ಸುದ್ದಿ

ಅತಿ ಶೀಘ್ರವೇ ಬಿಡುಗಡೆಯಾಗಲಿದೆ ಜಿಯೋ ಗಿಗಾ ಫೈಬರ್: ಏನೆಲ್ಲ ಸೇವೆ ಉಚಿತ ಸಿಗುತ್ತೆ? ಇಲ್ಲಿದೆ ನೋಡಿ ಪೂರ್ಣ ಮಾಹಿತಿ..!

69

ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್‍ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್‍ಬ್ಯಾಂಡ್, ಲ್ಯಾಂಡ್‍ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ ಈ ಸೇವೆ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಕಂಪನಿಯ ಮೂಲಗಳನ್ನು ಆಧರಿಸಿ ಮಾಧ್ಯಮವೊಂದು ವರದಿ ಮಾಡಿದೆ.
ಆರಂಭದಲ್ಲಿ ಉಚಿತ:

ಜಿಯೋ ಸೇವೆ 2016ರ ಸೆಪ್ಟೆಂಬರ್ ತಿಂಗಳಿನಲ್ಲಿ ಆರಂಭಗೊಂಡ ಮೂರು ತಿಂಗಳು ಉಚಿತ ಸೇವೆ ನೀಡಿತ್ತು. ಜಿಯೋ ಫೈಬರ್ ಕೂಡ ಒಂದು ವರ್ಷ ಉಚಿತವಾಗಿ ಸಿಗಲಿದೆ. ಲ್ಯಾಂಡ್‍ಲೈನ್‍ನಲ್ಲಿ ಹೊರ ಹೋಗುವ ಎಲ್ಲ ಕರೆಗಳು ಉಚಿತವಾಗಿ ನೀಡಲಿದೆ. ಲ್ಯಾಂಡ್‍ಲೈನ್ ಮತ್ತು ಟಿವಿ ವಾಹಿನಿ ಸೇವೆಗಳು ಮೂರು ತಿಂಗಳಿನಲ್ಲಿ ಸೇರ್ಪಡೆಯಾಗಲಿದೆ. ಈಗಾಗಲೇ ಟಿವಿ ವೀಕ್ಷಣೆಗೆ ಜಿಯೋ ಟಿವಿ ಅಪ್ಲಿಕೇಶನ್ ಬಿಡುಗಡೆ ಮಾಡಿದ್ದು, ಈ ಅಪ್ಲಿಕೇಶನ್ ನಲ್ಲಿ ಬರುವ ಎಲ್ಲ ಟಿವಿಗಳನ್ನು ವೀಕ್ಷಿಸಬಹುದಾಗಿದೆ. ಈ ಸೇವೆ ಆರಂಭಗೊಂಡ ದಿನದಿಂದ ಒಂದು ವರ್ಷದವರೆಗೆ ಎಲ್ಲ ಸೇವೆಗಳು ಉಚಿತವಾಗಿ ಸಿಗಲಿದ್ದು, ಒಂದು ವರ್ಷದ ಬಳಿಕ ಗ್ರಾಹಕರು ಬೇಕಾದ ಪ್ಯಾಕ್‍ಗೆ ಅನುಗುಣವಾಗಿ ಮಾಸಿಕ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಸ್ಪೀಡ್ ಎಷ್ಟು?

ಭಾರತೀಯ ದೂರ ಸಂಪರ್ಕ ಪ್ರಾಧಿಕಾರ(ಟ್ರಾಯ್) ಮಾರ್ಚ್ ತಿಂಗಳಿನಲ್ಲಿ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಜಿಯೋದ ಡೌನ್‍ಲೋಡ್ ಸ್ಪೀಡ್ 22.2 ಮೆಗಾ ಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ಇದೆ. ಸದ್ಯ ಜಿಯೋ ದೇಶದಲ್ಲಿ ಮೊಬೈಲ್ ಡೇಟಾ ಸ್ಪೀಡ್‍ನಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ಈಗ ಬರುತ್ತಿರುವ ಜಿಯೋ ಫೈಬರ್‍ನಲ್ಲಿ 100 ಎಂಬಿಪಿಎಸ್ ವೇಗದಲ್ಲಿ ಇಂಟರ್‍ನೆಟ್ ಸೇವೆ ಸಿಗಲಿದೆ.
ರೂಟರ್ ಖರೀದಿಸಬೇಕು:

ಒಂದು ವರ್ಷ ಉಚಿತ ಸೇವೆ ಆದರೂ ಗ್ರಾಹಕರು ಆರಂಭದಲ್ಲಿ 4,500 ರೂ. ನೀಡಿ ರೂಟರ್ ಖರೀಸಬೇಕು. ಎಲ್ಲ ಇಂಟರ್‍ನೆಟ್ ಸೇವೆಗಳು ಆಪ್ಟಿಕಲ್ ನೆಟ್‍ವರ್ಕ್ ಟರ್ಮಿನಲ್ (ಒಎನ್‍ಟಿ) ಬಾಕ್ಸ್ ರೂಟರ್ ಮೂಲಕ ನಡೆಯಲಿದ್ದು, ಒಂದೇ ಬಾರಿಗೆ ಒಟ್ಟು 40-45 ಡಿವೈಸ್ ಗಳನ್ನು ಕನೆಕ್ಟ್ ಮಾಡಬಹುದು. ಮೊಬೈಲ್, ಸ್ಮಾರ್ಟ್ ಟಿವಿ, ಲ್ಯಾಪ್ ಟಾಪ್, ಟ್ಯಾಬ್ಲೆಟ್, ಗೇಮಿಂಗ್, ಸಿಸಿಟಿವಿ, ಸ್ಮಾರ್ಟ್ ಹೋಮ್ ಸಿಸ್ಟಂ ಸಹ ಕನೆಕ್ಟ್ ಮಾಡಬಹುದು.ಈ ಸೇವೆಯ ಇನ್ನೊಂದು ವಿಶೇಷ ಏನೆಂದರೆ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಸೇರಿದಂತೆ ಇತರ ಡೇಟಾಗಳನ್ನು ಕ್ಲೌಡ್ ಮೂಲಕ ಸೇವ್ ಆಗಲಿದೆ. ಈ ಮೂಲಕ ಎಲ್ಲೇ ಹೋದರೂ ಡೇಟಾಗಳನ್ನು ಗ್ರಾಹಕರು ಚೆಕ್ ಮಾಡಬಹುದು.

ಎಲ್ಲೆಲ್ಲಿ ಸಿಗುತ್ತೆ?
ಸದ್ಯ ದೆಹಲಿ ಮತ್ತು ಮುಂಬೈ ನಗರದಲ್ಲಿ ಪರೀಕ್ಷೆಗಳು ನಡೆಯುತ್ತಿದೆ. ದೇಶದ 1,600 ನಗರಗಳಲ್ಲಿ ಜಿಯೋ ಫೈಬರ್ ನೀಡಲು ಕಂಪನಿ ಪ್ಲಾನ್ ಮಾಡಿದೆ. ಕಳೆದ ಆಗಸ್ಟ್ ತಿಂಗಳಿನಿಂದ ಜಿಯೋ ಫೈಬರ್ ಗ್ರಾಹಕರ ನೊಂದಣಿ ಆರಂಭಿಸಿದೆ.ಇಲ್ಲಿಯವರೆಗೆ ಕಂಪನಿ ಈ ಪ್ಲಾನ್ ಬಗ್ಗೆ ಅಧಿಕೃತವಾದ ಹೇಳಿಕೆಯನ್ನು ನೀಡಿಲ್ಲ. ಈ ಕುರಿತು ಪ್ರತಿಕ್ರಿಯಿಸಿರುವ ಕಂಪನಿ ಅಧಿಕಾರಿಯೊಬ್ಬರು, ಇಲ್ಲಿಯವರೆಗೂ ಯಾವ ಪ್ಲಾನ್ ಬಗ್ಗೆ ಮಾಹಿತಿ ನಮಗೆ ಇಲ್ಲ. ಜಿಯೋ ಗಿಗಾ ಫೈಬರ್ ಬ್ರಾಂಡ್ ಮಾರುಕಟ್ಟೆಗೆ ಬರಲು ಅಂದಾಜು ಎರಡು ತಿಂಗಳು ಸಮಯ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.ಪ್ರಸ್ತುತ ಭಾರತದಲ್ಲಿ 1.8 ಕೋಟಿ ಜನ ಬ್ರಾಂಡ್ ಬ್ಯಾಂಡ್ ಬಳಕೆ ಮಾಡುತ್ತಿದ್ದರೆ 53 ಕೋಟಿ ಜನ ಮೊಬೈಲ್ ಡೇಟಾ ಬಳಕೆ ಮಾಡುತ್ತಿದ್ದಾರೆ. ಜಿಯೋ ಫೈಬರ್ ಬ್ರಾಡ್‍ಬ್ಯಾಂಡ್ ಸೇವೆ ಅಧಿಕೃತವಾಗಿ ಆರಂಭವಾದರೆ ಟೆಲಿಕಾಂ ಕಂಪನಿಗಳಿಗೆ ಹೇಗೆ ಹೊಡೆತ ನೀಡಿತ್ತೋ ಅದೇ ರೀತಿಯಾಗಿ ಬ್ರಾಡ್‍ಬ್ಯಾಂಡ್ ಕಂಪನಿಗಳಿಗೆ ಹೊಡೆತ ನೀಡಬಹುದು ಎನ್ನುವ ವಿಶ್ಲೇಷಣೆ ಈಗಾಗಲೇ ಕೇಳಿ ಬಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕಾಯಿಲೆ

    19 ನೇ ಶತಮಾನದಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗವನ್ನು ಹೇಗೆ ಎದುರಿಸಿತು

    1800 ರ ಉತ್ತರಾರ್ಧದಲ್ಲಿ ಮತ್ತು 1900 ರ ದಶಕದ ಆರಂಭದಲ್ಲಿ ಜಗತ್ತನ್ನು ಧ್ವಂಸಗೊಳಿಸಿದ ಮೂರನೇ ಪ್ಲೇಗ್ ಸಾಂಕ್ರಾಮಿಕವು ಇಂದಿನ COVID-19 ಸಾಂಕ್ರಾಮಿಕ ರೋಗಕ್ಕೆ ಹೋಲುತ್ತದೆ. ಇದು 1860 ರ ದಶಕದಲ್ಲಿ ಚೀನಾದಲ್ಲಿ ತನ್ನ ಕೊಳಕು ತಲೆಯನ್ನು ಬೆಳೆಸಿತು, 1894 ರಲ್ಲಿ ಹಾಂಗ್ ಕಾಂಗ್, ಆಗಸ್ಟ್ 1896 ರಲ್ಲಿ ಮುಂಬೈ, ಡಿಸೆಂಬರ್ 1897 ರಲ್ಲಿ ಹುಬ್ಬಳ್ಳಿ ಮತ್ತು ಆಗಸ್ಟ್ 1898 ರಲ್ಲಿ ಬೆಂಗಳೂರು ತಲುಪಿತು.

  • ಸುದ್ದಿ

    ಖ್ಯಾತ ಸ್ಯಾಕ್ಸೋಫೋನ್ ವಾದಕ,ಪದ್ಮಶ್ರೀ ಪುರಸ್ಕೃತ ವಿಜೇತ ಕದ್ರಿ ಗೋಪಾಲನಾಥ್ ಇನ್ನಿಲ್ಲ …..

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಲನಾಥ್(70)​ ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳುಗಳಿಂದ ವಯೋಸಹಜ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಗುರುವಾರ ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್‌ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು…

  • ಸುದ್ದಿ

    ಅಂದ ಹೆಚ್ಚಿಸಿಕೊಳ್ಳಲು ಹೋದ ವೈದ್ಯೆ ಆಸ್ಪತ್ರೆ ಪಾಲು ….! ಬ್ಯೂಟಿಪಾರ್ಲರ್​ಗೆ ಹೋಗುವ ಹೆಂಗಸರೇ ಎಚ್ಚರ…ಎಚ್ಚರ!!

    ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್​ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್​ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಿಎಂಎಚ್​ ರಸ್ತೆಯಲ್ಲಿರುವ ಕ್ಲಬ್​ ಸಿಟ್ರಸ್​​ ಸಲೂನ್​ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್​ಗೆ ತೆರಳಿದ್ದರು. ಈ ವೇಳೆ…

  • Cinema

    ಚಿರಂಜೀವಿ ಸರ್ಜಾ ಅಭಿಮಾನಿಗಳು ಕಂಡಿದ್ದ ಆ ಕನಸು ಕಡೆಗೂ ಕನಸಾಗಿಯೇ ಉಳಿಯಿತು!

    ಹಲವು ಪಾತ್ರಗಳ ಮೂಲಕ ಸಿನಿಪ್ರಿಯರನ್ನು ಚಿರಂಜೀವಿ ಸರ್ಜಾ ರಂಜಿಸಿದ್ದರು. ಹಾಗಿದ್ದರೂ ಅಭಿಮಾನಿಗಳಿಗೆ ಸಮಾಧಾನ ಆಗಿರಲಿಲ್ಲ. ಯಾಕೆಂದರೆ, ಫ್ಯಾನ್ಸ್‌ಗೆ ಇದ್ದ ಮಹತ್ವದ ಆಸೆಯೊಂದು ಇನ್ನೂ ಈಡೇರಿರಲಿಲ್ಲ. ಏನದು? ಸರ್ಜಾ ಕುಟುಂಬದ ಸ್ಟಾರ್‌ ಹೀರೋಗಳೆಲ್ಲ ಜೊತೆಯಾಗಿ ನಟಿಸಬೇಕು ಎಂದು ಅಭಿಮಾನಿಗಳು ಕನಸು ಕಂಡಿದ್ದರು. ಧ್ರುವ ಸರ್ಜಾ, ಚಿರಂಜೀವಿ ಸರ್ಜಾ ಜೊತೆ ಅವರ ಮಾವ ಅರ್ಜುನ್‌ ಸರ್ಜಾರನ್ನು ಒಟ್ಟಿಗೆ ತೆರೆಮೇಲೆ ನೋಡಬೇಕು ಎಂಬ ಆಸೆ ಅವರದ್ದಾಗಿತ್ತು. ಈ ವಿಚಾರದ ಬಗ್ಗೆ ಸರ್ಜಾ ಕುಟುಂಬದ ಹೀರೋಗಳಿಗೆ ಆಗಾಗ ಪ್ರಶ್ನೆ ಎದುರಾಗುತ್ತಲೇ ಇತ್ತು. ‘ನೀವು…

  • ಸುದ್ದಿ

    ಲದ್ದಿ ವಿಚಾರಕ್ಕೂ ಕಿತ್ತಾಡಿದ ಬಿಗ್ ಬಾಸ್ ಸ್ಪರ್ಧಿಗಳು;ಶೈನ್ ಅವಾಜ್ ಹಾಕಿದ್ದಕ್ಕೆ ಚಂದನಾ ಕಣ್ಣೀರು..!

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ.  ಚಂದನಾ ಅವರು ಟಾಸ್ಕ್ ಮಾಡಿ ಮೈ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಒಂದು ವಾರಗಳ ಕಾಲ ಬೆಲ್ಲ ತಿಂದು ನೀರು ಕುಡಿದರೆ ಏನಾಗುತ್ತೆ ಗೊತ್ತಾ..?

    ನಮ್ಮನ್ನು ಕಾಡುವ ಬಹುತೇಕ ರೋಗಗಳಿಗೆ ಮನೆಯಲ್ಲಿಯೇ ಮದ್ದಿದೆ. ಅಡುಗೆ ಮನೆಯಲ್ಲಿರುವ ಪದಾರ್ಥಗಳಿಗೆ ನಮ್ಮ ಆರೋಗ್ಯ ಕಾಪಾಡುವ ಶಕ್ತಿ ಇದೆ. ಅದ್ರಲ್ಲಿ ಬೆಲ್ಲ ಕೂಡ ಒಂದು. ಬೆಲ್ಲ ತಿನ್ನಲ್ಲೊಂದೇ ಸಿಹಿಯಲ್ಲ. ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ 20 ಗ್ರಾಂ ಬೆಲ್ಲವನ್ನು ಸೇವನೆ ಮಾಡಬೇಕು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.ಬೆಲ್ಲ ತಿನ್ನುವುದು ಜೀರ್ಣಕ್ರಿಯೆಗೆ ಒಳ್ಳೆಯದು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ. ಬೆಲ್ಲ ಹೊಟ್ಟೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಆಹಾರ ಸೇವನೆ ನಂತ್ರ ಬೆಲ್ಲ ತಿನ್ನುವುದ್ರಿಂದ ಜೀರ್ಣಕ್ರಿಯೆ ಸರಿಯಾಗುವ ಜೊತೆಗೆ ಗ್ಯಾಸ್ ಸಮಸ್ಯೆ ದೂರವಾಗುತ್ತದೆ. 7…