೋನ್ 6 ಸ್ಮಾರ್ಟ್‌ಫೋನಿಗೆ 5000mAh ಸಾಮರ್ಥ್ಯದ ಪವರ್‌ಫುಲ್‌ ಬ್ಯಾಟರಿ ಶಕ್ತಿಯನ್ನು ನೀಡಲಾಗಿದೆ. ದೀರ್ಘಕಾಲದ ಬಾಳಿಕೆಗೆ ಬೆಂಬಲ ನೀಡಲಿದೆ. ಇದರೊಂದಿಗೆ 4.0. ವೇಗದ ಚಾರ್ಜಿಂಗ್ ತಂತ್ರಜ್ಞಾನ ಸೌಲಭ್ಯವನ್ನು ಸಹ ಒದಗಿಸಲಾಗಿದ್ದು, ಇದರ ನೆರವಿನಿಂದ ಸ್ಮಾರ್ಟ್‌ಫೋನ್ ವೇಗವಾಗಿ ಚಾರ್ಜಿಂಗ್ ಪಡೆದುಕೊಳ್ಳಲಿದೆ.
ಬೆಲೆ ಮತ್ತು ಲಭ್ಯತೆ ಆಸೂಸ್‌ ‘ಝೆನ್‌ಫೋನ್ 6’ ಸ್ಮಾರ್ಟ್‌ಫೋನ್ ಇದೇ ಜೂನ್ 11ರಂದು ಭಾರತಕ್ಕೆ ಎಂಟ್ರಿ ಆಗಲಿದ್ದು, ಮೂರು ವೇರಿಯಂಟ್ ಮಾದರಿಗಳಲ್ಲಿ ಲಭ್ಯ ಇರಲಿದೆ. 6GB RAM ಮತ್ತು 64GB ವೇರಿಯಂಟ್ ಬೆಲೆಯು 39,000ರೂ.ಗಳ, 6GB RAM ಮತ್ತು 128GB ವೇರಿಯಂಟ್ ಬೆಲೆಯು 44,000ರೂ.ಗಳು ಮತ್ತು 8GB RAM ಮತ್ತು 256GB ವೇರಿಯಂಟ್ ಬೆಲೆಯು 47,000ರೂ.ಗಳು ಎಂದು ಊಹಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ವ್ಯಕ್ತಿ ವಿಶೇಷಣ

    ವರದಕ್ಷಿಣೆ ವಿರೋಧಿಸಿ: ಈ ವರ ಮಾಡಿದ ಕೆಲಸ ನೋಡಿ ಆಶ್ಚರ್ಯಗೊಂಡ್ರು ಜನ..! ತಿಳಿಯಲು ಈ ಲೇಖನ ಓದಿ..

    ಮಧ್ಯಪ್ರದೇಶದ ನಿಮಚ್ ನಲ್ಲಿ ಅನನ್ಯ ಹಾಗೂ ಸಮಾಜಕ್ಕೆ ಮಾದರಿಯಾಗಬಲ್ಲಂತ ಮದುವೆಯೊಂದು ನಡೆದಿದೆ. ಮದುವೆಗಾಗಿ ಅಹಮದಾಬಾದ್ ನಿಂದ ಬಂದಿದ್ದ ವರ ಸಪ್ತಪದಿ ನಂತ್ರ 8ನೇ ಸುತ್ತು ಸುತ್ತಲು ಶುರುಮಾಡಿದ್ದಾನೆ. ಇದನ್ನು ನೋಡಿ ನೆರೆದಿದ್ದವರೆಲ್ಲ ಆಶ್ಚರ್ಯಕ್ಕೊಳಗಾಗಿದ್ದಾರೆ.

  • ಉಪಯುಕ್ತ ಮಾಹಿತಿ

    ಚಾಣಕ್ಯ ಹೇಳಿರುವ ಪ್ರಕಾರ ಸ್ತ್ರೀಯರ ಗುಣ ಲಕ್ಷಣಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ಜೀವನದಲ್ಲಿ ಮುಂದೆ ಏಳಿಗೆ ಹೊಂದಬೇಕಾದರೆ ಪಾಲಿಸ ಬೇಕಾದ ನಿಯಮಗಳು,ಇತರರೊಡನೆ ವ್ಯವಹರಿಸ ಬೇಕಾದ ರೀತಿ,ಸಮಾಜದಲ್ಲಿ ನಮ್ಮ ನಡೆ ಹೇಗಿರಬೇಕು.ಮುಂತಾದ ಅನೇಕ ಅಂಶಗಳ ಬಗ್ಗೆ ಚಾಣಕ್ಯನು ನಮಗೆ ಅನೇಕ ನೀತಿಗಳನ್ನು ಬೋಧಿಸಿದ್ದಾನೆ. ನಮ್ಮ ಪ್ರಗತಿಗೆ ಅನೇಕ ಸಂದರ್ಭಗಳಲ್ಲಿ ಇವೆಲ್ಲವೂ ಉಪಯೋಗಕ್ಕೆ ಬರುತ್ತವೆ. ಚಾಣಕ್ಯ ಇವಷ್ಟನ್ನೇ ಅಲ್ಲದೆ,ಸ್ತ್ರೀಯರ ಬಗ್ಗೆಯೂ ಹಲವು ವಿಷಯಗಳನ್ನು ತಿಳಿಸಿದ್ದಾನೆ. 1.ಯಾವುದೇ ವಿಷಯವಾಗಲೀ,ಸ್ತ್ರೀಯು ತನ್ನ ಗಂಡನ ಅನುಮತಿ ಪಡೆದುಕೊಳ್ಳ ಬೇಕಂತೆ.ಇಲ್ಲವಾದಲ್ಲಿ ಗಂಡನ ಆಯುಷ್ಯ ಕಡಿಮೆಯಾಗುತ್ತದಂತೆ. 2.ಸುಳ್ಳುಹೇಳುವುದು, ಸ್ವಾರ್ಥ,ಅಸೂಯೆ,ಕಠಿಣವಾಗಿ ವರ್ತಿಸುವುದು,ಮೂರ್ಖತ್ವ,ಪರಿಶುಭ್ರತೆಯನ್ನು ಪಾಲಿಸದಿರುವುದು,ಕ್ರೂರತ್ವ ಮುಂತಾದ ಆಂಶಗಳು ಸ್ತ್ರೀಯರಲ್ಲಿ ಪ್ರಧಾನವಾಗಿರುತ್ತವೆ. ಇವುಗಳಿಂದಾಗಿ ಅನೇಕ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕರಿಬೇವನ್ನು ತಿನ್ನದೇ ಹಾಗೇ ಬಿಸಾಡುತ್ತೀರಾ ..ಆದ್ರೆ ಅದರ ಅದ್ಭುತ ಪ್ರಯೋಜನಗಳನ್ನ ತಿಳಿದರೆ…

    ಕರಿಬೇವಿನ ಸೊಪ್ಪು ಅಂದ್ರೆ ಮಹಿಳೆಯರಿಗೆ ವಿಶೇಷ ಪ್ರೀತಿ. ಅವರು ಮಾಡೋ ಅಡುಗೆಗೆ ವಿಶೇಷ ಪರಿಮಳ ನೀಡೋ ಮುಖ್ಯ ಪದಾರ್ಥ ಅದು. ಹೌದು….ಅಡುಗೆಗೆ ವಿಶೇಷ ಮೆರಗು ನೀಡುತ್ತೆ ಕರಿಬೇವು. ಕೇವಲ ಪರಿಮಳಕ್ಕಷ್ಟೇ ಅಲ್ಲ, ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳೂ ಇವೆ. ಕರಿಬೇವು ಕಬ್ಬಿಣದಂಶ ಹಾಗೂ ಪೋಲಿಕ್ ಆಸಿಡ್ ಗಳ ಗುಚ್ಛವೆಂದೇ ಹೇಳಬಹುದು. ರಕ್ತಹೀನತೆಗೂ ಇದು ರಾಮಬಾಣ. ಕರಿಬೇವು ಲಿವರ್ ಗೂ ಒಳ್ಳೆಯದು. ಲಿವರ್ ಹಾಳಾಗದಂತೆ ತಡೆಯುತ್ತದೆ. ಕರಿಬೇವು ಆಂಟಿಬಯಾಟಿಕ್ ಎಂದು ಆಯುರ್ವೇದಲ್ಲಿ ಹೇಳಲಾಗುತ್ತದೆ. ಕರಿಬೇವು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ….

  • ಕರ್ನಾಟಕ

    ರೈತರ ಸಾಲ ಮನ್ನಾ ಮಾಡಿ, ಮೋದಿಗೆ ಸವಾಲ್ ಹಾಕಿದ ಸಿದ್ದರಾಮಯ್ಯ!!!

    ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

  • ಉಪಯುಕ್ತ ಮಾಹಿತಿ

    ಜ್ವರದಿಂದ-ಹೃದಯಘಾತದವರೆಗೆ ಎಲ್ಲಾ ಕಾಯಿಲೆಗಳನ್ನು ತಡೆಯುವ ರಾಮಬಾಣ ಯಾವುದು ಗೊತ್ತಾ?

    ‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’…